ಸದಸ್ಯ:Keerthi 340/sandbox: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
=='''ಉಷ್ಣದ ಸ್ವರೂಪ'''==
 
ಪ್ರಪಂಚದ ಕೆಲವು ಪ್ರದೇಶಗಳಲ್ಲಿ ಬೇಸಿಗೆಯ ಸೆಖೆ ಅಸಹನೀಯವಾಗಿರುತ್ತದೆ . ನಿಷ್ಟುರ ಸೂರ್ಯ ಉಗ್ರ[[ ಕಿರಣಗಳನ್ನುಕಿರಣ]]ಗಳನ್ನು ಉಗುಳುತ್ತಿರುತ್ತಾನೆ .ನಾವು ಬೆವರು ಸುರಿಸುತ್ತಾ ನೆರಳಿನೆಡೆಗೆ ಓಡುತ್ತೇವೆ. ಆದರೆ , ಅಂತಹ ಪ್ರದೇಶಗಳಲ್ಲಿಯೂ ಜನ ವಾಸ ಮಾಡುತ್ತಾರೆ.
 
ಆದರೆ, ಎಲ್ಲಿ ಬೆಚ್ಚಗಿನ[[ ಬಿಸಿಲು]] ಇಲ್ಲವೋ ಅಲ್ಲಿ ಕೊರೆಯುವ ಚಳಿಯಿಂದ ಮೈ ನಡುಗುತ್ತಾ ಜಡ್ದುಗಟ್ಟುತ್ತದೆ. ಆದ್ದರಿಂದಲ್ಲೇ ಸದಾಕಾಲವೂ ಹಿಮ , ಮಂಜಿನಿಂದ ಆವೃತವಾಗಿರುವ ಪ್ರದೇಶಗಳಲ್ಲಿ ಜನವಸತಿ ಇರುವುದಿಲ್ಲ . ಅಷ್ಟೇ ಏಕೆ . ಆ ಭೀಕರ ವಾತಾವರಣದಲ್ಲಿ ಗಿಡಮರಗಳೂ ಬೆಳೆಯಲಾರವು.
 
ನಮ್ಮ ಬದುಕಿಗೆ ಉಷ್ಣ ಎಷ್ಟು ಮುಖ್ಯ ಎಂಬುದು ಇದರಿಂದ ಅರಿವಾಗುತ್ತವೆ . ಅಡುಗೆ ಮಾಡಲೂ[[ ಶಾಖ]] ಬೇಕು . ಬೆಚ್ಚಗಿದ್ದಾಗ ಬಹಳ ಹಿತ ಹಾಗೂ ನೆಮ್ಮದಿಯಾಗಿರುತ್ತದೆ. ಚಳಿಗಾಲದಲ್ಲಿ ಒಲೆಯ ಮುಂದೆ ಕುಳಿತು ಅಥವಾ ದಪ್ಪ ಕಂಬಳಿ ಹೊದ್ದು ಬೆಚ್ಚಗಿರುವುದು ಅತ್ಯಂತ ಮುದ ನೀಡುತ್ತದಲ್ಲವೆ?
೩೮ ನೇ ಸಾಲು:
ಅದನ್ನು ಸ್ಪಷ್ಟಪಡಿಸಲು ಭೌತವಿಜ್ಞಾನಕ್ಕೆ ಬಹಳಷ್ಟು ಕಾಲವೇ ಬೇಕಾಯಿತು . ಹದಿನೇಳನೇ ಶತಮಾನದ ಉತ್ತರಾರ್ಧದಲ್ಲಿ ಮಾತ್ರವೇ ಥರ್ಮೋಮೀಟರ್ಗಳನ್ನು ವೃದ್ಧಿಪಡಿಸಲು ಸಾಧ್ಯವಾದುದರಿಂದ ನೀರು ಗಡ್ಡೆಯಾಗುವ ಮತ್ತು ಕುದಿಯುವ ಪ್ರಕ್ರಿಯೆಗಳ ತಾಪವನ್ನು ನಿರ್ದಿಷ್ಟವಾಗಿ ಅಳೆಯಲು ಸಾಧ್ಯವಾಯಿತು . ನೀರು ,ಆಲ್ಕೋಹಾಲ್ ,ಪಾದರಸ ಇವುಗಳನ್ನು ಥರ್ಮೋಮೀಟರ್ಗಳಲ್ಲಿ ಬಳಸಬಹುದು.
'''
ಕಾಯದ [[ತಾಪ]] ಅದರ ಉಷ್ಣತಾಸ್ಥಿತಿಯನ್ನು ಪ್ರತಿನಿಧಿಸುತ್ತದೆ ;'''
ಅದು ಆ ಕಾಯದಿಂದ ಅಥವಾ ಆ ಕಾಯಕ್ಕೆ ಉಷ್ಣಶಕ್ತಿ ಹರಿಯುವ ದಿಕ್ಕನ್ನು ನಿರ್ಧರಿಸುತ್ತದೆ .ಹಾಗಾಗಿ , ಇತರ ಕಾಯಗಳೊಂದಿಗೆ ಹೋಲಿಸಿದಾಗ ಮಾತ್ರ ತಾಪ ಎಂಬುದಕ್ಕೆ ಅರ್ಥವಿದೆ .ನೀರು ಹರಿಯವ ದಿಕ್ಕನ್ನು ಅದರ ಒತ್ತಡ ನಿರ್ಧರಿಸುವಂತೆ -ಯಾವಾಗಲೂ ಅಧಿಕ ಒತ್ತಡದಿಂದ ಕಡಿಮೆ ಒತ್ತಡದೆಡೆಗೆ .
 
೪೫ ನೇ ಸಾಲು:
'''ಉಷ್ಣ ಮತ್ತು ಕೆಲಸ ; ಉಷ್ಣಗತಿವಿಜ್ಞಾನದ (Thermodynamics) ಮೊದಲನೇ ನಿಯಮ ; ಉಷ್ಣಶಕ್ತಿ ಹಾಗೂ ಯಾಂತ್ರಿಕಶಕ್ತಿ (Mechanical energy) ಅಂತರಪರಿವರ್ತನೆ ಯಾಗುತ್ತವೆ. '''
[[ಚಿತ್ರ:Heat to work.png|thumbnail|left|ಉಷ್ಣಗತಿವಿಜ್ಞಾನದ ಮೊದಲ ನಿಯಮ]]
ಚಲನೆಯಂತೆ ಉಷ್ಣವೂ ಶಕ್ತಿಯ ಒಂದು ರೂಪ ಪ್ರಾನ್ಸಿನಲ್ಲಿ ಚಲಾವಣೆಯಲ್ಲಿರುವ ಹಣ ಫ್ರಾಂಕ್ ಭಾರತದಲ್ಲಿ ಅದು ರೂಪಾಯಿ ಅದೇ ರೀತಿ ಒಂದೊಂದು ಮಾನಗಳಿವೆ (units)ಉಷ್ಣಶಕ್ತಿ ಅಳೆಯಲು ಕೆಲೊರಿ ಯಾಂತ್ರಿಕಶಕ್ತಿ (ಚಲನಶಕ್ತಿ ಪೊಟೆನ್ಶಲ್ ಎನರ್ಜಿ ) ಅಳೆಯಲು ಜೌಲ್ (joul) . ಅಂಗೈಗಳನ್ನು ಒಂದಕ್ಕೊದು ಉಜ್ಜಿಕೊಂಡರೆ ಶಾಖ ಉತ್ಪತ್ತಿಯಾಗುತ್ತದೆಂಬುದು ಪುರಾತನ ಕಾಲದಲ್ಲೇ ತಿಳಿದಿತ್ತು .ಆದರೆ ,ಉಷ್ಣಶಕ್ತಿ ಮತ್ತು ಯಾಂತ್ರಿಕಶಕ್ತಿಗಳ ನಡುವೆ ಒಂದು ಸಮಾನತೆ ಇದೆಯೆಂಬುದು ಈಚಿನ ಅರಿವು . ನಾವು ಮೊದಲೇ ನೋಡಿದಂತೆ , ಪ್ರತಿ ಶಕ್ತಿಪರಿವರ್ತನೆಯಲ್ಲಿಯೂ ಒಟ್ಟು ಶಕ್ತಿಮೊತ್ತ ಬದಲಾಗುವುದಿಲ್ಲ ; ಮೊದಲಿನಷ್ಟೇ ಇರುತ್ತದೆ . ಅದನ್ನು ಒಬ್ಬ ವ್ಯಕ್ತಿಯ ಒಟ್ಟು ಸಂಪತ್ತಿಗೆ ಹೋಲಿಸಬಹುದು ; ಸ್ವಲ್ಪ ಭಾಗ ನಗದಿನ ರೂಪದಲ್ಲಿರಬಹುದು . ಸ್ವಲ್ಪ ಭಾಗ ಸ್ಥಿರ ಆಸ್ತಿಯ ರೂಪದಲ್ಲಿರಬಹುದು . ಹಣವನ್ನು ಬಳಸಿ ಆಸ್ತಿಯನ್ನು ಕೊಳ್ಳಬಹುದು , ಆಸ್ತಿಯನ್ನು ಮಾರಿ ಹಣ ಮತ್ತು ಆಸ್ತಿಯ ನಡವಿನ ಸಮಾನತೆ ಕಾಲಕಾಲಕ್ಕೆ ಬದಲಾಯಿಸಬಹುದು .ಆದರೆ ಶಕ್ತಿಪರಿವರ್ತನೆಯಲ್ಲಿ ಹಾಗಲ್ಲ . ವಿವಿಧ ಶಕ್ತಿಗಳ ನಡುವಿನ ಸಮಾನತೆ ಯಾವಾಗಲೂ ಸ್ಥಿರ . ಯಾವುದೇ ವ್ಯವಸ್ಥೆಯಲ್ಲಿ ಹೊರಗಿನಿಂದ ಶಕ್ತಿ ಪ್ರವೇಶಿಸದೆ ಅಥವಾ ಒಳಗಿನಿಂದ ಶಕ್ತಿ ಹೊರಹೋಗದೆ ಶಕ್ತಿಪರಿವರ್ತನೆಯಾದಾಗ[[ಶಕ್ತಿ]]ಪರಿವರ್ತನೆಯಾದಾಗ ನಿವ್ವಳಶಕ್ತಿಯ ರಕ್ಷಣೆ ಹಾಗೂ ಶಕ್ತಿರೂಪಗಳ ನಡುವಿನ ಸಮಾನತೆಯನ್ನು "ಶಕ್ತಿ ಸಂರಕ್ಷಣೆಯ ತತ್ವ " (principle of conservation of energy ) ಎನ್ನುತ್ತಾರೆ .
 
