ವಲ್ಲಭ್‌ಭಾಯಿ ಪಟೇಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು replacing 0 with anusvara
ಚು replacing 0 with anusvara
೬೫ ನೇ ಸಾಲು:
ಪಟೇಲರ ಆದೇಶದ ಮೇರೆ ಭಾರತೀಯ ಸೇನೆ ಹಾಗೂ ಪೋಲೀಸ್ ಪಡೆಗಳು ಜುನಾಘಡವನ್ನು ಪ್ರವೇಶಿಸಿದವು. ಮುಂದೆ ನಡೆದ ಜನಮತಗಣನೆಯಲ್ಲಿ ಶೇಕಡಾ ೯೯.೫ ಮಂದಿ ಭಾರತದೊಂದಿಗೆ ವಿಲೀನದ ಪರವಾಗಿ ಮತವಿತ್ತರು. ಇಂದಿನ [[ಕರ್ನಾಟಕ]], [[ಮಹಾರಾಷ್ಟ್ರ]] ಮತ್ತು [[ಆಂಧ್ರ ಪ್ರದೇಶ|ಆಂಧ್ರ]]ದ ಭಾಗಗಳನ್ನೊಳಗೊಂಡ [[ಹೈದರಾಬಾದ್]] ಭಾರತದ ಸಂಸ್ಥಾನಗಳಲ್ಲಿಯೇ ಅತಿ ದೊಡ್ಡದಾಗಿತ್ತು. ಅಲ್ಲಿನ [[ನಿಜಾಮ]] ಮುಸ್ಲಿಮರಾಗಿದ್ದರೂ ಜನಸಂಖ್ಯೆಯ ಶೇಕಡಾ ೮೦ ಹಿಂದೂಗಳಾಗಿದ್ದರು.ಜಿನ್ನಾ ಮೊದಲಾದ ಪಾಕಿಸ್ತಾನ ನಾಯಕರು ಹಾಗೂ ಬ್ರಿಟೀಷ್ ರ ಬೆಂಬಲದಿಂದ, ಹೈದರಾಬಾದ್ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ನಿಜಾಮ ಘೋಷಿಸಿದ. ಆತನ ಸೇನೆಗೆ ಅತ್ಯಾಧುನಿಕ ಸಿಡ್ನಿ ಕಾಟನ್ ಬಂದೂಕುಗಳು, ಮದ್ದುಗುಂಡುಗಳನ್ನು ಮತ್ತು ತರಬೇತಿಯನ್ನು ಬ್ರಿಟೀಷ್ ರು ನೀಡಿದರು.[[ಕಾಸೀಂ ರಜ್ವಿ|ಕಾಸೀಂ ರಜ್ವಿಯಂಬ]] ಮತಾಂಧ ಮತ್ತು ಉಗ್ರವಾದಿಯ ಮುಂದಾಳುತ್ವದಲ್ಲಿ ಸಾವಿರಾರು ಜನ ರಜಾಕಾರರು, ಹೈದರಾಬಾದ್ ಸಂಸ್ಥಾನದಲ್ಲಿ ಜನಸಾಮಾನ್ಯರ ಮೇಲೆ ಆಕ್ರಮಣ ನೆಡೆಸಿದರು. ಮಹಿಳೆಯರ ಮಾನಭಂಗ, ಮಕ್ಕಳ ಹತ್ಯೆ, ಜನರ ಹತ್ಯೆ ಇವು ಸಾವಿರಾರು ಕಡೆ ನೆಡೆದವು. [[ಸ್ವಾಮಿ ರಮಾನಂದತೀರ್ಥ|ಸ್ವಾಮಿ ರಮಾನಂದತೀರ್ಥರ]] ನೇತೃತ್ವದಲ್ಲಿ [[ಹೈದರಾಬಾದ್ ಪ್ರಾಂತ್ಯ ವಿಮೋಚನಾ ಹೋರಾಟ]] ನೆಡೆಯಿತು. [[ಕರ್ನಾಟಕ|ಕರ್ನಾಟಕದ]] ಮುಂಡರಗಿಯ ಶಿಬಿರಕ್ಕೆ ಕೇಂದ್ರ ಮಂತ್ರಿ ಗಾಡ್ಗೀಳರನ್ನು ಕಳುಹಿಸಿದ ಪಟೇಲ್ ರು, ಈ ಹೋರಾಟಕ್ಕೆ ಬೆಂಬಲ ನೀಡಿ ಪ್ರೋತ್ಸಾಹಿಸಿದರು.
