ಅನುಭವ ಮಂಟಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚು Wikipedia python library
೧ ನೇ ಸಾಲು:
[[ಬಸವಣ್ಣ]]ನವರು ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆ ತಂದು 'ಅನುಭವ ಮಂಟಪ'ವನ್ನು ಸ್ಥಾಪಿಸಿದರು.
'''ಅನುಭವ ಮಂಟಪ''' [[೧೨ನೇ ಶತಮಾನ]]ದಲ್ಲಿ ಎಲ್ಲಾ ಧರ್ಮದ ಶರಣರು, ಕವಿಗಳು ಮತ್ತು ತತ್ವಜ್ಞಾನಿಗಳು ಸೇರುತ್ತಿದ್ದ ಒಂದು ಸಾಮಾಜಿಕ-ಧಾರ್ಮಿಕ ಸಂಸತ್ತು. ಇದರಲ್ಲಿ ಎಲ್ಲಾ ಜಾತಿಯ ಎಲ್ಲಾ ವೃತ್ತಿಯ ಸಾಮಾನ್ಯ ಜನರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಚರ್ಚಿಸುತ್ತಿದ್ದರು ಹಾಗೂ ತಮ್ಮ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದರು. ಅನುಭವ ಮಂಟಪದ ಪ್ರಥಮ ಅಧ್ಯಕ್ಷರಾಗಿದ್ದವರು [[ಅಲ್ಲಮ ಪ್ರಭು]]ಗಳು. [[ಅಕ್ಕಮಹಾದೇವಿ]] ಅನುಭವ ಮಂಟಪಕ್ಕೆ ಬಂದಾಗ [[ಅಲ್ಲಮ ಪ್ರಭು]] ಅವಳ ಜೊತೆ ಸಂವಾದ ನಡೆಸಿದರು, [[ಮೊಳಿಗೆ ಮಾರಯ್ಯ]] ಕಾಶ್ಮೀರದ ಮಹಾರಾಜ ಅವರು ಕಲ್ಯಾಣದ ಅನುಭವ ಮಂಟಪದ ಸಮಾನತೆ ಮತ್ತು ಧಾರ್ಮಿಕ ಆಚರಣೆಗಳನ್ನು ಕಂಡು ಮನಸೋತು ಕಲ್ಯಾಣದಲ್ಲಿಯ ಕಟ್ಟಿಗೆ ಮಾರುವ ಕಾಯಕ ಕೈಗೊಂಡರು. ವಿವಿಧ ಜಾತಿ, ಕಾಯಕದವರು ಅನುಭವ ಮಂಟಪದ ಸದಸ್ಯರಾಗಿದ್ದರು. ಒಮ್ಮೆ ಅನುಭವ ಮಂಟಪದಲ್ಲಿ ಚರ್ಚೆ ನಡೆಯುತ್ತಿರುವಾಗ ಮಹಾದೇವಿಯ ಆಗಮನವಾಗುತ್ತದೆ ಆಗ ಮಡಿವಾಳ ಮಾಚಿದೇವರು ಎದ್ದು ನಿಂತು ಬುದ್ಡಿ ಉಡುತಡಿಯ ಮಹಾದೇವಿಯವರು ಆಗಮಿಸುತ್ತಿದ್ದಾರೆ ಎಂದು ಹೇಳುತ್ತಾರೆ. ಆಗ ಬಸವಣ್ಣನವರು ಮಾಚಿದೇವರೇ ಮಹಾದೇವಿಯವರನ್ನು ಮರ್ಯಾದೆಯಿಂದ ಕರೆ ತನ್ನಿ ಎಂದು ಹೇಳಲು ಮಾಚಿದೇವರು ಆಕೆಗೆ ನಡೆ ಮುಡಿಯನ್ನು ಹಾಸುತ್ತಾರೆ. ಆಗ ಮಹಾದೇವಿಯು ಮಡಿಯನ್ನು ಸರಿಸಿ ಒಳಗೆ ಬರುತ್ತಾಳೆ. ಅಲ್ಲಿಂದ ಮುಂದೆ ಅಲ್ಲಮಪ್ರಭುದೇವರು ಮತ್ತು ಅಕ್ಕಮಹಾದೇವಿಯ ನಡುವೆ ಈ ರೀತಿ ಸಂಭಾಷಣೆ ನಡೆಯುತ್ತದೆ.
