ಸದಸ್ಯ:Keerthi 340/sandbox: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೩ ನೇ ಸಾಲು:
ಹತ್ತೊಂಬತ್ತನೇ ಶತಮಾನದ ಮೊದಲ ದಶಕದ ವೇಳೆಗೆ ಕ್ಯಾಲೋರಿಫಿಕ್ ಕಿರಣಗಳೂ ಮತ್ತು ಬೆಳಕು ಮೂಲತಃ ಒಂದೇ ಬಗೆ (ವಿದ್ಯು ತ್ಕಾಂತ್ತಿಯ ಅಲೆಗಳು ) ಎಂದು ಭೌತವಿಜ್ಞಾನಿಗಳು ಅರ್ಥಮಾಡಿಕೊಂಡು ವಿಶ್ವದಲ್ಲಿ ಸರ್ವವ್ಯಾಪಿಯಾದ ಈಥರ್ ಎಂಬ ಮಾಧ್ಯಮದ ಮೂಲಕ ಕಂಪನ ರೂಪದಲ್ಲಿ ಅವು ಪ್ರಸರಿಸುತವೆ ಎಂದು ಚಿತ್ರಿಸಿಕೊಂಡಿದ್ದರು . ಉಷ್ಣ ಕಿರಣ ಮತ್ತು ಬೆಳಕಿನ ಕಿರಣ ಇವುಗಳ ನಡುವಿನ ವ್ಯತ್ಯಾಸ ಕೇವಲ ಅವುಗಳ ತರಂಗಾಂತರದಲ್ಲಿ (Wave length) ಎಂಬುದು ಹತ್ತೋಂಬತ್ತನೇ ಶತಮಾನದ ಮಧ್ಯಭಾಗದಲ್ಲಿ ಮಾತ್ರವೇ ಸ್ಪಷ್ಟವಾಯಿತು. ಉಷ್ಣಕಿರಣಗಳ ತರಂಗಾಂತರ ಬೆಳಕಿನ ತರಂಗಾಂತರಗಳಿಗಿಂತ ದೀರ್ಘ. ಇದರಿಂದ ನಮಗೆ ತಿಳಿದುಬರುವುದೇನೆಂದರೆ ನಮ್ಮ ಇಂದ್ರಿಯಗಳು ವಿದ್ಯುತ್ ಕಾಂತೀಯ ತರಂಗಗಳಿಗೆ ಅವುಗಳ ತರಂಗಾಂತರಗಳಿಗೆ ಅನುಗುಣವಾಗಿ ಸ್ಪಂದಿಸುತ್ತವೆ ಎಂಬುದು.
 
ಸೂರ್ಯನ ತಾಪ : ಸುರ್ಯಸೂರ್ಯ ಮತ್ತು ಇತರ ಖಗೋಳ ಕಾಯಗಳ ತಾಪವನ್ನು ಭೂಮಿಯಿಂದಲೇ ಅಳೆಯಬಹುದು .
