ಕುರುಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿತ್ರಗಳನ್ನು ಸೇರಿಸಲಾಗಿದೆ.
ಲೇಖನವನ್ನು ಪರಿಷ್ಕರಿಸಲಾಗಿದೆ.
೬೬ ನೇ ಸಾಲು:
[[File:Geetopdesh Sthal.jpg|thumb|The Holy Peepal tree - witness to the Divine message of Sri Bhagavad Geeta by Lord Sri Krishna to Arjuna at this place during the Mahabharata war.]]
 
'''ಕುರುಕ್ಷೇತ್ರ''' [[ಹರಿಯಾಣ]] ರಾಜ್ಯದಲ್ಲಿರುವ ಒ೦ದು ನಗರ ಮತ್ತು ಜಿಲ್ಲೆ. ಪಾಂಡವ-ಕೌರವರ ಪೂರ್ವಜ 'ಕುರು' ಎಂಬ 'ಕುರುವಂಶದ ಮೂಲ ಪುರುಷ'ನಿಂದ 'ಕುರು ವಂಶಕುರುವಂಶ' ಹಾಗೂ 'ಕುರುಕ್ಷೇತ್ರ'ವೆಂಬ ಹೆಸರು ಬರಲು ಕಾರಣ.
==ಇತಿವೃತ್ತ==
*[[ನವದೆಹಲಿ]]ಯಿಂದ ಉತ್ತರದ ಕಡೆಗೆ ಸಾಗುವಾಗ ೧೬೦ ಕಿಮೀ ದೂರದಲ್ಲಿ [[ಸೋನಿಪತ್]] [[ಪಾನಿಪತ್]] ಅನಂತರ ಪುರಾಣಪ್ರಸಿದ್ಧ ಕುರುಕ್ಷೇತ್ರ ರೈಲುನಿಲ್ದಾಣ ಸಿಗುತ್ತದೆ. ಅದೊಂದು ಪುಟ್ಟ ರೈಲುನಿಲ್ದಾಣ. ಕುರುಕ್ಷೇತ್ರವೆಂದರೆ [[ಮಹಾಭಾರತಯುದ್ಧ]] ನಡೆದ ಸ್ಥಳ. ಪುರಾತನ ಧಾರ್ಮಿಕ ಕ್ಷೇತ್ರ.
*ಇದಕ್ಕೆ 'ಧರ್ಮ ಕ್ಷೇತ್ರ'ವೆಂದು ಹೆಸರು. ಇದು ಪೌರಾಣಿಕ ಸ್ಥಳವೆಂದು ಬೆರಳೆಣಿಕೆಯಷ್ಟು ಯಾತ್ರಾರ್ಥಿಗಳು ಬರುತ್ತಾರೆ ಹೊರತು ಹೇಳಿಕೊಳ್ಳುವಂಥ ದೊಡ್ಡ ಪಟ್ಟಣವೇನಲ್ಲ. ಕುರುಕ್ಷೇತ್ರ ಜಿಲ್ಲೆಯ ಒಟ್ಟು ವಿಸ್ತೀರ್ಣ ೧,೬೮೨ ಚ. ಕಿಮೀ, ಮತ್ತು ೨೦೦೧ ರ ಜನಗಣತಿಯ ಪ್ರಕಾರ ಜನಸ೦ಖ್ಯೆ ೬, ೪೧, ೦೦೦.
 
