"ಬಿಲ್ವಪತ್ರೆ ಮರ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
 
== ಸಸ್ಯದ ಗುಣಲಕ್ಷಣಗಳು ==
ಇದು [[ಪರ್ಣಪಾತಿ]] ಮರ. ಕೊಂಬೆಗಳಲ್ಲಿ ಮುಳ್ಳುಗಳಿವೆ. ತೊಗಟೆ ಬೂದು ಬಣ್ಣದ್ದಾಗಿದ್ದು, ಬೆಂಡು ಬೆಂಡಾಗಿರುವುದು. ಎಲೆಗಳು ತ್ರಿಪರ್ಣಿ(Trifoliate) ಹಾಗೂ ಸುವಾಸಿತವಾಗಿರುವುವು. ಸರಳ ಅಥವ ಸಂಯುಕ್ತ ಎಲೆಗಳು. ಹೆಚ್ಚಾಗಿ ಪರ್ಯಾಯ ಜೋಡಣೆಯಲ್ಲಿತ್ತವೆ. ಎಲೆಗಳಲ್ಲಿ ಸುಗಂಧ ತೈಲಯುಕ್ತ ಪಾರದರ್ಶಕ ಗ್ರಂಥಿಗಳ ಚುಕ್ಕಿಗಳಿವೆ. ಈ ಕುಟುಂಬದ ಸಸ್ಯಗಳಲ್ಲಿ ದ್ವಿಲಿಂಗಿ ಅಥವ ಏಕಲಿಂಗಿ ಹೂಗಳು ಬಿಡುತ್ತವೆ. ಬಿಲ್ವದ ಹೂಗಳು ಹಸಿರು ಮಿಶ್ರ ಬಿಳಿ ಬಣ್ಣದಾಗಿರುತ್ತದೆ. ಸಣ್ಣ ಗೊಂಚಲಿನಲ್ಲಿ ಹೂ ಬಿಡುತ್ತದೆ. ಹೂವು ಪರಿಮಳದಿಂದ ಕೂಡಿರುತ್ತದೆ. ಸೇಬಿನ ಆಕಾರ ಹಾಗೂ ಗಾತ್ರದ ಕಾಯಿ ಬಿಡುವುದು. ಬಿಲ್ವದ ಹಣ್ಣಿನ ಒಂದು ವಿಶೇಷತೆ ಎಂದರೆ ಅದು ಎಳೆ ಕಾಯಿ , ಅಪಕ್ವ ಫಲ , ಮಾಗಿದ ಫಲ - ಈ ಯಾವುದೇ ಹಂತದಲ್ಲಿದ್ದರೂ ಒಂದಲ್ಲ ಒಂದು ರೀತಿಯಲ್ಲಿ ಪ್ರಯೋಜನಕ್ಕೆ ಬರುತ್ತದೆ. ಬಿಲ್ವದ ಮರದಲ್ಲಿ ಹಣ್ಣು ಪಕ್ವವಾಗಲು ದೀರ್ಘ ಕಾಲ ಆಗುತ್ತದೆ. ಹೂಗಳು ಪರಾಗಸ್ಪರ್ಶಕ್ಕೆ ಗುರಿಯಾಗಿ ಫಲಿತವಾಗಿ ಕಾಯಾಗಲು ಒಂದು ವರ್ಷವಾಗಲೂಬಹುದು. ಬಿಲ್ವದ ಹಣ್ಣು ದುಂಡಗಿರುತ್ತದೆ. ಮೊದಲು ಕಾಯಿಯು ಹಸಿರು ಬಣ್ಣದಾಗಿದ್ದು, ಬೂದು ಬಣ್ಣ ತಾಳುತ್ತದೆ. ಹಣ್ಣಿನ ಚಿಪ್ಪು ಗಟ್ಟಿಯಾಗಿರುತ್ತದೆ. ಒಳಗಿನ ತಿರುಳು ಕಿತ್ತಳೆ ಬಣ್ಣದ್ದಾಗಿರುತ್ತದೆ. ಬಿಲ್ವದ ಹಣ್ಣಿನಲ್ಲಿ ಎರಡು ವಿಧಗಳಿದ್ದು - ಗ್ರಾಮ್ಯ ವಿಧದಲ್ಲಿ ಹಣ್ಣುಗಳು ದೊಡ್ಡದಾಗಿದ್ದು ಮುಳ್ಳುಗಳ ಪ್ರಮಾಣ ಕಡಿಮೆ ಇರುತ್ತದೆ. ವನ್ಯವಿಧದಲ್ಲಿ ಗಾತ್ರ ಚಿಕ್ಕದಿದ್ದು ಮುಳ್ಳುಗಳು ಹೆಚ್ಚಿರುತ್ತವೆ. ಬಿಲ್ವದ ದಾರುವು ಗಡುಸಾಗಿದ್ದು,ಬಾಳಿಕೆಯುತವಾಗಿದೆ.
[[ಚಿತ್ರ:Bael (Aegle marmelos) fruit at Narendrapur W IMG 4099.jpg|thumb|left|ಬಿಲ್ವಪತ್ರೆ ಕಾಯಿ]]
 
೪,೨೩೭

edits

"https://kn.wikipedia.org/wiki/ವಿಶೇಷ:MobileDiff/664408" ಇಂದ ಪಡೆಯಲ್ಪಟ್ಟಿದೆ