ಬಸವೇಶ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬೫ ನೇ ಸಾಲು:
ಧರ್ಮಪಿತರು ಗಡಿಪಾರು ಶಿಕ್ಷೆ ಸ್ವೀಕರಿಸಿ ಕಲ್ಯಾಣದಿಂದ ಹೊರಟ ನಂತರ ಹರಳಯ್ಯ, ಮಧುವರಸ, ಶೀಲವಂತರ ಬಂಧನವಾಗಿ ಅವರು ವರ್ಣಾಂತರ ವಿವಾಹದಲ್ಲಿ ಭಾಗಿಯಾದುದ ಕ್ಕಾಗಿ ಕಣ್ಣು ಕೀಳಿಸುವ ಶಿಕ್ಷೆ, ಎಳೆ ಹೊಟ್ಟೆ ಶಿಕ್ಷೆಗೆ ಒಳಗಾಗಿ ಪ್ರಾಣ ಬಿಡಬೇಕಾಯಿತು. ಜಾತಿವಾದಿಗಳು ವಚನ ಸಾಹಿತ್ಯವನ್ನು ನಾಶಮಾಡಲು ಸನ್ನದ್ಧರಾದಾಗ ವೀರಮಾತೆ ಅಕ್ಕನಾಗಲಾಂಬಿಕೆ , ಚಿನ್ಮಯಜ್ಞಾನಿ ಚೆನ್ನಬಸವಣ್ಣ, ವೀರ ಗಣಾಚಾರಿ ಮಡಿವಾಳ ಮಾಚಯ್ಯನವರು ವೀರಾಗ್ರಣಿಗಳಾಗಿ ಕಾದಾಡಿ ವಚನ ವಾಙ್ಮಯ ನಿಧಿಯನ್ನು ಉಳಿಸಿಕೊಟ್ಟರು. ಅದಿಂದು ನಮ್ಮೆಲ್ಲರ, ಕರ್ನಾಟಕದ, ಭಾರತದ, ವಿಶ್ವದ ಹೆಮ್ಮೆಯ ಆಸ್ತಿಯಾಗಿದೆ.
ಇಂತಹ ಮಹಾನ್ ನೇತಾರರಾದ ಬಸವಣ್ಣನವರು ಲಿಂಗಾಯತ ಧರ್ಮದ ಸಂಸ್ಥಾಪಕರು; ಧರ್ಮಪಿತರು, ಮಂತ್ರಪುರುಷರು. ೬೨ ವರ್ಷ ೩ ತಿಂಗಳು ೨ ದಿವಸಗಳ ಕಾಲ ಇಳೆಯಲ್ಲಿ ಬಾಳಿದ ಬಸವಣ್ಣನವರು ನಳನಾಮ ಸಂವತ್ಸರದ ಶ್ರಾವಣ ಶುದ್ಧ ಪಂಚಮಿಯಂದು (ದಿ. ಜುಲೈ ೭ ೧೧೯೬) ಉರಿಯುಂಡ ಕರ್ಪುರದಂತೆ ಲಿಂಗೈಕ್ಯರಾದರು.
 
ಮಂಗಳವೇಡದ ರಾಜ '''ಬಿಜ್ಜಳ'''ನ ಆಸ್ಥಾನದಲ್ಲಿ ಮಂತ್ರಿಯಾದ ಬಸವಣ್ಣ ಹಲವಾರು ಜನಪರ ಮತ್ತು ಸಮಾಜ ಸುಧಾರಣೆ ಕ್ರಮಗಳನ್ನು ಕೈಗೊಂಡರು. '''ಕಾಯಕವೇ ಕೈಲಾಸ ''' ವೆಂದು ಸಾರಿ, ಜನರನ್ನು ದುಡಿದು ಬದುಕುವ ಪಥದಲ್ಲಿ ಮುನ್ನೆಡೆಸಿದರು. ಜಾತಿ, ಲಿಂಗ, ಭಾಷೆ ಭೇದವಿಲ್ಲದೆ, ಶರಣ ತತ್ವದಲ್ಲಿ, ಸಮಾನತೆಯಲ್ಲಿ ಮತ್ತು ಕಾಯಕ ನಿಷ್ಠೆಯಲ್ಲಿ ನಂಬಿಕೆಯುಳ್ಳವರನ್ನು ನಿಜವಾದ " ಶಿವಶರಣ " ರೆಂದು ಕರೆದರು.
 