==ಕುರುಕ್ಷೇತ್ರದ ಸುತ್ತ ಮುತ್ತ==
*ಪುಟ್ಟ ರೈಲು ನಿಲ್ದಾಣ, ಕೆಲವು ಬ್ಯಾಂಕುಗಳು, ಅಂಗಡಿಸಾಲು ಹಾಗೂ ಜನಜೀವನ ಇವೆಲ್ಲ ಉತ್ತರ ಇಂಡಿಯಾದ ಬೇರೆಲ್ಲ ಊರುಗಳಂತೆಯೇ ತೋರಿದರೂ ಹಲವಾರು ಧರ್ಮಶಾಲೆಗಳು ಹಾಗೂ ಗುಡಿಗಳು ನಮ್ಮ ಮನಸ್ಸನ್ನು ನಿಧಾನವಾಗಿ ಪುರಾಣಪ್ರಸಿದ್ಧ ಕಾಲವೊಂದಕ್ಕೆ ಕರೆದೊಯ್ಯು ತ್ತವೆ.
*[[ಸಿಖ್ ಧರ್ಮ]]ದಲ್ಲಿಯೂ ಇದು ಪವಿತ್ರ ಸ್ಥಳ-ಎಲ್ಲ ಹತ್ತು ಸಿಖ್ ಗುರುಗಳೂ ಇಲ್ಲಿಗೆ ಭೇಟಿ ನೀಡಿದ್ದರಿ೦ದ ಈ ಸ್ಥಳಕ್ಕೆ ಸಿಕ್ಖರಲ್ಲಿ ಪವಿತ್ರ ಸ್ಥಾನ ಉ೦ಟು. ಕುರುಕ್ಷೇತ್ರ ಜಿಲ್ಲೆಯಲ್ಲಿ [[ಥಾನೇಶ್ವರ]] ಮತ್ತು [[ಪೆಹೋವ]] ತಾಲ್ಲೂಕುಗಳಿವೆ. ಥಾನೇಶ್ವರ, ಪೆಹೋವ ಮತ್ತು ಕುರುಕ್ಶೇತ್ರ ಇಲ್ಲಿಯ ಮುಖ್ಯಪಟ್ಟಣಗಳು. [[ಚಂಧೀಘಡ]] ಇಲ್ಲಿಂದ ೭೫ ಕಿ.ಮೀ.ದೂರದಲ್ಲಿದೆ. ರಾಷ್ಟ್ರೀಯ ಹೆದ್ದಾರಿ ೧ ಇಲ್ಲಿಂದ ಸಾಗುತ್ತದೆ.
 
==ಸನ್ನಿಹತ್ ಸರೋವರ==
Line ೭೫ ⟶ ೭೯:
 
==ಬ್ರಹ್ಮ ಸರೋವರ==
*ಬೃಹದಾಕಾರದ [[ಬ್ರಹ್ಮಸರೋವರ]]ವು ಯಾತ್ರಾರ್ಥಿಗಳಿಗೆ ತಂಗುದಾಣ, 'ಸ್ನಾನಘಟ್ಟ', 'ದೋಣಿವಿಹಾರ', 'ನಡುಗಡ್ಡೆ' ಮುಂತಾದವುಗಳಿಂದ ಸುಸಜ್ಜಿತವಾಗಿದೆ. ಸರೋವರದ ಎದುರಿಗಿನ ವಿದ್ಯಾಪೀಠದಲ್ಲಿ ಕುರುಕ್ಷೇತ್ರ ಯುದ್ಧವನ್ನು ಜೀವಂತಿಕೆಯಿಂದ ತೋರಿಸುವ 'ಗೊಂಬೆ ಗ್ಯಾಲರಿ' ಇದೆ.
*ಅಲ್ಲಿಂದ ಪಂಚಪಾಂಡವರ ಮಂದಿರ ದಾಟಿಕೊಂಡು ಮುಂದೆ ಹೋದರೆ [[ಬಿರ್ಲಾ ಮಂದಿರ]]ವಿದ್ದು ಅದರ ಆವರಣದಲ್ಲಿರುವ ಅಮೃತಶಿಲೆಯ ಶ್ರೀಕೃಷ್ಣರಥವು ಕಣ್ಮನ ಸೆಳೆಯುತ್ತದೆ. ಮಹಾಭಾರತ ಯುದ್ಧದಲ್ಲಿ ಪ್ರಾಣತೆತ್ತ ಹದಿನೆಂಟು ಅಕ್ಷೋಹಿಣಿ ಸೈನಿಕರಿಗೆ ಒಮ್ಮೆಗೇ ತರ್ಪಣ ಬಿಟ್ಟ ಸ್ಥಳವೆಂದು 'ಸೂರಜ್‌ಕುಂಡ್' ಪ್ರಸಿದ್ಧವಾಗಿದೆ.
==ಗೀತೋಪದೇಶದ ಸ್ಥಾನ==
*ಮಹಾಭಾರತದ ಯುದ್ಧದಲ್ಲಿ ನಡೆದ ಅತಿ ಮುಖ್ಯವಾದ ಘಟನೆ ಗೀತೋಪದೇಶ. ಕುರುಕ್ಷೇತ್ರದ ಊರ ಹೊರಗೆ ಹೊರಟರೆ ನಾಲ್ಕು ಕಿಲೋಮೀಟರು ದೂರದಲ್ಲಿ ಜೋತಿಸರ ಎಂಬಲ್ಲಿ ಒಂದು ಪ್ರದೇಶವನ್ನು ಈ ಗೀತೋಪದೇಶದ ತಾಣವೆಂದು ಗುರುತಿಸಲಾಗಿದೆ. ಆ ಜಾಗದಲ್ಲಿ ಒಂದು ರಥವನ್ನೂ ಅದರ ಚಾಲಕಸ್ಥಾನದಲ್ಲಿ ಕೃಷ್ಣನ ಮೂರ್ತಿಯನ್ನೂ, ಅರ್ಜುನನ ಮೂರ್ತಿಯನ್ನೂ ನಿಲ್ಲಿಸಲಾಗಿದೆ.
*ಸನಿಹದಲ್ಲೇ ಒಂದು ಪುರಾತನ ಆಲದ ಮರವಿದ್ದು ಗೀತೋಪದೇಶಕ್ಕೆ ಸಾಕ್ಷಿಯಾದ ಮರವೆಂದು ಅದನ್ನು ಪೂಜಿಸಲಾಗುತ್ತಿದೆ. ಈ ಜಾಗವನ್ನೂ ಹತ್ತಿರದ ಗುಡಿಗಳು ಹಾಗೂ ಸನಿಹದ ಸರೋವರವನ್ನೂ ಸಂಯೋಜಿಸಿ ರಾತ್ರಿ ಹೊತ್ತಿನಲ್ಲಿ ಪ್ರದರ್ಶಿಸುವ ಧ್ವನಿಬೆಳಕಿನ ಕಾರ್ಯಕ್ರಮವು ನೋಡಲು ಚೆನ್ನಾಗಿರುತ್ತದೆ.
 
