ಸದಸ್ಯ:Keerthi 340/sandbox: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫೧ ನೇ ಸಾಲು:
ಉಷ್ಣ ಎಂದರೆ ಒಂದು ಕಾಯದಿಂದ ಮತ್ತೊಂದು . ಕಾಯಕ್ಕೆ ಹರಿಯುವ ಒಂದು ರೀತಿಯ ಸೂಕ್ಷ್ಮ ದ್ರವ ಎಂದು ಭಾವನೆ ಒಂದು ಕಾಲದಲ್ಲಿ ಇತ್ತು. ಕೆಲವರು ಅಂತಹ ದ್ರವದ ತೂಕ ನಿರ್ಧರಿಸಲು ಪ್ರಯೋಗಗಳನ್ನು ಮಾಡಿದರು . ಆದ್ರವಕ್ಕೆ ಸ್ಥಳಾವಕಾಶ ಬೇಕಾದ್ದರಿಂದ ಬಿಸಿಯದ ಕಾಯ ಉಬ್ಬುತ್ತದೆ ಎಂದು ಅಂದಿನ ನಂಬಿಕೆಯಾಗಿತ್ತು ! ಅಣು , ಪರಮಾಣುಗಳ ಚಲನಶಕ್ತಿ ಹಾಗೂ ಅವುಗಳನ್ನು ಒಳಗೊಂಡ ಕಾಯದ ಉಷ್ಣ ಗುಣಗಳ ನಡುವಿನ ಸಂಬಂಧವನ್ನು ವಿವರಿಸುವ ಭೌತವಿಜ್ಞಾನದ ಒಂದು ಪ್ರಮುಖ ಶಾಖೆಯೇ ಉಷ್ಣ ಚಲನ ಸಿದ್ಧಾಂತ . ಈ ಸಿದ್ಧಾಂತದ ಮೂಲ ತತ್ವಗಳು ಬಹಳ ಸರಳ . ತಮ್ಮ ನಿರಂತರ ಅಲುಗಾಟದಿಂದ ಅಣು , ಪರಮಾಣುಗಳು ಚಲನಶಕ್ತಿಯನ್ನು ಹೊಂದಿರುತ್ತವೆ . ಇದೇ ಕಾಯದ ಆಂತರಿಕ ಶಕ್ತಿ ಹಾಗಾಗಿ ಕಾಯದ ತಾಪ ಏರಿದಷ್ಟೂ ಅದರಲ್ಲಿ ಅಣು, ಪರಮಾಣುಗಳ ಸರಾಸರಿ ಚಲನಶಕ್ತಿಯೂ ಅಧಿಕವಗುತ್ತದೆ. ಘನ ವಸ್ತು ಗಳಲ್ಲಿ ಅಣು , ಪರಮಾಣುಗಳು ಕಂಪಿಸುತ್ತಿರುತ್ತವೆ; ದ್ರವ ವಸ್ತುವಿನಲ್ಲಿ ಅವು ಚಕ್ರಾಕಾರದಲ್ಲಿ ಸುತ್ತುತ್ತಿರುತ್ತವೆ; ಅನಿಲದಲ್ಲಿ ಅವು ಒಂದು ಸ್ಥಳದಿಂದ ಮತೋಂದು ಸ್ಥಳಕ್ಕೆ ತೊಯ್ದಾಡುತ್ತಿರುತ್ತವೆ.
 
ಈ ರೀತಿಯ ಯಾದೃಚ್ಛಿಕ ಚಲನಶಕ್ತಿಯ ವರ್ಗಾವಣೆಯನ್ನೇ ಉಷ್ಣ ಎಂದು ಹೇಳುವುದು.ಅಣು, ಪರಮಾಣುಗಳ ರಾಶಿ , ಚಲನವೇಗ ಹಾಗೂ ಅವುಗಳಿಗೆ ಸಂಬಂಧಿಸಿದ ಒತ್ತಡ, ಗಾತ್ರ , ಮುಂತಾದ ವಿಷಯಗಳ ಬಗ್ಗೆ ಆಧುನಿಕ ಜ್ಞಾನವಿಲ್ಲದಿದ್ದಲ್ಲಿ ಈ ರೀತಿಯ ಅರಿವು ಅಸಾಧ್ಯವಗುತ್ತಿತ್ತು ಎಂದು ಇಲ್ಲಿ ಒತ್ತಿ ಹೇಳ್ಬೇಕಾಗಿದೆ. ಸೋಜಿಗದ ಸಂಗತಿ ಎಂದರೆ ಅಣು , ಪರಮಾಣುಗಳನ್ನು ಗ್ರಹಿಸುವುದಕ್ಕೆ ಮೊದಲೇ ಇಂತಹ ಒಂದು ಚಿತ್ರ ಮೂಡಿತ್ತು. ಭೌತಜಗತ್ತಿನ ಈ ಸತ್ಯವನ್ನು ಬಹಿರಂಗ ಪಡಿಸಲು ಸಾಧ್ಯವಾದದ್ದು ಗಣಿತದ ಸಂಶೋಧನೆಗಳಿಂದ.
ಈ ರೀತಿಯ ಯಾದೃಚ್ಛಿಕ ಚಲನಶಕ್ತಿಯ ವರ್ಗಾವಣೆಯನ್ನೇ ಉಷ್ಣ ಎಂದು ಹೇಳುವುದು.
"https://kn.wikipedia.org/wiki/ಸದಸ್ಯ:Keerthi_340/sandbox" ಇಂದ ಪಡೆಯಲ್ಪಟ್ಟಿದೆ