ಮೇಲು ನೋಟಕ್ಕೆ ಇದೊಂದು ಸರಳ ಪರಿಕಲ್ಪನೆ ಎನಿಸಿದರೂ ಇದರ ಮಹತ್ವ ಅರಿವಾಗಬೇಕಾದರೆ ಬಹಳ ಕಾಲವೇ ಬೇಕಾಯಿತು . ನಿಸರ್ಗದ ಎಲ್ಲ ವಿದ್ಯಮಾನಗಳಲ್ಲಿಯೂ , ಚಲನೆಯ ನಿಯಮಗಳು ತೋರಿಬರುವಂತೆ, ಶಕ್ತಿಸಂರಕ್ಷಣೆಯೂ ತೋರಿಬರುತ್ತದೆ . ನಾವು ಬಳಸುವ ಪ್ರತಿ ಉಪಕರಣವನ್ನೂ ಅದು ನಿಯಂತ್ರಿಸುತ್ತದೆ -ಇಷ್ಟು ವಿದ್ಯುತ್ ಅಂದರೆ ಇಷ್ಟು ಉಷ್ಣ ಮತ್ತು ಬೆಳಕಿನ ಸಮ , ಇಷ್ಟ ಪೆಟ್ರೋಲಿನ ರಾಸಾಯನಿಕ ಶಕ್ತಿ ಕಾರಿನ ಇಷ್ಟು ಚಲನಶಕ್ತಿಯಾಅಗುತ್ತದೆ, ಹೀಗೆ .
"https://kn.wikipedia.org/wiki/ಸದಸ್ಯ:Keerthi_340/sandbox" ಇಂದ ಪಡೆಯಲ್ಪಟ್ಟಿದೆ