ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೨೦ ನೇ ಸಾಲು:
[[File:Rama in forest.jpg|thumb|250px|left|Rama portrayed as exile in the forest, accompanied by his wife Sita and brother Lakshmana]]
[[File:Hanuman meets Sri Rama in Forest.jpg|thumb|250px|Hanuman meets Sri Rama in Forest]]
[[File:Srisita ram laxman hanuman manor.JPG|right|200px|thumb|[[Sita]] (far right), Rama (center), [[Lakshmana]] (far left) and [[Hanuman]] (below seated) at [[Bhaktivedanta Manor]], a temple in Watford (England)]]
 
[[File:Avatars.jpg|thumb|200px|Rama (left third from top) depicted in the [[Dashavatara]] (ten avatars) of Vishnu. Painting from [[Jaipur]], now at the [[Victoria and Albert Museum]].]]
[[File:Ravivarmapress Rama family.jpg|upright|thumb|200px|Rama with Sita on the throne, their children Lava and Kusha on their laps. Behind the throne, Lakshamana, Bharata and Shatrughna stand. Hanuman bows to Rama before the throne. Valmiki to the left]]
[[File:Rameshvaram lingam.jpg|thumb|left|200px|Rama and [[Sita]] worship the [[Shiva|Shiva Lingam]] at [[Rameswaram]], as his companions [[Vibhishana]] (right) looks on with [[Lakshman|Lakshamana]], [[Tumburu]] and [[Narada]] along with the Vanar Sena.]]
[[File:Ramanathar-temple.jpg|thumbnail|200px|[[Ramanathaswamy Temple]], [[Rameswaram]] ]]
 
'''ಶ್ರೀ ರಾಮಚಂದ್ರ''' ಎನ್ನುವುದು '''ಶ್ರೀರಾಮ'''ನ ಪೂರ್ಣ ಹೆಸರು. ವಿಷ್ಣುವಿನ ಏಳನೆಯ ಅವತಾರವೆಂದು ನಂಬಲಾಗಿದೆ. [[ಭಾರತ|ಭಾರತದಲ್ಲಿ]] ರಾಮನ ಆಳ್ವಿಕೆಯ ಕಾಲ ಅತ್ಯಂತ ಸುಭಿಕ್ಷವಾಗಿದ್ದು, ನ್ಯಾಯ, ನೀತಿಗಳಿಂದ ಕೂಡಿದ್ದವೆಂದು ತಿಳಿದು ಬರುತ್ತದೆ. [[ಅಯೋಧ್ಯೆ|ಅಯೋಧ್ಯೆಯ]] ರಾಜನಾಗಿದ್ದ [[ದಶರಥ|ದಶರಥನ]] ನಾಲ್ಕು ಜನ ಮಕ್ಕಳಲ್ಲಿ ಹಿರಿಯನು ರಾಮ. ಆತನ ತಾಯಿ [[ ಕೌಸಲ್ಯೆ]]. ಲಕ್ಷ್ಮಣ, ಭರತ, ಶತ್ರುಘ್ನರು ಆತನ ತಮ್ಮಂದಿರು. ಭರತನ ತಾಯಿ ಕೈಕೇಯಿ. ಲಕ್ಷ್ಮಣ ಶತ್ರುಘ್ನರ ತಾಯಿ ಸುಮಿತ್ರೆ.[[ಸೀತೆ]] ರಾಮನ ಹೆಂಡತಿ. ರಾಮನಿಗೆ [[ಲವ]]ಮತ್ತು [[ಕುಶ]] ಎಂಬ ಇಬ್ಬರು ಮಕ್ಕಳು. ಶ್ರೀ ರಾಮನು [[ಸೂರ್ಯ ವಂಶ]]ದವನು.