*'''ಅಕ್ಕ''' : ಪ್ರಭುದೇವರ ಶ್ರೀ ಚರಣಗಳಿಗೆ ಶರಣು ಶರಣಾರ್ಥಿ,
*'''ಅಲ್ಲಮ''' : ನಿಲ್ಲು ತುಂಬು ಯೌವನದ ಸತಿ ನೀನು ಇತ್ತಲೇಕೆ ಬಂದೆಯವ್ವ,, ಸತಿ ಎಂದರೆ ಮುನಿಯುವರು ನಮ್ಮ ಶರಣರು, ನಿನ್ನ ಪತಿಯ ಹೆಸರ ಹೇಳಿದರೆ ಬಂದು ಕುಳ್ಳಿರು ಅಲ್ಲವಾದರೆ ತೆರಳು ತಾಯೆ, ನಮ್ಮ ಶರಣರ ಸಂಘ ಸುಖದಲಿ ಸನ್ನಿಹಿತವ ಬಯಸುವೆಯಾದರೆ ನಿನ್ನ ಪತಿಯ ಹೆಸರ ಹೇಳಾ, ಎಲೆ ಅವ್ವಾ ಅಲ್ಲವಾದರೆ ನಿನಗೆ ಇಲ್ಲಿ ಸ್ಥಳವಿಲ್ಲ.
*'''ಅಕ್ಕ ''': ಹರನೇ ಗಂಡನಾಗಬೇಕೆಂದು ಅನಂತ ಕಾಲ ತಪಿಸಿದೆ ನೋಡಾ ! ಎನ್ನ ಜನ್ಮ ಜನ್ಮಾಂತರದ ಬಯಕೆ ಆ ಶಿವನೇ ಗಂಡನಾಗಬೇಕೆಂದು, ಅದು ಈ ಜನ್ಮದಲ್ಲಿ ಸಿದ್ದಿಸಿದೆ, ಗುರು ನನ್ನನ್ನು ಚನ್ನಮಲ್ಲಿಕಾರ್ಜುನನಿಗೆ ವಿವಾಹ ಮಾಡಿ ಕೊಟ್ಟಿದ್ದಾನೆ. ಗುರುವೇ ತೆತ್ತಿಗನಾದ, ಲಿಂಗವೇ ಮದುವಣಿಗನಾದ, ಆನು ಮದುವಣಗಿತ್ತಿಯಾದೆನು, ಈ ಭುವನವೆಲ್ಲವರಿಯಲು ಅಸಂಖ್ಯಾತರೆನ್ನ ತಾಯಿ ತಂದೆಗಳು, ಕೊಟ್ಟರು ಪ್ರಭುವಿನ ಮನೆಗೆ ಸಾದೃಶ್ಯವಪ್ಪ ವರನನ್ನು ನೋಡಿ, ಇದು ಕಾರಣ ಚೆನ್ನಮಲ್ಲಿಕಾರ್ಜುನನೇ ಗಂಡನೆನಗೆ ಮಿಕ್ಕಿನ ಲೋಕದ ಗಂಡರೆನಗೆ ಸಂಬಂಧವಿಲ್ಲವಯ್ಯಾ ಪ್ರಭುವೇ.
