ಎಸ್. ಜಾನಕಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪ ನೇ ಸಾಲು:
| caption = ಜಾನಕಿಯವರ ೨೦೦೭ರ ವರ್ಷದ ಚಿತ್ರ
| alias = ಅಮ್ಮ, ಕರ್ನಾಟಕ ಕೋಗಿಲೆ
| image_size = 250px250px9
| birth_name =
| birth_date = ಏಪ್ರಿಲ್ ೨೩, ೧೯೩೮
೧೭ ನೇ ಸಾಲು:
*ದಕ್ಷಿಣ ಭಾರತದ ಪ್ರಸಿದ್ಧ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ೨೩ನೇ ಏಪ್ರಿಲ್ ೧೯೩೮ರ ವರ್ಷದಲ್ಲಿ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೇ ಎಂಬ ಗ್ರಾಮದಲ್ಲಿ, ತೆಲುಗು ಬ್ರಾಹ್ಮಣೀಯ ಕುಟುಂಬವೂಂದರಲ್ಲಿ ಜನಿಸಿದರು. ತಮ್ಮ ಮೂರನೆಯ ವಯಸ್ಸಿನಲ್ಲೇ ಸಂಗೀತಗಾರ್ತಿಯ ಸಕಲ ಸುಲಕ್ಷಣಗಳನ್ನೂ ಹೊರ ಹೊಮ್ಮಿಸಿದ ಬಾಲಕಿ ಜಾನಕಿ, ನಾದಸ್ವರ ವಿದ್ವಾನ್ ಶ್ರೀ ಪೈದಿಸ್ವಾಮಿ ಎಂಬವರಲ್ಲಿ ಸಂಗೀತಾಭ್ಯಾಸವನ್ನು ಪ್ರಾರಂಭಿಸಿದರು.
*೧೯೫೬ರ ವರ್ಷದಲ್ಲಿ ಆಕಾಶವಾಣಿ ನಡೆಸಿದ ಸಂಗೀತ ಸ್ಪರ್ಧೆಗಳಲ್ಲಿ ರಾಷ್ಟ್ರಪತಿ ಬಾಬು ರಾಜೇಂದ್ರ ಪ್ರಸಾದ್ ಅವರಿಂದ ಬಹುಮಾನ ಸ್ವೀಕರಿಸಿದ ಜಾನಕಿ, ಮುಂದೆ ಚೆನ್ನೈಗೆ ಬಂದು ಸಂದರ್ಶನವೂಂದರಲ್ಲಿ ಲತಾ ಮಂಗೇಶ್ಕರ್ ಅವರ ‘ರಸಿಕ್ ಬಲಮಾ’ ಎಂಬ ಸುಪ್ರಸಿದ್ಧ ಗೀತೆಯನ್ನು ಮನೋಜ್ಞವಾಗಿ ಹಾಡಿ ಪ್ರಸಿದ್ಧ ಎವಿಎಮ್ ಸಂಸ್ಥೆಯವರ ಕಾಂಟ್ರಾಕ್ಟ್ ಪಡೆದರು.
== ಹಿನ್ನೆಲೆ ಗಾಯಕಿಯಾಗಿ ==
 
===ಚಲನಚಿತ್ರ ರಂಗದ ಪ್ರಾರಂಭದ ವರ್ಷಗಳು===
*೧೯೫೭ರಲ್ಲಿ ಪ್ರಸಿದ್ಧ ಸಂಗೀತ ನಿರ್ದೇಶಕ ಟಿ.ಚಲಪತಿ ರಾವ್ ಅವರ ತಮಿಳು ಚಿತ್ರ ‘ವಿಧಿಯಿನ್ ವಿಳಯಾಟ್ಟು’ ಅವರು ಹಾಡಿದ ಪ್ರಥಮ ಚಿತ್ರ. ಮುಂದೆ ತೆಲುಗಿನ ಚಿತ್ರ ಎಂ.ಎಲ್.ಎ, ಕನ್ನಡದ ಕೃಷ್ಣಗಾರುಡಿ ಇವೆಲ್ಲಾ ಒಂದಾದ ನಂತರ ಒಂದೊಂದರಂತೆ ಹರಿದು ಬರಲು ಪ್ರಾರಂಭವಾದುವು. ಮಲಯಾಳಂ ಚಿತ್ರಗಳಲ್ಲಿ ಕೂಡಾ ಹಾಡಲು ಪ್ರಾರಂಭಿಸಿದರು. ಹೀಗೆ ಅವರು ದಕ್ಷಿಣ ಭಾರತದ ಎಲ್ಲಾ ಪ್ರಧಾನ ಭಾಷೆಗಳ ಗಾಯಕಿಯಾದರು.
