ಮಧ್ವಾಚಾರ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೦ ನೇ ಸಾಲು:
*ಅವರು ಕೆಲವು ಕಾಲದ ನಂತರ ತಮ್ಮ ತತ್ವವಾದ ಪ್ರಚಾರಕ್ಕಾಗಿ ಉತ್ತರ ಭಾರತದ ಯಾತ್ರೆ ಕೈಗೊಂಡರು. ಅವರು ಬದರಿಕಾಶ್ರಮಕ್ಕೆ ಹೋಗಿ ಅಲ್ಲಿ ವೇದ ವ್ಯಾಸರ ಆಶ್ರಮದಲ್ಲಿ ವ್ಯಾಸಮಹರ್ಷಿಗಳನ್ನು ಕಂಡು ಅವರಿಗೆ ತಮ್ಮ ಗೀತೆಯ ಭಾಷ್ಯವನ್ನು ತೋರಿಸಿ ಅವರ ಮೆಚ್ಚುಗೆಯನ್ನು ಪಡೆದುದಾಗಿ ಹೇಳುತ್ತಾರೆ. ಅವರು ಗೀತಾ ಪೀಠಿಕೆಯಲ್ಲಿ ಒಂದುವಾಕ್ಯವನ್ನು ಮಾತ್ರಾ ಬದಲಾಯಿಸಿದುದಾಗಿ ಹೇಳುತ್ತಾರೆ. ನಾನು ಅವನ (ದೇವನ) ಪೂರ್ಣ ಸಾಮರ್ಥ್ಯ ಉಪಯೋಗಿಸಿ ಬರೆದಿದ್ದೇನೆ ಎಂಬುದನ್ನು, ನಾನು ಅವನ ಅಲ್ಪವೇ ಸಾಮರ್ಥ್ಯವನ್ನು ಉಪಯೋಗಿಸಿ ಬರೆದಿದ್ದೇನೆ ಎಂದು ಬದಲಾಯಿಸಿರುವುದಾಗಿ ಹೇಳಿದ್ದಾರೆ.
*ಅವರು ಬದರಿಯಿಂದ ಹಿಂತಿರುಗಿದ ಮೇಲೆ ಬ್ರಹ್ಮ ಸೂತ್ರ ಭಾಷ್ಯವನ್ನು ಬರೆದರು. ಅವರು ಆನಂತರ ಅನೇಗ್ರಥಗಳನ್ನು ರಚಿಸಿದರೂ, ಅದನ್ನು ಓಲೆಗರಿಯ ಗ್ರಂಥದಲ್ಲಿ ಲಿಪಿಕಾರರಾಗಿ ಬರೆದವರು ಅವರ ಶಿಷ್ಯರಾದ ಸತ್ಯ ತೀರ್ಥರು. ಆನಂತರ ಅವರ ಕೀರ್ತಿ ದೇಶಾದ್ಯಂತ ಹರಡಿ ಅನೇಕರು ಅವರ ಶಿಷ್ಯರಾದರು. ಅನೇಕರು ಅವರಿಂದ ಸಂನ್ಯಾಸ ಸ್ವೀಕಾರ ಮಾಡಿದರು. ಅವರ ಶಿಷ್ಯ ಅಚ್ಯುತ ಪ್ರೇಕ್ಷ್ಯರಿಗೆ ಅವರ ವಾದದ ಬಗೆಗೆ ಇದ್ದ ಅಲ್ಪ ಸ್ವಲ್ಪ ಸಂಶಯವೂ ಹೋಗಿ ಪೂರ್ಣ ಮನಸ್ಸಿನ ಶಿಷ್ಯರಾದರು.
 
=== ಉಡುಪಿ ಯಲ್ಲಿ ===
-----------------------------
"https://kn.wikipedia.org/wiki/ಮಧ್ವಾಚಾರ್ಯ" ಇಂದ ಪಡೆಯಲ್ಪಟ್ಟಿದೆ