ಟೈಗರ್ ಪ್ರಭಾಕರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Migrating 1 interwiki links, now provided by Wikidata on d:Q7801454
ಚು clean up, replaced: ಹಿಂದೀ → ಹಿಂದಿ using AWB
೮ ನೇ ಸಾಲು:
}}
 
'''ಟೈಗರ್ ಪ್ರಭಾಕರ್''' ( [[೧೯೪೮]] - [[ಮಾರ್ಚ್ ೨೫]], [[೨೦೦೧]]) ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದೀಹಿಂದಿ ಭಾಷೆಗಳಲ್ಲಿ ವಿವಿಧ ರೀತಿಯಪಾತ್ರಗಳಲ್ಲಿ ಗಮನಸೆಳೆದ ಪ್ರತಿಭಾನ್ವಿತರು.
 
 
==ಚಿತ್ರ ಜೀವನ==
ಕನ್ನಡ ಚಿತ್ರರಂಗದ ಟೈಗರ್ ಎಂದೇ ಖ್ಯಾತರಾಗಿದ್ದ ಪ್ರಭಾಕರ್, ಕನ್ನಡ ಚಿತ್ರರಂಗ ಕಂಡ ಅಪರೂಪದ ಆಲ್ ರೌಂಡರ್ ಎಂದರೆ ತಪ್ಪಿಲ್ಲ. ಸಹ ನಟನಾಗಿ, ಪೋಷಕನಟನಾಗಿ, ಖಳ ನಾಯಕನಾಗಿ, ನಾಯಕ ನಟನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ತನ್ನದೇ ವಿಶಿಷ್ಟತೆ ಮೆರೆದ ವ್ಯಕ್ತಿ ಪ್ರಭಾಕರ್. ಯಾವುದೇ ಪಾತ್ರವಾಗಿರಲಿ, ಯಾವ ಪ್ರಮಾಣದ ಪಾತ್ರವೇ ಆಗಿರಲಿ, ಆ ಪಾತ್ರ ಸದಾ ಕಾಲ ನೆನಪಿನಲಿ ಉಳಿಯುವಂತೆ ನಟಿಸುತ್ತಿದ್ದ ನಟ. ಅಂತೆಯೇ ಸುಮಾರು 450 ಚಿತ್ರಗಳಲ್ಲಿ ನಟಿಸಿ ಮರೆಯಾಗಿದ್ದರೂ, ಇಂದಿಗೂ ಕನ್ನಡ ಚಿತ್ರ ರಸಿಕರ ಮನದಲ್ಲಿ ಅಚ್ಚಳಿಯದೇ ನೆನಪಿನಲ್ಲುಳಿದಿದ್ದಾರೆ ನಟ ಪ್ರಭಾಕರ್.
 
==ಖಳನಟನಾಗಿ ಪ್ರಸಿದ್ಧಿ==
ಎಪ್ಪತ್ತರರ ದಶಕದ ‘ಕಾಡಿನ ರಹಸ್ಯ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರ ಜೀವನ ಆರಂಭಿಸಿದ ಪ್ರಭಾಕರ್ ಅವರಿಗೆ ಆಗ ಕೇವಲ 14ರ ಪ್ರಾಯ. ನಂತರ ಅನೇಕ ಚಿತ್ರಗಳಲ್ಲಿ ಚಿಕ್ಕ ಚಿಕ್ಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾ, ಸಾಹಸ ದೃಶ್ಯಗಳಲ್ಲಿ ಸಹ ನಟನಾಗಿ ಗುರುತಿಸಿಕೊಳ್ಳುತ್ತಾ, ಹಂತ ಹಂತವಾಗಿ ನಟನಾ ಜೀವನದಲ್ಲಿ ಮೇಲೇರಿದ ಪ್ರಭಾಕರ್ ಕ್ರಮೇಣ ಖಳನಾಯಕನ ಸಹಾಯಕನಾಗಿ ನಂತರ ಖಳನಾಯಕರಲ್ಲಿ ಒಬ್ಬನಾಗಿ, ಆನಂತರ ಪ್ರಮುಖ ಖಳನಾಯಕನಾಗಿ ಅಭಿನಯಿಸತೊಡಗಿದರು. ಖಳನಾಯಕನಾದ ಮೇಲಂತೂ ತಮ್ಮದೇ ವಿಶಿಷ್ಟ ರೀತಿಯ ಸಂಭಾಷಣಾ ಶೈಲಿಯಿಂದ ಕನ್ನಡಿಗರ ಮನೆಮಾತಾದ ಪ್ರಭಾಕರ್, ಎಂಭತ್ತರ ದಶಕದಲ್ಲಿ ಕನ್ನಡ ಭಾಷೆಯಲ್ಲಿ ಮಾತ್ರವಲ್ಲದೇ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಚಿತ್ರಗಳಲ್ಲೂ ಬೇಡಿಕೆಯ ಖಳನಾಯಕನಾಗಿ ವಿಜ್ರಂಭಿಸಿದರು. ಪರಭಾಷೆಗಳಲ್ಲಿ ಅಭಿನಯಿಸುವಾಗ ಅವರು ಕನ್ನಡ ಪ್ರಭಾಕರ್ ಎಂದೇ ಹೆಸರಾಗಿದ್ದರು.
 
