ಕೈಮಗ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ
 
೪ ನೇ ಸಾಲು:
ಲಾಳಿಯನ್ನು ಪನ್ನೆಯ ಒಂದು ತುದಿಯಿಂದ ಮತ್ತೊಂದು ತುದಿಗೆ ತಳ್ಳುವ ವಿಧಾನ ಸ್ವಾರಸ್ಯಕರ.ಲಂಬವಾಗಿ ನಿಲ್ಲಿಸಿದ ಚೌಕಟ್ಟಿನ ಮೇಲು ಹಲಗೆಯ ಎಡಬಲ ತುದಿಗಳಿಗೆ ಹಗ್ಗ ಕಟ್ಟಿರುತ್ತಾರೆ.ಅದರ ಮಧ್ಯಭಾಗಕ್ಕೆ ಒಂದು ಕುಚ್ಚನ್ನು ಕಟ್ಟಿರುತ್ತಾರೆ.ಕುಚ್ಚು ಮತ್ತು ಅದರ ಬಿಗಿದ ಕೊನೆ ಇವೆರಡರ ನಡುವೆ ಎರಡು ಹಗ್ಗಗಳ ಕೊನೆಯನ್ನು ಬಿಗಿದಿರುತ್ತಾರೆ.ಕುಚ್ಚನ್ನು ಒಂದು ಪಕ್ಕಕ್ಕೆ ತಕ್ಷಣ ಎಳೆದಾಗ ಒಂದು ಹಗ್ಗ ಸೆಳೆಯಲ್ಪಡುತ್ತದೆ.ಈ ಹಗ್ಗವು ಸನ್ನೆಯ ಒಂದು ಕೊನೆಯಲ್ಲಿ ಇರುವ ಕುಳಿಯೊಂದನ್ನು ತಳ್ಳುತ್ತದೆ.ಕುಳಿಯು ಪುಟಿದು ಲಾಳಿಯನ್ನು ಪನ್ನೆಯ ಉದ್ದಕ್ಕೂ ಚಲಿಸುವಂತೆ ಮಾಡುತ್ತದೆ.ನೇಕಾರ ಕುಚ್ಚನ್ನು ಅತ್ತಿತ್ತ ಆಡಿಸುತ್ತಿದ್ದಂತೆಲ್ಲ ಲಾಳಿ ಅತ್ತಿತ್ತ ಚಿಮ್ಮುಲ್ಪಡುತ್ತದೆ.ಹೊಕ್ಕುಗಳು ನುಸುಳುತ್ತವೆ.ಕಾಲುಗಳನ್ನು ಇಟ್ಟು ಒತ್ತ ಬಹುದಾದ ಹಾವುಗೆ ಚಕ್ಕೆ ಎಂದು ಕರೆಯುವ ಕಾಲುಮಣೆಗಳು ಕೈಮಗ್ಗದಲ್ಲಿರುತ್ತವೆ.ಒಂದು ಕಾಲುಮಣೆಯನ್ನು ಒತ್ತಿದಾಗ ಹಾಸು ನೂಲುಗಳ ಒಂದು ಸಮೂಹ ಮೇಲಕ್ಕೆ ತಳ್ಳಲ್ಪಟ್ಟು ಇನ್ನೊಂದು ಕೆಳಗುಳಿಯುತ್ತದೆ.ಕುಚ್ಚನ್ನು ಜಿಗಿದಾಗ ಅವೆರಡರ ನಡುವೆ ಹೊಕ್ಕು ನುಸುಳುತ್ತದೆ.ಇನ್ನೊಂದು ಕಾಲನ್ನು ಒತ್ತಿದಾಗ ಮೇಲಿನ ಎಳೆಗಳ ಸಮೂಹ ಕೆಳಗಾಗಿ ಕೆಳಗಿನದು ಮೇಲಕ್ಕೆ ತಳ್ಳಲ್ಪಡುತ್ತದೆ.ಕುಚ್ಚನ್ನು ವಿರುದ್ಧ ದಿಕ್ಕಿನಲ್ಲಿ ಜಿಗಿದಾಗ ಇನ್ನೊಂದು ಹೊಕ್ಕು ನೆಯ್ದು ಕೊಳ್ಳುತ್ತದೆ.ಕಾಲುಮಣೆ ಒತ್ತಿದಾಗ ಬೇಕಾದ ನೂಲುಗಳನ್ನಷ್ಟೇ ಎತ್ತಿಹಿಡಿಯುವ ದಂಡವನ್ನು ಅಚ್ಚು ಎನ್ನುತ್ತಾರೆ.ಅಚ್ಚಿನಿಂದ ದಾರದ ಕುಣಿಕೆಗಳನ್ನು ಇಳಿಬಿಟ್ಟಿರುತ್ತಾರೆ.ಅಚ್ಚಿನ ಕುಣಿಕೆಗಳ ಮೂಲಕ ಹಾಸುನೂಲುಗಳು ಹಾದು ಹೋಗುತ್ತವೆ.ಅಚ್ಚು ಮೇಲಕ್ಕೆ ಇತ್ತಲ್ಪಟ್ಟಾಗ ಅಚ್ಚಿನ ಕುಣಿಕೆಗಳು ತಮ್ಮ ಮೂಲಕ ಹಾಯಿಸಿದ ನೂಲುಗಳನ್ನು ಎತ್ತಿ ಹಿಡಿಯುತ್ತವೆ.ಇನ್ನೊಂದು ಅಚ್ಚನ್ನು ಎತ್ತಿದಾಗ ಇನ್ನೊಂದು ನೂಲುಗಳ ಸಮೂಹ ಎತ್ತಲ್ಪಡುತ್ತದೆ.ನೆಯ್ಗೆ ವಿನ್ಯಾಸವನ್ನು ಅನುಸರಿಸಿ,ಎರಡು ಅಥವಾ ಅದಕ್ಕಿಂತ ಹೆಚ್ಚು ಅಚ್ಚುಗಳಿರಬಹುದು.ಕಾಲುಮಣೆಯನ್ನೂ ಅಚ್ಚನ್ನೂ ಸನ್ನೆಯ ಮೂಲಕ ಜೋಡಿಸಿರುತ್ತಾರೆ.ಕುಚ್ಚನ್ನು ಆಡಿಸಲು ಕೈಯನ್ನೂ ಅಚ್ಚನ್ನು ಮೇಲೆ ಕೆಳಗೆ ಆಡಿಸಲು ಕಾಲುಗಳನ್ನೂ ಸತತವಾಗಿ ಬಳಸಿ ನೇಕಾರ ಬಟ್ಟೆ ನೇಯುತ್ತಾನೆ.<ref>http://vijaykarnataka.indiatimes.com/edit/editorial/-/articleshow/28849242.cms</ref>
==ಉಲ್ಲೇಖ==
<ReferenceReferences/>
"https://kn.wikipedia.org/wiki/ಕೈಮಗ್ಗ" ಇಂದ ಪಡೆಯಲ್ಪಟ್ಟಿದೆ