ಯುಗಾದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೬ ನೇ ಸಾಲು:
ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.
*ಮನೆಯ ಮುಂದೆ ಬಣ್ಣ ಬಣ್ಣದ [[ರಂಗೋಲಿ|ರಂಗೋಲಿಯನ್ನಿಡುವರು]]. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ [[ಸೀಗೇಕಾಯಿ|ಸೀಗೇಕಾಯಿಯಿಂದ]] ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
*[[ಪಂಚಾಂಗ]] ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.
 
==ಅಂದಿನ ವಿಶೇಷ ತಿನಿಸು==
* [[ಒಬ್ಬಟ್ಟು]] ಅಥವಾ [[ಹೋಳಿಗೆ]]. [[ತೆಂಗಿನಕಾಯಿ]][[ ಹೂರಣ|ಹೂರಣದಲ್ಲಿ ]]ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಬೇಳೆಯ ಹೂರಣದಲ್ಲಿ ಮಾಡುವರು. *ಇದನ್ನೇ [[ಮರಾಠಿ|ಮರಾಠಿಯಲ್ಲಿ ]]ಪೂರಣ ಪೋಳಿ ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು.
"https://kn.wikipedia.org/wiki/ಯುಗಾದಿ" ಇಂದ ಪಡೆಯಲ್ಪಟ್ಟಿದೆ