ಜಾನಪದ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು added Category:ಜಾನಪದ using HotCat
ಪುಟದ ಮಾಹಿತಿ ತಗೆದು ' ವರ್ಗ:ಜಾನಪದ' ಎಂದು ಬರೆಯಲಾಗಿದೆ
೧ ನೇ ಸಾಲು:
ಕರ್ನಾಟಕ ಜಾನಪದ
ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ(ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ(ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು.
ಕನ್ನಡದ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ. ಇಂದಿನ ಪಾಶ್ಚಾತ್ಯ ಶೈಲಿಯ ಸಂಗೀತದ ಮಧ್ಯೆ ಜಾನಪದ ಗೀತೆಗಳು ತನ್ನ ಹಿಂದಿನ ವೈಭವವನ್ನು ಸ್ವಲ್ಪಮಟ್ಟಿಗೆ ಕಳೆದುಕೊಂಡಿವೆ ಎಂದೆನಿಸಿದರೂ ತನ್ನ ಮೂಲನೆಲೆಯಾದ ಹಳ್ಳಿಗಳಲ್ಲಿ ಇನ್ನೂ ತನ್ನ ನೆಲೆಯನ್ನು ಬದ್ರವಾಗಿ ಊಳಿಸಿಕೊಂಡಿರುವುದು ಸಮಾಧಾನ ತರುವ ಸಂಗತಿಯಾಗಿದೆ.
ಕಂಸಾಳೆ ಪದ, ಗೀಗಿಪದ, ಕೋಲಾಟದ ಪದ, ರಾಗಿಬೀಸೋ ಪದ, ಸುಗ್ಗಿ ಹಾಡುಗಳು, ಹೀಗೆ ಇನ್ನೂ ಅನೇಕ ವಿವಿಧ ಬಗೆಯ ಜಾನಪದ ಗೀತೆಗಳು ಆಯಾ ಪ್ರದೇಶದ ಜನರ ದೈನಂದಿನ ಚಟುವಟಿಕೆಗಳನ್ನು, ಕೌಟುಂಬಿಕ ಜೀವನವನ್ನು, ಸಂಬಂಧಗಳನ್ನು, ದೇವರುಗಳನ್ನು ಹಾಗೂ ಧಾರ್ಮಿಕ ಆಚರಣೆಗಳನ್ನು ನಮ್ಮ ಮುಂದೆ ತೆರೆದಿಡುತ್ತವೆ. ಈ ಜಾನಪದ ಗೀತೆಗಳನ್ನು ಸೃಷ್ಟಿಸಿದವರು ಯಾರೆಂದು ಹೇಳುವುದಕ್ಕೆ ಸಾಧ್ಯವಿಲ್ಲ. ಇವು ಹಳ್ಳಿಯು ಸಾಮಾನ್ಯ ಜನರ ನಡುವೆ ಹುಟ್ಟಿ ಬಾಯಿಂದ ಬಾಯಿಗೆ ಹರಿದು ಬಂದಿರುವ ಸಿರಿನುಡಿ ಎನ್ನಬಹುದು.
ಎಳ್ಳು ಜೀರಿಗೆ ಬೆಳಿಯೋ ಭೂಮಿತಾಯಿ
ಎದ್ದೊಂದು ಗಳಿಗೆ ನೆನೆದೇನು
ಮಣ್ಣಲ್ಲಿ ಹುಟ್ಟೋಳೆ ಮಣ್ಣಾಲಿ ಬೆಳೆವೋಳೆ
ಎಣ್ಣೇಲಿ ಕಣ್ಣಾಬಿಡುವೋಳೆ, ಜಗಜ್ಯೋತಿ
ಸತ್ಯಾದಿಂದುರಿಯೆ ನಮಗಾಗಿ
 
ತೊಟ್ಟಿಲು ಹೋತ್ಕೊಂಡು ತವರ್ಬಣ್ಣ ಉಟ್ಕೊಂಡು
ಅಪ್ಪ ಕೊಟ್ಟೆಮ್ಮೆ ಹೋಡ್ಕೊಂಡು | ತೌರೂರ
ತಿಟ್ಟಹತ್ತಿ ತಿರುಗಿ ನೋಡ್ಯಾಳೊ
ಹೂಮಾಲೆಯಂಥ ಮೇಲಿನ ಸಾಲುಗಳನ್ನು ಯಾರು ಯಾವಾಗ ಬರೆದರೋ ಗೊತ್ತಿಲ್ಲ, ಇವು ನೂರಾರು ವರ್ಷಗಳಿಂದ ಸಾವಿರಾರು ಜನಗಳ ಬಾಯಿಂದ ಹರಿದು ಬಂದ ನುಡಿಗಳು, ನಮ್ಮ ಹಳ್ಳಿಗಳಲ್ಲಿ ಕಲೋಪಾಸಕತ್ವವನ್ನು, ಸೃಜನಶೀಲತೆಯನ್ನು, ಮತ್ತು ಮಾಧುರ್ಯವನ್ನು ಹಳ್ಳಿಗರಿಗೆ ತಿಳಿಯದಂತೆ ಅವರ ಜೀವನ ವಿಧಾನವನ್ನಾಗಿ ಪರಿವರ್ತಿಸಿದ ಸಂಸ್ಕೃತಿಯೊಂದರ ಹೆಜ್ಜೆಗುರುತುಗಳು.
