ಕೈಮಗ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
{{under construction}}
==ಕೈಮಗ್ಗ==
ನೂಲುಗಳನ್ನು ಸಮಾನಾಂತರವಾಗಿ ಜೋಡಿಸಿಕೊಂಡು ಲಂಬವಾಗಿ ತೂರಿಸಲು ಅನುಕೂಲವಾಗುವಂತೆ ರಚಿಸಿಕೊಂಡ ಯಂತ್ರ ಸಾಧನವೇ ಮಗ್ಗ .ವಿದ್ಯುತ್ತನ್ನು ಬಳಸದೆ ಒಬ್ಬನೇ ನೇಕಾರ ಮಗ್ಗದ ಮುಂದೆ ಕುಳಿತು ಕೈಕಾಲುಗಳ ಬಲವನ್ನಷ್ಟೇ ಪ್ರಯೋಗಿಸಿ ನೇಯಬಹುದಾದ ಮಗ್ಗವೇ ಕೈಮಗ್ಗ.ಬಿಗಿದಿಟ್ಟ ಹಾಸು ನೂಲುಗಳ ನಡುವೆ ಹೊಕ್ಕು ಎಳೆಗಳನ್ನು ನುಸುಳಿಸಿ [[ಬಟ್ಟೆ]]ಯನ್ನು ನೇಯಬೇಕು.ಹಾಸು ನೂಲುಗಳ ಒಂದು ಕೊನೆಯಲ್ಲಿ ನೇಕಾರ ಕುಳಿತಿರುತ್ತಾನೆ.ಇನ್ನೊಂದು ಕೊನೆಯಲ್ಲಿ ಮಂಡಕೋಲು ಎಂದು ಕರೆಯುವ ಹಲಗೆ ಅಥವಾ ಉರುಳೆಗೆ ಹಾಸು ನೂಲುಗಳ ಕೊನೆಗಳನ್ನು ಬಿಗಿದಿರುತ್ತಾರೆ.ಹೊಕ್ಕು ನೂಲುಗಳನ್ನು ಲಾಳಿಯೊಳಗೆ ಇರಿಸಿದ ಕೀಲುಗಳ ಮೇಲೆ ಸುತ್ತಿರುತ್ತಾರೆ.ಲಾಳಿ ಎಂದರೆ ತುಂಡು ಕೋಲಿನಂತೆ ಕಾಣುವ ದೋಣಿಯಾಕಾರದ ಉಪಕರಣ.ಲಾಳಿಯು ಹಾಸುನೂಲುಗಳ ನಡುವೆ ಅಡ್ದ ಅಗಲಕ್ಕೆ ಹಾದುಹೋಗಬಲ್ಲದು.ಹಾಗೆ ಹಾದುಹೋಗುವಾಗ ತನ್ನ ಹಿಂದೆ ಹಾಸು ನೂಲನ್ನು ಹಾಯಿಸಿಕೊಂಡು ಹೋಗುತ್ತದೆ.ಅಂದರೆ ಹಾಸು ನೂಲುಗಳ ನಡುವೆ ಹೊಕ್ಕು ನೂಲನ್ನು ಲಾಳಿಯು ತೂರಿಸಬಲ್ಲದು.ಮತ್ತೊಮ್ಮೆ ಲಾಳಿಯು ವಿರುದ್ಧ ದಿಕ್ಕಿನಲ್ಲಿ ಹಾಯ್ದಾಗ ಇನ್ನೊಂದು ಹೊಕ್ಕು ನೂಲು ಹಾಸು ನೂಲುಗಳ ನಡುವೆ ನುಸುಳಿ ನಿಲ್ಲುತ್ತದೆ.ಸತತವಾಗಿ ಬಟ್ಟೆ ನೇಯಲು ಲಾಳಿಯನ್ನು ಅತ್ತಿಂದಿತ್ತ ಎಡಬಿಡದೆ ತೂರಿಸುತ್ತಿರಬೇಕು.ಮಗ್ಗದಲ್ಲಿ ಸತತವಾಗಿ ಲಾಳಿ ಸರಿದಾಡುವ ಮತ್ತು ಪ್ರತಿ ಬಾರಿಯೂ ಹಾಸು ನೂಲುಗಳು ಮೇಲೆ ಕೆಳಗೆ ತಳ್ಳಲ್ಪಡುವ ವ್ಯವಸ್ಥೆ ಅಗತ್ಯ.ಕೈಮಗ್ಗದಲ್ಲಿ ಕೈಯು ಲಾಳಿಯ ಚಲನೆಗೂ ಕಾಲುಗಳು ಹಾಸು ನೂಲುಗಳ ತಳ್ಳಾಟಕ್ಕೂ ಕಾರಣವಾಗುತ್ತವೆ.