ತ್ಯಾಗರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ತ್ಯಾಗರಾಜ ಆರಾಧನೆ: clean up, replaced: ಅಥವ → ಅಥವಾ using AWB
No edit summary
೧ ನೇ ಸಾಲು:
[[ಚಿತ್ರ:Tyagaraja.jpg|thumbnail|right|ಶ್ರೀ ತ್ಯಾಗರಾಜರು (೧೭೬೭? - ೧೮೪೭)]]
 
'''ಶ್ರೀ ತ್ಯಾಗರಾಜರು''' (ತೆಲುಗು:త్యాగరాజు) [[ಕರ್ನಾಟಕ ಸಂಗೀತ]] ಪದ್ಧತಿಯ ಮುಖ್ಯ ರಚನಕಾರರಲ್ಲಿ ಒಬ್ಬರು. [[ಮುತ್ತುಸ್ವಾಮಿ ದೀಕ್ಷಿತ]] ಮತ್ತು [[ಶ್ಯಾಮಾ ಶಾಸ್ತ್ರಿ]] ಇವರ ಜೊತೆಯಲ್ಲಿ ಕರ್ನಾಟಕ ಸಂಗೀತದ ತ್ರಿಮೂರ್ತಿಗಳಲ್ಲಿ ಒಬ್ಬರು. ಅವರು ಶ್ರೀರಾಮನ ಪರಮ ಭಕ್ತರಾಗಿದ್ದರು. ದಕ್ಷಿಣ ಭಾರತದ ಎಲ್ಲ ಮುಖ್ಯ ದೇವಸ್ಥಾನಗಳಿಗೆ ಭೇಟಿಯಿತ್ತ ತ್ಯಾಗರಾಜರು ಅಲ್ಲಿನ ದೇವ-ದೇವತೆಗಳ ಬಗ್ಗೆ ಕೃತಿಗಳನ್ನು ರಚಿಸಿದ್ದಾರೆ. ಸುಮಾರು ಏಳುನೂರು ಕೃತಿಗಳನ್ನು ರಚಿಸಿರುವ ತ್ಯಾಗರಾಜರು ಕರ್ನಾಟಕ ಸಂಗೀತದ ಮೂಲಪುರುಷರಲ್ಲಿ ಒಬ್ಬರೆಂದು ಪರಿಗಣಿತರಾಗಿದ್ದಾರೆ.
== ಜೀವನ ==
ಮೇ ೪, ೧೭೬೭ (ಕೆಲವು ಚರಿತ್ರಜ್ಞರ ಪ್ರಕಾರ ೧೭೫೯) ರಲ್ಲಿ ತಂಜಾವೂರು ಜಿಲ್ಲೆಯ ತಿರುವಾರೂರಿನಲ್ಲಿ ರಾಮಬ್ರಹ್ಮಮ್ ಮತ್ತು ಸೀತಮ್ಮನವರ ಪುತ್ರರಾಗಿ ತ್ಯಾಗರಾಜರು ಜನಿಸಿದರು. ಇವರ ಅಜ್ಜ ಗಿರಿರಾಜ ಕವಿ ತಂಜಾವೂರಿನ ಆಸ್ಥಾನದಲ್ಲಿ ಕವಿ-ಸಂಗೀತಗಾರರಾಗಿದ್ದರು. ತ್ಯಾಗರಾಜರ ಮೊದಲ ಪತ್ನಿ ಪಾರ್ವತಮ್ಮ - ಇವರ ನಿಧನದ ನಂತರ ಕಮಲಾಂಬಾರನ್ನು ಮದುವೆಯಾದರು.
"https://kn.wikipedia.org/wiki/ತ್ಯಾಗರಾಜ" ಇಂದ ಪಡೆಯಲ್ಪಟ್ಟಿದೆ