*'''ಅಲ್ಲಮ''' : ಈ ಮಾತಿನ ಚಮತ್ಕಾರವನ್ನು ನಮ್ಮ ಶರಣರು ಮೆಚ್ಚಲಾರರು ಮಹಾದೇವಿ, ನಿನ್ನ ಚರಿತ್ರೆಯನ್ನು ಲೋಕ ತಿಳಿಯದೆಂದು ಭಾವಿಸಬೇಡ, ಲಗ್ನವಾದ ಕೌಶಿಕನ ಮೇಲೆ ತಪ್ಪನ್ನು ಹೊರೆಸಿ ಅರಮನೆಯನ್ನು ಬಿಟ್ಟು ನಿರ್ವಾಣ ಶರೀರಿಯಾಗಿ ಹೊರಟು ಬಂದಿರುವೆ ಎಂಬ ಮಾತು ನಿಜವೇ ? ಪತಿಯ ಮೇಲೆ ತಪ್ಪನ್ನು ಹೊರಿಸಿ ಬರುವ ಸತೀ ಧರ್ಮವನ್ನು ಈ ನಮ್ಮ ಶರಣರು ಮೆಚ್ಚಲಾರರು.
*'''ಅಕ್ಕ''' : ನನ್ನ ಮದುವೆಯ ಕತೆಯನ್ನು ಪ್ರಪಂಚ ಹೇಗಾದರೂ ತಿಳಿದುಕೊಂಡಿರಲಿ, ನಾನು ಮೊದಲಿನಿಂದಲೂ ಚನ್ನಮಲ್ಲಿಕಾರ್ಜುನನಿಗೆ ಮೀಸಲು ಹೆಣ್ಣು , ಸಾವ ಕೆಡುವ ಗಂಡಂದಿರ ನೆಂದೂ ಬಯಸಿದವಳಲ್ಲ, ಸೀಮೆ ಇಲ್ಲದ ನಿಸ್ಸೀಮ ಚಲುವನಿಗೆ ಮಾತ್ರ ಒಲಿದವಳು, ನನ್ನ ಜೀವನದಲ್ಲಿ ಕೌಶಿಕನ ಪ್ರಸಂಗ ಒಂದು ದೈವ ಕೃಪೆಯಂತೆ ಬಂದಿತಷ್ಟೆ . ಸ್ತ್ರೀಯ ಸೌಂದರ್ಯ ದ ವ್ಯರ್ಥ ವ್ಯಾಮೋಹವನ್ನು ಬಿಡಿಸಲು ದಿಗಂಬರಳಾಗಿ ಅರಮನೆಯನ್ನು ತ್ಯಜಿಸಿ ಬಂದೆ, ಸೌಂದರ್ಯದ ಹಂಗನ್ನು ಹರಿದೊಗೆದು ಬಂದಂತಹವಳು.
*'''ಅಲ್ಲಮ''' : ನಿನ್ನ ದೇಹದ ಮೋಹ ನಿನಗಿನ್ನು ಹೋಗಿಲ್ಲ, ನಿನ್ನ ಸೌಂದರ್ಯದ ಮೋಹ ನಿನಗಿನ್ನೂ ಉಳಿದಿದೆಯಲ್ಲವೇ?
*'''ಅಕ್ಕ''' : ಇಲ್ಲ , ಆ ಭಾವ ನನಗೆ ಎಳ್ಳಷ್ಟೂ ಉಳಿದಿಲ್ಲ, ಕಾಯ ಕರ್ರನೆ ಕಂದಿದರೇನಯ್ಯ ? ಕಾಯ ಮಿರ್ರನೆ ಮಿಂಚಿದರೇನಯ್ಯ ? ಅಂತರಂಗ ಶುದ್ಧವಾದ ಬಳಿಕ ಚನ್ನಮಲ್ಲಿಕಾರ್ಜುನನಿಗೆ ಒಲಿದ ಅಂಗವು ಹೇಗಿದ್ದರೇನಯ್ಯ ಪ್ರಭುವೇ ?
*'''ಅಲ್ಲಮ''' : ಇದು ಬರಿಯ ಆಡಂಬರದ ಮಾತು, ಮಾತಿನಂತೆ ನಡೆ ಇಲ್ಲದವರನ್ನು ಗುಹೇಶ್ವರ ಲಿಂಗ ಮೆಚ್ಚುವವನಲ್ಲ , ಅಂತರಂಗದ ನಾಚಿಕೆ ಬಹಿರಂಗದಲ್ಲಿ ತಲೆದೋರುತ್ತಿದೆ. ಸೀರೆಯನ್ನಳಿದು ಕೂದಲನ್ನೇಕೆ ಮರೆಮಾಡಿ ಕೊಳ್ಳಬೇಕಾಗಿತ್ತು, ಈ ವರ್ತನೆ ಒಪ್ಪವಲ್ಲ ಗುಹೇಶ್ವರ ಲಿಂಗಕ್ಕೆ.
*'''ಅಕ್ಕ''' : ನಿಜ ಒಂದರ ಹಂಗನ್ನು ಬಿಟ್ಟು , ಇನ್ನೊಂದರ ಹಂಗನ್ನು ನಾನು ಹೊಂದಿದ್ದೇನೆಂದು ನೀವು ಹೇಳುವ ಮಾತು ನಿಜ, ಆದರೆ ಅದು ನನಗಾಗಿ ಅಲ್ಲ, ನಿಮಗಾಗಿ ಅಂದರೆ ಜನರ ಹಂಗಿಗಾಗಿ ಇದನ್ನು ಅವಲಂಬಿಸಿದ್ದೇನೆ. ಫಲ ಒಳಗೆ ಪಕ್ವವಾದಲ್ಲದೆ ಹೊರಗಣ ಸಿಪ್ಪೆ ಒಪ್ಪಗೆಡದು, ಕಾಮನ ಮುದ್ರೆಯ ಕಂಡು ನಿಮಗೆ ನೋವಾದಿತೆಂದು ಆ ಭಾವದಿಂದ ಮುಚ್ಚಿದೆ, ಇದಕ್ಕೆ ನೋವೇಕೆ ಕಾಡದಿರಣ್ಣ ಚನ್ನಮಲ್ಲಿಕಾರ್ಜುನನ ದೇವರ ದೇವನ ಒಳಗಾದವಳ.
*'''ಅಲ್ಲಮ''' : ಏನೂ ! ಫಲ ಪಕ್ವವಾದಲ್ಲದೆ ಹೊರಗಣ ಸಿಪ್ಪೆ ಒಪ್ಪಗೆಡದು ಎಂದೆಯಲ್ಲವೆ ನಾನು ಹೇಳುತ್ತೇನೆ ಕೇಳು, ಸಿಪ್ಪೆ ಒಪ್ಪಗೆಟ್ಟಾಗ ಹಣ್ಣಿನ ರಸ ಕೊಳಕಾಗುತ್ತದೆ ಅದನ್ನಾದರೂ ಮೆಚ್ಚುವುದು ಹೇಗೆ ?
*'''ಅಕ್ಕ''' : ಆ ಹಣ್ಣನ್ನು ನಾನು ಹಾಗೇ ಇಟ್ಟಿಲ್ಲ ಪ್ರಭುವೇ, ಎಂದೋ ಚನ್ನಮಲ್ಲಿಕಾರ್ಜುನನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಅರಿಷಡ್ವರ್ಗಗಳನ್ನಳಿದು ನನ್ನ ದೇಹವನ್ನು ವ್ಯಾಪಿಸಿರುವ ಸಚ್ಛಿದಾನಂದಾತ್ಮಕವಾದ ರಸ ಅದು. ಸಿಪ್ಪೆ ಒಪ್ಪಗೆಟ್ಟರು ಕೊಳೆಯಲಾರದು, ನನ್ನ ಒಳ ಹೊರೆಗೆಲ್ಲವನಳಿದು ನನ್ನತನ ಒಂದೂ ಇಲ್ಲವೆಂದು ಎಂದೆಂದೂ ಅಳಿಯದ ಅಮರ ಪವಿತ್ರತೆ ಯನ್ನು ತಂದು ಕೊಟ್ಟಿದೆ ಪ್ರಭುವೆ.
*'''ಅಲ್ಲಮ''' : ಈ ಬಾಹ್ಯ ಬ್ರಹ್ಮದ ಬೆಡಗನ್ನು ನಾವು ಮೆಚ್ಚುವವರಲ್ಲ , ನಾ ಸತ್ತೆನೆಂದು ಹೆಣ ಕೂಗಿದುದುಂಟೆ ? ಬೈಚಿಟ್ಟ ಬಯಕೆ ಕರೆದುದುಂಟೆ ? ಹೆಪ್ಪಿಟ್ಟ ಹಾಲು ಸಿಹಿಯಪ್ಪುದೇ ? ಈ ಮಾತು ಒಪ್ಪವಲ್ಲ ಗುಹೇಶ್ವರ ಲಿಂಗದಲ್ಲಿ.
*'''ಅಕ್ಕ''' : ಸತ್ತ ಹೆಣ ಕೂಗಿದುದುಂಟು, ಮರೆತು ಒರಗಿ ಕನಸು ಕಂಡು ಅದನ್ನು ಹೇಳುವಲ್ಲಿ ಸತ್ತ ಹೆಣ ಎದ್ದಂತೆ ಆಯಿತು, ಹೆಪ್ಪಿಟ್ಟ ಹಾಲು ಗಟ್ಟಿ ತುಪ್ಪವಾಗಿ ಸಿಹಿಯಾಗಿತ್ತು, ಇದಕ್ಕೆ ತಪ್ಪು ಸಾಧಿಸಲೇಕೆ ಪ್ರಭುವೇ.
*'''ಅಲ್ಲಮ''' : ಅದೂ ಹೋಗಲಿ, ಅರಿಷಡ್ವರ್ಗಗಳಿಂದಲೇ ತುಂಬಿರುವ ಈ ಶರೀರದಲ್ಲಿದ್ದು ಅದನ್ನು ದಾಟಿದ್ದೇನೆ ಎಂದರೆ ಅದನ್ನಾದರೂ ನಂಬುವುದು ಹೇಗೆ ?
*'''ಅಕ್ಕ''' : ಕಾಮನ ಗೆದ್ದ ಠಾವನ್ನು ಹೇಳಬೇಕೆ ಪ್ರಭುವೇ ? ಕಾಮವನ್ನು ಗೆಲ್ಲುವುದಕ್ಕೆ ಆ ಕಾಮ ನನ್ನ ಮನಸ್ಸಿನಲ್ಲಿ ಎಂದೂ ಹುಟ್ಟಿಯೇ ಇಲ್ಲ, ಕೇಳಿ ಅಂಗದ ಭಂಗವ ಲಿಂಗ ಸುಖದಿಂದ ಗೆಲ್ಲಿದೆ, ಜೀವದ ಭಂಗವ ಶಿವಾನುಭವದಿಂದ ಗೆಲ್ಲಿದೆ, ಕರಗದ ಕತ್ತಲೆಯ ಬೆಳಗನ್ನುಟ್ಟು ಗೆಲ್ಲಿದೆ, ಜವ್ವನದ ಹೊರ ಮಿಂಚಿನಲ್ಲಿ ನಿಮ್ಮ ಕಣ್ಣಿಗೆ ಕಾಣುವ ಕಾಮನ ಸುಟ್ಟುರಿಯುವ ಭಸ್ಮವ ನೋಡಯ್ಯ. ಕಾಮನ ಕೊಂದು ಮನಸ್ಸಿಜನಾಗುಳಿದರೆ, ಮನಸಿಜನ ತಲೆಬರಹವ ತೊಡೆದೆನು, ಎನ್ನ ಮನಸ್ಸಿಜನ ಜನನಕ್ಕೆ ಅವಕಾಶವನ್ನೇ ಕಲ್ಪಿಸಿಕೊಟ್ಟಿಲ್ಲ , ಇದನ್ನು ತಮ್ಮಂತಹ ಕೆಲವರು ಮಾತ್ರವೇ ಅರ್ಥ ಮಾಡಿಕೊಳ್ಳಬಲ್ಲವರು ಪ್ರಭುವೇ.