Line ೨೮ ⟶ ೩೨:
 
==ರಾಮ ಪುರಾಣ==
* ಮಿಥಿಲೆಯ ಸೀತಾ ಸ್ವಯಂವರದಲ್ಲಿ ರಾಮ ಶಿವನ ಧನುಸ್ಸನ್ನು ಮುರಿಯುತ್ತಿರುವುದು, ರಾಜಾ ರವಿವರ್ಮ ರಚನೆಯ ಚಿತ್ರ ವಿಶ್ವದ ಸೃಷ್ಟಿಕರ್ತನಾದ ಬ್ರಹ್ಮನು ರಾಕ್ಷಸರರ ರಾಜ ರಾವಣನ ಘೋರ ತಪಸ್ಸಿಗೆ ಮೆಚ್ಚಿ ಅವನನ್ನು ದೇವತೆಗಳು, ರಾಕ್ಷಸರು ಅಥವಾ ಯಕ್ಷಕಿನ್ನರರು ಕೊಲ್ಲಲಾಗದೆಂಬ ವರವನ್ನು ಕೊಟ್ಟಿದ್ದನು. ಅದನ್ನು ಅವನು ಹಿಂತೆಗೆದುಕೊಳ್ಳುವದು ಸಾಧ್ಯವಿರಲಿಲ್ಲ.
* ಅಂಥ ವರವನ್ನು ಪಡೆದು ರಾವಣನು ತನ್ನ ಸಹಚರ ರಾಕ್ಷಸರೊಡಗೂಡಿ ಭೂಸಂಹಾರಕ್ಕೆ ತೊಡಗಿ, ಶಿಷ್ಟಜನರಿಗೆ ಅದರಲ್ಲೂ ಬ್ರಾಹ್ಮಣರಿಗೆ ಅವರ ಜಪ-ತಪಗಳಿಗೆ ಉಪದ್ರವ ಕೊಡಲಾರಂಭಿಸಿದನು. ಇದನ್ನು ನೋಡಿ ಎಲ್ಲ ದೇವತೆಗಳು ಭೂಮಿಯನ್ನೂ ತಮ್ಮನ್ನು ಈ ದುಷ್ಟನಿಂದ ಕಾಪಾಡು ಎಂದು ಬ್ರಹ್ಮನ ಮೊರೆ ಹೊಕ್ಕರು.
* ಬ್ರಹ್ಮನು ವಿಷ್ಣುವಿನ ಬಳಿಸಾರಿ ದೇವತೆಗಳ ಚಿಂತೆಯನ್ನು ಅರುಹಿ, ರಾವಣನು ಮನುಷ್ಯರಿಂದ ಅಥವಾ ಪ್ರಾಣಿಗಳಿಂದ ಮರಣ ಹೊಂದದ ವರವನ್ನು ಪಡೆದಿಲ್ಲ ದಿರುವುದರಿಂದಪಡೆದಿಲ್ಲದಿರುವುದರಿಂದ ವಿಷ್ಣುವೇ ಮಾನವನಾಗಿ ಅವತಾರವೆತ್ತಿ ರಾವಣನನ್ನು ಸಂಹರಿಸಬೇಕೆಂದು ಕೇಳಿಕೊಂಡನು. ಈ ಮಧ್ಯೆ ಕೋಸಲವನ್ನು ಆಳುತ್ತಿದ್ದ ಅಯೋಧ್ಯೆಯ ರಾಜ ದಶರಥನಿಗೆ ಮಕ್ಕಳಿಲ್ಲದ್ದರಿಂದ ತನ್ನ ಉತ್ತರಾಧಿಕಾರಿಯ ಬಗ್ಗೆ ಚಿಂತೆಯಲ್ಲಿದ್ದನು.
* ಮಂತ್ರಿಗಳು ಹಾಗೂ ಪುರೋಹಿತರ ಸಲಹೆಯ ಮೇರೆಗೆ ಪುತ್ರಸಂತಾನಕ್ಕಾಗಿ ಪುತ್ರಕಾಮೇಷ್ಟಿ ಯಜ್ಞವನ್ನು ಮಾಡಿದನು. ವಿಷ್ಣು ದಶರಥನ ಜ್ಯೇಷ್ಠ ಪುತ್ರನಾಗಿ ಜನಿಸಲು ನಿರ್ಧರಿಸಿ ದೈವೀ ಪುರುಷನೊಬ್ಬನನ್ನು ಯಜ್ಞಕುಂಡದಲ್ಲಿ ಹುಟ್ಟುವಂತೆ ಮಾಡಿದನು. ಈ ದೈವೀ ಪುರುಷ ದಶರಥನಿಗೆ ಅಮೃತವಿದ್ದ ಚಿನ್ನದ ಕಲಶವೊಂದನ್ನು ನೀಡಿ ತನ್ನ ರಾಣಿಯರಿಗೆ ಅದನ್ನು ನೀಡುವಂತೆ ಹೇಳಿದನು. ದಶರಥನು ಅದನ್ನು ತನ್ನ ಮೂವರು ರಾ‍ಣಿಯರಾದ ಕೌಸಲ್ಯೆ, ಸುಮಿತ್ರೆ ಮತ್ತು ಕೈಕೇಯಿ ಇವರ ನಡುವೆ ಹಂಚಿದನು.