*ಜೊತೆಗೆ ಹಿಂದಿಯನ್ನೊಳಗೊಂಡಂತೆ ಭಾರತದ ಬಹಳಷ್ಟು ಭಾಷೆಗಳಲ್ಲಿ ತಮ್ಮ ಗಾನಮಾಧುರ್ಯದ ಸವಿಯನ್ನು ಬಿತ್ತರಿಸಿದರು. ತಮಿಳಿನಲ್ಲಿ ೧೯೫೮ರ ಸುಮಾರಿನಲ್ಲಿ ಅವರು ಹಾಡಿದ ‘ಸಿಂಗಾರವೇಲನೆ ದೇವ’ ಎಂಬ ಮಹಾನ್ ನಾದಸ್ವರ ವಿದ್ವಾನ್ ಅರುಣಾಚಲಂ ಅವರ ನಾದ ಸ್ವರ ದೊಂದಿಗೆ ಮೇಳೈಸಿ ಹಾಡಿದ ಗೀತೆ ಪ್ರಾರಂಭದ ವರ್ಷಗಳಲ್ಲೇ ಅವರನ್ನು ಅಪ್ರತಿಮ ಗಾಯಕಿ ಎಂದು ಇಡೀ ದೇಶ ಗುರುತಿಸುವಂತೆ ಮಾಡಿತು.
*ಕನ್ನಡ ಚಿತ್ರ 'ಹೇಮಾವತಿ'ಯಲ್ಲಿ ಅವರು ಹಾಡಿರುವ "ಶಿವ ಶಿವ ಎನ್ನದ ನಾಲಿಗೆ ಏಕೆ?" ಎಂಬ ಅನನ್ಯಗೀತೆಯು ಇಡೀ ಭಾರತ ದೇಶದ ಅತ್ಯಂತ ತ್ರಾಸದಾಯಕ ಗೀತೆ ಎನಿಸಿದೆ. ಜಾನಕಿಯವರು 'ಈ ಹಾಡು ನನ್ನ ಸಂಗೀತ ಜೀವನದಲ್ಲಿ ಭಯಪಟ್ಟು ಹಾಡಿದ ಹಾಡು, ಮತ್ತೆ ಹಾಡಲೂ ಆಗದ ಹಾಡು' ಎಂದು ಹೇಳುತ್ತಾರೆ. ಆ ನಂತರದಲ್ಲಿ ಅವರು ಹಾಡಿರುವ ಗೀತೆಗಳ ಸಂಖ್ಯೆ ೪೦,೦೦೦ವನ್ನು ಮೀರಿದೆ.
 
===ನಾನು ಹಾಡುವುದೇ ಇಲ್ಲ ! ಆತನ ಕಾಯಕವದು===
*ಒಮ್ಮೆ ಒಂದು ಸಂದರ್ಶನದಲ್ಲಿ ಅವರೊಂದಿಗೆ ಬಹಳಷ್ಟು ವರ್ಷಗಳವರೆಗೆ ಹಾಡುತ್ತ ಬಂದಿರುವ ಡಾ. ಎಸ್. ಪಿ. ಬಾಲಸುಬ್ರಮಣ್ಯಂ ಹೇಳುತ್ತಿದ್ದರು, “ನಮ್ಮ ಜಾನಕಮ್ಮ ಇದ್ದಾರಲ್ಲ ಅವರು ಯಾವುದೇ ಗೀತೆಯನ್ನಾಗಲೀ ಒಂದೇ ಪ್ರಾರಂಭದಲ್ಲಿ ತೆಗೆದುಕೊಳ್ಳುವ ರೀತಿ, ತಮ್ಮ ಉಸಿರನ್ನು ಅತ್ಯಂತ ಆಳವಾಗಿ ಗಾನಲಯದಲ್ಲಿ ಸುಲಲಿತವಾಗಿ ಬೆರೆಸುವ ರೀತಿ ಇದೆಯೆಲ್ಲಾ ಅದೊಂದು ಅಸಾಮಾನ್ಯವಾದ ಸಂಗತಿ”.