[[ಚಿತ್ರ:SunFromClouds.jpg|thumbnail|right|ಸೂರ್ಯನ ತಾಪ]]
 
ಸೂರ್ಯನ ಮೇಲ್ಮೈ ತಾಪ (Temperature) ಸುಮಾರು ೫೫೦೦ ಡಿಗ್ರಿ ಸೆಲ್ಸಿಯಸ್ ಎಂದು ಪಠ್ಯಪುಸ್ತುಕಗಳು ದಾಖಲಿಸುತ್ತವೆ . ಆದರೆ, ಅದನ್ನು ಆಳೆದದ್ದ ಹೇಗೆ ? ಆಧುನಿಕ ಜ್ಞಾನವನ್ನು ಪ್ರಾಯೋಗಿಕ, ಪರಿಮಾಣಾತ್ಮಕ ಹಾಗೂ ಸೈದ್ಧಾಂತಿಕ ವಿಶ್ಲೇಷಣೆಗಳಿಂದ ಹೇಗೆ ಪಡೆಯಬಹುದು ಎಂಬುದಕ್ಕೆ ಕೊಡಬಹುದಾದ ಅನೇಕ ಉದಾಹರಣೆಗಳಲ್ಲಿ ಇದೂ ಒಂದು . ಯಾವುದೇ ಕಾಯದಿಂದ ಹೊಮ್ಮುವ ಉಷ್ಣಕಿರಣಗಳ ತೀವ್ರತೆ ಆ ಕಾಯದ ಮೇಲ್ಮೈ ತಾಪವನ್ನು ಕೆಲವು ನಿರ್ದಿಷ್ಟ ರೀತಿಗಳಲ್ಲಿ ಅವಲಂಬಿಸಿರುತ್ತದೆ ಎಂಬುದು ಹತ್ತೊಂಬತ್ತನೇ ಶತಮಾನದ ಅಂತಿಮ ದಶಕಗಳಲ್ಲಿ ನಡೆದ ಪರಿಮಾಣಾತ್ಮಕ ಹಾಗೂ ಪ್ರಾಯೋಗಿಕ ಅಧ್ಯಯನಗಳಿಂದ ಸ್ಪೆಷ್ಟವಾಯಿತು. ಅದೊಂದು ಅತ್ಯಂತ ಮಹತ್ವದ ಆವಿಷ್ಕಾರವಾಗಿತ್ತು . ಏಕೆಂದರೆ ಅದನ್ನು ಬಳಸಿ ನಮ್ಮಿಂದ ಅತಿ ದೂರವಿರುವ ಹಾಗೂ ಮುಟ್ಟಲು ಸಾಧ್ಯವಿಲ್ಲದ ಕಾಯಗಳ ತಾಪವನ್ನು ಅಳೆಯಲು ಸಾಧ್ಯವಾಗಿದೆ.
Line ೩೨ ⟶ ೩೩:
 
ಉಷ್ಣ ಹರಿಯುವ ದಿಕ್ಕು ; ಅಧಿಕ ತಾಪದ ಕಾಯದಿಂದ ಕಡಿಮೆ ತಾಪದ ಕಾಯಕ್ಕೆ ಉಷ್ಣ ಹರಿಯುತ್ತದೆ.ಬೆಂಕಿಯ ತಾಪ ಅಧಿಕವಾಗಿರುತ್ತದೆ . ಐಸ್ರ್ಕೇಮ್ ತಾಪ ಕಡಿಮೆ ಇರುತ್ತದೆ . ರೋಗಿಯ ದೇಹದ ತಾಪವನ್ನು ನರ್ಸ್ ಅಳೆಯುತ್ತಾಳೆ. ಹವಾಮಾನ ತಜ್ಞರು ದಿನದ ಗರಿಷ್ಟ ಹಾಗೂ ಕನಿಷ್ಟ ತಾಪಗಳನ್ನು ವರದಿ ಮಾಡುತ್ತಾರೆ . ಹೀಗೆ ದಿನಬಳಕೆಯಲ್ಲಿ ತಾಪದ ಬಗ್ಗೆ ಅನೇಕ ರೀತಿ ಉಲ್ಲೇಖನಗಳಿದ್ದರೂ ಅದರ ನಿಜವಾದ ಅರ್ಥ ಏನೆಂಬುದು ಸ್ಪಷ್ಟವಾಗಿಲ್ಲದೇ ಇರಬಹುದು . ಸಾಮಾನ್ಯವಾಗಿ ತಾಪ ಎಂದರೆ ಕಾಯದಲ್ಲಿ "ಎಷ್ಟು ಉಷ್ಣ ಅಡಗಿದೆ"ಎಂಬುದರ ಅಳತೆ ಎಂದು ಹೇಳುತ್ತೇವೆ . ಆದರೆ,ಇದೊಂದು ತಪ್ಪು ಗ್ರಹಿಕೆ .
