ವೀಣೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಪರಿಷ್ಕರಿಸಲಾಗಿದೆ.
ಲೇಖನವನ್ನು ಪರಿಷ್ಕರಿಸಲಾಗಿದೆ.
೧ ನೇ ಸಾಲು:
[[File:Saraswati.jpg|thumb|Goddess Saraswati depicted playing the veena]]
{{Infobox Instrument
|name=
|image= Veena.png
|image_capt=Saraswati Veena
|background=string
|classification=
*[[String instruments]]
|related=
**[[Pandura]]
**[[Surbahar]]
**[[Rudra veena]]
**[[Saraswati veena]]
**[[Chitra veena]]
**[[Vichitra veena]]
**[[Sarod]]
**[[Sitar]]
**[[Sursingar]]
**[[Tambouras]]
**[[Tanpura|Tambura]]
**[[Kantele]]
}}
[[Image:Veena.jpg|thumb|ಸರಸ್ವತಿ ವೀಣೆ]]
[[ಕರ್ನಾಟಕ ಸಂಗೀತ]] ಪದ್ಧತಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿರುವುದು [[ತಂತಿವಾದ್ಯ|ತಂತಿವಾದ್ಯವಾದ]] ವೀಣೆ. ಬಹಳ ಹಳೆಯ ವಾದ್ಯವಾದ ವೀಣೆಯ [[ವಿನ್ಯಾಸ]] ಅನೇಕ ಶತಮಾನಗಳಿಂದಲೂ ಬದಲಾಗುತ್ತಾ ಬಂದಿದೆ. ಸದ್ಯಕ್ಕೆ ಅತ್ಯಂತ ಜನಪ್ರಿಯ ವಿನ್ಯಾಸಕ್ಕೆ [[ಸರಸ್ವತಿ ವೀಣೆ]] ಎಂದು ಹೆಸರು. ಇದರಲ್ಲಿ ಮೂರು [[ತಂತಿ|ತಂತಿಗಳು]] [[ಹಿತ್ತಾಳೆ|ಹಿತ್ತಾಳೆಯವು]] ಮತ್ತು ಒಂದು ಮುಖ್ಯ ತಂತಿ. ಜೊತೆಗೆ ಮೂರು ಸಹಾಯಕ ತಂತಿಗಳು ಇವೆ.
Line ೫೨ ⟶ ೩೧:
==ಐತರೇಯೋಪನಿಷತ್ತಿನಲ್ಲಿ ವೀಣೆ==
ಐತರೇಯೋಪನಿಷತ್ತಿನಲ್ಲಿ ನಮ್ಮ ದೇಹವನ್ನು ವೀಣೆಯೆಂದು ಉಲ್ಲೇಖಿಸಿದ್ದಾರೆ....
<poem>
ಅಥ ಖಲ್ವಿಯಂ ದೈವೀವೀಣಾ ಭವತಿ | ತದನುಕೃತಿರಸೌ ಮಾನುಷೀ ವೀಣಾ ಭವತಿ |
