ಹೊಯ್ಸಳ ವಾಸ್ತುಶಿಲ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
೨ ನೇ ಸಾಲು:
'''ಹೊಯ್ಸಳ ವಾಸ್ತುಶಿಲ್ಪ'''
 
[[ಕರ್ನಾಟಕ]]ವನ್ನು ಬಹುಕಾಲದವರೆವಿಗೆ ಆಳಿದವರಲ್ಲಿ [[ಹೊಯ್ಸಳ]]ರೂ ಪ್ರಮುಖರು. [[ಕದಂಬರು]] ಮತ್ತು [[ಚಾಲುಕ್ಯ]]ರಂತೆ ಇವರೂ ಸಹ ಕನ್ನಡನಾಡಿನಾದ್ಯಂತ ಅನೇಕ ದೇವಾಲಯಗಳನ್ನು ನಿರ್ಮಿಸಿದರು. ಕನ್ನಡನಾಡಿನಲ್ಲಿ ಸುಮಾರು ೯೨ ದೇವಾಲಯಗಳನ್ನು ಹೊಯ್ಸಳರು ನಿರ್ಮಿಸಿದ್ದಾರೆ. ಇದರಲ್ಲಿ ಸುಮಾರು ೪೦ ದೇವಾಲಯಗಳು ಹೊಯ್ಸಳರ ರಾಜಕೀಯ ಕಾರ್ಯಕ್ಷೇತ್ರವಾಗಿದ್ದ [[ಹಾಸನ ಜಿಲ್ಲೆ]]ಯೇ ಇವೆ.ಅವುಗಳಲ್ಲಿ ಮುಖ್ಯವಾದುದು [[ಬೇಲೂರು]] ಮತ್ತು [[ಹಳೆಬೀಡು]]ದೇವಾಲಯಗಳು. [[ದ್ರಾವಿಡ]] ಮತ್ತು [[ನಾಗರ]] ಶೈಲಿಯ ಮಿಶ್ರಣವನ್ನು ಹೊಯ್ಸಳ ವಾಸ್ತುಶೈಲಿಯಲ್ಲಿ ನಾವು ಕಾಣಬಹುದು. ಕೆಲವು ಪಾಶ್ಚಾತ್ಯ ಪಂಡಿತರು, ವಿದ್ವಾಂಸರು ಚಾಲುಕ್ಯರ ವಾಸ್ತುಶೈಲಿಗೆ ಕೊಟ್ಟ ಮಹತ್ವವನ್ನು ಹೊಯ್ಸಳ ಶೈಲಿಗೆ ಕೊಡದೆ ಚಾಲುಕ್ಯ ಸಂಸ್ಕೃತಿಯೊಳಗೆ ಇದನ್ನೂ ಸೇರಿಸಿ ಬದಿಗಿರಿಸಿದ್ದಾರೆ. ಆದರೆ, ಅನೇಕ ಭಾರತೀಯ ಮತ್ತು ಪಾಶ್ಚಾತ್ಯ ವಿದ್ವಾಂಸರು ಹೊಯ್ಸಳ ಶೈಲಿಯನ್ನು ಮರು ವಿಮರ್ಶಿಸಿ ಈ ಶೈಲಿಯ ಬೆರಗನ್ನು ಕಂಡು ವಿಸ್ಮಿತರಾಗಿದ್ದಾರೆ. ಹೊಯ್ಸಳ ದೇವಾಲಯಗಳಲ್ಲಿ ಕಂಡುಬರುವ ಅನೇಕಾನೇಕ ಸೂಕ್ಷ್ಮ ಕೆತ್ತನೆಗಳಿರುವ ವಿಗ್ರಹಗಳು, ಶಿಲಾಬಾಲಿಕೆಯರು ಮತ್ತು ರಾಮಾಯಣ , ಮಹಾಭಾರತದಂತಹ ಪುರಾಣ ಕತೆಗಳನ್ನು ಕಣ್ಣಿಗೆ ಕಟ್ಟುವಂತೆ ಕಲ್ಲಿನಲ್ಲಿ ಕಡೆದಿರುವುದನ್ನು ಕಂಡಾಗ ಹೊಯ್ಸಳ ವಾಸ್ತುಶೈಲಿಯನ್ನು ಪ್ರತ್ಯೇಕವಾಗಿಯೇ ನೋಡಬೇಕೆಂಬುದು ಮನದಟ್ಟಾಗುತ್ತದೆ.
 
==ಹೊಯ್ಸಳ ವಾಸ್ತುಶಿಲ್ಪದ ಪ್ರಮುಖ ಅಂಶಗಳು==