 
ಯುದ್ಧ ಭೀತಿಯಿಂದ ಹತಾಶರಾಗಿದ್ದ [[ಮೌಂಟ್ ಬ್ಯಾಟನ್ನ|ಮೌಂಟ್ ಬ್ಯಾಟನ್ನರ]] ಪ್ರಯತ್ನದಿಂದ ತಟಸ್ಥ ಒಪ್ಪಂದವಾದರೂ, ನಿಜಾಮ ತನ್ನ ನಿಲುವನ್ನು ಬದಲಾಯಿಸಿ, ಈ ಒಪ್ಪಂದವನ್ನು ತಿರಸ್ಕರಿಸಿದ. ವಿಶ್ವಸಂಸ್ಥೆಗೆ ಈ ವಿವಾದವನ್ನು ಒಪ್ಪಿಸುವ ಕುತಂತ್ರ ಅವನದಾಗಿತ್ತು. ೧೯೪೮ರ ಸೆಪ್ಟೆಂಬರಿನಲ್ಲಿ ಪಟೇಲರು ಭಾರತ ಇನ್ನು ಕಾಯಲಾಗದು ಎಂದು [[ರಾಜಗೋಪಾಲಚಾರಿ|ರಾಜಾಜಿ]]ಯವರನ್ನು ಒಪ್ಪಿಸಿ, ಹೈದರಾಬಾದನ್ನು ವಶಕ್ಕೆ ತೆಗೆದುಕೊಳ್ಳಲು ಭಾರತದ ಸೇನೆಯನ್ನು ಕಳುಹಿಸಿದರು. [[ಆಪರೇಷನ್ ಪೋಲೋ]] ಎಂಬ ಈ ಕಾರ್ಯಾಚರಣೆಯಲ್ಲಿ ಸಾವಿರಾರು [[ರಜಾಕಾರ|ರಜಾಕಾರರು]] ಕೊಲ್ಲಲ್ಪಟ್ಟರು. ೧೯೪೮ ಸೆಪ್ಟೆ೦ಬರ್ ೧೭ ರ೦ದುರಂದು ಈಗಿನ [[ಬೀದರ್]] ಜಿಲ್ಲೆಯ [[ಹುಮುನಾಬಾದಿ|ಹುಮುನಾಬಾದಿನಲ್ಲಿ]] ನಿಜಾಮರ ಸೈನ್ಯ ಶರಣಾಯಿತು. [[ಹೈದರಾಬಾದು]] ಪ್ರಾ೦ತ್ಯ ಸುರಕ್ಷಿತವಾಗಿ ಭಾರತದ ಭಾಗವಾಯಿತು. ಕೇವಲ ಎರಡುದಿನವಷ್ಟೇ ನಡೆದ ಕಾರ್ಯಚರಣೆಯನ್ನು, ಭಾರತ ಸರಕಾರದ ದಾಖಲೆಗಳಲ್ಲಿ ಪೋಲೀಸ್ ಕಾರ್ಯಚರಣೆಯೆ೦ದು ಕರೆಯಲಾಗಿದೆ. ನಿಜಾಮರ ಸೈನ್ಯದ ಸೈನ್ಯಾಧಿಕಾರಿ ಒಬ್ಬ ಬ್ರಿಟಿಷ್ ಆಗಿದ್ದನೆ೦ಬುವುದು ಇಲ್ಲಿ ಗಮನಾರ್ಹ.
 
ಬಲಪ್ರಯೋಗದಿಂದ ಹೈದರಾಬಾದನ್ನು ವಶಪಡಿಸಿಕೊಂಡಲ್ಲಿ ಅದು [[ಹಿಂದೂ ಧರ್ಮ|ಹಿಂದೂ]]-ಮುಸ್ಲಿಮ್ ದಂಗೆಗಳಿಗೆ ಅವಕಾಶ ಕೊಡಬಹುದು ಎಂದು [[ಮೌಂಟ್ ಬ್ಯಾಟನ್]] ಮತ್ತು ನೆಹರೂ ಶಂಕಿಸಿ ಹಿಂಜರಿದರೂ, ಪಟೇಲರು ಹೈದರಾಬಾದನ್ನು ಹಾಗೆಯೇ ಬಿಟ್ಟಲ್ಲಿ ಅದು ಭಾರತದ ಪ್ರತಿಷ್ಟೆಗೇ ಸವಾಲಾಗುವುದಷ್ಟೇ ಅಲ್ಲ, ಅದರಿಂದಾಗಿ ಹಿಂದೂಗಳಾಗಲೀ, ಮಸಲ್ಮಾನರಾಗಲೀ ಆ ರಾಜ್ಯದಲ್ಲಿ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಯಾವುದೇ ನಾಗರೀಕ ಪ್ರತಿಭಟನೆಯಿಲ್ಲದೇ ಯಶಸ್ವಿಯಾದ ಹೈದರಾಬಾದಿನ ವಿಲೀನವನ್ನು ಅನೇಕ ಭಾರತೀಯ ಮುಸ್ಲಿಮರು ಕೊಂಡಾಡಿದರು. ನಿಜಾಮರ ಮೇಲೆ ಸಂತಾಪವಿದ್ದರೂ, ಪಟೇಲರು ಅವರನ್ನು ರಾಜ್ಯದ ಅಲಂಕಾರಿಕ ಮುಖ್ಯಸ್ಥನನ್ನಾಗಿ ನೇಮಿಸಿದರು. ಮುಂದೆ ನಡೆದ ಮಾತುಕತೆಯಲ್ಲಿ ನಿಜಾಮರು ಪಟೇಲರನ್ನು ಕ್ಷಮಾಪಣೆ ಕೇಳಿದ್ದರಿಂದ ಪಟೇಲರು ದೊಡ್ಡ ಮನಸ್ಸಿನಿಂದ ವೈರವನ್ನು ತಮ್ಮ ಮನಸ್ಸಿನಿಂದ ತೆಗೆದುಹಾಕಿದರು.