ತ್ಯಾಗರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಕಡೆಯ ಮೂರು ಕೃತಿಗಳ ವಿಷಯ ಸೇರಿಸಲಾಯಿತು - ರಾಮಕ್ರಿಯ
೧೯ ನೇ ಸಾಲು:
 
ತ್ಯಾಗರಾಜರು ತಮ್ಮ ಕಡೆಗಾಲದವರೆಗೂ ಕೃತಿಗಳನ್ನು ರಚಿಸುತ್ತಿದ್ದರೆಂದು ತಿಳಿದುಬಂದಿದೆ. ಮನೋಹರಿ ರಾಗದ ಪರಿತಾಪಮುಕನಿಯಾಡಿನ, ಶಹಾನ ರಾಗದ ಗಿರಿಪೈನೆಲಕೊನ್ನ, ಮತ್ತು ವಾಗಧೀಶ್ವರಿ ರಾಗದ ಪರಮಾತ್ಮುಡು ವೆಲಿಗೇ ಎಂಬ ಕೃತಿಗಳನ್ನು ಅವರು ತಮ್ಮ ಜೀವನದ ಕಡೆಯ ಹತ್ತು ದಿನಗಳಲ್ಲಿ ರಚಿಸಿದರೆಂದು ಅಭಿಪ್ರಾಯ ಪಡಲಾಗಿದೆ.
 
 
ತ್ಯಾಗರಾಜರು ಚಿಕ್ಕಂದಿನಲ್ಲಿ, ಅವರ ತಾಯಿ ಹಾಡುತ್ತಿದ್ದ ಪುರಂದರದಾಸರ ದೇವರನಾಮಗಳಿಂದ ಪ್ರಭಾವಿತರಾಗಿದ್ದರೆಂದು ಹೇಳಲಾಗಿದೆ. ಇವರ ಹಲವು ಕೃತಿಗಳು ಪುರಂದರದಾಸರ ಕೆಲವು ಪದಗಳಲ್ಲಿ ಇರುವ ಭಾವನೆಯನ್ನೇ ವ್ಯಕ್ತ ಪಡಿಸುವುದು ಗಮನಾರ್ಹ. ಉದಾಹರಣೆಗೆ ರೇವಗುಪ್ತಿ ರಾಗದ ಗ್ರಹಬಲಮೇಮಿ ಎಂಬ ಕೃತಿ ಪುರಂದರರ ಸಕಲ ಗ್ರಹಬಲನೀನೆ ಎಂಬ ರಚನೆಯನ್ನು ಹೋಲುತ್ತಿದ್ದರೆ, ಜಿಂಗಲ ರಾಗದ ಅನಾಥುಡನು ಗಾನು ಎಂಬ ರಚನೆ ಪುರಂದರ ದಾಸರ ನಿನ್ನಂಥ ತಾಯಿ ಎನಗುಂಟು ನಿನಗಿಲ್ಲ ಎಂಬ ಉಗಾಭೋಗದ ಭಾವನೆಯನ್ನೇ ಹೇಳುತ್ತದೆ. ತ್ಯಾಗರಾಜರು ಅವರ ಪ್ರಹ್ಲಾದ ಭಕ್ತಿ ವಿಜಯದ ಮಂಗಳಶ್ಲೋಕದಲ್ಲಿ, ಪುರಂದರದಾಸರನ್ನು ಸ್ಮರಿಸಿದ್ದಾರೆ.
"https://kn.wikipedia.org/wiki/ತ್ಯಾಗರಾಜ" ಇಂದ ಪಡೆಯಲ್ಪಟ್ಟಿದೆ