ಸದಸ್ಯ:Keerthi 340/sandbox: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೧ ನೇ ಸಾಲು:
ಆದರೆ , ಹರ್ಷೆಲ್ ಅಷ್ಟಕ್ಕೇ ಪ್ರಯೋಗ ನಿಲ್ಲಿಸಲಿಲ್ಲ . ಕೆಂಪು ಬೆಳಕನ್ನು ದಾಟಿ ಪಕ್ಕದಲ್ಲಿ ಥರ್ಮಾಮೀಟರ್ ಇಟ್ಟ. ಆಶ್ಚರ್ಯ. ಯಾವ ಬಣ್ಣದ ಬೆಳಕೂ ಇಲ್ಲದ . ಆ ಭಾಗದಲ್ಲಿ ಇತರ ಬಣ್ಣಗಳಿಗಿಂತಲೂ ಹೆಚ್ಚಿನ ಶಾಖವಿದ್ದುದು ತೋರಿಬಂತು . ಅಗೋಚರವಾದ ಆಕಿರಣಗಳಿಗೆ ಕ್ಯಾಲೊರಿಫಿಕ್ ಎಂದರೆ ಶಾಖ ಎಂದು ಅರ್ಥ . ಅದೇ ಜಾಡನ್ನು ಹಿಡಿದು ಎನ್ನೂ ಅನೇಕ ಪ್ರಯೋಗಗಳನ್ನು ಮಾಡಿ ಕ್ಯಾಲೊರಿಫಿಕ್ ಕಿರಣಗಳೂ ಗೋಚರ ಬೆಳಕಿನ ಕಿರಣಗಳಂತೆ ಪ್ರತಿಫಲನ . ವಕ್ರೀಭವನ ಮುಂತಾದ ಎಲ್ಲ ಗುಣಗಳನ್ನೂ ಪ್ರದರ್ಶಿಸುತ್ತವೆಂದು ದೃಡಪಡಿಸಿಕೊಂಡನು . ಹಾಗಾಗಿ, ಅಗೋಚರ ಬೆಳಕೂ ಇದೆ ಎಂಬುದು ಮೊದಲ ಬಾರಿಗೆ ಆತನ ಪ್ರಯೋಗಗಳಿಂದ ತಿಳಿದುಬಂದಿತು. ಮುಂದೆ ಅವಕ್ಕೆ ''ಅವಕೆಂಪು'' (Infrared) ಅಥವಾ "ಉಷ್ಣಕಿರಣ"ಗಳೆಂದು ಹೆಸರಾಯಿತು.
 
ಹತ್ತೊಂಬತ್ತನೇ ಶತಮಾನದ ಮೊದಲ ದಶಕದ ವೇಳೆಗೆ ಕ್ಯಾಲೋರಿಫಿಕ್ ಕಿರಣಗಳೂ ಮತ್ತು ಬೆಳಕು ಮೂಲತಃ ಒಂದೇ ಬಗೆ (ವಿದ್ಯು ತ್ಕಾಂತ್ತಿಯ ಅಲೆಗಳು ) ಎಂದು ಭೌತವಿಜ್ಞಾನಿಗಳು ಅರ್ಥಮಾಡಿಕೊಂಡು ವಿಶ್ವದಲ್ಲಿ ಸರ್ವವ್ಯಾಪಿಯಾದ ಈಥರ್ ಎಂಬ ಮಾಧ್ಯಮದ ಮೂಲಕ ಕಂಪನ ರೂಪದಲ್ಲಿ ಅವು ಪ್ರಸರಿಸುತವೆ ಎಂದು ಚಿತ್ರಿಸಿಕೊಂಡಿದ್ದರು . ಉಷ್ಣ ಕಿರಣ ಮತ್ತು ಬೆಳಕಿನ ಕಿರಣ ಇವುಗಳ ನಡುವಿನ ವ್ಯತ್ಯಾಸ ಕೇವಲ ಅವುಗಳ ತರಂಗಾಂತರದಲ್ಲಿ (Wave length) ಎಂಬುದು ಹತ್ತೋಂಬತ್ತನೇ ಶತಮಾನದ ಮಧ್ಯಭಾಗದಲ್ಲಿ ಮಾತ್ರವೇ ಸ್ಪಷ್ಟವಾಯಿತು. ಉಷ್ಣಕಿರಣಗಳ ತರಂಗಾಂತರ ಬೆಳಕಿನ ತರಂಗಾಂತರಗಳಿಗಿಂತ ದೀರ್ಘ. ಇದರಿಂದ ನಮಗೆ ತಿಳಿದುಬರುವುದೇನೆಂದರೆ ನಮ್ಮ ಇಂದ್ರಿಯಗಳು ವಿದ್ಯುತ್ ಕಾಂತೀಯ ತರಂಗಗಳಿಗೆ ಅವುಗಳ ತರಂಗಾಂತರಗಳಿಗೆ ಅನುಗುಣವಾಗಿ ಸ್ಪಂದಿಸುತ್ತವೆ ಎಂಬುದು.
 
ಸೂರ್ಯನ ತಾಪ : ಸುರ್ಯ ಮತ್ತು ಇತರ ಖಗೋಳ ಕಾಯಗಳ ತಾಪವನ್ನು ಭೂಮಿಯಿಂದಲೇ ಅಳೆಯಬಹುದು .
 
