ಗಾಂಧಿ ಜಯಂತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೫ ನೇ ಸಾಲು:
*ಗಾಂಧೀಜಿಯವರ ಜೀವನದ ಪ್ರಸಿದ್ಧ ಕಾರ್ಯಗಳಲ್ಲಿ ಒಂದು ದಂಡಿ ಯಾತ್ರೆ. ಉಪ್ಪಿನ ಉತ್ಪಾದನೆಗೆ ಬ್ರಿಟಿಷ್ ಸರ್ಕಾರಕ್ಕೆ ಕರ ಕೊಡುವ ಬದಲು ಜನರು ತಾವಾಗಿಯೇ ಉಪ್ಪನ್ನು ಉತ್ಪಾದಿಸಲಿಕ್ಕಾಗಿ ಗಾಂಧೀಜಿ ಮಾರ್ಚ್ 12, 1930 ರಂದು ಸಹಸ್ರಾರು ಜನರೊಡನೆ ಸಮುದ್ರತೀರಕ್ಕೆ ನಡೆದು ಉಪ್ಪನ್ನು ಉತ್ಪಾದಿಸಿದರು. ಮೇ 8, 1933 ರಂದು ಆರಂಭಗೊಂಡು 21 ದಿನಗಳ ಕಾಲ[[ಬ್ರಿಟಿಸ್|ಬ್ರಿಟಿಷ್]] ಆಡಳಿತವನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸಿದರು. ಮಾರ್ಚ್ 3, 1939 ರಂದು ಆರಂಭಗೊಂಡು ಇನ್ನೊಂದು ಉಪವಾಸವನ್ನು ನಡೆಸಿದರು. ಗಾಂಧೀಜಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದರು.”ಭಾರತ ಬಿಟ್ಟು ತೊಲಗಿರಿ” ಚಳುವಳಿ 1942 ರಲ್ಲಿ ಆರಂಭವಾಯಿತು. ಆಗಸ್ಟ್ 9, 1942 ರಂದು ಬ್ರಿಟಿಷರು ಗಾಂಧೀಜಿಯನ್ನು ಮತ್ತೆ ಬಂಧಿಸಿ ಎರಡು ವರ್ಷಗಳ ಕಾಲ ಬಂಧನದಲ್ಲಿರಿಸಿದರು.
==ತತ್ವ, ಸಿದ್ದಾಂತಗಳು==
* ಅವರ ಮುಖ್ಯ ತತ್ವಗಳು ಸತ್ಯ ಮತ್ತು ಅಹಿಂಸೆ. ಅಹಿಂಸೆಯ ತತ್ವ ಭಾರತೀಯ ಧಾರ್ಮಿಕ ವಿಚಾರದಲ್ಲಿ ಅನೇಕ ಶತಮಾನಗಳಿಂದ ಅಸ್ತಿತ್ವದಲ್ಲಿರುವ ತತ್ವ. ಗಾಂಧೀಜಿಯವರು ಕಟ್ಟಾ ಸಸ್ಯಾಹಾರಿಗಳು. ಲಂಡನ್ ನಲ್ಲಿ ಓದುತ್ತಿದ್ದಾಗ ಅವರು ಸಸ್ಯಾಹಾರದ ಬಗೆಗೆ ಪುಸ್ತಕಗಳನ್ನೂ ಬರೆದಿದ್ದರು. ಹಿಂದೂ ಮತ್ತು ಜೈನ ಸಮಾಜಗಳಲ್ಲಿ ಸಸ್ಯಾಹಾರದ ತತ್ವ ಶತಮಾನಗಳಿಂದಲೂ ಆಳವಾಗಿ ಬೇರೂರಿರುವುದು. ವಿವಿಧ ರೀತಿಯ ಆಹಾರ ಕ್ರಮಗಳೊಂದಿಗೆ ಪ್ರಯೋಗಗಳನ್ನು ಕೈಗೊಂಡ ಗಾಂಧೀಜಿಯವರ ನಂಬಿಕೆ ನಮ್ಮ ಆಹಾರ ಕ್ರಮ ನಮ್ಮ ಮೂಲಭೂತ ಅಗತ್ಯಗಳನ್ನು ಪೂರೈಸಬೇಕೇ ಹೊರತು ಅದಕ್ಕಿಂತ ಹೆಚ್ಚು ಆಹಾರವನ್ನು ಸೇವಿಸುವ ಅಗತ್ಯವಿಲ್ಲವೆಂಬುದು. ಕಾಲಕಾಲಕ್ಕೆ ಉಪವಾಸ ವ್ರತವನ್ನೂ ಕೈಗೊಳ್ಳುತ್ತಿದ್ದ ಗಾಂಧೀಜಿಯವರು ಉಪವಾಸ ಸತ್ಯಾಗ್ರಹವನ್ನು ಸ್ವಾತಂತ್ರ್ಯ ಚಳುವಳಿಯಲ್ಲೂ ಉಪಯೋಗಿಸಿದವರು.