[[ಚಿತ್ರ:Echange thermique.png|thumbnail|right]]
 
ಅದನ್ನು ಸ್ಪಷ್ಟಪಡಿಸಲು ಭೌತವಿಜ್ಞಾನಕ್ಕೆ ಬಹಳಷ್ಟು ಕಾಲವೇ ಬೇಕಾಯಿತು . ಹದಿನೇಳನೇ ಶತಮಾನದ ಉತ್ತರಾರ್ಧದಲ್ಲಿ ಮಾತ್ರವೇ ಥರ್ಮೋಮೀಟರ್ಗಳನ್ನು ವೃದ್ಧಿಪಡಿಸಲು ಸಾಧ್ಯವಾದುದರಿಂದ ನೀರು ಗಡ್ಡೆಯಾಗುವ ಮತ್ತು ಕುದಿಯುವ ಪ್ರಕ್ರಿಯೆಗಳ ತಾಪವನ್ನು ನಿರ್ದಿಷ್ಟವಾಗಿ ಅಳೆಯಲು ಸಾಧ್ಯವಾಯಿತು . ನೀರು ,ಆಲ್ಕೋಹಾಲ್ ,ಪಾದರಸ ಇವುಗಳನ್ನು ಥರ್ಮೋಮೀಟರ್ಗಳಲ್ಲಿ ಬಳಸಬಹುದು.
Line ೪೧ ⟶ ೪೩:
ನಾವು ಯಾವುದೇ ಕಾಯವನ್ನು ಸ್ಪರ್ಷಿಸಿದಾಗ ಅದು ಬಿಸಿ ಎನಿಸಿದರೆ ಆ ಕಾಯದಿಂದ ನಮ್ಮ ದೇಹಕ್ಕೆ ಉಷ್ಣಶಕ್ತಿ ಹರಿದಿದೆ . ಆಗ ಆ ಕಾಯದ ತಾಪ ನಮ್ಮ ದೇಹದ ತಾಪಕ್ಕಿಂತ ಅಧಿಕವಾಗಿದೆ ಎಂದು ಹೇಳುತ್ತೇವೆ . ಕಾಯದ ತಾಪ ನಮ್ಮ ದೇಹದ ತಾಪಕ್ಕಿಂತ ಕಡಿಮೆ ಇದ್ದಾಗ ಉಷ್ಣಶಕ್ತಿ ನಮ್ಮ ದೇಹದಿಂದ ಅದಕ್ಕೆ ಹರಿಯುತ್ತದೆ .ಈ ರೀತಿಯ ಶಕ್ತಿ ಹರಿಯುವಿಕೇಯೇ ಉಷ್ಣ. ಅದು ಯಾವಾಗಲೂ ಬಿಸಿ ಕಾಯದಿಂದ ತಣ್ಣಗಿನ ಕಾಯಕ್ಕೆ ಹರಿಯುತ್ತದೆ . ಅದು ಹೀಗೇ ಏಕೆ ? ತಣ್ಣಗಿರುವ ಕಾಯದಿಂದ ಬಿಸಿ ಕಾಯದೆಡೆಗೆ ಯಾಕೆ ಹರಿಯಬಾರದು ? ಉದಾಹರಣೆಗೆ , ಸಂಪತ್ತನ್ನು ತೆಗೆದುಕೊಳ್ಳಿ. ಅದು ಯಾವಾಗಲೂ ಶ್ರೀಮಂತರಿಂದ ಬಡವರ ಕಡೆಗೆ ಮಾತ್ರ ಹರಿಯುತ್ತದೆಯೆ ?
 
ಉಷ್ಣ ಮತ್ತು ಕೆಲಸ ; ಉಷ್ಣಗತಿವಿಜ್ಞಾನದ (Thermodynamics) ಮೊದಲನೇ ನಿಯಮ ; ಉಷ್ಣಶಕ್ತಿ ಹಾಗೂ ಯಾಂತ್ರಿಕಶಕ್ತಿ (Mechanical energy) ಅಂತರಪರಿವರ್ತನೆ ಯಾಗುತ್ತವೆ.
