ಪಿ. ಸುಶೀಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೪ ನೇ ಸಾಲು:
*ಭಾರತೀಯ ಚಿತ್ರರಂಗ ಹಲವು ಅಪ್ರತಿಮ ಗಾಯಕಿಯರನ್ನು ಕಂಡಿದೆ. ಆದರೆ, ಮಾಧುರ್ಯದ ವಿಷಯಕ್ಕೆ ಬಂದರೆ ಹೆಚ್ಚು ಆಪ್ತವಾಗುವ ಹೆಸರು ಸುಶೀಲಾ. ಅವರು ಹಾಡಲು ಶುರು ಮಾಡಿದ ಸಂದರ್ಭದಲ್ಲಿ ಚಿತ್ರರಂಗದಲ್ಲಿದ್ದ ಪೈಪೋಟಿ ಅಷ್ಟಿಷ್ಟಲ್ಲ. ಸೂಲಮಂಗಲಂ ರಾಜಲಕ್ಷ್ಮಿ, ಪಿ. ಲೀಲಾ, ಎಂ.ಎಲ್.ವಸಂತಕುಮಾರಿ, ಎ.ಪಿ.ಕೋಮಲ, ಆರ್.ಬಾಲಸರಸ್ವತಿ, ಜಿಕ್ಕಿ ಅವರಂಥ ಘಟಾನುಘಟಿಗಳ ನಡುವೆ ರಂಗಪ್ರವೇಶಿಸಿದ ಸುಶೀಲಾ, ಕೆಲವು ವರ್ಷಗಳಲ್ಲೇ ಎಲ್ಲರನ್ನೂ ಮೀರಿ ಬೆಳೆದರು.ವಿವಿಧ ಭಾಷೆಗಳಲ್ಲಿ ಹಾಡುವ ಮೂಲಕ ‘ದಕ್ಷಿಣ ಭಾರತದ ಕೋಗಿಲೆ’ ಎನ್ನಿಸಿಕೊಂಡ ಅಗ್ಗಳಿಕೆ ಅವರದು.
 
*ಪ್ರಸ್ತುತ, ಹನ್ನೆರಡು ಭಾಷೆಗಳಲ್ಲಿ ಪಿ.ಸುಶೀಲಾ ಅವರು ಹಾಡಿರುವ 17,695 ಗೀತೆಗಳ ಸಾಧನೆಯನ್ನು '''ಗಿನ್ನೆಸ್‌ ದಾಖಲೆ''' ಪುಸ್ತಕ ಗೌರವಿಸಿದೆ.ಗಿನ್ನೆಸ್‌ ದಾಖಲೆಯಲ್ಲಿ ಸುಶೀಲಾ ಅವರ 1960ರ ನಂತರದ ಹಾಡುಗಳನ್ನಷ್ಟೇ ಪರಿಗಣಿಸಲಾಗಿದೆ. ಕನ್ನಡದಲ್ಲಿ ಸುಮಾರು 5 ಸಾವಿರ ಗೀತೆಗಳನ್ನು ಸುಶೀಲಾ ಹಾಡಿದ್ದಾರೆ. ಚಲನಚಿತ್ರ ಸಂಗೀತದಲ್ಲಿ ಏನೆಲ್ಲ ಪ್ರಯೋಗಗಳು ನಡೆದೂ ಕೊನೆಗೆ ಮಾಧುರ್ಯವೇ ಮುನ್ನೆಲೆಗೆ ಸಲ್ಲುವುದು ಮತ್ತೆ ಮತ್ತೆ ಸಾಬೀತಾಗಿದೆ. ಈ ಸಂದರ್ಭದಲ್ಲಿ, ಸುಶೀಲಾ ಅವರ ಗೀತೆಗಳು '''‘ಮಾಧುರ್ಯದ ಮಾದರಿ’'''ಗಳಂತೆ ಕೇಳುಗರ ಮನಸ್ಸುಗಳನ್ನು ಪ್ರಸನ್ನಗೊಳಿಸುತ್ತ ಚಿರಸ್ಥಾಯಿಯಾಗಿದೆ. <ref>4/03/2016/ಪ್ರಜಾವಾಣಿ [[http://www.prajavani.net/article/ಚಿತ್ರರಸಿಕರ%E0%B2%9A%E0%B2%BF%E0%B2%A4%E0%B3%8D%E0%B2%B0%E0%B2%B0%E0%B2%B8%E0%B2%BF%E0%B2%95%E0%B2%B0-ಎದೆಯ%E0%B2%8E%E0%B2%A6%E0%B3%86%E0%B2%AF-ಕೋಗಿಲೆ%E0%B2%95%E0%B3%8B%E0%B2%97%E0%B2%BF%E0%B2%B2%E0%B3%86-ಸುಶೀಲಾ%E0%B2%B8%E0%B3%81%E0%B2%B6%E0%B3%80%E0%B2%B2%E0%B2%BE]]</ref>
 
==ಪ್ರಶಸ್ತಿ ಗೌರವಗಳು==
"https://kn.wikipedia.org/wiki/ಪಿ._ಸುಶೀಲ" ಇಂದ ಪಡೆಯಲ್ಪಟ್ಟಿದೆ