ದ.ರಾ.ಬೇಂದ್ರೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೭ ನೇ ಸಾಲು:
[[Image:BendreMemorial.jpg|thumb|ಬೇಂದ್ರೆ ಸ್ಮಾರಕ, ಧಾರವಾಡ]]
 
ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ "ಪ್ರಭಾತ" ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬ೦ದರು. "[[ಗರಿ]]", "[[ಕಾಮಕಸ್ತೂರಿ]]", "[[ಸೂರ್ಯಪಾನ]]", "[[ನಾದಲೀಲೆ]]", "[[ನಾಕುತಂತಿ]]" ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಇವರ ನಾಕುತಂತಿ ಕೃತಿಗೆ ೧೯೭೪ ಇಸ್ವಿಯ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ "[[ಗೆಳೆಯರ ಗುಂಪು]]" ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು. ಆಗಿನ್ನೂ ಸ್ವಾತಂತ್ರ್ಯ ಚಳುವಳಿ ಬಿಸಿ ಮುಟ್ಟಿದ್ದ ಸಮಯ. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು.
 
ಉತ್ತಮ ವಾಗ್ಮಿಗಳಾಗಿದ್ದ ಬೇಂದ್ರೆಯವರ ಉಪನ್ಯಾಸಗಳೆಂದರೆ ಜನರಿಗೆ ಹಿಗ್ಗು. ಅವರ ಮಾತೆಲ್ಲ ಕವಿತೆಗಳೋಪಾದಿಯಲ್ಲಿ ಹೊರಹೊಮ್ಮುತ್ತಿದ್ದವು. ಕನ್ನಡದಲ್ಲಿಯೇ ಅಲ್ಲದೆ ಮರಾಠಿ ಭಾಷೆಯಲ್ಲೂ ಬೇಂದ್ರೆ ಕೆಲವು ಕೃತಿಗಳನ್ನು ರಚಿಸಿದರು.
"https://kn.wikipedia.org/wiki/ದ.ರಾ.ಬೇಂದ್ರೆ" ಇಂದ ಪಡೆಯಲ್ಪಟ್ಟಿದೆ