ಯೇಸು ಕ್ರಿಸ್ತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪೧ ನೇ ಸಾಲು:
 
==ಧರ್ಮಗ್ರಂಥ==
*ಯೇಸುವಿನ ಜೀವನ ವೃತ್ತಾಂತ ಕಂಡು ಬರುವುದು ಕ್ರೈಸ್ತರಿಗೆ ಧರ್ಮಗ್ರಂಥವಾದ [[ಬೈಬಲ್‌]]ನ [[ಹೊಸ ಒಡಂಬಡಿಕೆಯಒಡಂಬಡಿಕೆ]]ಯ ನಾಲ್ಕು ಪ್ರಮುಖ ಭಾಗಗಳಾದ ಮತ್ತಾಯ, ಮಾರ್ಕ್, ಲೂಕ್,ಮತ್ತು ಜಾನ್ ಬರೆದ ಸುವಾರ್ತೆಗಳಲ್ಲಿ. [[ಹಳೇ ಒಡಂಬಡಿಕೆ]] ಯಲ್ಲಿ ಯೇಸುಕ್ರಿಸ್ತನ ಬರುವಿಕೆಯ ಕುರಿತು ಅನೇಕ ಉಲ್ಲೇಖಗಳಿವೆ. ಇಸ್ರೇಲ್‌ನ ಬೆತ್ಲೆಹೆಮ್‌ನಲ್ಲಿ ಹುಟ್ಟಿ ಯೇಸು ಅನೇಕ ಸೂಚಕ ಕಾರ್ಯಗಳನ್ನು ಮಾಡಿ, ದೇವರ ಸಂದೇಶವನ್ನು ಜನರಿಗೆ ಬೋಧಿಸಿದನು.
* ಮೊದಲೇ ಮೋಶೆಯ ಧರ್ಮಗ್ರಂಥದಲ್ಲಿ ಲಿಖಿಸಲ್ಪಟ್ಟಂತೆ ಲೋಕಪಾಪಗಳನ್ನು ಹೊತ್ತುಕೊಂಡು ಹೋಗುವ ದೇವರ ಕುರಿಮರಿ ಎಂಬ ವಾಕ್ಯದ ನೆರವೇರಿಕೆಗಾಗಿ ರೋಮನ್ ಅಧಿಕಾರಿಯ ಅಪ್ಪಣೆಯ ಮೇರೆಗೆ ಏಸುವನ್ನು [[ಶಿಲುಬೆ]]ಗೆ ಏರಿಸಲ್ಪಡುತ್ತಾರೆ. ಯೇಸು ಶಿಲುಬೆಗೆ ಏರಿದ ದಿನವನ್ನು 'ಗುಡ್‍ಫ್ರೈಡೇ' ಎನ್ನುತ್ತಾರೆ. ಶಿಲುಬೆಗೆ ಏರುವ ಸಂದರ್ಭದಲ್ಲಿ ಏಸು ಸಾಮಾನ್ಯ ಮನುಷ್ಯರಂತೆ ಎಲ್ಲಾ ಕಷ್ಟಗಳಿಗೂ ತಮ್ಮ ದೇಹವನ್ನು ಒಡ್ಡುತ್ತಾರೆ. ಭಾರವಾದ ಶಿಲುಬೆಯನ್ನು ಹೊತ್ತು, ಮುಳ್ಳಿನ ಕಿರೀಟವನ್ನು ಧರಿಸಿ, ಅರಿಷಡ್ವರ್ಗಗಳನ್ನು ಗೆದ್ದು, ಶಿಲುಬೆಗೆ ಏರುವಾಗಲೂ 'ದೇವರೇ ಅವರಿಗೆ ತಾವೇನು ಮಾಡುತ್ತಿದ್ದೇವೆ ಎಂಬುದರ ಅರಿವಿಲ್ಲ. ಹಾಗಾಗಿ ಅವರನ್ನು ಕ್ಷಮಿಸು' ಎಂದು, ತಮ್ಮನ್ನು ಶಿಲುಬೆಗೆ ಏರಿಸಿದವರಿಗೂ ಕ್ಷಮಾದಾನ ನೀಡುತ್ತಾರೆ.
* ಆಮೇಲೆ ಮೂರು ದಿನಗಳ ನಂತರ ತನ್ನ ಸಮಾಧಿಯಿಂದ ಅವರು ಮೇಲೆದ್ದರು (ಪುನರುತ್ಥಾನ ಹೊಂದಿದರು) ಎಂಬುದನ್ನು ಬೈಬಲ್ ಹೇಳುತ್ತದೆ. ಆ ದಿನವನ್ನು 'ಈಸ್ಟರ್ ಡೇ' ಎಂದು ಕರೆಯುತ್ತಾರೆ. ಯೇಸು ಕ್ರಿಸ್ತನ ಉಪದೇಶಗಳು ಮತ್ತು ಜೀವನ ಬೈಬಲ್‍ನ ಹೊಸ ಒಡಂಬಡಿಕೆಯ ([[ನ್ಯೂ ಟೆಸ್ಟಮೆಂಟ್]]) ಮುಖ್ಯ ವಿಷಯವಾಗಿದ್ದು, ಕ್ರೈಸ್ತ ಧರ್ಮದ ಮೂಲಭೂತ ಉಪದೇಶಗಳಾಗಿವೆ. ಏಳನೆಯ ಶತಮಾನದಿಂದೀಚೆಗೆ ಯೇಸುಕ್ರಿಸ್ತನ ಆಳೆತ್ತರದ ಪ್ರತಿಮೆಗಳನ್ನು ಮಾಡಿ ಮೆರುಗಿನ ವಸ್ತ್ರಗಳಿಂದ ಅಲಂಕರಿಸಿ ಶಿಲುಬೆಯ ಬದಿಯಲ್ಲಿ ನಿಲ್ಲಿಸುವ ಪರಿಪಾಠ ಮೊದಲಾಯಿತು. ಕ್ರಮೇಣ ಯೇಸುಕ್ರಿಸ್ತನ ಯಾತನೆ ಮತ್ತು ಸಾವನ್ನು ಪ್ರಚಾರಕ್ಕೆ ಬಳಸಿಕೊಳ್ಳುವ ಸಲುವಾಗಿ ಯೇಸುಕ್ರಿಸ್ತನ ದೇಹವನ್ನು ನೈಜತೆಗೆ ಅತ್ಯಂತ ಹತ್ತಿರವಾಗಿ ರೂಪಿಸುವ ಪದ್ಧತಿ ಬೆಳೆದುಬಂತು.
"https://kn.wikipedia.org/wiki/ಯೇಸು_ಕ್ರಿಸ್ತ" ಇಂದ ಪಡೆಯಲ್ಪಟ್ಟಿದೆ