ಕಲಿಕೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
 
೧ ನೇ ಸಾಲು:
{{Wikify}}
 
'''ಕಲಿಕೆ''' : ಒಂದು ಜೀವಿ ಪಡೆದುಕೊಳ್ಳುವ ಎಲ್ಲ ಬಗೆಯ ತಿಳಿವು, ನೈಪುಣ್ಯ ಅಥವಾ ವರ್ತನೆಯ ರೀತಿಯ ಸಂಪಾದನೆ (ಲರ್ನಿಂಗ್). ಜೀವಿ ಹುಟ್ಟಿದಾಗಲೇ ಜೀವ ಕಣಕ್ಕೆ ಅವಶ್ಯವಾದ ಎಲ್ಲ ಸಾಮರ್ಥ್ಯಗಳೂ ಸಾಮಾನ್ಯವಾಗಿ ಬೆಳೆದಿರುವುದಿಲ್ಲ. ಕಾಲಕ್ರಮೇಣ ಕೆಲವು ತಾವಾಗಿ ಪ್ರಕಾಶಕ್ಕೆ ಬರುತ್ತವೆ. ಮತ್ತೆ ಕೆಲವನ್ನು ಜೀವಿ ಸ್ವಪ್ರಯತ್ನದಿಂದಲೊ ಇತರರನ್ನು ಅನುಕರಿಸುವುದರಿಂದಲೊ ಇತರರಿಂದ ಹೇಳಿಸಿಕೊಂಡೊ ತನ್ನ ಸ್ವಂತ ಅನುಭವಗಳ ಮೂಲಕವೊ ಕಲಿತುಕೊಳ್ಳುತ್ತದೆ. ಸ್ವಪರಿವರ್ತನೆಯ ಸಾಮರ್ಥ್ಯಇತರ ಜೀವಿಗಳಿಗಿಂತ ಮಾನವನಿಗೆ ಹೆಚ್ಚು. ಇದಕ್ಕೆ ಅವನ ಮಿದುಳಿನ ವಿಶೇಷ ಬೆಳೆವಣಿಗೆಯೇ ಕಾರಣವೆಂಬುದು ಜೀವಶಾಸ್ತ್ರಜ್ಞರ ಅಭಿಪ್ರಾಯ.
೫ ನೇ ಸಾಲು:
ಹುಟ್ಟಿದ ಒಡನೆಯೇ ಮಗುವಿನಲ್ಲಿ ಕಂಡುಬರುವ ಗುಣಗಳು ಮಾತ್ರವೇ ನೈಜವಾದವೆಂದೂ ಮಿಕ್ಕವೆಲ್ಲಾ ಕಲಿತುಕೊಂಡವೆಂದೂ ತಿಳಿಯಬಾರದು. ಅನೇಕ ಗುಣಗಳು ಕಲಿಯುವ ಆವಶ್ಯಕತೆ ಇಲ್ಲದೆಯೇ ತಾವಾಗಿಯೇ ಸಕಾಲದಲ್ಲಿ ಕಾಣಿಸಿಕೊಳ್ಳುತ್ತವೆ. ಹುಟ್ಟಿದಾಗ ನಿಲ್ಲುವುದಕ್ಕಾಗಲಿ, ನಡೆಯುವುದಕ್ಕಾಗಲಿ ಆಗದ ಮಗು, ದೇಹದ ಮಾಂಸಖಂಡಗಳೂ ನರಗಳೂ ಮೂಳೆಗಳೂ ಬಲಿತು ಹತ್ತು ಹನ್ನೆರಡು ತಿಂಗಳಾದ ಕೂಡಲೆ ನಿಂತು ನಡೆಯಲು ಪ್ರಾರಂಭಿಸುತ್ತದೆ. ಹೀಗೆ ಬೆಳೆವಣಿಗೆಯಿಂದ ದೈಹಿಕ ಶಕ್ತಿಗಳಂತೆ ಮಾನಸಿಕ ಶಕ್ತಿಗಳೂ ಪಕ್ವತೆ ಪಡೆಯುತ್ತವೆ. ಕೆಲವು ಶಕ್ತಿಗಳು ಪಕ್ವವಾಗಲು ಬೆಳೆವಣಿಗೆ ಮಾತ್ರವೇ ಸಾಕು. ಇನ್ನು ಕೆಲವಕ್ಕೆ ಕಲಿಕೆ ಸಹಾಯ ಮಾಡುತ್ತದೆ.
 
ಎಲ್ಲ ಜೀವಿಗಳೂ ಕಲಿಯಬಲ್ಲುವು. ಒಂದು ಪ್ರಾಣಿ ಏನನ್ನು, ಎಷ್ಟು ವೇಗವಾಗಿ ಕಲಿಯಬಲ್ಲುದು ಎಂಬುದು ಆ ಪ್ರಾಣಿಯ ಸಾಮಥರ್ಯ್‌ವನ್ನಲ್ಲದೆ ಅದು ಜೀವನದಲ್ಲಿ ಎದುರಿಸಬೇಕಾದ ಸಮಸ್ಯೆಗಳನ್ನೂ ಅವಲಂಬಿಸಿರುತ್ತದೆ. ಅಮೀಬದಂಥ ಸೂಕ್ಷ್ಮ ಜೀವಿಗಳು, ತಮ್ಮ ದೇಹಕ್ಕೆ ಹೊಂದಿಕೊಳ್ಳದ ಪರಿಸ್ಥಿತಿಗಳಿಂದ ಅಥವಾ ಅಪಾಯಕಾರಿ ಪದಾರ್ಥಗಳಿಂದ ತಪ್ಪಿಸಿಕೊಳ್ಳುವುದನ್ನು ಕಲಿಯುತ್ತವೆ. ಸಂಕೀರ್ಣ ಸಮಾಜದಲ್ಲಿ[[ಸಮಾಜ]]ದಲ್ಲಿ ಬಾಳಬೇಕಾದ ಮನುಷ್ಯ ಭಾಷೆ, ಗಣಿತ, ಒಳ್ಳಯ ನಡತೆ ಮೊದಲಾದವನ್ನು ಕಲಿಯುತ್ತಾನೆ.
 
ಕಲಿಕೆ ನಮ್ಮ ದೈಹಿಕ ಮತ್ತು ಮಾನಸಿಕ ಶಕ್ತಿಗಳನ್ನು ಅಭಿವೃದ್ಧಿಪಡಿಸುತ್ತದೆ. ಆದರೆ ಸರ್ವದಾ ಈ ಮಾತು ಸಮ್ಮತರ್ಹವಾಗಿಲ್ಲದಿರಬಹುದು. ಅರ್ಥವಿಲ್ಲದ ಹೆದರಿಕೆಗಳನ್ನು ಕುರುಡು ನಂಬಿಕೆಗಳನ್ನೂ ಅನೇಕ ದುವರ್ಯ್‌ಸನಗಳನ್ನೂ ಮಾನವರು ಕಲಿಯುತ್ತಾರೆ. ಇವುಗಳಿಂದ ಮಾನವನ ಜ್ಞಾನಪ್ರಜ್ಞೆಗಳ ಅಭಿವೃದ್ಧಿಗೆ ಬದಲು, ವ್ಯಕ್ತಿಗಳಿಗೂ ಸಮಾಜಕ್ಕೂ ಹಾನಿಯುಂಟಾಗಬಹುದು.
"https://kn.wikipedia.org/wiki/ಕಲಿಕೆ" ಇಂದ ಪಡೆಯಲ್ಪಟ್ಟಿದೆ