* ಕಾಲ ಕ್ರಮೇಣ ಅವರು ಗರ್ಭಿಣಿಯರಾಗಿ ನಾಲ್ಕು ಮಕ್ಕಳಿಗೆ ಜನ್ಮವಿತ್ತರು. ರಾಣಿ ಕೌಸಲ್ಯೆಗೆ ಹಿರಿಯ ಮಗನಾಗಿ ರಾಮನೂ, ಕೈಕೇಯಿಗೆ ಭರತನೂ ಮತ್ತು ಲಕ್ಷ್ಮಣ ಮತ್ತು ಶತ್ರುಘ್ನರು ಸುಮಿತ್ರೆಗೆ ಜನಿಸಿದರು. ಈ ಬಾಲಕರು ವಸಿಷ್ಠರಿಂದ ಶಾಸ್ತ್ರಗಳನ್ನೂ, ಬಿಲ್ಲುವಿದ್ಯೆಯನ್ನೂ ಕಲಿಯುತ್ತ ಬೆಳೆದರು. ಒಂದು ದಿನ ವಿಶ್ವಾಮಿತ್ರರು ರಾಜ್ಯಕ್ಕೆ ಬಂದು ದಶರಥನಲ್ಲಿ ತಮ್ಮ ಯಜ್ಞ ಯಾಗಾದಿಗಳಿಗೆ ಭಂಗ ತರುತ್ತಿರುವ ರಾಕ್ಷಸರಿಂದ ತಮ್ಮನ್ನು ಕಾಪಾಡಲು ರಾಮನನ್ನು ಕಳಿಸಬೇಕೆಂದು ಕೋರಿದರು.
* ಒಲ್ಲದ ಮನ್ಸಸ್ಸಿನಿಂದ ವಿಶ್ವಾಮಿತ್ರರೊಡನೆ ರಾಮ ಲಕ್ಷ್ಮಣರನ್ನು ಕಳಿಸಿಕೊಡಲು ಅವನು ಒಪ್ಪಿದನು. ಈ ಸೋದರರು ತಮ್ಮ ಕರ್ತವ್ಯವನ್ನು ಪೂರೈಸಲು ವಿಶ್ವಾಮಿತ್ರನು ಸಂತೋಷಪಟ್ಟು ಅವರಿಗೆ ಅನೇಕ ದಿವ್ಯಾಸ್ತ್ರಗಳನ್ನು ಅನುಗ್ರಹಿಸಿದನು. ಹಿಂತಿರುಗುವಾಗ ವಿಶ್ವಾಮಿತ್ರರೊಡನೆಯ ಪ್ರಯಾಣದ ಕೊನೆಯಲ್ಲಿ ರಾಮನು ಮಿಥಿಲಾ ರಾಜ್ಯಕ್ಕೆ ಬಂದನು.
* ಅಲ್ಲಿ ಜನಕ ಮಹಾರಾಜನು ತನ್ನ ಮಗಳು ಅಪ್ರತಿಮ ಸುಂದರಿ ಸೀತೆಯನ್ನು ತನ್ನ ಆಸ್ಥಾನದಲ್ಲಿದ್ದ ಶಿವನ ಬಹಳ ಬಲಿಷ್ಠವಾದ ಧನುಸ್ಸನ್ನು ಹೆದೆಯೀರಿಸಿ ದವನಿಗೆ ತನ್ನ ಮಗಳನ್ನು ಮದುವೆ ಮಾಡಿ ಕೊಡಲಿರುವ ಸ್ವಯಂಬರವನ್ನು ನಡೆಸುತ್ತಿರುವುದನ್ನು ಅರಿತನು. ಅನೇಕ ವಿವಾಹೇಚ್ಛುಗಳು ಪ್ರಯತ್ನಿಸಿ ಸೋತಿದ್ದ ಈ ಕಾರ್ಯವನ್ನು ಸಾಧಿಸಲು ರಾಮನು ನಿಶ್ಚಯಿಸಿದನು.
