ಉಷ್ಣತೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪೮ ನೇ ಸಾಲು:
ಚಲನೆಯಂತೆ ಉಷ್ಣವೂ ಶಕ್ತಿಯ ಒಂದು ರೂಪ ಪ್ರಾನ್ಸಿನಲ್ಲಿ ಚಲಾವಣೆಯಲ್ಲಿರುವ ಹಣ ಫ್ರಾಂಕ್ ಭಾರತದಲ್ಲಿ ಅದು ರೂಪಾಯಿ ಅದೇ ರೀತಿ ಒಂದೊಂದು ಮಾನಗಳಿವೆ (units)ಉಷ್ಣಶಕ್ತಿ ಅಳೆಯಲು ಕೆಲೊರಿ ಯಾಂತ್ರಿಕಶಕ್ತಿ (ಚಲನಶಕ್ತಿ ಪೊಟೆನ್ಶಲ್ ಎನರ್ಜಿ ) ಅಳೆಯಲು ಜೌಲ್ (joul) . ಅಂಗೈಗಳನ್ನು ಒಂದಕ್ಕೊದು ಉಜ್ಜಿಕೊಂಡರೆ ಶಾಖ ಉತ್ಪತ್ತಿಯಾಗುತ್ತದೆಂಬುದು ಪುರಾತನ ಕಾಲದಲ್ಲೇ ತಿಳಿದಿತ್ತು .ಆದರೆ ,ಉಷ್ಣಶಕ್ತಿ ಮತ್ತು ಯಾಂತ್ರಿಕಶಕ್ತಿಗಳ ನಡುವೆ ಒಂದು ಸಮಾನತೆ ಇದೆಯೆಂಬುದು ಈಚಿನ ಅರಿವು . ನಾವು ಮೊದಲೇ ನೋಡಿದಂತೆ , ಪ್ರತಿ ಶಕ್ತಿಪರಿವರ್ತನೆಯಲ್ಲಿಯೂ ಒಟ್ಟು ಶಕ್ತಿಮೊತ್ತ ಬದಲಾಗುವುದಿಲ್ಲ ; ಮೊದಲಿನಷ್ಟೇ ಇರುತ್ತದೆ . ಅದನ್ನು ಒಬ್ಬ ವ್ಯಕ್ತಿಯ ಒಟ್ಟು ಸಂಪತ್ತಿಗೆ ಹೋಲಿಸಬಹುದು ; ಸ್ವಲ್ಪ ಭಾಗ ನಗದಿನ ರೂಪದಲ್ಲಿರಬಹುದು . ಸ್ವಲ್ಪ ಭಾಗ ಸ್ಥಿರ ಆಸ್ತಿಯ ರೂಪದಲ್ಲಿರಬಹುದು . ಹಣವನ್ನು ಬಳಸಿ ಆಸ್ತಿಯನ್ನು ಕೊಳ್ಳಬಹುದು , ಆಸ್ತಿಯನ್ನು ಮಾರಿ ಹಣ ಮತ್ತು ಆಸ್ತಿಯ ನಡವಿನ ಸಮಾನತೆ ಕಾಲಕಾಲಕ್ಕೆ ಬದಲಾಯಿಸಬಹುದು .ಆದರೆ ಶಕ್ತಿಪರಿವರ್ತನೆಯಲ್ಲಿ ಹಾಗಲ್ಲ . ವಿವಿಧ ಶಕ್ತಿಗಳ ನಡುವಿನ ಸಮಾನತೆ ಯಾವಾಗಲೂ ಸ್ಥಿರ . ಯಾವುದೇ ವ್ಯವಸ್ಥೆಯಲ್ಲಿ ಹೊರಗಿನಿಂದ ಶಕ್ತಿ ಪ್ರವೇಶಿಸದೆ ಅಥವಾ ಒಳಗಿನಿಂದ ಶಕ್ತಿ ಹೊರಹೋಗದೆ [[ಶಕ್ತಿ]]ಪರಿವರ್ತನೆಯಾದಾಗ ನಿವ್ವಳಶಕ್ತಿಯ ರಕ್ಷಣೆ ಹಾಗೂ ಶಕ್ತಿರೂಪಗಳ ನಡುವಿನ ಸಮಾನತೆಯನ್ನು "ಶಕ್ತಿ ಸಂರಕ್ಷಣೆಯ ತತ್ವ " (principle of conservation of energy ) ಎನ್ನುತ್ತಾರೆ .
 
ಮೇಲು ನೋಟಕ್ಕೆ ಇದೊಂದು ಸರಳ ಪರಿಕಲ್ಪನೆ ಎನಿಸಿದರೂ ಇದರ ಮಹತ್ವ ಅರಿವಾಗಬೇಕಾದರೆ ಬಹಳ ಕಾಲವೇ ಬೇಕಾಯಿತು . ನಿಸರ್ಗದ ಎಲ್ಲ ವಿದ್ಯಮಾನಗಳಲ್ಲಿಯೂ , ಚಲನೆಯ ನಿಯಮಗಳು ತೋರಿಬರುವಂತೆ, ಶಕ್ತಿಸಂರಕ್ಷಣೆಯೂ ತೋರಿಬರುತ್ತದೆ . ನಾವು ಬಳಸುವ ಪ್ರತಿ ಉಪಕರಣವನ್ನೂ ಅದು ನಿಯಂತ್ರಿಸುತ್ತದೆ -ಇಷ್ಟು ವಿದ್ಯುತ್ ಅಂದರೆ ಇಷ್ಟು ಉಷ್ಣ ಮತ್ತು ಬೆಳಕಿನ ಸಮ , ಇಷ್ಟ ಪೆಟ್ರೋಲಿನ ರಾಸಾಯನಿಕ ಶಕ್ತಿ ಕಾರಿನ ಇಷ್ಟು ಚಲನಶಕ್ತಿಯಾಅಗುತ್ತದೆ, ಹೀಗೆ .
 
 
===ಉಷ್ಣ ಚಲನ ಸಿದ್ಧಾಂತ (kinetic theory of heat)===
"https://kn.wikipedia.org/wiki/ಉಷ್ಣತೆ" ಇಂದ ಪಡೆಯಲ್ಪಟ್ಟಿದೆ