ಸದಸ್ಯ:Keerthi 340/sandbox: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫೩ ನೇ ಸಾಲು:
ಈ ರೀತಿಯ ಯಾದೃಚ್ಛಿಕ ಚಲನಶಕ್ತಿಯ ವರ್ಗಾವಣೆಯನ್ನೇ ಉಷ್ಣ ಎಂದು ಹೇಳುವುದು.ಅಣು, ಪರಮಾಣುಗಳ ರಾಶಿ , ಚಲನವೇಗ ಹಾಗೂ ಅವುಗಳಿಗೆ ಸಂಬಂಧಿಸಿದ ಒತ್ತಡ, ಗಾತ್ರ , ಮುಂತಾದ ವಿಷಯಗಳ ಬಗ್ಗೆ ಆಧುನಿಕ ಜ್ಞಾನವಿಲ್ಲದಿದ್ದಲ್ಲಿ ಈ ರೀತಿಯ ಅರಿವು ಅಸಾಧ್ಯವಗುತ್ತಿತ್ತು ಎಂದು ಇಲ್ಲಿ ಒತ್ತಿ ಹೇಳ್ಬೇಕಾಗಿದೆ. ಸೋಜಿಗದ ಸಂಗತಿ ಎಂದರೆ ಅಣು , ಪರಮಾಣುಗಳನ್ನು ಗ್ರಹಿಸುವುದಕ್ಕೆ ಮೊದಲೇ ಇಂತಹ ಒಂದು ಚಿತ್ರ ಮೂಡಿತ್ತು. ಭೌತಜಗತ್ತಿನ ಈ ಸತ್ಯವನ್ನು ಬಹಿರಂಗ ಪಡಿಸಲು ಸಾಧ್ಯವಾದದ್ದು ಗಣಿತದ ಸಂಶೋಧನೆಗಳಿಂದ.
 
ಉಷ್ಣ ಯಂತ್ರಗಳು ; ಯಾವುದೇ ವ್ಯವಸ್ಥೆಯಲ್ಲಿ ಹೊಡಿಕೆ ಮತ್ತು ನಾವು ಅದರಿಂದ ವಾಪಸ್ಸು ಪಡೆಯಬಹುದಾದದ್ದು ಇವುಗಳ ನಡುವಿನ ಅನುಪಾತವೇ ಆ ವ್ಯವಸ್ಥೆಯ ದಕ್ಷತೆ .[[ಚಿತ್ರ:Babcock and Wilcox boiler (Heat Engines, 1913).jpg|thumbnail|right]]
 
[[ಚಿತ್ರ:Babcock and Wilcox boiler (Heat Engines, 1913).jpg|thumbnail|right]]
ಶಕ್ತಿಯನ್ನು ಒಂದು ರೂಪದಿಂದ ಮತ್ತೊದು ರೂಪಕ್ಕೆ ಯಶಸ್ವಿಯಾಗಿ ಪರಿವರ್ತಿಸುವ ಕ್ರಿಯೆಯ ಆಧಾರದ ಮೇಲೆ ನಮ್ಮ ಔದ್ಯೋಗಿಕ ಮತ್ತು ತಾಂತ್ರಿಕ ನಾಗರಿಕತೆ ಬೆಳೆದಿದೆ. ಇವುಗಳಲ್ಲಿ ಉಷ್ಣವನ್ನು ಯಾಂತ್ರಿಕ ಕ್ರಿಯೆಯಾಗಿ ಪರಿವರ್ತಿಸುವ ಕ್ರಿಯೆ ಪ್ರಮುಖ ಪಾತ್ರ ವಹಿಸುತ್ತದೆ . ಅನಾದಿ ಕಾಲದಿಂದಲೂ ಮಾನವ ಅನೇಕ ವಿಧವಾದೆ ಸೌಲಭ್ಯಗಳನ್ನು ಸೃಷ್ಟಿಸಿಕೊಂಡಿದ್ದಾನೆ. ರಾಟೆ,ಮೀಟುಗೋಲಿನಿಂದ ಹಿಡಿದು ನೇಗಿಲು , ಪವನಯಂತ್ರ , ಹೀಗೆ ವಿಧವಿಧವಾದ ಸಲಕರಣೆಗಳು ಎಲ್ಲ ನಾಗರಿಕತೆಗಳಲ್ಲಿಯೂ ಕಂಡುಬರುತ್ತವೆ . ಆದರೆ, ಇವುಗಳ ಸೈದ್ಧಾಂತಿಕ ಅಧ್ಯಯನ ಆರಂಭವಾದದ್ದು ೧೯ನೇ ಶತಮಾನದ ಔದ್ಯೋಗಿಕ ಕ್ರಾಂತಿ ಮತ್ತು ಉಗಿಯಂತ್ರಗಳ ಆವಿಷ್ಕಾರದ ನಂತರವೇ . ಇವೆಲ್ಲದರ ಹಿಂದಿನ ಸ್ಪೂರ್ತಿ ಉಷ್ಣಯಂತ್ರದ ಪರಿಕಲ್ಪನೆ - ಉಷ್ಣಶಕ್ತಿಯನ್ನು ಯಾಂತ್ರಿಕ ಶಕ್ತಿಯಾಗಿ ಪರಿವರ್ತಿಸುವ ಸಾಧನೆ . ಉಗಿಬಂಡಿ ಅಥವಾ ರೈಲುಗಾಡಿ ಇದರ ಪ್ರಮುಖ ಉದಾಹರಣೆ . ತೊಡಗಿಸಿದ ಉಷ್ಣಶಕ್ತಿಯ ಎಷ್ಟು ಪಾಲು ಯಾಂತ್ರಿಕ ಶಕ್ತಿಯಾಗಿ ಪರಿವರ್ತನೆಯಾಗಿದೆ ಎಂಬುದೇ ಅದರ ಕಾರ್ಯಸಮರ್ಥತೆ . ಶೇಕಡ ೩೦ ಕಾರ್ಯಸಮರ್ಥತೆ ಎಂದರೆ ಹೂಡಿದ ಶಕ್ತಿಯಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ಯಾಂತ್ರಿಕ ಶಕ್ತಿಯ ರೂಪದಲ್ಲಿ ಲಭ್ಯವಿದೆ ಎಂದು ಅರ್ಥ ಉಳಿದದ್ದು ವಿವಿಧ ರೀತಿಗಳಲ್ಲಿ ವ್ಯಯವಾಗುತ್ತದೆ .
 
ಉಷ್ಣಯಂತ್ರದಲ್ಲಿ ಉಷ್ಣವನ್ನು ಒದಗಿಸುವ ಒಂದು ಆಕರ (source) ಮತ್ತು ವಿಸರ್ಜಿಸಲ್ಪಟ್ಟ ತ್ಯಾಜ್ಯ ಉಷ್ಣವನ್ನು ಹೀರಿಕೊಳುವ ಗ್ರಾಹಕ (Sink)ಎಂದು ಎರಡು ಭಾಗಗಳನ್ನು ಕಲ್ಪಿಸಿಕೊಳ್ಳಬಹುದು. ವಿಸರ್ಜಿಸಲ್ಪಟ್ಟ , ಕಾರ್ಯಕ್ಕೆ ಒದಗದ ಶಕ್ತಿ ಕಡಿಮೆಯಾದಷ್ಟೂ ಯಂತ್ರದ ಸಾಮರ್ಥ್ಯ ಅಧಿಕ .
"https://kn.wikipedia.org/wiki/ಸದಸ್ಯ:Keerthi_340/sandbox" ಇಂದ ಪಡೆಯಲ್ಪಟ್ಟಿದೆ