* ಹಾಡುವ ಪ್ರಾರಂಭದಲ್ಲಿ ಯಾವುದೇ ಹಮ್ಮು, ಬಿಮ್ಮುಗಳ, ಕೆಮ್ಮಿನ ಸಣ್ಣ ಆಚೆ ಈಚೆಗಿನ ಧ್ವನಿಯನ್ನು ಕೂಡಾ ಅವರು ಎಲ್ಲಿಯೂ ಉಂಟು ಮಾಡುವುದಿಲ್ಲ ಎಂಬ ಪ್ರತೀತಿ ಇದೆ. ಎಸ್. ಜಾನಕಿ ಹೇಳುತ್ತಾರೆ- ‘ನಾನು ಯಾವುದೇ ವಿಶೇಷ ತಯಾರಿಯನ್ನಾಗಲೀ ಆರೈಕೆಯನ್ನಾಗಲಿ ನನ್ನ ಧ್ವನಿಗೆ ಮಾಡಿಕೊಳ್ಳುವುದಿಲ್ಲ.” ಅವರು ಹೇಳುವ ಮತ್ತೊಂದು ಮಾತು ಅವರ ಎಲ್ಲಾ ಸಾಧನೆಗಳ ಗುಟ್ಟು.
* ಪರಮಾತ್ಮ ಶ್ರೀಕೃಷ್ಣ ಮತ್ತು ಶಿರಡಿ ಸಾಯಿಬಾಬಾ ಅವರ ಭಕ್ತರಾದ ಆಕೆ ಕೇಳುತ್ತಾರೆ “ನಾನು ಹೇಗೆ ಹಾಡುತ್ತೇನೆ ಗೊತ್ತೇ?”, “ಸತ್ಯ ಹೇಳಬೇಕೆಂದರೆ, ನಾನು ಹಾಡುವುದೇ ಇಲ್ಲ. ಶ್ರೀಕೃಷ್ಣ, ಆ ನನ್ನ ಅಂತರಂಗದ ದೈವನಾದ ಆತನ ಕಾಯಕವದು”.
 
===ಮನಮೋಹಕ ಗೀತೆಗಳು===
*ಎಸ್. ಜಾನಕಿ ಅವರ ಬಗ್ಗೆ ಹೇಳಬೇಕೆಂದರೆ ಮಹಾಸಾಗರದ ಆಳವನ್ನು ಅರಸ ಹೊರಟಂತೆ. ಅವರ ಹಾಡುಗಳ ಬಗ್ಗೆ ಹೇಳುವಾಗ ಈ ಕ್ಷಣಕ್ಕೆ ಬಂದ ನೆನಪುಗಳನ್ನು ಹೇಳಬಹುದೇ ವಿನಃ ಅವರು ಹಾಡಿರುವ ಶ್ರೇಷ್ಠ ಗೀತೆಗಳ ಒಂದು ಸಣ್ಣ ಅಳತೆಯನ್ನು ಕೂಡಾ ನಾವು ಕ್ರಮಿಸಲಾರೆ ವೇನೋ.
# ‘ನೋಡು ಬಾ ನೋಡು ಬಾ ನಮ್ಮೂರ’,
೬೫ ನೇ ಸಾಲು:
# ‘ಇವಳೇ ವೀಣಾಪಾಣಿ’ ಮುಂತಾದ ಹಾಡುಗಳಂತೂ ಎಲ್ಲೆಲ್ಲೂ ಭಕ್ತಿಯಿಂದ ತುಂಬಿ ತುಳುಕಿದೆ.
 
===ಡಾ. ಎಸ್.ಜಾನಕಿ ಕಂಠದಲ್ಲಿರುವ ಕೆಲವು ಪ್ರಸಿದ್ಧ ಗೀತೆಗಳು===
# ಕಂಗಳು ತುಂಬಿರಲು - [[ಚಂದನದ ಗೊಂಬೆ]]
# ಕರೆಯೆ ಕೋಗಿಲೆ ಮಾಧವನ - [[ನವಜೀವನ]]<BR>
೧೦೦ ನೇ ಸಾಲು:
ಇತರ ಭಾಷೆಗಳಲ್ಲಿರುವ ನನ್ನ ಅಲ್ಪ ಜ್ಞಾನದಲ್ಲಿ ಕೂಡಾ ಪದಿನಾರು ವಯದಿನಿಲೆ ಚಿತ್ರದ ‘ಸಿಂಧೂರ ಪೂವೆ’, ಶಂಕರಾಭರಣಂ ಚಿತ್ರದ ‘ಸಾಮಜವರಗಮನ’, ‘ಶಂಕರಾಭರಣಮು’; ಸಾಗರಸಂಗಮಂ ಚಿತ್ರದ ‘ಬಾಲ ಕನಕಮಯ ಚೇಲ ಸುಜನಪರಿಪಾಲ’, ‘ಓಂ ನಮಃ ಶಿವಾಯ ಚಂದ್ರ ಕಳಾಧರ ಸಹೃದಯ’ ಇವೆಲ್ಲಾ ಮನಸ್ಸಿನಲ್ಲಿ ಸ್ಥಿರವಾಗಿ ನಿಂತಿರುವ ಹಾಡುಗಳು.
