ಮಹಾವೀರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೩೪ ನೇ ಸಾಲು:
ಇಡೀ ಜಗತ್ತಿಗೆ ತಿಳಿದಿರುವಂತೆ ಈ ಬಹುಪ್ರಾಚೀನ ಧರ್ಮದ ಉಗಮ ಪ್ರಥಮ ತೀರ್ಥಂಕರರಾದ ಭಗವಾನ್ ಋಷಭದೇವರ ಆವಿರ್ಭಾವದೊಂದಿಗೆ ಉಂಟಾಯಿತು. ಆದರೂ 24ನೆಯ ತೀರ್ಥಂಕರರಾದ ಭಗವಾನ್ ಮಹಾವೀರರನ್ನೇ ಈ ಧರ್ಮದ ಪ್ರತಿಷ್ಠಾಪಕರೆಂದು ಕರೆದು ಗೌರವ ನೀಡಲಾಗಿದೆ. ‘ತೀರ್ಥಂಕರ’ ಶಬ್ದದ ಅರ್ಥ ‘ತೀರ್ಥಂ ಕರೋತಿ ಇತಿ’ – ಯಾರ ಚರಣ ಸ್ಪರ್ಶದಿಂದ ಅತಿ ಸಾಮಾನ್ಯ ಸ್ಥಳವೂ ಮಹಾನ್ ತೀರ್ಥಕ್ಷೇತ್ರವಾಗಿ ಪರಿಣಮಿಸುವುದೋ ಅವರು. ಹೋಲಿಕೆ ಸಾಧಾರಣವಾಗಿ ಸರಿಯಲ್ಲದೇ ಹೋದರೂ, ಹಿಂದೂಧರ್ಮದ ಅವತಾರಗಳೊಂದಿಗೆ ಈ ತೀರ್ಥಂಕರರನ್ನು ಹೋಲಿಸಬಹುದು. ತೀರ್ಥಂಕರರ ಜನ್ಮ-ಕರ್ಮಗಳು ದಿವ್ಯ, ಅಭೂತಪೂರ್ವ. ಅವರ ಸಾಧನೆಗಳು ಸಾಧಾರಣ ಮಾನವನ ಕಲ್ಪನೆಯನ್ನೂ ಮೀರಿದವು.
 
ಇತಿಹಾಸದ ಪ್ರಕಾರ ನೋಡಿದರೆ ಜೈನಧರ್ಮದ ಪ್ರಾಚೀನತೆಯ ಅರಿವಾಗುತ್ತದೆ. ಮಹಾಭಾರತದ ಯುದ್ಧ ನಡೆಯುತ್ತಿದ್ದ ಸಮಯದಲ್ಲಿ 22ನೆಯ ತೀರ್ಥಂಕರರಾದ ಭಗವಾನ್ ನೇಮಿನಾಥರು ಧರ್ಮಪ್ರಚಾರ ಮಾಡುತ್ತಿದ್ದರು. ಶ್ರೀಮದ್ಭಾಗವತದಲ್ಲಿ ಮೊದಲ ತೀರ್ಥಂಕರರ ಹೆಸರಿದೆ. ಪ್ರಥಮ ತೀರ್ಥಂಕರರು ಮತ್ತು 22ನೆಯ ತೀರ್ಥಂಕರರ ನಡುವೆ 1000 ವರ್ಷಗಳ ವೆತ್ಯಾಸವಿತ್ತುವ್ಯತ್ಯಾಸವಿತ್ತು ಎಂದು ನಾವು ಭಾವಿಸಿದರೂ ಪ್ರಥಮ ತೀರ್ಥಂಕರರು ಬಹಳ ಪುರಾತನರು ಎಂದೇ ಪರಿಗಣಿಸಬೇಕಾಗುತ್ತದೆ.
 
==ಮಹಾವೀರರು==
"https://kn.wikipedia.org/wiki/ಮಹಾವೀರ" ಇಂದ ಪಡೆಯಲ್ಪಟ್ಟಿದೆ