* ಅವನು ಜನಕನ ಆಸ್ಥಾನಕ್ಕೆ ಬಂದಾಗ ಜನಕನು ಅವನ ಲಾವಣ್ಯಕ್ಕೆ ಮಾರು ಹೋದನು. ಐದು ಸಾವಿರ ಜನರು ಆ ಬಿಲ್ಲನ್ನು ಎಂಟು ಗಾಲಿಗಳ ರಥದಲ್ಲಿ ಆಸ್ಥಾನಕ್ಕೆ ಎಳೆದು ತಂದರು. ರಾಮನು ಬಹಳ ಸುಲಭವಾಗಿ ಅದನ್ನು ಮುರಿಯುವಷ್ಟು ಬಗ್ಗಿಸಿದನು. ಜನಕನು ಸಂತಸದಿಂದ ತನ್ನ ಲಾವಣ್ಯವತಿ ಮಗಳನ್ನು ರಾಮನಿಗೆ ಮದುವೆ ಮಾಡಿಕೊಟ್ಟನು. ಭವ್ಯವಾದ ಮದುವೆ ಸಮಾರಂಭದ ನಂತರ ನವಜೋಡಿಯು ಅಯೋಧ್ಯೆಗೆ ಪ್ರಯಾಣ ಬೆಳೆಸಿತು.
 
==ರಾಮನ ವನವಾಸ==
* ರಾಜ ದಶರಥನು ತನ್ನ ಹಿರಿಯ ಮಗ ಹಾಗೂ ಪದ್ಧತಿಯಂತೆ ಉತ್ತರಾಧಿಕಾರಿಯಾದ ರಾಮನನ್ನು ಯುವರಾಜನನ್ನಾಗಿ ಮಾಡಲು ನಿರ್ಧರಿಸಿದನು. ಅವನ ಪ್ರಜೆಗಳು ಈ ಘೋಷಣೆಯನ್ನು ಸಂತಸದಿಂದ ಸ್ವಾಗತಿಸಿದರು. ಇಡೀ ನಗರವು ಈ ಸಂಬಂಧದ ಉತ್ಸವವನ್ನೂ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳಲ್ಲಿ ತೊಡಗಿತು. ದಶರಥನು ಈ ಆಚರಣೆಗಳ ಸಂಬಂಧ ಚರ್ಚಿಸಲು ತನ್ನ ಪತ್ನಿ ಕೈಕೇಯಿ ಇದ್ದಲ್ಲಿಗೆ ಹೋದನು.
* ಆದರೆ ದುಷ್ಟದಾಸಿಯಾದದಾಸಿ ಮಂಥರೆಯಿಂದ ದುರ್ಬೋಧನೆಗೊಳಗಾಗಿ 'ಯುವರಾಜನಾಗುತ್ತಿರುವುದು ಪ್ರವಾಸದಲ್ಲಿರುವ ತನ್ನ ಮಗ ಭರತನಲ್ಲ, ಆದ ಕೌಸಲ್ಯೆಯ ಮಗ ರಾಮ' ಎಂದು ಅಸೂಯೆಪಟ್ಟು ದುಃಖಿಸಿದಳು. ದಶರಥನು ಬಂದಾಗ ಅವಳು ಅಂತಃಪುರದಲ್ಲಿ ಕಣ್ಣೀರುಗರೆಯುತ್ತಿದ್ದಳು. ಚಿಂತಿತನಾದ ದಶರಥನ ಪ್ರಶ್ನೆಗಳಿಗೆ ಉತ್ತರವಾಗಿ ಕೈಕೇಯಿ, ಅನೇಕ ವರ್ಷಗಳ ಹಿಂದೆ ದಶರಥ ತನಗಿತ್ತಿದ್ದ ಎರಡು ವರಗಳನ್ನು ನೆನಪಿಸಿದಳು. ಈ ವರಗಳನ್ನು ಪೂರೈಸಿದರೆ ಪ್ರಸನ್ನಳಾಗುವುದಾಗಿ ಹೇಳಿದಳು.