==ನಾಯಕನಟರಾಗಿ==
Line ೩೩ ⟶ ೩೨:
 
==ಸಮಾಜಕ್ಕಾಗಿ ಮಿಡಿತ==
ಚಿತ್ರರಂಗದಲ್ಲಿ ಮಾತ್ರವಲ್ಲದೇ, ಚಿತ್ರರಂಗದ ಆಚೆಗೂ ಸ್ನೇಹ ಜೀವಿ ಎಂದೇ ಹೆಸರಾಗಿದ್ದ ಪ್ರಭಾಕರ್, ತಮ್ಮ ಸಾಮಾಜಿಕ ಕಳಕಳಿ, ಉದಾರ ಮನೋಭಾವದ ಗುಣಗಳಿಂದ ಅನೇಕ ಸಹ ಕಲಾವಿದರಿಗೆ, ಅನಾಥಾಶ್ರಮಗಳಿಗೆ, ಸಂಘ ಸಂಸ್ಥೆಗಳಿಗೆ ಆರ್ಥಿಕವಾಗಿ ನೆರವಾಗುತ್ತಿದ್ದರು. ಪ್ರಭಾಕರ್ ಅವರ ಪುತ್ರ ವಿನೋದ್ ಪ್ರಭಾಕರ್ ಇಂದು ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸುವ ಯುವ ನಾಯಕ ನಟನಾಗಿದ್ದಾರೆ.
 
==ವಿದಾಯ==
1948ರಲ್ಲಿ ಜನಿಸಿದ ಪ್ರಭಾಕರ್ ಇನ್ನೂ 52ನೇ ವಯಸ್ಸಿನಲ್ಲಿರುವಾಗಲೇ, 2001ರ ಮಾರ್ಚ್ 25ರಂದು ಈ ಲೋಕವನ್ನಗಲಿದರು. ವಿಶಿಷ್ಟ ರೀತಿಯ ಅಭಿನಯ ಹಾಗೂ ಸಂಭಾಷಣೆ ಹೇಳುವ ರೀತಿಯಿಂದ ಅವರು ಪ್ರತ್ಯೇಕರೂ, ವಿಶಿಷ್ಟರೂ, ಸ್ಮರಣೀಯರೂ ಆಗಿ ಚಿತ್ರರಸಿಕರ ಮನದಲ್ಲಿ ನೆಲೆಸಿದ್ದಾರೆ.
 
==ಮಾಹಿತಿ ಕೃಪೆ==
[http://www.vaakchitra.com ವಾಕ್ಚಿತ್ರ]
 
[[ವರ್ಗ:ಕನ್ನಡ ಚಿತ್ರರಂಗದ ನಟರು]]
[[Category: ಕನ್ನಡ_ಚಿತ್ರರಂಗದ_ನಟರು]]
"https://kn.wikipedia.org/wiki/ಟೈಗರ್_ಪ್ರಭಾಕರ್" ಇಂದ ಪಡೆಯಲ್ಪಟ್ಟಿದೆ