" ಇವನಾರವ, ಇವನಾರವ ಎಂದೆನ್ನದಿರಯ್ಯ
ಇವ ನಮ್ಮವ, ಇವ ನಮ್ಮವ ಎಂದೆನ್ನಿರಯ್ಯ"
 
ಎಂದು, ಸಮಾಜದ ಎಲ್ಲ ವರ್ಗದ ಜನರನ್ನು ಒಂದುಗೂಡಿಸಿದ ಬಸವಣ್ಣ, ಜಾತೀಯತೆಯ ವಿರುದ್ಧ ಸಮರ ಸಾರಿದರು.
 
"ಹೊಲೆಯನೆಂಬುವವನು ಊರ ಹೊರಗಿಹನೇ? ಊರ ಒಳಗಿಲ್ಲವೆ? ಎಂದು ಪ್ರಶ್ನಿಸಿ,
 
ಅಸ್ಪ್ರಶ್ಯತೆಯ ಹೆಸರಿನಲ್ಲಿ ಊರ ಹೊರಗೆ ಇರಿಸಲಾದ ದಲಿತರನ್ನು ಕರೆತಂದು ಸಮಾಜದ ಭಾಗವನ್ನಾಗಿ ಮಾಡಿದರು. ದೇವಾಲಯ, ಕುಡಿಯುವ ನೀರಿನ ಭಾವಿ-ಕೆರೆಗಳನ್ನು ಬಳಸಲು ಇವರಿಗೂ ಸಮಾನ ಹಕ್ಕಿದೆಯಂದು ತೋರಿಸಿದರು.
 
" ಉಳ್ಳವರು ಶಿವಾಲಯ ಮಾಡುವವರು
ನಾನೇನು ಮಾಡಲಿ ಬಡವನಯ್ಯ
ಎನ್ನ ಕಾಲೇ ಕಂಭ, ದೇಹವೇ ದೇಗುಲ
ಶಿರವೇ ಹೊನ್ನ ಕಲಶವಯ್ಯ
ಕೂಡಲ ಸಂಗಮ ದೇವ ಕೇಳಯ್ಯ
ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ"
ಎಂದ ಬಸವಣ್ಣ ಪುರೋಹಿತಶಾಹಿ ವ್ಯವಸ್ಥೆ ಮತ್ತು ಧರ್ಮದ ಹೆಸರಿನಲ್ಲಿ ಜನಸಾಮಾನ್ಯರ ಶೋಷಣೆಯನ್ನು ಖಂಡಿಸಿದ್ದಾರೆ.
 
ಬಸವ ಕಲ್ಯಾಣದಲ್ಲಿ ಬಸವಣ್ಣನವರು ಶರಣರ ಜೊತೆ ಸೇರಿ [[ಅನುಭವ ಮಂಟಪ]] ಸ್ಥಾಪಿಸಿದರು. ಅನುಭವ ಮಂಟಪವು ವಿಶ್ವ ಮಾನವ ಸಂದೇಶ ಮತ್ತು ವಿಚಾರಗಳ ಬಗೆಗೆ ಮುಕ್ತವಾಗಿ ಚರ್ಚಿಸಬಹುದಾದ ವೇದಿಕೆಯಾಗಿದ್ದು, ಭಾರತದಾದ್ಯಂತ ಅನೇಕೆ ಕಡೆಗಳಿಂದ ಜನರನ್ನು ಸೆಳೆಯಿತು. ಇದೇ ಸಮಯದಲ್ಲೇ ಕನ್ನಡ ಭಾಷೆಯಲ್ಲಿ ಜನಸಾಮಾನ್ಯರಿಗಾಗಿ ವಚನಗಳ ರಚನೆ ಆರಂಭವಾಯಿತು. ಸಾಮಾಜ ಸುಧಾರಣೆ ಮತ್ತು ಧಾರ್ಮಿಕ ವಿಷಯಗಳ ಬಗೆಗೆ ಸುಂದರ ಮತ್ತು ಸರಳ ಬೋಧನೆಗಳುಳ್ಳ ಸಣ್ಣ ಪದ್ಯಗಳಿಗೆ ವಚನಗಳೆಂದು ಹೆಸರು. ಉದಾಹರಣೆಗೆ:
 
"ದಯವಿಲ್ಲದ ಧರ್ಮ ಯಾವುದಯ್ಯ?
ದಯವೇ ಬೇಕು ಸಕಲ ಪ್ರಾಣಿಗಳಲ್ಲಿ
ದಯವೇ ಧರ್ಮದ ಮೂಲವಯ್ಯ.."
 