[[ಚಿತ್ರ:Heat to work.png|thumbnail|left|ಉಷ್ಣಗತಿವಿಜ್ಞಾನದ ಮೊದಲ ನಿಯಮ]]
 
ಚಲನೆಯಂತೆ ಉಷ್ಣವೂ ಶಕ್ತಿಯ ಒಂದು ರೂಪ ಪ್ರಾನ್ಸಿನಲ್ಲಿ ಚಲಾವಣೆಯಲ್ಲಿರುವ ಹಣ ಫ್ರಾಂಕ್ ಭಾರತದಲ್ಲಿ ಅದು ರೂಪಾಯಿ ಅದೇ ರೀತಿ ಒಂದೊಂದು ಮಾನಗಳಿವೆ (units)ಉಷ್ಣಶಕ್ತಿ ಅಳೆಯಲು ಕೆಲೊರಿ ಯಾಂತ್ರಿಕಶಕ್ತಿ (ಚಲನಶಕ್ತಿ ಪೊಟೆನ್ಶಲ್ ಎನರ್ಜಿ ) ಅಳೆಯಲು ಜೌಲ್ (joul) . ಅಂಗೈಗಳನ್ನು ಒಂದಕ್ಕೊದು ಉಜ್ಜಿಕೊಂಡರೆ ಶಾಖ ಉತ್ಪತ್ತಿಯಾಗುತ್ತದೆಂಬುದು ಪುರಾತನ ಕಾಲದಲ್ಲೇ ತಿಳಿದಿತ್ತು .ಆದರೆ ,ಉಷ್ಣಶಕ್ತಿ ಮತ್ತು ಯಾಂತ್ರಿಕಶಕ್ತಿಗಳ ನಡುವೆ ಒಂದು ಸಮಾನತೆ ಇದೆಯೆಂಬುದು ಈಚಿನ ಅರಿವು . ನಾವು ಮೊದಲೇ ನೋಡಿದಂತೆ , ಪ್ರತಿ ಶಕ್ತಿಪರಿವರ್ತನೆಯಲ್ಲಿಯೂ ಒಟ್ಟು ಶಕ್ತಿಮೊತ್ತ ಬದಲಾಗುವುದಿಲ್ಲ ; ಮೊದಲಿನಷ್ಟೇ ಇರುತ್ತದೆ . ಅದನ್ನು ಒಬ್ಬ ವ್ಯಕ್ತಿಯ ಒಟ್ಟು ಸಂಪತ್ತಿಗೆ ಹೋಲಿಸಬಹುದು ; ಸ್ವಲ್ಪ ಭಾಗ ನಗದಿನ ರೂಪದಲ್ಲಿರಬಹುದು . ಸ್ವಲ್ಪ ಭಾಗ ಸ್ಥಿರ ಆಸ್ತಿಯ ರೂಪದಲ್ಲಿರಬಹುದು . ಹಣವನ್ನು ಬಳಸಿ ಆಸ್ತಿಯನ್ನು ಕೊಳ್ಳಬಹುದು , ಆಸ್ತಿಯನ್ನು ಮಾರಿ ಹಣ ಮತ್ತು ಆಸ್ತಿಯ ನಡವಿನ ಸಮಾನತೆ ಕಾಲಕಾಲಕ್ಕೆ ಬದಲಾಯಿಸಬಹುದು .ಆದರೆ ಶಕ್ತಿಪರಿವರ್ತನೆಯಲ್ಲಿ ಹಾಗಲ್ಲ . ವಿವಿಧ ಶಕ್ತಿಗಳ ನಡುವಿನ ಸಮಾನತೆ ಯಾವಾಗಲೂ ಸ್ಥಿರ . ಯಾವುದೇ ವ್ಯವಸ್ಥೆಯಲ್ಲಿ ಹೊರಗಿನಿಂದ ಶಕ್ತಿ ಪ್ರವೇಶಿಸದೆ ಅಥವಾ ಒಳಗಿನಿಂದ ಶಕ್ತಿ ಹೊರಹೋಗದೆ ಶಕ್ತಿಪರಿವರ್ತನೆಯಾದಾಗ ನಿವ್ವಳಶಕ್ತಿಯ ರಕ್ಷಣೆ ಹಾಗೂ ಶಕ್ತಿರೂಪಗಳ ನಡುವಿನ ಸಮಾನತೆಯನ್ನು "ಶಕ್ತಿ ಸಂರಕ್ಷಣೆಯ ತತ್ವ " (principle of conservation of energy ) ಎನ್ನುತ್ತಾರೆ .
