ಕಾವೇರಿ ನದಿಯ ಮೇಕೆದಾಟು ಅಣೆಕಟ್ಟು ಯೋಜನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೨ ನೇ ಸಾಲು:
 
==ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಕರ್ನಾ­ಟಕದ ಯೋಜನೆ==
[[File:ಕಾವೇರಿ ನದಿ ಮೇಕೆದಾಟು.png|thumb]]
*ಕೃಷ್ಣರಾಜ­ಸಾಗರ ಜಲಾಶಯದ ಕೆಳಭಾಗದಿಂದ ತಮಿಳುನಾಡಿನ ಗಡಿಯವರೆಗೆ ಕಾವೇರಿ ನದಿಯ ಜಲಾನಯನ ಪ್ರದೇಶ ೨೩,೨೩೧ ಚದರ ಕಿ.ಮೀ. ಕೆ.ಆರ್.ಎಸ್. ಜಲಾಶಯದ ಕೆಳಭಾಗದಲ್ಲಿನ ಅಚ್ಚುಕಟ್ಟು ಪ್ರದೇಶದಲ್ಲಿ ಗಣನೀಯ ಪ್ರಮಾಣದ ಬಸಿ ನೀರು ಉತ್ಪತ್ತಿಯಾಗುತ್ತಿದ್ದು, ಇದು ಸಹ ಕಾವೇರಿ ನದಿಯೊಂದಿಗೆ ತಮಿಳುನಾಡನ್ನು ಸೇರುತ್ತದೆ. ಈ ಹರಿವಿನ ಮೇಲೂ ಕರ್ನಾಟಕಕ್ಕೆ ಯಾವುದೇ ನಿಯಂತ್ರಣ ಇಲ್ಲದಿರುವುದರಿಂದ, ನ್ಯಾಯ ಮಂಡಳಿಯಿಂದ ನಿಗದಿಯಾದ ಪ್ರಮಾಣಕ್ಕಿಂತಲೂ ಹೆಚ್ಚಿನ ನೀರು ತಮಿಳುನಾಡಿಗೆ ಬಿಡುಗಡೆಯಾಗುತ್ತದೆ.
*ಹೀಗಾಗಿ ಇಂತಹ ಹೆಚ್ಚುವರಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಮೇಕೆದಾಟುವಿನ ಮೇಲ್ಭಾಗದಲ್ಲಿ ಶೇಖರಣಾ ಜಲಾಶಯಗಳನ್ನು ನಿರ್ಮಿಸಲು ಕರ್ನಾಟಕ ಚಿಂತಿಸುತ್ತಿದೆ. ಇದರಿಂದ ಕೆ.ಆರ್.ಎಸ್ ಮತ್ತು ಕಬಿನಿ ಜಲಾಶಯದ ಕೆಳಭಾಗದ ಅನಿಯಂತ್ರಿತ ಜಲಾನಯನ ಪ್ರದೇಶದಲ್ಲಿ ಹೆಚ್ಚುವರಿ ನೀರು ಸಂಗ್ರಹವಾಗುತ್ತದೆ. ಆಗ ಮೇಲ್ಭಾಗದ ಜಲಾಶಯಗಳಾದ ಕೆ.ಆರ್.ಎಸ್., ಕಬಿನಿ, ಹೇಮಾವತಿ, ಹಾರಂಗಿಯಿಂದ ಬಿಡಬೇಕಾದ ನೀರನ್ನು ನಿಯಂತ್ರಿಸುವಲ್ಲಿ ಇರುವ ಒತ್ತಡವನ್ನು ಸಹ ಕಡಿಮೆ ಮಾಡಬಹುದಾಗಿದೆ.