"ಅಗ್ನಿ(ಹಿಂದೂ ದೇವತೆ)" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
|Planet =
}}
'''ಅಗ್ನಿ''' ಒಬ್ಬ [[ಋಗ್ವೇದದ ದೇವತೆಗಳು|ಹಿಂದೂ ದೇವತೆ]], [[ವೈದಿಕ ನಾಗರಿಕತೆ|ವೈದಿಕ]] [[ದೇವರು|ದೇವತೆಗಳ]] ಅತ್ಯಂತ ಪ್ರಮುಖರ ಪೈಕಿ ಒಬ್ಬನು. ಅವನು [[ಬೆಂಕಿ|ಬೆಂಕಿಯ]] [[ದೇವರು]] ಮತ್ತು ಬಲಿಗಳ ಸ್ವೀಕಾರಕ. ಅಗ್ನಿಗೆ ಅರ್ಪಿಸಲಾದ ಬಲಿಗಳು [[ದೇವರು|ದೇವತೆಗಳಿಗೆ]] ಹೋಗುತ್ತವೆ ಏಕೆಂದರೆ ಅಗ್ನಿಯು ಇತರ ದೇವತೆಗಳಿಂದ ಮತ್ತು ಇತರ ದೇವತೆಗಳಿಗೆ ಸಂದೇಶವಾಹಕ.
 
ಅಗ್ನಿಯು ಪೃಥ್ವಿಗೆ ಅಧಿಪತಿಯಾದ ದೇವತೆ ಎಂದು ಪ್ರಸಿದ್ಧನಾಗಿದ್ದು ದ್ಯಾವಾಪೃಥಿವ್ಯಾದಿ ಸಕಲ ಲೋಕಗಳಲ್ಲೂ ವ್ಯಾಪಿಸಿರುವ ದಿವ್ಯಜ್ಯೋತಿ, ದಿವ್ಯಶಕ್ತಿ. ಸಕಲ ದೇವಮಾನವಾದಿಗಳೆಲ್ಲರ ವ್ಯವಹಾರಕ್ಕೂ ಮಾರ್ಗದರ್ಶಕನಾದ್ದರಿಂದ ಅಗ್ನಿ ಎಂಬ ಹೆಸರು ಅನ್ವರ್ಥವಾಗಿದೆ (ನಿರುಕ್ತ 7.14). ವಿಶ್ವವ್ಯಾಪಕನೂ ವಿಶ್ವಧಾರಕನೂ ಸಕಲದೇವತಾತ್ಮನೂ ಅಮರನೂ ಆದ ಅಗ್ನಿಯ ರೂಪಾಂತರಗಳು ವೈಶ್ವಾನರಾದಿ ಸಂಜ್ಞೆಗಳಿಂದ ಪ್ರಶಂಸಿತವಾಗಿದೆ. ಸಕಲ ಭೂತಗಳಲ್ಲೂ ಪ್ರವೇಶಿಸಿ ನೇತೃವಾಗಿರುವುದರಿಂದ ವೈಶ್ವಾನರ, ಧನ ಮತ್ತು ಶಕ್ತಿದಾತನಾದ್ದರಿಂದ ಪ್ರವಿಣೋದಾಃ, ಉತ್ಪನ್ನವಾದ ಸಕಲವನ್ನೂ ಅರಿತಿರುವುದರಿಂದ ಜಾತವೇದಸ್, ನರರಿಂದ ಪ್ರಶಂಸಿತನಾಗಿರುವುದರಿಂದ ನರಾಶಂಸ, ಉದಕಗಳಿಂದ ಓಷಧಿಗಳೂ ಓಷಧಿಗಳಿಂದ ಅಗ್ನಿಯೂ ಉತ್ಪನ್ನವಾಗುವುದರಿಂದ ಅಪಾಂನಪಾತ್, ತನ್ನಿಂದ ತಾನೇ ಉತ್ಪನ್ನವಾಗುವುದ ರಿಂದ ತನೂನಪಾತ್, ಅಂಗಾರದಿಂದ (ಕೆಂಡ) ಉತ್ಪನ್ನವಾಗುವುದರಿಂದ ಅಂಗಿರಾ-ಹೀಗೆ ನಾನಾವಿಧವಾಗಿ ಅಗ್ನಿಯ ರೂಪಾಂತರಗಳನ್ನು ಸ್ತುತಿಸಿದೆ.
೨,೭೮೨

edits

"https://kn.wikipedia.org/wiki/ವಿಶೇಷ:MobileDiff/675071" ಇಂದ ಪಡೆಯಲ್ಪಟ್ಟಿದೆ