* ಇದಕ್ಕೆ ಪೂರಕವಾಗಿ ಅವಳು, ಮೊದಲನೆಯದಾಗಿ, ತನ್ನ ಮಗ ಭರತನನ್ನು ಯುವರಾಜನಾಗಿ ನೇಮಿಸಬೇಕೆಂದೂ, ಎರಡನೆಯದಾಗಿ, ರಾಮನನ್ನು ಹದಿನಾಲ್ಕು ವರ್ಷಕಾಲ ಘೋರವಾದ ದಂಡಕಾರಣ್ಯಕ್ಕೆ ವನವಾಸಕ್ಕೆ ಕಳಿಸ ಬೇಕೆಂದೂ ಕೇಳಿದಳು. ದುಃಖಿತನಾದ ದಶರಥ, ಆದಾಗ್ಯೂ ತನ್ನ ವಚನವನ್ನು ಪರಿಪಾಲಿಸಿಕೊಳ್ಳಲು ನಿರ್ಧರಿಸಿದನು.
* ಆದರ್ಶ ಪುತ್ರನಾದ ರಾಮ, ಸಿಂಹಾಸನದ ಮೇಲೆ ತನಗಿದ್ದ ಹಕ್ಕನ್ನು ಬಿಟ್ಟುಕೊಟ್ಟು ವನವಾಸಕ್ಕೆ ಹೊರಡಲು ಸಿದ್ಧನಾದನು. ಅವನ ನಿಷ್ಠಾವಂತ ಪತ್ನಿ ಸೀತೆ ಮತ್ತು ತಮ್ಮ ಲಕ್ಷ್ಮಣ, ರಾಮನ ಜೊತೆ ಹೊರಡಲು ನಿರ್ಧರಿಸಿದರು. ದಶರಥ ದುಃಖದಲ್ಲಿದ್ದಂತೆ ರಾಮ, ಅಯೋಧ್ಯೆಯ ಪರಿತಪ್ತ ಜನರಿಂದ ಹಿಂಬಾಲಿಸಲ್ಪಟ್ಟು ವನವಾಸಕ್ಕೆ ತೆರಳಿದನು. ಸ್ವಲ್ಪ ಕಾಲಾನಂತರ ದಶರಥ ದುಃಖದಿಂದ ಮರಣವನ್ನಪ್ಪಿದನು.
 
==ಸೀತಾಪಹರಣ==
* ರಾಮ, ಸೀತೆ ಮತ್ತು ಲಕ್ಷ್ಮಣ ಅಯೋಧ್ಯೆ ಮತ್ತು ಅಲ್ಲಿನ ಜನರನ್ನು ಬಿಟ್ಟು ಗಂಗಾ ನದಿಯನ್ನು ದಾಟಿ ಕಾಡಿನೊಳಕ್ಕೆ ಹೋದರು. ಚಿತ್ರಕೂಟ ಎಂಬ ಸುಂದರ ಸ್ಥಳವನ್ನು ಹುಡುಕಿ ಅಲ್ಲಿ ತಮ್ಮ ಕುಟೀರವನ್ನು ಸ್ಥಾಪಿಸಿದರು. ಅತ್ಯಂತ ಸುಂದರವಾಗಿದ್ದ ಈ ಸ್ಥಳದಲ್ಲಿ ಎಲ್ಲ ರೀತಿಯ ಫಲಪುಷ್ಪಗಳಿದ್ದು ಸಂಪೂರ್ಣ ಪ್ರೇಮದಿಂದ ಕೂಡಿದ್ದ ಕುಟೀರ ಭೂಮಿಯ ಮೇಲಿದ್ದ ಸ್ವರ್ಗವೇ ಆಯಿತು. ಕಾಡಿನಲ್ಲಿ ರಾಮ ಗರುಡರಾಜನಾದ ಜಟಾಯುವಿನೊಂದಿಗೆ ಮಿತ್ರತ್ವವನ್ನು ಸ್ಥಾಪಿಸಿದ.
