ಎಸ್. ಜಾನಕಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೭ ನೇ ಸಾಲು:
*ದಕ್ಷಿಣ ಭಾರತದ ಪ್ರಸಿದ್ಧ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ೨೩ನೇ ಏಪ್ರಿಲ್ ೧೯೩೮ರ ವರ್ಷದಲ್ಲಿ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೇ ಎಂಬ ಗ್ರಾಮದಲ್ಲಿ, ತೆಲುಗು ಬ್ರಾಹ್ಮಣೀಯ ಕುಟುಂಬವೂಂದರಲ್ಲಿ ಜನಿಸಿದರು. ತಮ್ಮ ಮೂರನೆಯ ವಯಸ್ಸಿನಲ್ಲೇ ಸಂಗೀತಗಾರ್ತಿಯ ಸಕಲ ಸುಲಕ್ಷಣಗಳನ್ನೂ ಹೊರ ಹೊಮ್ಮಿಸಿದ ಬಾಲಕಿ ಜಾನಕಿ, ನಾದಸ್ವರ ವಿದ್ವಾನ್ ಶ್ರೀ ಪೈದಿಸ್ವಾಮಿ ಎಂಬವರಲ್ಲಿ ಸಂಗೀತಾಭ್ಯಾಸವನ್ನು ಪ್ರಾರಂಭಿಸಿದರು.
*೧೯೫೬ರ ವರ್ಷದಲ್ಲಿ ಆಕಾಶವಾಣಿ ನಡೆಸಿದ ಸಂಗೀತ ಸ್ಪರ್ಧೆಗಳಲ್ಲಿ ರಾಷ್ಟ್ರಪತಿ ಬಾಬು ರಾಜೇಂದ್ರ ಪ್ರಸಾದ್ ಅವರಿಂದ ಬಹುಮಾನ ಸ್ವೀಕರಿಸಿದ ಜಾನಕಿ, ಮುಂದೆ ಚೆನ್ನೈಗೆ ಬಂದು ಸಂದರ್ಶನವೂಂದರಲ್ಲಿ ಲತಾ ಮಂಗೇಶ್ಕರ್ ಅವರ ‘ರಸಿಕ್ ಬಲಮಾ’ ಎಂಬ ಸುಪ್ರಸಿದ್ಧ ಗೀತೆಯನ್ನು ಮನೋಜ್ಞವಾಗಿ ಹಾಡಿ ಪ್ರಸಿದ್ಧ ಎವಿಎಮ್ ಸಂಸ್ಥೆಯವರ ಕಾಂಟ್ರಾಕ್ಟ್ ಪಡೆದರು.
 
== ಹಿನ್ನೆಲೆ ಗಾಯಕಿಯಾಗಿ ==
ಐವತ್ತೊಂಬತ್ತು ವರ್ಷಗಳ ಅವಧಿಯಲ್ಲಿ ಅವರು ಸುಮಾರು 48 ಸಾವಿರ ಗೀತೆಗಳನ್ನು ಹಾಡಿದ್ದಾರೆ. ಭಾರತದ ಪ್ರಮುಖ ಭಾಷೆಗಳು ಸೇರಿದಂತೆ ಸಿಂಹಳ, ಜಪಾನಿ, ಲ್ಯಾಟಿನ್‌, ಅರೇಬಿಕ್‌ ಒಳಗೊಂಡಂತೆ ಹದಿನೇಳು ಭಾಷೆಗಳಲ್ಲಿ ಹಾಡಿದ ಅಗ್ಗಳಿಕೆ ಅವರದು.
 
===ಚಲನಚಿತ್ರ ರಂಗದ ಪ್ರಾರಂಭದ ವರ್ಷಗಳು===
*೧೯೫೭ರಲ್ಲಿ ಪ್ರಸಿದ್ಧ ಸಂಗೀತ ನಿರ್ದೇಶಕ ಟಿ.ಚಲಪತಿ ರಾವ್ ಅವರ ತಮಿಳು ಚಿತ್ರ ‘ವಿಧಿಯಿನ್ ವಿಳಯಾಟ್ಟು’ ಅವರು ಹಾಡಿದ ಪ್ರಥಮ ಚಿತ್ರ. ಮುಂದೆ ತೆಲುಗಿನ ಚಿತ್ರ ಎಂ.ಎಲ್.ಎ, ಕನ್ನಡದ ಕೃಷ್ಣಗಾರುಡಿ ಇವೆಲ್ಲಾ ಒಂದಾದ ನಂತರ ಒಂದೊಂದರಂತೆ ಹರಿದು ಬರಲು ಪ್ರಾರಂಭವಾದುವು. ಮಲಯಾಳಂ ಚಿತ್ರಗಳಲ್ಲಿ ಕೂಡಾ ಹಾಡಲು ಪ್ರಾರಂಭಿಸಿದರು. ಹೀಗೆ ಅವರು ದಕ್ಷಿಣ ಭಾರತದ ಎಲ್ಲಾ ಪ್ರಧಾನ ಭಾಷೆಗಳ ಗಾಯಕಿಯಾದರು.
Line ೧೦೮ ⟶ ೧೧೧:
 
==ಪ್ರಶಸ್ತಿ ಗೌರವಗಳು==
ಆರು ದಶಕಗಳ ಹಾಡುಗಾರಿಕೆಯ ಸಾಧನೆ ಜಾನಕಿ ಅವರಿಗೆ ಹಲವು ಗೌರವಗಳನ್ನು ತಂದುಕೊಟ್ಟಿದೆ. ನಾಲ್ಕು ರಾಷ್ಟ್ರ ಪ್ರಶಸ್ತಿಗಳು, ಸುಮಾರು ಮೂವತ್ತು ರಾಜ್ಯ ಪ್ರಶಸ್ತಿಗಳು ಅವರ ಗಾಯನಕ್ಕೆ ದೊರೆತಿವೆ.
# ಮೈಸೂರು ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ಇತ್ತು ಸನ್ಮಾನಿಸಿದೆ.
# ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ೨೦೧೪ <ref>[http://vijaykarnataka.indiatimes.com/state/karnataka/59-/articleshow/44987679.cms 59 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ], ವಿಜಯಕರ್ನಾಟಕ, ೨೧ಅಕ್ಟೋಬರ್೨೦೧೪ </ref>
"https://kn.wikipedia.org/wiki/ಎಸ್._ಜಾನಕಿ" ಇಂದ ಪಡೆಯಲ್ಪಟ್ಟಿದೆ