*'''ಅಲ್ಲಮ''' : ನೋಡಿದೆಯಾ ಬಸವಣ್ಣ, ಮಹಾದೇವಿಯ ಈ ನಿಲುವನ್ನು ಲೋಕಕ್ಕೆ ಪ್ರಕಟ ಮಾಡಬೇಕೆಂದೇ ನಾನು ಇಷ್ಟು ನಿಷ್ಠುರನಾದೆ. ತಾಯೇ ನಿನ್ನ ಜ್ಞಾನ ಘನ, ನಿನ್ನ ವಿರತಿ ಘನ, ನೀನು ವೈರಾಗ್ಯ ನಿಧಿ, ನಿನ್ನನ್ನು ಪಡೆದ ಜಗತ್ತು ಪಾವನ, ಮಾಯೆ ನಿನ್ನ ಮುಟ್ಟಲಿಲ್ಲ, ಮರಹು ನಿನ್ನ ಸೋಂಕಲಿಲ್ಲ, ಕಾಮ ನಿನ್ನ ಕೆಡಿಸಲಿಲ್ಲ, ಮಹಾದೇವಿ ಅಕ್ಕ ನೀನು ವಿಶ್ವ ಸ್ತ್ರೀ ಕುಲದ ಜ್ಯೋತಿ ನೀನು, ದಿಟ್ಟ ಹೆಜ್ಜೆ, ಧೀರ ನುಡಿಯ ತಾಯಿ ನೀನು, ವಿನಯ ವಿಶ್ವಾಸಗಳ ರತ್ನಗಣಿ ನೀನು, ತಾಯೇ ಮಹಾದೇವಿ ನಿನ್ನ ಸ್ತ್ರೀ ಪಾದಗಳಿಗೆ ನಮೋ ನಮೋ ಎಂದೆನು. (ಅಲ್ಲಮಪ್ರಭು ಕೈ ಮುಗಿಯುವರು)
*'''ಬಸವಣ್ಣ''' : ಹೌದು ಪ್ರಭುವೇ, ಈಕೆ ನಮ್ಮೆಲ್ಲರ ಅಕ್ಕ, ನಮಗೆಲ್ಲರಿಗೂ ಗುರುವಾಗಬಲ್ಲ ಯೋಗ್ಯತೆಯುಳ್ಳವಳು, ಅಕ್ಕಮಹಾದೇವಿ ನಿನಗೆ ಶರಣು ಶರಣಾರ್ಥಿ. (ಬಸವಣ್ಣ ನವರು ಕೈಮುಗಿಯುವರು)
*'''ಅಕ್ಕ''' : ತಾವು ಹಾಗೆಲ್ಲಾ ಹೇಳಬಾರದು, ನಾನು ನಿಮ್ಮೆಲ್ಲರ ಕರುಣೆಯ ಶಿಶು ನಾನು, ನಿಮ್ಮೆದುರಿನಲ್ಲಿ ಅತಿ ಚಿಕ್ಕವಳು.