* ಇಷ್ಟರಲ್ಲಿ ಅಯೋಧ್ಯೆಗೆ ಮರಳಿ ಬಂದ ಭರತ, ನಡೆದ ವಿಷಯವನ್ನು ಕೇಳಿ, ರಾಮನನ್ನು ವನವಾಸಕ್ಕೆ ಕಳಿಸುವಲ್ಲಿ ತನ್ನ ತಾಯಿ ಕೈಕೇಯಿ ವಹಿಸಿದ ಪಾತ್ರದ ಬಗ್ಗೆ ಬೇಸರ, ಕೋಪಗೊಂಡನು. ರಾಮನನ್ನು ಹಿಂದಕ್ಕೆ ತರುವ ಉದ್ದೇಶದಿಂದ ಕಾಡಿಗೆ ಬಂದು ರಾಮನನ್ನು ಹಿಂದಕ್ಕೆ ಬರುವಂತೆ ಬೇಡಿಕೊಂಡನು.
* ತಂದೆಯ ವಚನದಿಂದ ಬದ್ಧನಾದ ರಾಮ ಇದಕ್ಕೆ ನಿರಾಕರಿಸಿದಾಗ ರಾಮನ ಪಾದುಕೆಗಳನ್ನು ಅಯೋಧ್ಯೆಗೆ ಒಯ್ದು ಸಿಂಹಾಸನದ ಮೇಲೆ ಸ್ಥಾಪಿಸಿ ರಾಮನ ಹೆಸರಿನಲ್ಲಿ ನಂದಿಗ್ರಾಮದಿಂದ ಭರತ ರಾಜ್ಯವನ್ನು ಆಳುತ್ತಿದ್ದನು. ಹದಿನಾಲ್ಕು ವರ್ಷಗಳಲ್ಲಿ ರಾಮ ಮರಳಿ ಬರದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರವನ್ನೂ ಭರತ ತೆಗೆದುಕೊಂಡನು. ಒಂದು ದಿನ ರಾವಣನ ತಂಗಿಯಾದ ಶೂರ್ಪನಖಿ ಎಂಬ ರಾಕ್ಷಸಿ, ಚಿತ್ರಕೂಟದಲ್ಲಿ ರಾಮನನ್ನು ಕಂಡು ಅವನನ್ನು ಮೋಹಿಸಿದಳು.
* ಸುಂದರ ಹುಡುಗಿಯ ವೇಷ ಧರಿಸಿ ರಾಮನನ್ನು ಆಕರ್ಷಿಸಲು ಪ್ರಯತ್ನಿಸಿದಳು. ತನ್ನ ಪತ್ನಿಯತ್ತ ನಿಷ್ಠಾವಂತನಾದ ರಾಮ ಪ್ರತಿಕ್ರಿಯೆ ತೋರಿಸಲಿಲ್ಲ. ಶೂರ್ಪನಖಿಯ ವರ್ತನೆಯಿಂದ ಕುಪಿತನಾದ ಲಕ್ಷ್ಮಣ ಅವಳ ಮೂಗು ಮತ್ತು ಕಿವಿಗಳನ್ನು ಕತ್ತರಿಸಿಬಿಟ್ಟನು. ರಾವಣನತ್ತ ಮರಳಿ ಶೂರ್ಪನಖಿ ಇದರ ಬಗ್ಗೆ ದೂರಿತ್ತಳು. ಅವಳಿಂದ ಸೀತೆಯ ಸೌಂದರ್ಯದ ಬಗ್ಗೆ ಕೇಳಿದ ರಾವಣ, ರಾಮನನ್ನು ಕೊಂದು ಸೀತೆಯನ್ನು ಹೊತ್ತೊಯ್ಯುವ ನಿರ್ಧಾರ ವನ್ನು ಮಾಡಿದನು.
