ಎಸ್. ಜಾನಕಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೦ ನೇ ಸಾಲು:
*೧೯೫೭ರಲ್ಲಿ ಪ್ರಸಿದ್ಧ ಸಂಗೀತ ನಿರ್ದೇಶಕ ಟಿ.ಚಲಪತಿ ರಾವ್ ಅವರ ತಮಿಳು ಚಿತ್ರ ‘ವಿಧಿಯಿನ್ ವಿಳಯಾಟ್ಟು’ ಅವರು ಹಾಡಿದ ಪ್ರಥಮ ಚಿತ್ರ. ಮುಂದೆ ತೆಲುಗಿನ ಚಿತ್ರ ಎಂ.ಎಲ್.ಎ, ಕನ್ನಡದ ಕೃಷ್ಣಗಾರುಡಿ ಇವೆಲ್ಲಾ ಒಂದಾದ ನಂತರ ಒಂದೊಂದರಂತೆ ಹರಿದು ಬರಲು ಪ್ರಾರಂಭವಾದುವು. ಮಲಯಾಳಂ ಚಿತ್ರಗಳಲ್ಲಿ ಕೂಡಾ ಹಾಡಲು ಪ್ರಾರಂಭಿಸಿದರು. ಹೀಗೆ ಅವರು ದಕ್ಷಿಣ ಭಾರತದ ಎಲ್ಲಾ ಪ್ರಧಾನ ಭಾಷೆಗಳ ಗಾಯಕಿಯಾದರು.
*ಜೊತೆಗೆ ಹಿಂದಿಯನ್ನೊಳಗೊಂಡಂತೆ ಭಾರತದ ಬಹಳಷ್ಟು ಭಾಷೆಗಳಲ್ಲಿ ತಮ್ಮ ಗಾನಮಾಧುರ್ಯದ ಸವಿಯನ್ನು ಬಿತ್ತರಿಸಿದರು. ತಮಿಳಿನಲ್ಲಿ ೧೯೫೮ರ ಸುಮಾರಿನಲ್ಲಿ ಅವರು ಹಾಡಿದ ‘ಸಿಂಗಾರವೇಲನೆ ದೇವ’ ಎಂಬ ಮಹಾನ್ ನಾದಸ್ವರ ವಿದ್ವಾನ್ ಅರುಣಾಚಲಂ ಅವರ ನಾದ ಸ್ವರ ದೊಂದಿಗೆ ಮೇಳೈಸಿ ಹಾಡಿದ ಗೀತೆ ಪ್ರಾರಂಭದ ವರ್ಷಗಳಲ್ಲೇ ಅವರನ್ನು ಅಪ್ರತಿಮ ಗಾಯಕಿ ಎಂದು ಇಡೀ ದೇಶ ಗುರುತಿಸುವಂತೆ ಮಾಡಿತು.
*ಕನ್ನಡ ಚಿತ್ರ 'ಹೇಮಾವತಿ'ಯಲ್ಲಿ ಅವರು ಹಾಡಿರುವ "ಶಿವ ಶಿವ ಎನ್ನದ ನಾಲಿಗೆ ಏಕೆ?" ಎಂಬ ಅನನ್ಯಗೀತೆಯು ಇಡೀ ಭಾರತ ದೇಶದ ಅತ್ಯಂತ ತ್ರಾಸದಾಯಕ ಗೀತೆ ಎನಿಸಿದೆ. ಜಾನಕಿಯವರು 'ಈ ಹಾಡು ಅವರನನ್ನ ಸಂಗೀತ ಜೀವನದಲ್ಲಿ ಭಯಪಟ್ಟು ಹಾಡಿದ ಹಾಡು, ಮತ್ತೆ ಹಾಡಲೂ ಆಗದ ಹಾಡು' ಎಂದು ಹೇಳುತ್ತಾರೆ. ಆ ನಂತರದಲ್ಲಿ ಅವರು ಹಾಡಿರುವ ಗೀತೆಗಳ ಸಂಖ್ಯೆ ೨೦,೦೦೦ವನ್ನು ಮೀರಿದೆ.
 
==ನಾನು ಹಾಡುವುದೇ ಇಲ್ಲ ! ಆತನ ಕಾಯಕವದು==
"https://kn.wikipedia.org/wiki/ಎಸ್._ಜಾನಕಿ" ಇಂದ ಪಡೆಯಲ್ಪಟ್ಟಿದೆ