ಹಕೀಂ ಅಜ್ಮಲ್ ಖಾನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೦ ನೇ ಸಾಲು:
1918ರ [[ದೆಹಲಿ]] ಕಾಂಗ್ರೆಸ್ಸಿನ ಸ್ವಾಗತ ಸಮಿತಿ ಅಧ್ಯಕ್ಷರಾಗಿದ್ದ ಇವರು ಮರು ವರ್ಷವೇ ರಾಜಕೀಯದಲ್ಲಿ ಧುಮುಕಬೇಕಾಯಿತು. 1919ರ ರೌಲತ್ ಕಾನೂನು, ಜಲಿಯನ್‍ವಾಲಾ ಬಾಗ್ ಕಗ್ಗೊಲೆ, ಖಿಲಾಫತ್ ವಿಷಯದಲ್ಲಿ ಬ್ರಿಟಿಷರು ಮುಸ್ಲಿಂಮರಿಗೆ ಮಾಡಿದ ಅನ್ಯಾಯ-ಇವೆಲ್ಲ ಅವರನ್ನು ರಾಜಕೀಯಕ್ಕೆ ಸೆಳೆದುವು. 1919ರಲ್ಲಿ ಬ್ರಿಟಿಷರು ನಡೆಸಿದ ಅತ್ಯಾಚಾರಗಳಿಂದ ತಮ್ಮ ರಾಜಕೀಯ ಅಭಿಪ್ರಾಯಗಳು ಒಮ್ಮೆಲೇ ಬದಲಾಯಿಸಿದವು ಎಂದು ಮಿತ್ರರೊಬ್ಬರಿಗೆ ಬರೆದ ಪತ್ರದಲ್ಲಿ ಅವರು ಹೇಳಿದ್ದಾರೆ. 1921ರಲ್ಲಿ ನಡೆದ [[ಅಹಮದಾಬಾದ್]] ಕಾಂಗ್ರೆಸ್ಸಿಗೆ ಇವರು ಅಧ್ಯಕ್ಷರಾಗಿ ಆರಿಸಲ್ಪಟ್ಟು ಅಧ್ಯಕ್ಷಪೀಠದಿಂದ, ಸ್ವಾತಂತ್ರ್ಯದ ಹಾಗೂ ಹಿಂದೂ ಮುಸ್ಲಿಮ್ ಐಕ್ಯದ ಬಗ್ಗೆ ಭಾವೋದ್ರೇಕದಿಂದ ಜನತೆಗೆ ಕರೆಕೊಟ್ಟರು. [[ಮಹಾತ್ಮಾ ಗಾಂಧಿ|ಮಹಾತ್ಮಾ ಗಾಂಧೀಜಿಯವರೊಂದಿಗೆ]] ಇವರ ಗೆಳೆತನ ಬೆಳೆಯಿತು. ಸೆರೆಮನೆಯಲ್ಲೇ ನಡೆದ ಗಾಂಧೀಜಿಯವರ ಶಸ್ತ್ರಚಿಕಿತ್ಸೆ, ದೆಹಲಿಯಲ್ಲಿ ಗಾಂಧೀಜಿಯವರು ಮಾಡಿದ ಮೂರು ವಾರಗಳ ಉಪವಾಸ (1924)-ಇಂಥ ಸಂದರ್ಭಗಳಲ್ಲಿ ಅಜ್ಮಲ್‍ಖಾನರು ತೋರಿಸಿದ ಕಾಳಜಿ, ಆಸಕ್ತಿಗಳು ಸ್ವಾತಂತ್ರ್ಯಕ್ಕಾಗಿ ನಡೆಸಿದ ಹೋರಾಟದಲ್ಲಿ ಹೃದಯಸ್ಪರ್ಶಿಯಾದ ಪ್ರಸಂಗಗಳು.
==ನಿಧನ==
ಇವರು ಡಿಸೆಂಬರ್ ೨೯,೧೯೨ರಂದು೧೯೨೭ ರಂದು ಹೃದಯ ಸಂಬಂಧಿ ಖಾಯಿಲೆಯಿಂದ ನಿಧನ ಹೊಂದಿದರು.
 
==ಉಲ್ಲೇಖಗಳು==
{{reflist}}
"https://kn.wikipedia.org/wiki/ಹಕೀಂ_ಅಜ್ಮಲ್_ಖಾನ್" ಇಂದ ಪಡೆಯಲ್ಪಟ್ಟಿದೆ