* ರಾವಣನ ಸಹಾಯಕ್ಕೆ ಬಂದ ಮಾರೀಚ ರಾಮ ಮತ್ತು ಲಕ್ಷ್ಮಣರು ಸೀತೆಯನ್ನು ಕುಟೀರದಲ್ಲಿ ಬಿಟ್ಟು ದೂರ ಬರುವಂತೆ ಮಾಡಿದನು. ಹೊರಡುವ ಮುನ್ನ, ಲಕ್ಷ್ಮಣ ಮಣ್ಣಿನಲ್ಲಿ ಒಂದು ಗೆರೆಯನ್ನು ಎಳೆದು ಅದರ ಒಳಗೆ ಇರುವವರೆಗೂ ಸೀತೆ ಸುರಕ್ಷಿತಳಾಗಿ ಇರುವ ಳೆಂದುಇರುವಳೆಂದು ತಿಳಿಸಿ ಹೋದನು. ಮುದುಕನ ವೇಷ ಧರಿಸಿ ಬಂದ ರಾವಣ ಅನ್ನದಾನ ಮಾಡುವಂತೆ ಸೀತೆಯನ್ನು ಕೇಳಿಕೊಂಡನು.
* ಗೆರೆಯನ್ನು ದಾಟಲು ಹೆದರಿದ ರೂ, ಅವನಿಗೆ ದಾನ ಮಾಡಲು ಸೀತೆ ಮುಂದೆ ಬಂದಾಗ ರಾವಣ ಅವಳನ್ನು ಹೊತ್ತುಕೊಂಡು ತನ್ನ ಪುಷ್ಪಕ ವಿಮಾನದಲ್ಲಿ ಹಾರಿದನು. ಇದನ್ನು ಕಂಡ ಜಟಾಯು ಸೀತೆಯ ರಕ್ಷಣೆಗೆ ಬಂದಾಗ ರಾವಣ ಜಟಾಯುವಿನ ರೆಕ್ಕೆಗಳನ್ನು ಕತ್ತರಿಸಿ ಹೋದನು. ಹಿಂದಕ್ಕೆ ಮರಳಿದ ರಾಮ-ಲಕ್ಷ್ಮಣರು ಸೀತೆಯನ್ನು ಕಾಣದೆ ಹುಡುಕುತ್ತಿದ್ದಾಗ ಜಟಾಯುವಿನಿಂದ ಸೀತಾಪಹರಣದ ವಿಷಯವನ್ನು ತಿಳಿದರು.
 
==ವಾನರ ಸಾಮ್ರಾಜ್ಯ==
* ತಮ್ಮ ಹುಡುಕಾಟವನ್ನು ಮುಂದುವರೆಸಿ ರಾಮ ಲಕ್ಷ್ಮಣರು ಕಿಷ್ಕಿಂದೆಯ ವಾನರ ರಾಜನಾದ ಸುಗ್ರೀವ ಹಾಗೂ ಹನುಮಂತನನ್ನು ಭೇಟಿಯಾಗುತ್ತಾರೆ. ಹನುಮಂತ ಸುಗ್ರೀವನ ಸೈನ್ಯಕ್ಕೆ ಸೇನಾಧಿಪತಿ. ಸೀತೆ ರಾವಣನ ರಥದಿಂದ ಎಸೆದ ಆಭರಣಗಳು ವಾನರರಿಗೆ ದೊರೆತಿರುತ್ತದೆ. ತನ್ನ ಅಣ್ಣ ವಾಲಿಯಿಂದ ಸಾಮ್ರಾಜ್ಯದಿಂದ ಹೊರಗಟ್ಟಲ್ಪಟ್ಟ ಸುಗ್ರೀವ ರಾಮನ ಸಹಾಯ ಪಡೆಯುತ್ತಾನೆ.
* ಪರಸ್ಪರ ಕಾಳಗದಲ್ಲಿ ರಾಮನ ಸಹಾಯ ಪಡೆದ ಸುಗ್ರೀವನಿಂದ ವಾಲಿ ಮಡಿಯುತ್ತಾನೆ. ಸಹಾಯ ಮಾಡಿದ ರಾಮನೊಂದಿಗೆ ಸುಗ್ರೀವ ತನ್ನ ಸೈನ್ಯ ವನ್ನು ಕೂಡಿ ಲಂಕೆಯೆಡೆಗೆ ಹೊರಡುತ್ತಾನೆ. ರಾಮ, ಸುಗ್ರೀವರು ಸೀತೆಯನ್ನು ಹುಡುಕಲು ತಮ್ಮ ವಾನರಸೇನೆಯನ್ನು ನಾ ನಾ ದಿಕ್ಕಿಗೆ ಕಳಿಸಿದರು.ಅವರು ರಾವಣನಿಂದ ಹತನಾದ ಜಟಾಯುವಿನ ಸೋದರ, ಸಂಪಾತಿಯನ್ನು ಭೇಟಿಯಾಗುವವರೆಗೆ ಅವರ ಪ್ರಯತ್ನಗಳಿಗೆ ವಿಶೇಷ ಫಲ ದೊರೆಯಲಿಲ್ಲ.