ಸೂರ್ಯನ ಮೇಲ್ಮೈ ತಾಪ (Temperature) ಸುಮಾರು ೫೫೦೦ ಡಿಗ್ರಿ ಸೆಲ್ಸಿಯಸ್ ಎಂದು ಪಠ್ಯಪುಸ್ತುಕಗಳು ದಾಖಲಿಸುತ್ತವೆ . ಆದರೆ, ಅದನ್ನು ಆಳೆದದ್ದ ಹೇಗೆ ? ಆಧುನಿಕ ಜ್ಞಾನವನ್ನು ಪ್ರಾಯೋಗಿಕ, ಪರಿಮಾಣಾತ್ಮಕ ಹಾಗೂ ಸೈದ್ಧಾಂತಿಕ ವಿಶ್ಲೇಷಣೆಗಳಿಂದ ಹೇಗೆ ಪಡೆಯಬಹುದು ಎಂಬುದಕ್ಕೆ ಕೊಡಬಹುದಾದ ಅನೇಕ ಉದಾಹರಣೆಗಳಲ್ಲಿ ಇದೂ ಒಂದು . ಯಾವುದೇ ಕಾಯದಿಂದ ಹೊಮ್ಮುವ ಉಷ್ಣಕಿರಣಗಳ ತೀವ್ರತೆ ಆ ಕಾಯದ ಮೇಲ್ಮೈ ತಾಪವನ್ನು ಕೆಲವು ನಿರ್ದಿಷ್ಟ ರೀತಿಗಳಲ್ಲಿ ಅವಲಂಬಿಸಿರುತ್ತದೆ ಎಂಬುದು ಹತ್ತೊಂಬತ್ತನೇ ಶತಮಾನದ ಅಂತಿಮ ದಶಕಗಳಲ್ಲಿ ನಡೆದ ಪರಿಮಾಣಾತ್ಮಕ ಹಾಗೂ ಪ್ರಾಯೋಗಿಕ ಅಧ್ಯಯನಗಳಿಂದ ಸ್ಪೆಷ್ಟವಾಯಿತು. ಅದೊಂದು ಅತ್ಯಂತ ಮಹತ್ವದ ಆವಿಷ್ಕಾರವಾಗಿತ್ತು . ಏಕೆಂದರೆ ಅದನ್ನು ಬಳಸಿ ನಮ್ಮಿಂದ ಅತಿ ದೂರವಿರುವ ಹಾಗೂ ಮುಟ್ಟಲು ಸಾಧ್ಯವಿಲ್ಲದ ಕಾಯಗಳ ತಾಪವನ್ನು ಅಳೆಯಲು ಸಾಧ್ಯವಾಗಿದೆ.
 
ಇದಕ್ಕೂ ಮೊದಲು ೧೮೩೦ ಸುಮಾರಿನಲ್ಲಿ Claude pouillet ಎಂಬಾತ Pyrheliometer ಎಂಬ ಉಪಕರಣವನ್ನು ತಯಾರಿಸಿದ್ದನು ವಿಕಿರಣದ ಬಗ್ಗೆ ಸೈದ್ಧಾಂತಿಕ ಚೌಕಟ್ಟು ಸಿದ್ಧವಾಗುವುದಕ್ಕೆ ಮೊದಲೇ ಆತ ಆ ಉಪಕರಣವನ್ನು ಬಳಸಿ ಸೂರ್ಯನಿಂದ ಭೂಮಿಯನ್ನು ತಲಪುವ ಉಷ್ಣಕಿರಣಗಳನ್ನು ಅಳೆದು ಸೂರ್ಯನ ಮೇಲ್ಮೈ ತಾಪ ಸುಮಾರು ೧೮೦೦ ಡಿಗ್ರಿ ಸೆಲ್ಸಿಯಸ್ ಎಂದು ಲೆಕ್ಕಹಾಕಿದ್ದನು ಅನಂತರ ಮತ್ತೆ ಕೆಲವರು ಅದನ್ನು ಒಂದು ಸಾವಿರದಿಂದ ಹತ್ತು ಸಾವಿರ ಡಿಗ್ರಿ ಸೆಲ್ಸಿಯಸ್ ಎಂದು ಅಂದಾಜು ಮಾಡಿದ್ದರು . ಕೊನೆಗೆ Josef stefan ನು ಹಿಂದಿನ ಅನೇಕ ಪ್ರಯೋಗಗಳಿಂದ ದೊರೆತ ಮಾಹಿತಿ ಮತ್ತು ತನ್ನದೇ ಸೂತ್ರದ ಆಧಾರದ ಮೇಲೆ ಸೂರ್ಯನ ಮೇಲ್ಮೈ ತಾಪ ಸುಮಾರು ೬೦೦೦ ಡಿಗ್ರಿ ಸೆಲ್ಸಿಯಸ್ ಎಂದು ನಿಖರವಾ ಗಿ ಲೆಕ್ಕಹಾಕಿದನು.
"https://kn.wikipedia.org/wiki/ಸದಸ್ಯ:Keerthi_340/sandbox" ಇಂದ ಪಡೆಯಲ್ಪಟ್ಟಿದೆ