Line ೫೪ ⟶ ೫೭:
 
ಉಷ್ಣ ಯಂತ್ರಗಳು ; ಯಾವುದೇ ವ್ಯವಸ್ಥೆಯಲ್ಲಿ ಹೊಡಿಕೆ ಮತ್ತು ನಾವು ಅದರಿಂದ ವಾಪಸ್ಸು ಪಡೆಯಬಹುದಾದದ್ದು ಇವುಗಳ ನಡುವಿನ ಅನುಪಾತವೇ ಆ ವ್ಯವಸ್ಥೆಯ ದಕ್ಷತೆ .
[[ಚಿತ್ರ:Babcock and Wilcox boiler (Heat Engines, 1913).jpg|thumbnail|right]]
 
ಶಕ್ತಿಯನ್ನು ಒಂದು ರೂಪದಿಂದ ಮತ್ತೊದು ರೂಪಕ್ಕೆ ಯಶಸ್ವಿಯಾಗಿ ಪರಿವರ್ತಿಸುವ ಕ್ರಿಯೆಯ ಆಧಾರದ ಮೇಲೆ ನಮ್ಮ ಔದ್ಯೋಗಿಕ ಮತ್ತು ತಾಂತ್ರಿಕ ನಾಗರಿಕತೆ ಬೆಳೆದಿದೆ. ಇವುಗಳಲ್ಲಿ ಉಷ್ಣವನ್ನು ಯಾಂತ್ರಿಕ ಕ್ರಿಯೆಯಾಗಿ ಪರಿವರ್ತಿಸುವ ಕ್ರಿಯೆ ಪ್ರಮುಖ ಪಾತ್ರ ವಹಿಸುತ್ತದೆ . ಅನಾದಿ ಕಾಲದಿಂದಲೂ ಮಾನವ ಅನೇಕ ವಿಧವಾದೆ ಸೌಲಭ್ಯಗಳನ್ನು ಸೃಷ್ಟಿಸಿಕೊಂಡಿದ್ದಾನೆ. ರಾಟೆ,ಮೀಟುಗೋಲಿನಿಂದ ಹಿಡಿದು ನೇಗಿಲು , ಪವನಯಂತ್ರ , ಹೀಗೆ ವಿಧವಿಧವಾದ ಸಲಕರಣೆಗಳು ಎಲ್ಲ ನಾಗರಿಕತೆಗಳಲ್ಲಿಯೂ ಕಂಡುಬರುತ್ತವೆ . ಆದರೆ, ಇವುಗಳ ಸೈದ್ಧಾಂತಿಕ ಅಧ್ಯಯನ ಆರಂಭವಾದದ್ದು ೧೯ನೇ ಶತಮಾನದ ಔದ್ಯೋಗಿಕ ಕ್ರಾಂತಿ ಮತ್ತು ಉಗಿಯಂತ್ರಗಳ ಆವಿಷ್ಕಾರದ ನಂತರವೇ . ಇವೆಲ್ಲದರ ಹಿಂದಿನ ಸ್ಪೂರ್ತಿ ಉಷ್ಣಯಂತ್ರದ ಪರಿಕಲ್ಪನೆ - ಉಷ್ಣಶಕ್ತಿಯನ್ನು ಯಾಂತ್ರಿಕ ಶಕ್ತಿಯಾಗಿ ಪರಿವರ್ತಿಸುವ ಸಾಧನೆ . ಉಗಿಬಂಡಿ ಅಥವಾ ರೈಲುಗಾಡಿ ಇದರ ಪ್ರಮುಖ ಉದಾಹರಣೆ . ತೊಡಗಿಸಿದ ಉಷ್ಣಶಕ್ತಿಯ ಎಷ್ಟು ಪಾಲು ಯಾಂತ್ರಿಕ ಶಕ್ತಿಯಾಗಿ ಪರಿವರ್ತನೆಯಾಗಿದೆ ಎಂಬುದೇ ಅದರ ಕಾರ್ಯಸಮರ್ಥತೆ . ಶೇಕಡ ೩೦ ಕಾರ್ಯಸಮರ್ಥತೆ ಎಂದರೆ ಹೂಡಿದ ಶಕ್ತಿಯಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ಯಾಂತ್ರಿಕ ಶಕ್ತಿಯ ರೂಪದಲ್ಲಿ ಲಭ್ಯವಿದೆ ಎಂದು ಅರ್ಥ ಉಳಿದದ್ದು ವಿವಿಧ ರೀತಿಗಳಲ್ಲಿ ವ್ಯಯವಾಗುತ್ತದೆ .
Line ೬೬ ⟶ ೭೦:
 
Randomness ಮತ್ತು entropy.ಅಣು ಸಮುಚ್ಚಯದಲ್ಲಿನ ಅವ್ಯವಸ್ಥೆಯ ಮಟ್ಟ ಭಾರಿ ವ್ಯತ್ಯಾಸಗಳಿಗೆ ಕಾರಣವಾಗುತ್ತದೆ.
[[ಚಿತ್ರ:HighEntropy.svg|thumbnail|left]]
ಪ್ರಪಂಚದಲ್ಲಿ ತೋರಿಬರುವ ವ್ಯವಸ್ಥೆ ಅನೇಕ ಬಾರಿ ನಮಗೆ ಆಶ್ವರ್ಯ ಉಂಟುಮಾಡುತ್ತದೆ. ಅಲ್ಲಿನ ಸಾಮರಸ್ಯ , ಸೌಂದರ್ಯದಿಂದ ಪ್ರಭಾವಿತರಾಗುತ್ತೇವೆ . ಆದಾಗ್ಯೂ, ಈ ಎಲ್ಲ ತೋರಿಕೆಯ ಸಭ್ಯತೆಯ ಹಿಂದೆ ಅಸಂಸ್ಕೃತ ಭಾವೋದ್ವೇಗ ತಾಂಡವಾಡುತ್ತಿರುತ್ತದೆ . ಅದೇ ರೀತಿ ಲೌಕಿಕ ಜಗತ್ತಿನ ವಿದ್ಯಮಾನಗಳನ್ನು ನಿಯಂತ್ರಿಸುವ ಎಲ್ಲ ನಿಯಮಾವಳಿಗಳ ಹಿನ್ನೆಲೆಯಲ್ಲಿ ಅವ್ಯವಸ್ಥೆಯ ಎಡಗೆ ಜಾರುವ ಒಲವು ಪ್ರಭುತ್ವ ಸಾಧಿಸುತ್ತಿರುತ್ತದೆ. ಅದನ್ನು ನಿಗ್ರಹಿಸಲಾಗದು . ವಿಶ್ವದಲ್ಲಿ ಸಂಭವಿಸುವ ಪ್ರತಿಯೊಂದು ಸ್ವಯಂಪ್ರೇರಿತ ಘಟನೆಯೂ
 
Line ೭೯ ⟶ ೮೪:
ಅಣು, ಪರಮಾಣುಗಳ ಚಲನೆಯ ಅವ್ಯವಸ್ಥಿತ ಉಷ್ಣಶಕ್ತಿಯನ್ನು ಯಾಂತ್ರಿಕ ಶಕ್ತಿಯಿಂದ ಬೇರ್ಪಡಿಸುತ್ತದೆ. ಲಕ್ಷಾನುಲಕ್ಷ ಅಣುಗಳು , ಎಲ್ಲ ಒಂದೇ ದಿಕ್ಕಿನಲ್ಲಿ ಕ್ರಮಬದ್ಧವಾಗಿ ಚಲಿಸುತ್ತಿದ್ದರೆ .ಅದು ಉಷ್ಣಶಕ್ತಿ ಎನಿಸುವುದಿಲ್ಲ . ಅನಿಲದ ಪರಮಾಣುಗಳು ಭ್ರಮರಗಳ ಸಮುದಾಯದಂತೆ ಯದ್ವಾತದ್ವ ಚಲಿಸುತ್ತ , ಒಂದಕ್ಕೊಂದು ಡಿಕ್ಕಿಹೊಡೆಯುತ್ತ , ನಿರಂತರವಾಗಿ ಬೆರೆತುಕೊಳ್ಳುತ್ತಿರುತ್ತವೆ. ಈ ಕಾರಣದಿಂದಲೇ ಕೊಠಡಿಯ ಒಂದು ಮೂಲೆಯಲ್ಲಿ ಗಾಳಿಯಲ್ಲಿನ ಆಕ್ಸಿಜನ್ ಅಣುಗಳೂ, ಮತ್ತೊಂದು ಮೂಲೆಯಲ್ಲಿ ನೈಟ್ರೊಜನ್ ಅಣುಗಳೂ, ಹೀಗೆ ಸಾಂದ್ರೀಕೃತವಾಗುವುದಿಲ್ಲ . ಇಸ್ಪೀಟಿನ ಎಲೆಗಳನ್ನು ಬೆರಸಿದಾಗ ಎಲ್ಲ ಕಳಾವರ್ಗಳೂ ಸಮೂಹದ ಮೇಲ್ಬಾಗದಲ್ಲೇ ಸಂಗ್ರಹವಾಗುವುದಿಲ್ಲವಲ್ಲ ಎಂಟ್ರೊಪಿ ಪರಿಕಲ್ಪನೆಯಿಂದ ನಮಗೆ ಲಭ್ಯವಾಗಿರುವ ಒಂದು ಅತ್ಯಂತ ಮುಖ್ಯವಾದ ತಿಳುವಳಿಕೆ ಎಂದರೆ ಸಮಗ್ರ ವಿಶ್ವದ ಎಂಟ್ರೊಪಿ ನಿರಂತರವಾಗಿ ಹೆಚ್ಚುತ್ತಿದೆಯೇ ಹೊರತು ಕಡಿಮೆಯಾಗುತ್ತಿಲ್ಲ ಎಂಬ ಸತ್ಯದೊಂದಿಗೆ ಕಾಲದ ದಿಕ್ಕು (Direction of time) ನಿಕಟವಾಗಿ ಹೆಣೆದುಕೊಂಡಿದೆ ಎಂಬುದು ಹಾಗಾಗಿ ಕಾಲವೆಂಬ ಪ್ರವಹ ಒಂದೇ ದಿಕ್ಕಿನಲ್ಲಿ ಚಲಿಸುತ್ತದ್ದೆ , ಅದನ್ನು ತಿರುಗಿಸುವುದು ಸಾಧ್ಯವಿಲ್ಲ .ಈ ಅರಿವೇ ವಿಶ್ವದ ಎಂಟ್ರೊಪಿ ನಿರಂತರವಾಗಿ ಏರುತ್ತಿದೆ ಎಂಬ ಸತ್ಯದ ಪ್ರಾಯೋಗಿಕ ಸೂಚಕ .
