ಗೀತಪ್ರಿಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಒಂದು ಹೊರಸಂಪರ್ಕ ಕೊಂಡಿ ಸೇರ್ಪಡೆ
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೮ ನೇ ಸಾಲು:
 
==ಸಿನೆಮಾ ಜೀವನ==
ಭಾಗ್ಯ ಚಕ್ರ (1956) ಎಂಬುದು ಇವರು ಸಂಭಾಷಣೆ ಹಾಗೂ ಹಾಡುಗಳನ್ನು ರಚಿಸಿದ ಮೊದಲ ಚಿತ್ರ. ಇವರಲ್ಲಿ ಅಡಗಿದ್ದ ನಿರ್ದೇಶಕನನ್ನು ಗುರುತಿಸಿದವರು ಕರ್ನಾಟಕ ಪಿsಲಂಸ್ಫಿಲಂಸ್ ಸಂಸ್ಥೆಯಲ್ಲಿದ್ದ ಎಂ.ವಿ. ವೆಂಕಟಾಚಲಂ. ಅವರು ತಮ್ಮ ಮಣ್ಣಿನ ಮಗ ಚಿತ್ರದ ನಿರ್ದೇಶನದ ಹೊಣೆಗಾರಿಕೆಯನ್ನು ಇವರಿಗೆ ವಹಿಸಿದರು (1968). ಬೆಂಗಳೂರಿನ ಕಪಾಲಿ ಚಿತ್ರ ಮಂದಿರದಲ್ಲಿ ಶತದಿನೋತ್ಸವ ಕಂಡ ಪ್ರಥಮ ಕನ್ನಡ ಚಿತ್ರವೆಂಬ ಹೆಗ್ಗಳಿಕೆಗೆ ಈ ಚಿತ್ರ ಪಾತ್ರವಾಯಿತು. ಎಂ.ಪಿ. ಶಂಕರರ ಕಾಡಿನ ರಹಸ್ಯ (1969) ಇವರು ನಿರ್ದೇಶಿಸಿದ ಎರಡನೆಯ ಚಿತ್ರ. ಅದೇ ವರ್ಷ ಮದುವೆ, ಮದುವೆ, ಮದುವೆ, ಎಂಬ ಹಾಸ್ಯ ಚಿತ್ರವನ್ನೂ ಇವರು ನಿರ್ದೇಶಿಸಿ ದರು. ಇವರು ನಿರ್ದೇಶಿಸಿದ ಬಹುತೇಕ ಚಿತ್ರಗಳ ಸಾಹಿತ್ಯವನ್ನು ರಚಿಸಿದವರು ಇವರೇ.
 
ಗೀತಪ್ರಿಯರಿಗೆ ಚಿತ್ರರಂಗದ ಗೀಳು ಅಂಟಿಕೊಂಡದ್ದಕ್ಕೂ ಒಂದು ಹಿನ್ನೆಲೆಯಿದೆ. ಅದು 1943ರ ಮಾತು. ಆಗಷ್ಟೇ `ಸತ್ಯಹರಿಶ್ಚಂದ್ರ’ ಸಿನಿಮಾ ಬಿಡುಗಡೆಯಾಗಿತ್ತು. ಆ ಸಿನಿಮಾ ನೋಡಿದ ಗೀತಪ್ರಿಯ, ಚಿತ್ರನಟನಾಗಲೇಬೇಕು ಎಂದು ಆ ಕ್ಷಣದಲ್ಲೇ ನಿರ್ಧರಿಸಿದರಂತೆ. ಅಷ್ಟೇ ಅಲ್ಲ, ನಟನಾಗುವ ಉದ್ದೇಶದಿಂದಲೇ ಮದ್ರಾಸ್ಗೆಮದ್ರಾಸಗೆ ಹೋದರು. ಅಲ್ಲಿ ಕಥಕ್ ಡ್ಯಾನ್ಸ್ ಕಲಿತರು. ನಾಟಕ ಕಂಪನಿಗಳಲ್ಲಿ ಅಭಿನಯಿಸಿ `ಅನುಭವ’ ಪಡೆದುಕೊಂಡರು. ನಂತರ ಒಂದೆರಡು ತೆಲುಗು ಚಿತ್ರಗಳಲ್ಲಿ `ಡ್ಯಾನ್ಸರ್’ ಆಗಿಯೂ ಕಾಣಿಸಿಕೊಂಡದ್ದಾಯಿತು. ಹೀಗಿದ್ದಾಗಲೇ ಆರ್. ನಾಗೇಂದ್ರರಾವ್ ಅವರು ಒಂದು ಸಿನಿಮಾ ತಯಾರಿಸಲಿದ್ದಾರೆ ಎಂಬ ಸುದ್ದಿ ಕಿವಿಗೆ ಬಿತ್ತು. ತಕ್ಷಣವೇ ಅಲ್ಲಿಗೆ ಹೋದ ಗೀತಪ್ರಿಯ,`ನನಗೆ ಒಂದು ಪಾತ್ರ ಕೊಡಿ’ ಅಂದರಂತೆ. ಅದಕ್ಕೆ ನಾಗೇಂದ್ರರಾಯರು- ಈಗಾಗಲೇ ಎಲ್ಲ ಪಾತ್ರಗಳ ಆಯ್ಕೆ ಮುಗಿದಿದೆಯಪ್ಪಾ. ಮುಂದೆ ನೋಡೋಣ. ಈಗ ನೀನು ಬೆಂಗಳೂರಿಗೆ ಹೋಗು’ ಎಂದರಂತೆ. ಬೇಸರದಿಂದಲೇ ಬೆಂಗಳೂರಿಗೆ ಹಿಂತಿರುಗಿದರು ಗೀತಪ್ರಿಯ. ಇದಾಗಿ ಕೆಲದಿನಗಳಲ್ಲೇ ಗೀತಪ್ರಿಯರ ತಂದೆ ಅನಾರೋಗ್ಯದಿಂದ ತೀರಿಕೊಂಡರು. ಮುಂದೆ, ಅನುಕಂಪದ ಆಧಾರದ ಮೇಲೆ ತಂದೆಯವರು ನೌಕರಿ ಮಾಡುತ್ತಿದ್ದ ಮೈಸೂರು ಲ್ಯಾನ್ಸರ್ಸ್ ಕಂಪನಿಯಲ್ಲೇ ಕೆಲಸಕ್ಕೆ ಸೇರಿಕೊಂಡರು ಗೀತಪ್ರಿಯ. ಆದರೆ, ಕೆಲವೇ ದಿನಗಳಲ್ಲಿ ಆ ಕಂಪನಿ ಕೂಡ ಮುಚ್ಚಿಹೋಯಿತು. ಈ ಸಂದರ್ಭದಲ್ಲಿ ತಾಯಿ, ಇಬ್ಬರು ತಂಗಿಯರು ಹಾಗೂ ಮೂವರು ಸೋದರರನ್ನು ಸಾಕುವ ಹೊಣೆ ಗೀತಪ್ರಿಯರ ಮೇಲಿತ್ತು. [[ಕಬ್ಬನ್ ಪಾರ್ಕ್]] ಬಳಿ ಇದ್ದ ಬಾರ್ ಒಂದರಲ್ಲಿ ಬಿಲ್ರೈಟರ್ ಆಗಿ ಸೇರಿಕೊಂಡರು. ಸಿನಿಮಾ ಸೇರಬೇಕೆಂಬ ಗೀಳು ಇದ್ದೇ ಇತ್ತು. ಆ ಕಾರಣದಿಂದಲೇ ರಾತ್ರಿ ಬಂದು ಸಿನಿಮಾಕ್ಕೆ ಹಾಡು, ಚಿತ್ರಕತೆ ಬರೆಯುತ್ತಿದ್ದರು. ಒಂದು ದಿನ ಪ್ರತಿಭೆಯನ್ನು ಕಂಡ ವಿಜಯಭಾಸ್ಕರ್ `ನಿನಗೆ ಇಲ್ಲಿ ಎಷ್ಟು ಸಂಬಳ ಸಿಗುತ್ತೆ, 40 ರೂಪಾಯಿ ಕೊಡ್ತೇನೆ, ನನ್ನ ಜೊತೆ ಮದ್ರಾಸಿಗೆ ಬಂದುಬಿಡು' ಎಂದರು. ಕೇವಲ ಐದು ರೂಪಾಯಿ ಹೆಚ್ಚಿನ ಸಂಬಳದ ಆಸೆಗೆ ಮದ್ರಾಸಿಗೆ ಹೋಗಿ, ಅಲ್ಲಿ ತೆಲುಗು, ತಮಿಳು ಚಿತ್ರಗಳಲ್ಲಿ ಚಿಕ್ಕಪುಟ್ಟ ಪಾತ್ರಗಳಲ್ಲಿ ಅಭಿನಯಿಸುತ್ತ, ಸಂಭಾಷಣೆ, ಗೀತರಚನೆಯಲ್ಲಿ ತೊಡಗಿಸಿಕೊಂಡರು. ಮುಂದೆ, ೧೯೬೭ ರಲ್ಲಿ ವನಮಾಲ ಎಂಬಾಕೆ ಅಶ್ವತ್ಥ್, ರಾಜಾಶಂಕರ್, ಪಂಡರಿಭಾಯಿ, ಜಯಂತಿ ತಾರಾಗಣದ ಒಂದು ಸಿನಿಮಾ ನಿರ್ಮಾಣಕ್ಕೆ ಣಕ್ಕೆ ಮುಂದಾದರು. ಎಂ.ಎಸ್. ನಾಯಕ್ ಅವರಿಗೆ ನಿರ್ದೇಶನದ ಹೊಣೆ ಬಿತ್ತು. ಚಿತ್ರಕಥೆ -ಹಾಡು ಬರೆವ ಜವಾಬ್ಧಾರಿ ಇವರ ಹೆಗಲಿಗೇರಿತು. ಇವರು ಬರೆದ ಒಂದೇ ಬಳ್ಳಿಯ ಹೂಗಳು ಚಿತ್ರದ "ನೀನೆಲ್ಲಿ ನಡೆವೆ ದೂರ…" ಹಾಡು [[ಮಹಮ್ಮದ್ ರಫಿ]]ಯವರು ಹಾಡಿರುವ ಏಕೈಕ ಕನ್ನಡ ಗೀತೆ ಇದು. ಅವರ ಗೀತೆಗಳಲ್ಲಿ ಅಡಗಿರುವ ಮಾನವ ಪ್ರೀತಿ, ಶೋಷಣೆಯ ಬಗ್ಗೆ ಆಕ್ರೋಶ, ಬಡವರ ಪರ ದನಿ, ದೇವರ ಮೇಲೆ ಸಿಟ್ಟು ಇವೆಲ್ಲವೂ ಜನಸಾಮಾನ್ಯರ ದನಿಯೆನಿಸಿ ಪ್ರಸಿದ್ಧವಾಗಿವೆ. ಇವರ ಪತ್ನಿಯ ಹೆಸರು ಸುಶೀಲಾ ಬಾಯಿ. ವಿಜಯ್ ಇನ್ಸ್ ಟ್ಯೂಟ್ ನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದರು.
 
==ಚಿತ್ರರಂಗದಲ್ಲಿ==
"https://kn.wikipedia.org/wiki/ಗೀತಪ್ರಿಯ" ಇಂದ ಪಡೆಯಲ್ಪಟ್ಟಿದೆ