ಯಥಾಸ್ಯಾ: ಶಿರ ಏವಮಮುಷ್ಯಾ: ಶಿರ: |
ಯಥಾಸ್ಯಾ ಉದರಮೇವಮಮುಷ್ಯಾ ಅಂಭಣಮ್ | ಯಥಾಸ್ಯೈ ಜಿಹ್ವಾ - ಏವಮಮುಷ್ಯೈ ವಾದನಮ್ |
ಯಥಾಸ್ಯಾಸ್ತಂತ್ರಯ ಏವಮಮುಷ್ಯಾ ಅಂಗುಲಯ: | ಯಥಾಸ್ಯಾ: ಸ್ವರಾ ಏವಮಮುಷ್ಯಾ: ಸ್ವರಾ: ||
</poem>
ಈ ದೇಹವೊಂದು ದೈವೀವೀಣೆ. ಮನುಷ್ಯರು ನಿರ್ಮಿಸಿದ ಮರದ ವೀಣೆ ದೇವರು ನಿರ್ಮಿಸಿದ ಈ ದೇಹವೀಣೆಯದೇ ಅನುಕರಣೆ. ದೇಹಕ್ಕೆ ತಲೆಯಿದ್ದಂತೆ ಮರದ ವೀಣೆಗೆ ಪುಟ್ಟ ಬುರುಡೆ ಇದೆ, ದೇಹದ ಉದರ ಹಾಗೂ ಪೀಠವಿದ್ದಂತೆ ವೀಣೆಗೆ ಕೊಡ ಅಥವಾ ದೊಡ್ಡ ಬುರುಡೆಯಿದೆ. ಬೆನ್ನುಹುರಿಯು ಉದ್ದಕ್ಕೆ ದೇಹದಲ್ಲಿ ಪೀಠದಿಂದ ಕಂಠದವರೆಗೆ ಪಸರಿಸಿ ಪೀಠವನ್ನು ಮತ್ತು ದೇಹದ ಕೆಳಗಿನ ಭಾಗದ ಸಂಪರ್ಕವನ್ನು ತಲೆಗೆ ಮುಟ್ಟಿಸಿದೆಯೋ ಹಾಗೆ ವೀಣೆಯಲ್ಲಿ ಮರದ ದೋಣಿ ಕೊಡವನ್ನು ಪುಟ್ಟ ಬುರುಡೆಗೆ ಸೇರಿಸಿದೆ. ಬೆನ್ನುಹುರಿಯಲ್ಲಿರುವಂತೆಯೇ ಈ ದೋಣಿಯ ಮೇಲೆ ಮೇಣವನ್ನು ಕಟ್ಟಿ ಅವುಗಳ ಮೇಲೆ ೨೪ ಎರಕದ ಮೆಟ್ಟಿಲುಗಳನ್ನು ಸ್ವರಸ್ಥಾನಗಳಾಗಿ ಜೋಡಿಸಿರುತ್ತಾರೆ. ದೇಹದ ವೀಣೆಗೆ ನಾಲಿಗೆ ಹೇಗೆ ಸ್ವರ / ನಾದವನ್ನು ಉತ್ಪತ್ತಿ ಮಾಡುವುದೋ ಹಾಗೆ ವೀಣೆಯ ಮೇಲೆ ವಾದಕನ ಬೆರಳುಗಳು ನಾದವನ್ನು ಸೃಷ್ಟಿಸುತ್ತವೆ. ದೇಹಕ್ಕೆ ನರಗಳೇ ತಂತಿಗಳು. ನಾದ ಮೈತುಂಬಿದಾಗ, ನರ ನರವೂ ನಾದದ ಅಲೆಯಲ್ಲಿ ತೇಲಿಹೋಗುವುದು. ಹಾಗೇ ವೀಣೆಯ ತಂತಿಗಳೂ, ವಾದಕನ ಬೆರಳುಗಳು ತಂತಿಯ ಮೇಲೆ ಆಟವಾಡಿದಾಗ, ಅಲೆ ಅಲೆಯಾಗಿ ನಾದ ವೀಣೆಯ ಕೊಡದಿಂದ ಚಿಮ್ಮುತ್ತದೆ. ದೇಹವೆಂಬ ದೈವೀವೀಣೆ ದೇವರ ಗುಣಗಾನಕ್ಕೇ ಮೀಸಲಾದ ವೀಣೆ. ಈ ದೇಹ ವೀಣೆಗೆ ನಮ್ಮ ಕೈಗಳೇ ತಾಳವಾದ್ಯ. ಕೈ ತಟ್ಟಿನ ತಾಳ ತಟ್ಟಿ ದೇಹವೆಂಬ ದಂಡಿಗೆಯಿಂದ ಭಗವಂತನ ಸ್ಮರಣೆಯನ್ನು ನುಡಿಸಬೇಕು.