 
===ವಾದ್ಯ ನಾದದೊಡನೆ ಗಾನ ಮೆಳೈಸಿ===
ತಮಿಳಿನಲ್ಲಿ ಕರೈಕುರುಚ್ಚಿ ಅರುಣಾಚಲಂ ಅವರ ನಾದಸ್ವರದೊಂದಿಗೆ ತಮ್ಮ ಸ್ವರ ಮೇಳೈಸಿ ಅದ್ಭುತವಾಗಿ ಮೂಡಿಸಿದ ಸಿಂಗಾರವೇಲನೆ ದೇವ ಹಾಡಿನಂತೆ, ಕನ್ನಡದಲ್ಲಿ ಬಿಸ್ಮಿಲ್ಲಾ ಖಾನ್ ಅವರ ಶಹನಾಯ್ ಜೊತೆ ತಮ್ಮ ಗಾನವನ್ನು ಮೇಳೈಸಿ ಹೊರತಂದ ‘ಕರೆದರು ಕೇಳದೆ’ ಗೀತೆ ಕೂಡಾ ಒಂದು ಅಪೂರ್ವ ಗಾಯನವೇ ಸರಿ. ಇಂತಹದ್ದೇ ರೀತಿಯಲ್ಲಿ ಎಸ್ ಜಾನಕಿ ಅವರು ಎಂ.ಎಸ್. ಗೋಪಾಲಕೃಷ್ಣನ್ ಅವರ ಪಿಟೀಲು ವಾದನ, ನಾಮಗಿರಿ ಪೇಟೆ ಕೃಷ್ಣನ್ ನಾದಸ್ವರ ಮತ್ತು ಹರಿಪ್ರಸಾದ್ ಚೌರಾಸಿಯಾ ಅವರ ವೇಣುವಾದನದ ಜೊತೆ ಕೂಡಾ ತಮ್ಮ ಗಾನ ಮಾಧುರ್ಯವನ್ನು ಮೇಳೈಸಿದ್ದಾರೆ.
 
===ತಮ್ಮ ಗಾಯನವನ್ನು ನಿಲ್ಲಿಸುವ ನಿರ್ಧಾರ===
*ಹಿರಿಯ ಗಾಯಕಿ ಎಸ್‌. ಜಾನಕಿ ಅವರು ತಮ್ಮ ಗಾಯನವನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ. ಮಲಯಾಳದ ‘10 ಕಲ್ಪನಕಳ್‌’ ಚಿತ್ರದ ‘ಅಮ್ಮಪೂವಿನು’ ಗೀತೆ ಅವರ ವೃತ್ತಿ ಬದುಕಿನ ಕೊನೆಯ ಹಾಡಾಗಲಿದೆ.<ref>[http://www.prajavani.net/news/article/2016/09/22/439766.html ಹಾಡು ನಿಲ್ಲಿಸಲಿರುವ ಗಾನ ಕೋಗಿಲೆ], ಪ್ರಜಾವಾಣಿ ವಾರ್ತೆ 22 Sep, 2016</ref> 1957ರಲ್ಲಿ ತೆರೆಕಂಡ ತಮಿಳು ಚಿತ್ರ ‘ವಿಧಿಯಿನ್‌ ವಿಳಯತ್ತು’ ಚಿತ್ರದ ಮೂಲಕ ಹಿನ್ನೆಲೆ ಗಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ ಜಾನಕಿ ಕನ್ನಡ, ತಮಿಳು, ತೆಲುಗು, ಮಲಯಾಳ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಗೀತೆಗಳಿಗೆ ದನಿಯಾಗಿದ್ದಾರೆ. *‘ನನಗೆ ವಯಸ್ಸಾಯಿತು. ಈವರೆಗೆ ಹಲವು ಭಾಷೆಗಳಲ್ಲಿ ಹಾಡಿದ್ದೇನೆ. ನನಗೀಗ ವಿಶ್ರಾಂತಿ ಬೇಕಿದೆ. ನಾನು ಹಾಡುವುದನ್ನು ಇನ್ನು ನಿಲ್ಲಿಸುತ್ತೇನೆ’ ಎಂದು 78 ವರ್ಷದ ಜಾನಕಿ ಹೇಳಿದ್ದಾರೆ.
*ಜಾನಕಿ ಅವರು ನಾಲ್ಕು ಬಾರಿ ರಾಷ್ಟ್ರೀಯ ಪ್ರಶಸ್ತಿ, 32 ಬಾರಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.<ref name ="ViKa1"/>
"https://kn.wikipedia.org/wiki/ಎಸ್._ಜಾನಕಿ" ಇಂದ ಪಡೆಯಲ್ಪಟ್ಟಿದೆ