*'''ಚನ್ನಬಸವಣ್ಣ''' : ಇರಬಹುದು, ವಯಸ್ಸು ಅತಿ ಚಿಕ್ಕದೇ ಇರಬಹುದು, ಆದರೂ ನೀನು ಎಲ್ಲರಿಗೂ ಅಕ್ಕನಾಗಬಲ್ಲವಳು ತಾಯಿ, ಮಹಾದೇವಿ ಅಕ್ಕ ಹಿರಿತನ ಕೇವಲ ವಯಸ್ಸಿನಿಂದ ಮಾತ್ರವೇ ಬರುವುದಿಲ್ಲ. ಅಜ ಕಲ್ಪಕೋಟಿ ವರುಷದವರೆಲ್ಲರೂ ಹಿರಿಯರೇ ? ಹುತ್ತೇರಿ ಬೆತ್ತ ಬೆಳೆದ ತಪಸ್ವಿಗಳೆಲ್ಲರೂ ಹಿರಿಯರೇ ? ನಡು ಮುರಿದು, ತಲೆ ನಡುಗಿ, ಮತಿಗೆಟ್ಟು ಒಂದನಾಡ ಹೋಗಿ ಒಂಭತ್ತನಾಳುವ ಅಜ್ಞಾನಿಗಳೆಲ್ಲರೂ ಹಿರಿಯರೇ ? ಅನುವನರಿದು, ಘನವ ಬೆರೆಸಿ, ಹಿರಿದು ಕಿರಿದೆಂಬ ಭೇದವ ಮರೆತು ಕೂಡಲ ಚನ್ನಸಂಗಯ್ಯನಲ್ಲಿ ಬೆರೆಸಿ ಬೇರಿಲ್ಲದಿಪ್ಪ ಹಿರಿತನ ನಮ್ಮ ಮಹಾದೇವಿಯಕ್ಕಂಗಾಯಿತ್ತು.
*'''ಸಿದ್ದರಾಮ''' : ಅಹುದಹುದು ಮತ್ತೇನು, ಮರಹಿಂಗೆ ಹಿರಿದು ಕಿರಿದುಂಟಲ್ಲದೆ, ಅರಿವಿಂಗೆ ಹಿರಿದು ಕಿರಿದುಂಟೆ ಹೇಳಯ್ಯ ? ಜಾತಂಗೆ ಮರಣದ ಭಯ ಉಂಟಲ್ಲದೆ, ಅಜಾತಂಗೆ ಮರಣದ ಭಯವುಂಟೇ ಹೇಳಯ್ಯ? ಕಪಿಲಸಿದ್ಧ ಮಲ್ಲಿನಾಥನಲ್ಲಿ ಮಹಾದೇವಿಯಕ್ಕನ ನಿಲವಿಂಗೆ ಶರಣೆಂದು ಶುದ್ಧನಾದೆನು ಕಾಣಾ ಚನ್ನಬಸವಣ್ಣ.
*'''ಅಕ್ಕ''' : ಭಕ್ತಿ ಬಂಡಾರಿ ಬಸವಣ್ಣ ನವರ ಶ್ರೀ ಚರಣಗಳಿಗೆ ಶರಣು ಶರಣಾರ್ಥಿ.
*'''ಬಸವಣ್ಣ''' : ಶರಣು ತಾಯೇ ಶರಣು ಶರಣು.
*'''ಅಕ್ಕ''' : ಜ್ಞಾನ ನಿಧಿ ಚನ್ನಬಸವಣ್ಣ ನವರ ಶ್ರೀ ಚರಣಗಳಿಗೆ ಶರಣು ಶರಣಾರ್ಥಿ.
*'''ಚನ್ನಬಸವಣ್ಣ''' : ಶರಣು ತಾಯೇ ಶರಣು.
*'''ಅಕ್ಕ''' : ಧರ್ಮ ಯೋಗಿ ಸಿದ್ಧರಾಮಣ್ಣ ನವರ ಶ್ರೀ ಚರಣಗಳಿಗೆ ಶರಣು ಶರಣಾರ್ಥಿ.
*'''ಸಿದ್ಧರಾಮ''' : ಶರಣು ತಾಯೇ ಶರಣು.
*'''ಅಕ್ಕ''' : ಎಲ್ಲಾ ಶರಣ ಶರಣೆಯರಿಗೂ ಶರಣು ಶರಣಾರ್ಥಿ.
*'''ಎಲ್ಲರೂ''' : ಶರಣು ತಾಯೇ ಶರಣು ಶರಣು.
 
 
[[ವರ್ಗ: ವಚನಸಾಹಿತ್ಯ]]
"https://kn.wikipedia.org/wiki/ಅನುಭವ_ಮಂಟಪ" ಇಂದ ಪಡೆಯಲ್ಪಟ್ಟಿದೆ