ಕೈಮಗ್ಗದಲ್ಲಿ ನೆಟ್ಟಗೆ ನಿಲ್ಲಿಸಿದ ಕಂಬಗಳ ಮೇಲೆ ಸಮಾನಾಂತರವಾಗಿ ಒಂದು ಹಲಗೆಯನ್ನು ಕೂರಿಸಿರುತ್ತಾರೆ. ಹಾಸು ನೂಲುಗಳು ಹಾದು ಹೋಗುವಾಗ,ಬಾಚಣಿಗೆಯನ್ನು ಹೋಲುವ ಉದ್ದದ ದಂಡವೊಂದರ ಮೊಳೆಗಳಂಥ ಹಲ್ಲುಗಳ ನಡುವೆ ತೂರಿ ಹೋಗಬೇಕಾಗುತ್ತದೆ.ಅದನ್ನು ಪನ್ನೆ ಅಥವಾ ಕಟ್ಟು ಎಂದು ಕರೆಯುತ್ತಾರೆ.ಇದರಲ್ಲಿ ಎರಡು ಹಲ್ಲುಗಳು;ಇವರೆಡರ ನಡುವಿನ ಜಾಗದಲ್ಲಿಯೇ ಲಾಳಿ ಅತ್ತಿಂದಿತ್ತ ಚಲಿಸುತ್ತದೆ.ಲಾಳಿ ಒಂದು ಅಥವಾ ಹಲವು ಎಳೆಗಳನ್ನು ಹಾದ ಮೇಲೆ ನೇಕಾರ ಪನ್ನೆಯನ್ನು ತನ್ನತ್ತ ವೇಗವಾಗಿ ಎಳೆದು,ನೇಯಲ್ಪಟ್ಟ ಎಳೆಗಳನ್ನು ತಟ್ಟುತ್ತಾನೆ.ಆಗ ನೂಲುಗಳು ಒಂದರ ಪಕ್ಕ ಮತ್ತೊಂದು ಒತ್ತೊತ್ತಾಗಿ ಕೂತುಕೊಳ್ಳುತ್ತವೆ.ಬಟ್ಟೆಯ ಅಗಲವನ್ನು ಅಂದರೆ ಅಡ್ಡ ಎಳೆ ಎಷ್ಟು ಅಗಲಕ್ಕೆ ಚಾಚಿಕೊಳ್ಳುವುದೋ ಅದರ ಅಳತೆಯನ್ನು ಪನ್ನೆ ಅಥವಾ ಪನ್ನ ಎಂದು ಕರೆಯುತ್ತಾರೆ.ನೂಲುಗಳನ್ನು ಒತ್ತರಿಸಿ ಕೂಡಿಸಲು ನೆರವಾಗುವ ಈ ಹಲ್ಲುಗಳ್ಳುಳ ದಂಡವೂ ಸರಿಸುಮಾರು ಅಷ್ಟೇ ಅಗಲ ಇರುತ್ತದೆ.<ref>http://www.kannadaprabha.com/columns/%E0%B2%97%E0%B2%BE%E0%B2%82%E0%B2%A7%E0%B3%80%E0%B2%9C%E0%B2%BF-%E0%B2%9A%E0%B2%B0%E0%B2%95-%E0%B2%95%E0%B3%88%E0%B2%AE%E0%B2%97%E0%B3%8D%E0%B2%97-%E0%B2%B9%E0%B2%BE%E0%B2%97%E0%B3%82-%E0%B2%AE%E0%B3%8C%E0%B2%B2%E0%B3%8D%E0%B2%AF-%E0%B2%B6%E0%B3%8B%E0%B2%A7%E0%B2%BF%E0%B2%B8%E0%B3%81%E0%B2%B5%E0%B2%A4%E0%B3%8D%E0%B2%A4/170639.html</ref>
"https://kn.wikipedia.org/wiki/ಕೈಮಗ್ಗ" ಇಂದ ಪಡೆಯಲ್ಪಟ್ಟಿದೆ