ಮಹಿಳಾ ಶಿಕ್ಷಣಕ್ಕೆ ನಾಂದಿಯಾದರು. ಹಲವಾರು ಶರಣೆಯರು, ಕನ್ನಡದಲ್ಲಿ ವಚನಗಳನ್ನು ರಚಿಸಿ ಪ್ರಸಿದ್ಧರಾಗಿದ್ದಾರೆ.
 
ಆದರೆ ಬಿಜ್ಜಳನ ಆಸ್ಥಾನದ ಸಂಪ್ರದಾಯವಾದಿಗಳು ಬಸವಣ್ಣನವರ ಬಗ್ಗೆ ದೂರಿಟ್ಟಾಗ, ಮಂತ್ರಿ ಸ್ಥಾನವನ್ನು ಬಸವಣ್ಣನವರು ತ್ಯಜಿಸಿದರು. ಆನಂತರ ಶರಣರಾದ ಮಧುವರಸನ ಮಗಳು ಲಾವಣ್ಯ ಮತ್ತು ಹರಳಯ್ಯನ ಮಗ ಶೀಲವಂತನ ಮದುವೆಯನ್ನು ವಿರೋಧಿಸಿದ ಬಿಜ್ಜಳನು, " ಮಿತಾಕ್ಷರ" ವೆಂಬ ಪೊಳ್ಳು ಗ್ರಂಥದ ಆಧಾರದ ಮೇಲೆ, ವಿಲೋಮ ವಿವಾಹ ನಡೆದಿದೆಯಂದು ನಿರ್ಣಯಿಸಿ, ಬಸವಣ್ಣನವರನ್ನು ಗಡಿಪಾರು ಶಿಕ್ಷೆ ವಿಧಿಸಿದನು. ಮಧುವರಸ, ಹರಳಯ್ಯ ದಂಪತಿಗಳನ್ನು ಮತ್ತು ನವ ವಧುವರಾರಾದ ಶೀಲವಂತ-ಲಾವಣ್ಯರನ್ನು ಆನೆಯ ಕಾಲಿಗೆ ಕಟ್ಟಿಸಿ, ಊರ ತುಂಬಾ ನೆಲದ ಮೇಲೆ ಎಳೆಸಿ ಕೊಲ್ಲುವ ಕ್ರೂರವಾದ ಎಳೆಹೂಟೆ ಶಿಕ್ಷೆಗೆ ಗುರಿಪಡಿಸಿ, ಕೊಲ್ಲುತ್ತಾನೆ. ಬಿಜ್ಜಳನ ಸೇನೆ ಶಿವಶರಣರನ್ನು ಕಂಡಲ್ಲಿ ಕೊಲ್ಲ ತೊಡಗಿ, ರಕ್ತದ ಹೊಳೆ ಹರಿಸುತ್ತದೆ.
 
ಬಸವಣ್ಣನವರು [[೧೧೯೬]] ರಲ್ಲಿ [[ಕೂಡಲ ಸಂಗಮ|ಕೂಡಲಸಂಗಮಕ್ಕೆ]] ಮರಳಿ ಅಲ್ಲೇ ಲಿಂಗೈಕ್ಯರಾದರು. ಅವರ ಸಮಾಧಿಯು ಅಲ್ಲಿಯೇ ಇದೆ. ಅವರ ಸಮಾಧಿಯನ್ನು ಕರ್ನಾಟಕ ಸರಕಾರದಿಂದ ಬಸವ ಸಾಗರ ಹಿನ್ನಿರಿನಲ್ಲಿ ಮುಳಗದಂತೆ ರಕ್ಷಿಸಿಲ್ಪಟ್ಟಿದೆ.
 
"https://kn.wikipedia.org/wiki/ಬಸವೇಶ್ವರ" ಇಂದ ಪಡೆಯಲ್ಪಟ್ಟಿದೆ