ನವಿಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೨೮ ನೇ ಸಾಲು:
ಗಂಡು ನವಿಲು ಕಾಮನ ಬಿಲ್ಲಿನ ಬಣ್ಣಗಳಂತೆ ಆಕರ್ಷಕವಾದ ಗರಿಗಳನ್ನು ಹೊಂದಿರುತ್ತದೆ. ಅವುಗಳಲ್ಲಿ ಮುಖ್ಯವಾಗಿ ನೀಲಿ ಹಸಿರು ಮಿಶ್ರಿತ ಅಥವಾ ಹೊಳಪಿನ ಹಸಿರು ಬಣ್ಣದ ಗರಿಗಳನ್ನು ಹೊಂದಿರುತ್ತದೆ. ಉದ್ದನೆಯ ಗರಿಗಳ ಗುಚ್ಛವು ಹೃದಯದ ಆಕಾರದಲ್ಲಿ ಕೊನೆಗೊಂಡಿರುತ್ತದೆ. ಅಲ್ಲದೆ ಅದರ ಮಧ್ಯದಲ್ಲಿ ಕಣ್ಣಿನ ಆಕಾರವಿರುತ್ತದೆ. ಹೆಣ್ಣು ನವಿಲನ್ನು ಆಕರ್ಷಿಸಲು ಗಂಡು ನವಿಲು ಗರಿಗೆದರಿ ನೃತ್ಯಮಾಡುವಾಗ ಇದು ಸುಂದರವಾಗಿ ಕಾಣುತ್ತದೆ<ref name="navilu"/>.
 
ಗಂಡು ನವಿಲು ಬಹಳ ಸುಂದರವಾಗಿ, ಆಕರ್ಷಕವಾಗಿರುತ್ತದೆ. ಹೆಣ್ಣು ನವಿಲು ಗಂಡು ನವಿಲಿನಷ್ಟು ಆಕರ್ಷಕವಾಗಿರುವುದಿಲ್ಲ. ಇವು ಮಸುಕಾದ ಹಸಿರು, ಬೂದು ಮತ್ತು ಕಂದುಬಣ್ಣ ಮಿಶ್ರಿತ ಗರಿಗಳ ಗುಚ್ಛವನ್ನು ಹೊಂದಿರುತ್ತವೆ. ಆದರೆ ಗಂಡು ಮತ್ತು ಹೆಣ್ಣು ನವಿಲುಗಳೆರಡೂ ತಮ್ಮ ತಲೆಯ ಮೇಲೆ ಮುಕುಟವನ್ನು ಹೊಂದಿರುತ್ತವೆ. ಕೆಲವೊಮ್ಮೆ ಹೆಣ್ಣು ನವಿಲು ತನ್ನ ಮುಕುಟ ಅಥವಾ ಚೊಟ್ಟಿ ಅಥವಾ ಜುಟ್ಟನ್ನು ತನ್ನ ಮರಿಗಳ ರಕ್ಷಣೆಗಾಗಿ ಉಪಯೋಗಿಸುತ್ತದೆ. ಇಲ್ಲವೇ ಮಿಲನದ ಸಮಯದಲ್ಲಿ ಬೇರೆ ಹೆಣ್ಣುಗಳನ್ನು ಗದರಿಸಿ ಓಡಿಸಲೂ ಬಳಸುತ್ತದೆ.
 
ಭಾರತೀಯ ನವಿಲು ಮುಖ್ಯವಾಗಿ ಹೊಳಪಿನ ನೀಲಿ ಬಣ್ಣದ ಗರಿಗಳನ್ನು ಹೊಂದಿರುತ್ತದೆ. ಅಲ್ಲದೆ ಗರಿಗಳು ತುದಿಯಲ್ಲಿ ಡೊಂಕಾಗಿರುವ ತಂತಿಯಾಕಾರದಲ್ಲಿರುತ್ತವೆ. ಹೆಣ್ಣು ನವಿಲು ಹಸಿರು ಬಣ್ಣದ ಕುತ್ತಿಗೆ ಹಾಗೂ ಮಸುಕು ಕಂದು ಬಣ್ಣದ ಚಿಕ್ಕ ಗರಿಗಳ ಗುಚ್ಛವನ್ನು ಹೊಂದಿರುತ್ತದೆ.
"https://kn.wikipedia.org/wiki/ನವಿಲು" ಇಂದ ಪಡೆಯಲ್ಪಟ್ಟಿದೆ