ಪ್ರಾಯಶಃ ಸಹಸ್ರಾರು ವರ್ಷದ ಹಿಂದೆ ಜಗತ್ತಿನಲ್ಲೆಲ್ಲ ಇದ್ದುದ್ದು ಜಾನಪದವೊಂದೇ, ಮಾನವನು ತಾನು ಮಾಡುವ ಕೆಲಸಗಳಲ್ಲೆಲ್ಲಾ ತನ್ಮಯತೆಯನ್ನು ತುಂಬಲು ಮಾಡಿದ ಪ್ರಯತ್ನಗಳ ಸರಮಾಲೆಯೇ ಜಾನಪದವಾಗಿರಬಹುದು. ತನ್ನ ಸುತ್ತಲಿನ ಪರಿಸ್ಥಿತಿಗೆ ತಕ್ಕಂತೆ ತಂತ್ರಜ್ಞಾನಗಳನ್ನೂ, ಅರೋಗ್ಯ ರಕ್ಷಣೆಗೆ ವೈದ್ಯಕೀಯವನ್ನು, ಪ್ರಕೃತಿಯ ಬಿರುಸಿಗೆ ಉತ್ತರವಾಗಿ ಭಕ್ತಿಯನ್ನೂ ಬೆಳೆಸಿಕೊಂಡಿರಬಹುದು.
ಜನಪದ ಮತ್ತು ಜಾನಪದ ಎಂಬ ಶಬ್ದಗಳು ಒಂದು ಸಾಮಾಜಿಕ ವ್ಯವಸ್ಥೆಯನ್ನು ಸೂಚಿಸುತ್ತವೆ. ಪ್ರತಿಯೊಂದು ಸಾಮಾಜವೂ ತನ್ನ ಪುರಾತನರ ಸಾರವನ್ನು ಹೀರಿ ತನ್ನ ಸದ್ಯದ ಬದುಕಿಗೊಂದು ಅರ್ಥವನ್ನೂ, ತನ್ನ ಸದ್ಯದ ಸಮಸ್ಯೆಗಳಿಗೊಂದು ಪರಿಹಾರವನ್ನೂ, ತನ್ನ ಭಕ್ತಿಗೊಂದು ರೂಪವನ್ನೂ - ಕಲೆ, ತಂತ್ರಜ್ಞಾನ ಇತ್ಯಾದಿಗಳ ಬೆಳವಣಿಗೆಯನ್ನೂ ಸಾಮುದಾಯಿಕವಾಗಿ ನಿರ್ವಹಿಸುತ್ತದೆ. ಇದು ಯಾವುದೇ ಅಧಿಕಾರದ, ಸಂಪ್ರದಾಯದ ಪೋಷಣೆಯಿಲ್ಲದೇ ತನ್ನಿಂದ ತಾನೇ ಹರಿದು ಬಂದು ಮಣ್ಣಿನ ಸಂಸ್ಕೃತಿಯ ಸಾರವಾಗಿ 'ಜಾನಪದ' ಎನ್ನಿಸಿಕೊಂಡಿದೆ.ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ಜಾನಪದ ಪರಿಕರ ಮತ್ತು ವಸ್ತುಗಳನ್ನೊಳಗೊಂಡ ಸಂಗ್ರಹಾಲಯವಿದೆ.ಇದು ಒಂದು ನಮ್ಮ ರಾಜ್ಯದಲ್ಲಿ ನೆಡೆಯುವಂತ ಜನಪದ ಹಾಡುಗಳಾಗಿವೆ.
ಕರ್ನಾಟಕದಲ್ಲಿ ಸಾವಿರಾರು ವರ್ಷಗಳಿಂದ ಹರಿದುಬಂದ ಜಾನಪದ ಜ್ಞಾನವಿದೆ, ಇದನ್ನು ಹಲವಾರು ಪ್ರಭೇದಗಳಲ್ಲಿ ವಿಂಗಡಿಸಬಹುದು.
 
[[ವರ್ಗ:ಜಾನಪದ]]
"https://kn.wikipedia.org/wiki/ಜಾನಪದ" ಇಂದ ಪಡೆಯಲ್ಪಟ್ಟಿದೆ