ಹೊಯ್ಸಳ ವಾಸ್ತುಶಿಲ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೯ ನೇ ಸಾಲು:
[[File:ಭಾಗವತ.JPG|thumb|ಪಟ್ಟಿಕೆಗಳಲ್ಲಿ ಪುರಾಣ ಕತೆಗಳು(ಭಾಗವತ_ಪೂತನೀ ಸಂಹಾರ)]]
 
ಹೊಯ್ಸಳರ ದೇವಾಲಯದ ಗೋಡೆಗಳ ರಚನೆಯು ಜಗತಿಯ ಒಟ್ಟು ಎತ್ತರದ ಎರಡಷ್ಟಿರುತ್ತದೆ. ಗೋಡೆಗಳ ಮೇಲಿನ ಅಲಂಕಾರವು ತಲಭಾಗದಿಂದ ಆರಂಭವಾಗಿ ಶಿಖರದಲ್ಲಿ ಕೊನೆಗೊಳ್ಳುತ್ತದೆ. ಮೊದಲಿಗೆ ದೇವಾಲಯಗಳ ಸುತ್ತಲೂ ಬಳಸಿ ಬರುವ ಅಲಂಕಾರ ಪಟ್ಟಿಕೆಗಳು ಈ ಗೋಡೆಗಳ ವಿಶಿಷ್ಟತೆ. ಜಗತಿಯ ಬುಡದಿಂದ ಸುಮಾರು ಐದು ಅಡಿಗಳಷ್ಟು ಎತ್ತರದವರೆಗೆ ಒಂದರ ಮೇಲೊಂದರಂತೆ ಪಟ್ಟಿಕೆಗಳು ಕಂಡುಬರುತ್ತದೆ. ಬುಡದಿಂದ ಮೊದಲನೆಯ ಪಟ್ಟಿಯಲ್ಲಿ ಆನೆಗಳ ಸಾಲು ಮತ್ತು ಎರಡನೆಯ ಪಟ್ಟಿಯಲ್ಲಿ ಕುದುರೆಗಳ ಮೇಲೆ ಏರಿ ಹೊರಟಿರುವ ರಾವುತರನ್ನು ನೋಡಬಹುದು. ದೇವಾಲಯದ ಸುತ್ತ ಮೆರವಣಿಗೆ ಹೊರಟಿರುವಂತೆ ಈ ಸಾಲುಗಳು ಕಂಡುಬರುತ್ತವೆ. ಮುಂದಿನ ಪಟ್ಟಿಯಲ್ಲಿ [[ಶಾರ್ದೂಲ]]ಗಳು, ಹಂಸಗಳು ಮತ್ತು ಬಳ್ಳಿಯ ರಚನೆಯು ಕಾಣಸಿಗುತ್ತದೆ. ಈ ಪಟ್ಟಿಗಳು ದೇವಾಲಯದ ಅಂದವನ್ನು ಹೆಚ್ಚಿಸುವಂತಿರುತ್ತದೆ. ಅಗಲದಲ್ಲಿ ಒಂದು ಅಡಿಗಿಂತಲೂ ಕಿರಿದಾಗಿರುವ ಈ ಪಟ್ಟಿಕೆಗಳಲ್ಲಿ ರಾಮಾಯಣ-ಮಹಾಭಾರತದ ಕತೆಗಳೂ ಸಹ ಕೆತ್ತಲ್ಪಟ್ಟಿವೆ. ನಮ್ಮ ಕಣ್ಣಿನ ಮಟ್ಟಕ್ಕೆ ಇವು ಬರುವುದರಿಂದ ಚಿಕ್ಕದಾಗಿದ್ದರೂ ಸ್ಪಷ್ಟವಾಗಿ ನೋಡಿದ ತಕ್ಷಣ ಶಿಲ್ಪಗಳ ಹಿಂದಿನ ಕತೆಯನ್ನು ಅರಿತುಕೊಳ್ಳಬಹುದು. ನಮ್ಮ ತಲೆಯ ಮೇಲಿನ ಅಥವಾ ನಮಗಿಂತಲೂ ಎತ್ತರದಲ್ಲಿರುವ ಗೋಡೆಯ ಸಾಲನ್ನು ದೊಡ್ಡ ವಿಗ್ರಹಗಳಿಂದ ಅಲಂಕಾರಿಸಲಾಗಿದೆ. ಪಟ್ಟಿಕೆಯ ಕೊಲೆಯ ಸಾಲಿನಲ್ಲಿ [[ಕಾಮಸೂತ್ರ]]ದ ವಿವಿಧ ಚಿತ್ರಗಳನ್ನು ತೊರಿಸಲಾಗಿದೆ ನೋಡುಗನ ಒಳತೋಟಿಯನ್ನು ಶಿಲ್ಪಿಗಳು ಅದೆಷ್ಟು ಚೆನ್ನಾಗಿ ಬಲ್ಲವರಾಗಿದ್ದರು ಎಂದು ಇಲ್ಲಿ ತಿಳಿಯಬಹುದು. ಪೂರ್ವ ಭಾಗದಲ್ಲಿ ಪಟ್ಟಿಕೆಗಳನ್ನು ಬಿಟ್ಟರೆ ದೊಡ್ಡ ವಿಗ್ರಹಗಳು ಕಂಡುಬರುವುದಿಲ್ಲ. ಗೋಡೆಗಳನ್ನು ರಚಿಸುವುದರ ಬದಲು ಆ ಸ್ಥಳದಲ್ಲಿ ದೊಡ್ದ ಕಿಟಕಿಗಳನ್ನು (ಜಾಲಂಧ್ರ) ನಿರ್ಮಿಸಲಾಗಿರುತ್ತದೆ. ಗಾಳಿ ಮತ್ತು ಬೆಳಕಿನ ವೈಜ್ಞಾನಿಕ ವ್ಯವಸ್ಥೆಗೆ ಇದೊಂದು ನಿದರ್ಶನ. ದೇವಾಲಯಗಳ ಪಶ್ಚಿಮದ ಭಾಗವು ವಿಗ್ರಹಗಳಿಂದ ಅಲಂಕೃತವಾಗಿ ಪೂರ್ಣ ಮುಚ್ಚಲ್ಪಟ್ಟಿರುತ್ತದೆ. ದೇವಾಲಯದ ನಕ್ಷತ್ರಾಕಾರದ ರಚನೆ ಮತ್ತು ಗೋಡೆಯ ಮೇಲಿನ ಅಲಂಕಾರವು ದೇವಾಲಯದ ಒಟ್ಟಂದವನ್ನು ಹೆಚ್ಚಿಸಿ ಶಿಲ್ಪ ಸೌಂದರ್ಯವನ್ನು ಎತ್ತಿ ತೋರಿಸಲು ಸಹಾಯಕವಾಗುತ್ತದೆ.
 
=== ಶಿಖರಗಳ ರಚನೆ===