*36 ನೆಯ ವಯಸ್ಸಿನಲ್ಲಿ ಗಾಂಧೀಜಿಯವರು ಬ್ರಹ್ಮಚರ್ಯ ವ್ರತವನ್ನು ಸ್ವೀಕರಿಸಿದರು. ಹಾಗೆಯೇ ವಾರದಲ್ಲಿ ಒಂದು ದಿನ ಮೌನವ್ರತವನ್ನು ಆಚರಿಸುತ್ತಿದ್ದರು. ಇದರಿಂದ ಆತ್ಮಶಾಂತಿ ಸಿಕ್ಕುತ್ತದೆಂಬುದು ಗಾಂಧೀಜಿಯವರ ನಂಬಿಕೆ. ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಹಿಂದಿರುಗಿದ ಮೇಲೆ ಶ್ರೀಮಂತ ಉಡುಪುಗಳನ್ನು ಗಾಂಧೀಜಿ ಎಂದಿಗೂ ಧರಿಸಲಿಲ್ಲ. ಭಾರತದ ಅತ್ಯಂತ ಬಡ ಮನುಷ್ಯ ಒಪ್ಪಿಕೊಳ್ಳಬಹುದಾದ ಉಡುಪುಗಳನ್ನು ಮಾತ್ರ ಅವರು ಧರಿಸುತ್ತಿದ್ದರು. ಮನೆಯಲ್ಲಿಯೇ ನೇಯ್ದ ಖಾದಿ ಬಟ್ಟೆಗಳನ್ನು ಧರಿಸುವುದನ್ನು ಗಾಂಧೀಜಿ ಪ್ರೋತ್ಸಾಹಿಸುತ್ತಿದ್ದರು.
* ಗಾಂಧೀಜಿಯವರ ಚರಕ ನಂತರ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ಬಾವುಟದಲ್ಲಿಯೂ ಸೇರಿತು. ಸತ್ಯದೊಂದಿಗೆ ನನ್ನ ಪ್ರಯೋಗಗಳು ಮಹಾತ್ಮ ಗಾಂಧಿಯವರ ಆತ್ಮ ಚರಿತ್ರೆ. ಜನಪ್ರಿಯವಾಗಿ ಮಹಾತ್ಮ ಗಾಂಧಿ, ಆಧುನಿಕ ಭಾರತ ದೇಶದ ಪಿತಾಮಹರಲ್ಲಿ ಒಬ್ಬರು, ಮತ್ತು ಭಾರತೀಯ ಸ್ವಾತಂತ್ರ್ಯ ಚಳುವಳಿಯ ಪ್ರಭಾವಶಾಲಿ ನಾಯಕರು ಮತ್ತು ಸತ್ಯಾಗ್ರಹಿಗಳು. ಬ್ರಿಟಿಷ್ ಆಡಳಿತದಿಂದ ಭಾರತ ಸ್ವಾತಂತ್ರ್ಯ ಪಡೆಯುವುದರಲ್ಲಿ ಮುಖ್ಯ ಪಾತ್ರ ವಹಿಸಿದರಲ್ಲದೆ, ಪರದೇಶದ ಆಡಳಿತಕ್ಕೆ ಒಳಗಾಗಿದ್ದ ಇತರ ದೇಶಗಳಲ್ಲಿಯೂ ಸ್ವಾತಂತ್ರ್ಯ ಚಳುವಳಿಗೆ ಸ್ಫೂರ್ತಿ ತಂದರು.
*ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಮೊದಲಾದ ಅಹಿಂಸಾವಾದಿ ಹೋರಾಟಗಾರರು ಗಾಂಧೀಜಿಯವರ ಸತ್ಯಾಗ್ರಹದ ತತ್ವದಿಂದ ಆಳವಾಗಿ ಪ್ರಭಾವಿತರಾದವರು. ಗಾಂಧೀಜಿಯವರ ಹೇಳಿಕೆಯಂತೆ, ಅವರ ಮೌಲ್ಯಗಳು ಸರಳ ಧಾರ್ಮಿಕ ನಂಬಿಕೆಗಳಿಂದ ಬಂದಂಥವು: ಸತ್ಯ ಮತ್ತು ಅಹಿಂಸೆ. ಬನ್ನಿ ಅವರ ಹಾದಿಯಲ್ಲಿ ನಾವೂ ಸಹ ಸಾಗಲು ಪ್ರಯತ್ನಿಸೋಣ................................
 
[[ವರ್ಗ:ಜನ್ಮದಿನ ಆಚರಣೆ]]
"https://kn.wikipedia.org/wiki/ಗಾಂಧಿ_ಜಯಂತಿ" ಇಂದ ಪಡೆಯಲ್ಪಟ್ಟಿದೆ