ಬಾಲ ಗಂಗಾಧರ ತಿಲಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್: ಮೊಬೈಲ್ ಅನ್ವಯ ಸಂಪಾದನೆ
೨೦ ನೇ ಸಾಲು:
 
== ತಿಲಕರ ನಂತರದ ವರ್ಷಗಳು ಹಾಗೂ ಅವರ ಕೊಡುಗೆ ==
ತಿಲಕರು ಮಹಾತ್ಮಾ ಗಾಂಧಿಯವರ ಅಹಿಂಸಾತ್ಮಕ , ಅಸಹಕಾರ ಚಳುವಳಿಯ ಟೀಕಾಕಾರರಾಗಿದ್ದರು. ಒಂದು ಕಾಲದಲ್ಲಿ ತೀವ್ರವಾದಿ ಕ್ರಾಂತಿಕಾರಿಯೆಂದು ಪರಿಗಣಿಸಲ್ಪಟ್ಟಿದ್ದರೂ, ನಂತರದ ವರ್ಷಗಳಲ್ಲಿ ಅವರು ಗಮನಾರ್ಹವಾಗಿ ಬದಲಾಗಿದ್ದರು. ಭಾರತದ ಸ್ವಾತಂತ್ರ ಗಳಿಸಲು, ಮಾತುಕತೆಗಳ ಮೂಲಕವೇ ಹೆಚ್ಚು ಪರಿಣಾಮಕಾರಿ ಎಂಬ ಬಗ್ಯೆಬಗ್ಗೆಯೆ ಅವರಿಗೆ ಒಲವಿತ್ತು. ಅಷ್ಟೇ ಅಲ್ಲ ಬ್ರಿಟಿಷ್ ಸಾಮ್ರಾಜ್ಯದಿಂದ ಹೊರಬರುವುದಕ್ಕೆ ಅವರ ಬೆಂಬಲವಿರಲಿಲ್ಲ.
ಆದರೂ, ಸ್ವರಾಜ್ಯ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ಜನಸಾಮಾನ್ಯರವರೆಗೆ ಕೊಂಡೊಯ್ದ ತಿಲಕರನ್ನು ಸ್ವಾತಂತ್ರ್ಯ ಚಳುವಳಿಯ ಜನಕ ಎಂದು ಪರಿಗಣಿಸಲಾಗಿದೆ. ಭಾರತೀಯ ಸಂಸ್ಕೃತಿ, ಇತಿಹಾಸ ಹಾಗೂ ಧರ್ಮದ ಬಗ್ಯೆಬಗ್ಗೆ ಲೇಖನಗಳಿಂದ ಲಕ್ಷಾಂತರ ಭಾರತೀಯರಿಗೆ ತಮ್ಮ ಭವ್ಯ ಪರಂಪರೆಯ ಹಾಗೂ ನಾಗರೀಕತೆಗಳ ಅರಿವು ಮಾಡಿಕೊಟ್ಟು, ಅವರ ಪ್ರಜ್ಙೆಯಲ್ಲಿ ತಮ್ಮ ನಾಡಿನ ಬಗ್ಯೆಬಗ್ಗೆ ಅಭಿಮಾನವನ್ನು ಮೂಡಿಸಿದರು .
ತಿಲಕರನ್ನು ಭಾರತದ ರಾಜಕೀಯ ಹಾಗೂ ಆಧ್ಯಾತ್ಮಿಕ ನಾಯಕರನ್ನಾಗಿಯೂ, ಮಹಾತ್ಮಾ ಗಾಂಧಿಯವರನ್ನು ಇವರ ಉತ್ತರಾಧಿಕಾರಿಯಾಗಿಯೂ ಅನೇಕರು ಪರಿಗಣಿಸುತ್ತಾರೆ. ೧೯೨೦ರಲ್ಲಿ ತಿಲಕರು ತೀರಿಕೊಂಡಾಗ, ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ೨೦೦,೦೦೦ ಜನರಲ್ಲಿ ಒಬ್ಬರಾದ ಮಹಾತ್ಮಾ ಗಾಂಧಿಯವರು ತಿಲಕರನ್ನು "ಆಧುನಿಕ ಭಾರತದ ಜನಕ" ಎಂದು ಬಣ್ಣಿಸಿದರು.
ಇಂದು ತಿಲಕರನ್ನು ಹಿಂದೂ ರಾಷ್ಟ್ರೀಯವಾದವನ್ನು ಹುಟ್ಟುಹಾಕಿದವರೆಂದು ನಂಬಲಾಗುತ್ತದೆ. ಹಿಂದುತ್ವದ ರಾಜಕೀಯ ಪ್ರಣಾಲಿಯನ್ನು ರಚಿಸಿದ ವಿನಾಯಕ ಧಾಮೋದರ ಸಾವರಕರರಿಗೆ ತಿಲಕರು ಆರಾಧ್ಯ ದೈವವಾಗಿದ್ದರು.
 
== ಗ್ರಂಥಗಳು ==
೧೯೦೩ರಲ್ಲಿ ತಿಲಕರು Arctic Home in the Vedas ಎಂಬ ಗ್ರಂಥವನ್ನು ಬರೆದು, ಅದರಲ್ಲಿ , ಖಗೋಳಶಾಸ್ತ್ರದ ಆಧಾರದ ಮೇಲೆ, ವೇದಗಳನ್ನು ಧ್ರುವ ಪ್ರದೇಶಗಳಲ್ಲಿ ಮಾತ್ರವೇ ಸೃಷ್ಟಿಸಿರಲು ಸಾಧ್ಯ ಎಂದು ವಾದಿಸುತ್ತಾರೆ. ಕೊನೆಯ ಮಂಜಿನ ಯುಗ ಶುರುವಾದ ಮೇಲೆ ಅಲ್ಲಿಂದ ದಕ್ಷಿಣದ ಕಡೆ ಸಾಗಿದ ಆರ್ಯರ ಮೂಲಕ ಅದು ದಕ್ಷಿಣ ದೇಶಗಳನ್ನು ಮುಟ್ಟಿತು ಎಂದೂ ಅವರು ಪ್ರತಿಪಾದಿಸುತ್ತಾರೆ.
"https://kn.wikipedia.org/wiki/ಬಾಲ_ಗಂಗಾಧರ_ತಿಲಕ" ಇಂದ ಪಡೆಯಲ್ಪಟ್ಟಿದೆ