==ಬಾಣ ಗಂಗ==
Line ೮೪ ⟶ ೯೦:
 
==ಕುರುಕ್ಷೇತ್ರ ವಿಶ್ವವಿದ್ಯಾಲಯ==
*ಇವೇ ಪುರಾಣ ದೃಶ್ಯಗಳನ್ನು ಮತ್ತೆ ನೋಡಲೆಂದೇ ಇರುವ [[ಪ್ಯಾನೋರಮಾ]] ಮತ್ತು ವಿಜ್ಞಾನಕೇಂದ್ರವು ಕುರುಕ್ಷೇತ್ರ ಯುದ್ಧವರ್ಣನೆಯನ್ನು ವಿವರಿಸುವ ವಿನೂತನ ತಂತ್ರಜ್ಞಾನದ ಸ್ಥಿರಚಿತ್ರಶಾಲೆ. ಕುರುಕ್ಷೇತ್ರದ ನೆಲದಲ್ಲಿ ಕಾಲೂರಿ ಕುರುಕ್ಷೇತ್ರದ ಕಾಲಕ್ಕೆ ಜಾರುತ್ತಾ ಅಂದಿನ ಮಹಾಭಾರತ ಯುದ್ಧವನ್ನು ಕಣ್ಣಾರೆ ಕಾಣುವ ಅವಕಾಶ ಒದಗಿಸುತ್ತದೆ ಈ ಕಲಾಕೇಂದ್ರ.
* 'ಕೃಷ್ಣವಸ್ತುಸಂಗ್ರಹಾಲಯಕೃಷ್ಣ ವಸ್ತುಸಂಗ್ರಹಾಲಯ'ವೂ ಪಕ್ಕದಲ್ಲಿಯೇ ಇದ್ದು ಮಹಾಭಾರತವನ್ನು ಕಣ್ಣಿಗೆ ಕಟ್ಟುವಂತೆ ಮಾಡುತ್ತದೆ. ಇಷ್ಟಲ್ಲದೆ ಕುರುಕ್ಷೇತ್ರದಲ್ಲಿ ವಿಶ್ವವಿದ್ಯಾಲಯವಿದೆ, [[ಕಲ್ಪನಾ ಚಾವ್ಲಾ]] ತಾರಾಲಯವಿದೆ. ಇವೆಲ್ಲ ಆಧುನಿಕತೆಯ ನಡುವೆ ಎತ್ತ ನೋಡಿದರತ್ತ ಗಲೀಜು, ಕಾವಿಧಾರಿ ಭಿಕ್ಷುಕರ ಸಾಲು, ಬೀಡಾಡಿ ವೃದ್ಧರ ದಯನೀಯ ಚಿತ್ರಗಳು ನಮ್ಮ ಇಂಡಿಯಾದ ಪುರಾಣ ಮತ್ತು ನವ್ಯತೆಯ ನಡುವಿನ ಕೊಂಡಿಗಳಾಗಿ ಉಳಿಯುತ್ತವೆ.
 
 
"https://kn.wikipedia.org/wiki/ಕುರುಕ್ಷೇತ್ರ" ಇಂದ ಪಡೆಯಲ್ಪಟ್ಟಿದೆ