ಹೊಯ್ಸಳ ವಾಸ್ತುಶಿಲ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೮ ನೇ ಸಾಲು:
ಹೊಯ್ಸಳ ವಾಸ್ತುಶಿಲ್ಪದ ಪ್ರಕಾರವನ್ನು ಸಂಗ್ರಹವಾಗಿ ನಾಲ್ಕು ಅಂಶಗಳಾಗಿ ವಿಂಗಡಿಸಬಹುದು
 
===ಕಟ್ಟಡದ ರೂಪ ಮತ್ತು ತಲವಿನ್ಯಾಸ===g
 
ಹೊಯ್ಸಳ ದೇವಾಲಯಗಳ ತಲವಿನ್ಯಾಸವು ಸಾಮಾನ್ಯವಾಗಿ ಬಹುಕೋನಾಕೃತಿ ಅಥವಾ ನಕ್ಷತ್ರಾಕೃತಿಯಲ್ಲಿ ಇರುತ್ತದೆ. ಎತ್ತರವಾದ ಜಗತಿಯ ಮೇಲೆ ತಲವಿನ್ಯಾಸದ ಆಕಾರದಲ್ಲಿಯೆ ದೇವಾಲಯದ ಆಕಾರವು ರೂಪುಗೊಂಡಿರುತ್ತದೆ. ಜಗತಿಯು ವಿಶಾಲವಾಗಿದ್ದು ಸಲೀಸಾಗಿ ಓಡಾಡುವಷ್ಟು ಅನುಕೂಲಕರವಾಗಿರುತ್ತದೆ. ದೇವಾಲಯಕ್ಕೆ ಒಳಬರುವ ಮೊದಲು ಕೆಲವು ಮೆಟ್ಟಿಲುಗಳನ್ನು ಹತ್ತಿ ಪ್ರವೇಶಿಸಬೇಕಾಗುತ್ತದೆ. ಈ ರಚನೆಯು ಹೊಯ್ಸಳರ ಎಲ್ಲಾ ಆಲಯಗಳಲ್ಲೂ ಕಂಡುಬರುತ್ತದೆ. ಮೊದಲಿಗೆ ಸಿಗುವ ವಿಶಾಲವಾದ ಜಗತಿಯೇ ಪ್ರದಕ್ಷಿಣಾ ಪಥವೂ ಆಗಿರುತ್ತದೆ. ಚಾಲುಕ್ಯರ ದೇವಾಲಯಗಳಲ್ಲಿರುವಂತೆ ಗರ್ಭಗೃಹದ ಸುತ್ತಲಿನ ಸುತ್ತುಗಟ್ಟುವ ಹಾದಿಯು ಇಲ್ಲಿ ಕಾಣುವುದಿಲ್ಲ. ಹೊಯ್ಸಳರ ಎಲ್ಲಾ ದೇವಾಲಯಗಳೂ ಬಳಪದ ಕಲ್ಲಿನಿಂದಲೇ ನಿರ್ಮಾಣವಾಗಿರುತ್ತದೆ.
 
===ಗೋಡೆಗಳ ರಚನೆ/ವಿಗ್ರಹಗಳು===