 
ಮುಚ್ಚಿದ ವ್ಯವಸ್ಥೆಗಳು (Closed systems ) ಮತ್ತು ಅವುಗಳಲ್ಲಿನ ಅಂತರ ಸಂಪರ್ಕಗಳು ; ಇಡೀ ವಿಶ್ವವು ಒಂದು ವ್ಯೂಹ ಅಥವಾ ಮುಚ್ಚಿದ ವ್ಯವಸ್ಥೆ ಆದರೆ ಅದರಲ್ಲಿನ ಉಪವ್ಯವಸ್ಥೆಗಳ ನಡುವೆ ಸಂಪರ್ಕವಿದೆ.
[[ಚಿತ್ರ:Work of Closed System.svg|thumbnail|right]]
 
ಒಂದು ಕಟ್ಟಡ, ಅದರ ಕಿಟಕಿ ಬಾಗಿಲುಗಳೆಲ್ಲಾ ಮುಚ್ಚವೆ. ಯಾರೂ ಹೊರಗೆ ಹೋಗಲಾಗುವುದಿಲ್ಲ . ಅಂದರೆ, ಮನುಷ್ಯನಿಗೆ ಸಂಬಂಧಿಸಿದಂತೆ ಅದೊಂದು ಮುಚ್ಚಿದ ವ್ಯವಸ್ಥೆ - A Closed System .ಆದರೆ , ಸಂದಿಗೊಂದಿಗಳಿಂದ ನುಸುಳುವ ಗಾಳಿಗೂ, ಕಿಟಕಿಯ ಗಾಜಿನ ಮೂಲಕ ತೊರುವ ಬೆಳಕಿಗೂ ಅದೊಂದು ತೆರೆದ ವ್ಯವಸ್ಥೆ -An open system. ಯಾವುದಾದರೂ ವಸ್ತುವಿಗೆ ಸಂಬಂಧಿಸಿದಂತೆ ಒಂದು ವ್ಯವಸ್ಥೆ ಮುಚ್ಚಿದೆ ಎಂದರೆ ಆ ವಸ್ತು ವ್ಯವಸ್ಥೆಯನ್ನು ಹೊರಗಿನಿಂದ ಪ್ರವೇಶಿಸಲಾಗದು , ಒಳಗಿನಿಂದ ಹೊರಗೆ ಹೋಗಲಾಗದು . ಅದು ಸಾಧ್ಯವಾದಾಗ ಅದು ತೆರೆದ ವ್ಯವಸ್ಥೆ . ಥರ್ಮಾಸ್ ಘ್ಲಾಸ್ಕ್ ನಲ್ಲಿ ಬಿಸಿ ಕಾಫಿ ಹಾಕಿ ಭದ್ರವಾಗಿ ಮುಚ್ಚಿದಾಗ ಅದು ಕಾಫಿ ಹಾಗೂ ಶಾಖಕ್ಕೆ ಮುಚ್ಚಿದ ವ್ಯವಸ್ಥೆ ಆದರೆ, ಭೂಮಿ ಒಂದು ತೆರೆದ ವ್ಯವಸ್ಥೆ . ದ್ರವ್ಯ ಮತ್ತು ಶಕ್ತಿ ಅದರ ಮೇಲೆ ನಿರಂತರವಾಗಿ ಸುರಿಯುತ್ತಿರುತ್ತವೆ, ಹಾಗೂ ಅದರಿಂದ ಹೊರಗೆ ಹೋಗುತ್ತಿರುತ್ತವೆ.
"https://kn.wikipedia.org/wiki/ಸದಸ್ಯ:Keerthi_340/sandbox" ಇಂದ ಪಡೆಯಲ್ಪಟ್ಟಿದೆ