ನಿರ್ವಹಣೆ ಪರಿಚಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫೯ ನೇ ಸಾಲು:
೩)ನಿರ್ವಹಣೆಯು ಚಲನಶೀಲ ಸಂಘಟನೆಯನ್ನು ಸೃಷ್ಟಿಸುತ್ತದೆ: ಪ್ರತಿಯೊಂದು ಸಂಘಟನೆಯು ನಿರಂತರವಾಗಿ ಬದಲಾಗುತ್ತಿರುವ ಪರಿಸರದಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಸಾಮಾನ್ಯವಾಗಿ ಸಂಘಟನೆಯಲ್ಲಿರುವ ವ್ಯಕ್ತಿಗಳು ಬದಲಾವಣೆಯನ್ನು ವಿರೋಧಿಸುತ್ತಾರೆ. ಒಂದು ಪರಿಣಾಮಕಾರಿ ನಿರ್ವಹಣೆಯು ಸ್ಪರ್ಧಾತ್ಮಕ ಕಾರ್ಯ ನಿರ್ವಹಿಸುವ ದೃಷ್ಟಿಯಿಂದ ಸಿಬ್ಬಂದಿವರ್ಗವನ್ನು ಬದಲಾವಣೆಗೆ ಹೊಂದಿಕೊಳ್ಳುವಂತೆ ಮಾಡುತ್ತದೆ.ಆ ಮೂಲಕ ಸಂಘಟನೆಯ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಕಾಪಾಡಿಕೊಳ್ಳಬಹುದು. ಈ ಕಾರ್ಯಗಳು ಸಂಘಟನೆಯ ನಿರ್ವಹಣೆಗೆ ಚಲನಶೀಲತೆಯನ್ನು ಒದಗಿಸುತ್ತದೆ.
೪)ನಿರ್ವಹಣೆಯು ವೈಯಕ್ತಿಕ ಉದ್ದೇಶಗಳನ್ನು ಸಾಧಿಸಲು ಸಹಾಯ ಮಾಡುತ್ತವೆ:ನಿರ್ವಹಣೆಯು ಸಂಘಟನೆಯಲ್ಲಿರುವ ವ್ಯಕ್ತಿಗಳನ್ನು ಉತ್ತೇಜಿಸುವ ಮೂಲಕ ವೈಯಕ್ತಿಕ ಗುರಿಗಳನ್ನು ಸಾಧಿಸಲು ಸಹಾಯ ಮಾಡಬೇಕು. ನಿರ್ವಹಣೆಯು ಸಿಬ್ಬಂದಿವರ್ಗದಲ್ಲಿ ಸಹಕಾರ, ಬದ್ದತೆ, ತಂಡಸ್ಫೂರ್ತಿಯನ್ನು ಹೆಚ್ಚಿಸುತ್ತದೆ.
೫)ನಿರ್ವಹಣೆಯು ಸಮಾಜದ ಅಭಿವೃದ್ದಿಗೆ ಸಹಕಾರಿಯಾಗಿದೆ: ಸಂಘಟನೆಯ ಅಭಿವೃದ್ದಿಗೆ ಸಮಾಜದ ವಿವಿಧ ವರ್ಗಗಳು ಕಾರಣವಾಗಿರುವುದರಿಂದ ನಿರ್ವಹಣೆಯು ಅವರ ಹಿತಾಸಕ್ತಿಗಳನ್ನು ಕಾಪಾಡುವ ಹೊಣೆಗಾರಿಕೆಯನ್ನು ಹೊಂದಿದೆ. ಒಂದು ಪರಿಣಾಮಕಾರಿ ನಿರ್ವಹಣೆಯು ಕಾರ್ಮಿಕರ ,ಹೂಡಿಕೆದಾರರ , ಗ್ರಾಹಕರ, ಸಾರ್ವಜನಿಕರ ಬಗ್ಗೆ ಇರುವ ಬದ್ದತೆಯನ್ನು ಒಪ್ಪಿಕೊಳ್ಳುವುದರ ಮೂಲಕ ಸಮಾಜದ ಬೆಳವಣಿಗೆ ಮತ್ತು ಅಭಿವೃದ್ದಿಗೆ ಸಹಕರಿಸುತ್ತದೆ. ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಸರಕು ಮತ್ತು ಸೇವೆಗಳನ್ನು ಪೊರೈಸುವ, ಉದ್ಯೋಗವಕಾಶಗಳನ್ನು ಸೃಷ್ಟಿಸುವ, ಆಧುನಿಕ ತಂತ್ರಜ್ಞಾನವನ್ನು ಅಳವಡಿಸುವುದರ ಮೂಲಕ ಸಮಾಜದ ಯೋಗಕ್ಷೇಮವನ್ನು ರಕ್ಷಿಸುತ್ತಾ, ಬೆಳವಣಿಗೆ ಮತ್ತು ಅಭಿವೃದ್ದಿಯ ಮಾರ್ಗವನ್ನು ನಿರ್ವಹಣೆಯು ಅನುಸರಿಸುತ್ತದೆ.
"https://kn.wikipedia.org/wiki/ನಿರ್ವಹಣೆ_ಪರಿಚಯ" ಇಂದ ಪಡೆಯಲ್ಪಟ್ಟಿದೆ