Line ೭೦ ⟶ ೫೧:
== ಕವಿ ಶ್ರೀ ಸಾ ಶಿ ಮರುಳಯ್ಯ ಅವರ ಕವಿತೆಯಲ್ಲಿ ವೀಣೆ==
ಶೃಂಗಾರ ರಸದ ಪ್ರಚೋದನೆಗೆ ಕೂಡ ವೀಣೆಯನ್ನು ಅತ್ಯಂತ ಸಮರ್ಥವಾಗಿ ಬಿಂಬಿಸಿದ್ದಾರೆ ಕವಿ ಶ್ರೀ ಸಾ ಶಿ ಮರುಳಯ್ಯ. ಅವರು ತಮ್ಮ "ಶ್ರುತಿ ಸುಖ್ಹ ನಿನದೆ ಕಲರವ ವರದೇ.... ಓ ಗೆಳತಿ.. ಘೋಷವತಿ... || ಎಂಬ ರಚನೆಯಲ್ಲಿ ಉದಯನ ನುಡಿಸುತ್ತಿದ್ದನೆನ್ನಲಾದ ಘೋಷವತಿ ಎಂಬ ವೀಣೆಯನ್ನು ಕುರಿತು ಪ್ರಸ್ತಾಪಿಸಿದ್ದಾರೆ.
<poem>
ಉದಯನ ಹೃದಯ ಮೋದ ತರಂಗಿಣಿ | ವಾಸವದತ್ತಾ ಪ್ರಣಯ ಪ್ರಚೋದಿನಿ |
ಕುಂಜರ ಭಂಜನಿ ಕುಮುದ ನಿರಂಜನಿ | ಮಂಗಳ ಪತಗಳ ಮಧುರ ಸುಭಾಷಿಣಿ ||
Line ೭೬ ⟶ ೫೮:
ಪ್ರದ್ಯೋತ್ತೋನ್ನತ ಪ್ರಥಮ ಪ್ರಭಾತಕೆ | ಧೃತಗತಿಯಲಿ ನೀ ಸಂಚಲಿಸಿ |
ರಾಗಿಣಿ ಭಾಮಿನಿ ಪ್ರೇಮೋನ್ಮಾದಿನಿ | ಮಧುಕರ ಮಿಲನಕೆ ನೆರವಾಗೇ ||
</poem>
 
==ವೀಣೆಗೆ ಸಂಬಂಧಪಟ್ಟ ಇತರ ಕೆಲವು ವಾದ್ಯಗಳೆಂದರೆ==
ನುಡಿಸುವ ಉದಯನನ ಹೃದಯದ ತರಂಗಿಣಿ, ರಾಗಿಣಿ, ಭಾಮಿನಿ, ಪ್ರೇಮೋನ್ಮಾದಿನಿ ಎಂದೆಲ್ಲಾ ವರ್ಣಿಸುತ್ತಾ ಚಿಗುರಿನ ಬೆರಳುಗಳು ತಂತಿಯ ಮೀಟಿದಾಗ ಷಡ್ಜದ ಸವಿದನಿಯಿಂದ ಪಂಚಮದ ಪ್ರೇಮನಾದವನ್ನು ಹೊರಡಿಸುತ್ತಾ, ಹೃದಯದಲ್ಲಿ ಸುಖದ ಕಲ್ಪನೆಯ ತರಂಗಗಳನ್ನು ಮೀಟಿ ಎಚ್ಚರಿಸುತ್ತಾ ಮಧುಕರ ಮಿಲನಕ್ಕೆ ನೆರವಾಗೇ ಎಂದು ನುಡಿದಿದ್ದಾರೆ. ವೀಣೆಗೆ ಸಂಬಂಧಪಟ್ಟ ಇತರ ಕೆಲವು ವಾದ್ಯಗಳೆಂದರೆ;
"https://kn.wikipedia.org/wiki/ವೀಣೆ" ಇಂದ ಪಡೆಯಲ್ಪಟ್ಟಿದೆ