ತ್ಯಾಗರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Adding: te:త్యాగరాజు
ಪಂಚರತ್ಬ ಕೃತಿಗಳ ಬಗ್ಗೆ ಮಾಹಿತಿ ಸೇರಿಸಲಾಯಿತು -ರಾಮಕ್ರಿಯ
೧೪ ನೇ ಸಾಲು:
ದಕ್ಷಿಣ ಭಾರತದ ಎಲ್ಲ ಮುಖ್ಯ ದೇವಸ್ಥಾನಗಳಿಗೆ ಭೇಟಿಯಿತ್ತ ತ್ಯಾಗರಾಜರು ಅಲ್ಲಿನ ದೇವ-ದೇವತೆಗಳ ಬಗ್ಗೆ ಕೃತಿಗಳನ್ನು ರಚಿಸಿದ್ದಾರೆ. ಸುಮಾರು ಏಳುನೂರು ಕೃತಿಗಳನ್ನು ರಚಿಸಿರುವ ತ್ಯಾಗರಾಜರು ಕರ್ನಾಟಕ ಸಂಗೀತದ ಮೂಲಪುರುಷರಲ್ಲಿ ಒಬ್ಬರೆಂದು ಪರಿಗಣಿತರಾಗಿದ್ದಾರೆ.
 
ತ್ಯಾಗರಾಜರು ಅವರ ಕಾಲದಲ್ಲಿ ಪ್ರಚಲಿತವಿಲ್ಲದ ಹಲವಾರು ರಾಗಗಳಲ್ಲಿ ಕೃತಿ ರಚನೆ ಮಾಡಿದ್ದಾರೆ. ಖರಹರಪ್ರಿಯ, ಹರಿಕಾಂಭೋಜಿ ಮೊದಲಾದ ಕೆಲವು ಮೇಳಕರ್ತರಾಗಗಳನ್ನು ಪ್ರಸಿದ್ಧಿಗೆ ತಂದವರು ತ್ಯಾಗರಾಜರೇ. ಘನರಾಗಗಳಾದ ನಾಟ,ಗೌಳ,ಆರಭಿ,ವರಾಳಿ ಮತ್ತು ಶ್ರೀ ರಾಗಗಳಲ್ಲಿ ಇವರು ರಚಿಸಿರುವ ವಿಶೇಷ ಕೃತಿಸಮೂಹಕ್ಕೆ ಘನರಾಗ ಪಂಚರತ್ನ ಎಂದು ಕರೆಯಲಾಗುತ್ತೆ. ಹೀಗೇ ತಿರುವೊಟ್ರಿಯೂರಿನ ತ್ರಿಪುರಸುಂದರಿಯ ಮೇಲೆ, ಕೋವೂರು ಸುಂದರೇಶ್ವರನ ಮೇಲೆ, ಮತ್ತು ಶ್ರೀರಂಗಂ ನ ರಂಗನಾಥನಮೇಲೆ ಇವರು ರಚಿಸಿರುವ ಐದೈದು ಕೃತಿಗಳ ಗುಂಪುಗಳು, ತಿರುವೊಟ್ರಿಯೂರ್ ಪಂಚರತ್ನ, ಕೋವೂರು ಪಂಚರತ್ನ ಮತ್ತು ಶ್ರೀರಂಗಂ ಪಂಚರತ್ನ ಕೃತಿಗಳೆಂದೇ ಪ್ರಸಿದ್ಧವಾಗಿವೆ.
 
ತ್ಯಾಗರಾಜರು ಚಿಕ್ಕಂದಿನಲ್ಲಿ, ಅವರ ತಾಯಿ ಹಾಡುತ್ತಿದ್ದ ಪುರಂದರದಾಸರ ದೇವರನಾಮಗಳಿಂದ ಪ್ರಭಾವಿತರಾಗಿದ್ದರೆಂದು ಹೇಳಲಾಗಿದೆ. ಇವರ ಹಲವು ಕೃತಿಗಳು ಪುರಂದರದಾಸರ ಕೆಲವು ಪದಗಳಲ್ಲಿ ಇರುವ ಭಾವನೆಯನ್ನೇ ವ್ಯಕ್ತ ಪಡಿಸುವುದು ಗಮನಾರ್ಹ. ಉದಾಹರಣೆಗೆ ರೇವಗುಪ್ತಿ ರಾಗದ ಗ್ರಹಬಲಮೇಮಿ ಎಂಬ ಕೃತಿ ಪುರಂದರರ ಸಕಲ ಗ್ರಹಬಲನೀನೆ ಎಂಬ ರಚನೆಯನ್ನು ಹೋಲುತ್ತಿದ್ದರೆ, ಜಿಂಗಲ ರಾಗದ ಅನಾಥುಡನು ಗಾನು ಎಂಬ ರಚನೆ ಪುರಂದರ ದಾಸರ ನಿನ್ನಂಥ ತಾಯಿ ಎನಗುಂಟು ನಿನಗಿಲ್ಲ ಎಂಬ ಉಗಾಭೋಗದ ಭಾವನೆಯನ್ನೇ ಹೇಳುತ್ತದೆ. ತ್ಯಾಗರಾಜರು ಅವರ ಪ್ರಹ್ಲಾದ ಭಕ್ತಿ ವಿಜಯದ ಮಂಗಳಶ್ಲೋಕದಲ್ಲಿ, ಪುರಂದರದಾಸರನ್ನು ಸ್ಮರಿಸಿದ್ದಾರೆ.
Line ೨೭ ⟶ ೨೮:
 
[[en:Tyāgarāja]]
[[hi:त्यागराज]]
[[ml:ത്യാഗരാജ സ്വാമികള്‍]]
[[ta:தியாகராஜ சுவாமிகள்]]
[[te:త్యాగరాజు]]
[[zh:蒂亚格拉贾]]
"https://kn.wikipedia.org/wiki/ತ್ಯಾಗರಾಜ" ಇಂದ ಪಡೆಯಲ್ಪಟ್ಟಿದೆ