ನಿರ್ಮಲಾನಂದ ಸ್ವಾಮೀಜಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೫ ನೇ ಸಾಲು:
ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲಿಯೇ ಪೂರೈಸಿದ ಶ್ರೀಗಳು, ಮಾಧ್ಯಮಿಕ ಶಿಕ್ಷಣವನ್ನು ನೆಟ್ಟೇಕೆರೆಯಲ್ಲಿ ಪೂರ್ಣಗೊಳಿಸಿದರು. ಮಾವಿನಹಳ್ಳಿಯಲ್ಲಿ ಪ್ರೌಢಶಿಕ್ಷಣ ಪೂರೈಸಿದರು. ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಪದವಿ ಪಡೆದು, ಏಳನೇ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಕ್ಕಾಗಿ ಜಿಂದಾಲ್ ಸಂಸ್ಥೆ ನೀಡುವ ಸ್ಕಾಲರ್ ಶಿಪ್ ಪಡೆದುಕೊಂಡಿದ್ದರು.ಮುಂದೆ ಮೈಸೂರಿನ ಹಿಂದುಳಿದ ವರ್ಗದ ವಸತಿ ನಿಲಯದಲ್ಲಿದ್ದುಕೊಂಡು ಎಂಜಿನಿಯರಿಂಗ್ ಅಭ್ಯಾಸ ಮಾಡಿದರು. ಪುಣೆಯ ಭಾರತ ಸರ್ಕಾರದ ಸಂಶೋಧನಾ ಕೇಂದ್ರಕ್ಕೆ ವಿಜ್ಞಾನಿಯಾಗಿ ಆಯ್ಕೆಯಾಗಿದ್ದರು. ಆದರೆ, ಅಧ್ಯಾತ್ಮದ ಸೆಳೆತ ಅವರನ್ನು ಶ್ರೀಮಠಕ್ಕೆ ಕರೆದುಕೊಂಡು ಬಂದಿತು.ಶ್ರೀಮಠದ ಸಂಸ್ಕೃತ ವೇದಾಗಮ ಮಹಾವಿದ್ಯಾಲಯದಲ್ಲಿ ಅದ್ವೈತ ವೇದಾಂತ ವಿದ್ವುದುತ್ತಮ ಮತ್ತು ಶೈವಾಗಮದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡರು. ಐಐಟಿಯಲ್ಲಿ ಎಂ.ಟೆಕ್ ಪದವಿ ಪಡೆದಿರುವ ನಿರ್ಮಲಾನಂದ ಸ್ವಾಮೀಜಿ ಅವರು, ಆದಿಚುಂಚನಗಿರಿಮಠದ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಹಾಗೂ ವಿಸ್ತರಣೆಗಾಗಿ ದೇಶ,ವಿದೇಶಗಳನ್ನೂ ಸುತ್ತಿದ್ದಾರೆ.
== ಶ್ರೀಗಳ ದಿನಚರಿ ==
ಮೃದು ಸ್ವಭಾವಿ, ಮೆದು ಮಾತಿನವರಾಗಿದ್ದು, ಅಧ್ಯಾತ್ಮದ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡೇ ಮಠದ ಅಭಿವೃದ್ಧಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಧರ್ಮ ಮತ್ತು ವಿಜ್ಞಾನದ ನಡುವೆ ಅಂತರ ಇರಬಾರದು ಎಂಬುದು ಶ್ರೀಗಳ ನಿಲುವಾಗಿದೆ. ಹಾಗಾಗಿ ಭಕ್ತಾದಿಗಳಿಗೆಂದು ಮಠದ ಆವರಣದಲ್ಲಿ ಉಚಿತ ವೈ-ಫೈ ಸೇವೆ ಒದಗಿಸುವ ಮೂಲಕ ಧರ್ಮ ಮತ್ತು ವಿಜ್ಞಾನದ ಸಂಯೋಜನೆ ಮಾಡುವುದರ ಮೂಲಕ "ಉಚಿತ ಅಂತರ್ಜಾಲ ವ್ಯವಸ್ಥೆ" ಮಾಡಿರುವ ಭಾರತದ ಮೊದಲ ಮಠ ಎಂಬ ಖ್ಯಾತಿಗೆ ಆದಿಚುಂಚನಗಿರಿ ಶ್ರೀಕ್ಷೇತ್ರ ಪಾತ್ರವಾಗಲು ಕಾರಣರಾಗಿದ್ದಾರೆ.
 
== ನಿರ್ಮಲ ವಾಣಿ ==
1.‘ಜನರನ್ನು ಸುಜ್ಞಾನದ ಕಡೆಗೆ ತೆಗೆದುಕೊಂಡು ಹೋಗಲು ಹೊರಟಿರುವ ನಮ್ಮಂತಹ ಸಂತರಲ್ಲಿ ಒಂದೇ ಎಂಬ ಭಾವನೆ ಕೇವಲ ಸೈದ್ಧಾಂತಿಕವಾಗಿ ಇರದೇ, ಅನುಷ್ಠಾನದ ರೂಪದಲ್ಲಿ ಇದ್ದದ್ದೇ ಅದಲ್ಲಿ ಬಹುಶಃ ಯಾವುದೇ ಒಂದು ಧರ್ಮವನ್ನು ಇನ್ನೊಂದು ಧರ್ಮವರು ಬೇರೆ ಯಾವುದೇ ಸ್ವಾರ್ಥ ವನ್ನು ಇಟ್ಟುಕೊಂಡು ಒಡೆಯಲು ಸಾಧ್ಯವಿಲ್ಲ’