* ಸಂಪಾತಿಯು ಅಂಗವೈಕಲ್ಯದಿಂದಾಗಿ ಹಾರಲು ಅಸಮರ್ಥನಾಗಿದ್ದನು. ಅವನು ಸೂರ್ಯನ ಅತಿ ಸಮೀಪಕ್ಕೆ ಹಾರಿದ್ದರಿಂದ ಅವನ ರೆಕ್ಕೆಗಳು ಸುಟ್ಟು ಹೋಗಿದ್ದವು. ಬಲಶಾಲಿಯಾದ ಜಟಾಯುವು ಅವನನ್ನು ಸಾವಿನಿಂದ ರಕ್ಷಿಸಿದ್ದನು. ಇಬ್ಬರಲ್ಲಿ ಜಟಾಯು ದೇಹಬಲದಿಂದ ಗಟ್ಟಿಗನಾದರೂ ಸಂಪಾತಿಗೆ ಕಣ್ಣಿನ ಹೆಚ್ಚಿನ ದೃಷ್ಟಿಯಿದ್ದು ನೂರಾರು ಯೋಜನಗಳಷ್ಟು ದೂರ ನೋಡಬಲ್ಲವನಾಗಿದ್ದನು .
* ರಾವಣನು ತನ್ನ ಸೋದರನನ್ನು ಕೊಂದದ್ದನ್ನು ಕೇಳಿ ಅವನು ವಾನರರಿಗೆ ಸಹಾಯ ಮಾಡಲು ಒಪ್ಪಿದನು. ಅನತಿಕಾಲದಲ್ಲೇ ಅವನು ಸೀತೆಯನ್ನು ದಕ್ಷಿಣ ದಿಕ್ಕಿನಲ್ಲಿರುವದಾಗಿ ಪತ್ತೆ ಹಚ್ಚಿದನು. ಅವಳು ದಕ್ಷಿಣದಲ್ಲಿ ಸಮುದ್ರದಾಚೆಗಿನ ಲಂಕಾದ್ವೀಪದಲ್ಲಿನ ಅಶೋಕವನವೊಂದರಲ್ಲಿ ಸೆರೆಯಾಗಿರುವುದನ್ನು ನೋಡಿ ಹೇಳಿದನು.
 
== ಲಂಕೆಯಲ್ಲಿ ಹನುಮಂತ==
Line ೬೯ ⟶ ೯೦:
ರಾಮನೇ ಸ್ವತಃ ತಾನು ಮನುಷ್ಯ ಮಾತ್ರನೆಂದು ಹೇಳಿದರೂ, ಒಮ್ಮೆ ಕೂಡ ತಾನು ದೈವಾಂಶವುಳ್ಳವನೆಂದು ಹೇಳದಿದ್ದರೂ [೩], ಹಿಂದುಗಳು ಅವನನ್ನು ಆದರ್ಶವ್ಯಕ್ತಿಯೆಂದೂ ವಿಷ್ಣು ದೇವರ ಪ್ರಮುಖ ಅವತಾರ ಗಳಲ್ಲೊಬ್ಬ ಎಂದೂ ಪರಿಗಣಿಸುತ್ತಾರೆ .
 
 
==ಫೋಟೋಗ್ಯಾಲರಿ==
[[File:Srisita ram laxman hanuman manor.JPG|right|200px|thumb|[[Sita]] (far right), Rama (center), [[Lakshmana]] (far left) and [[Hanuman]] (below seated) at [[Bhaktivedanta Manor]], a temple in Watford (England)]]
[[File:Avatars.jpg|thumb|200px|Rama (left third from top) depicted in the [[Dashavatara]] (ten avatars) of Vishnu. Painting from [[Jaipur]], now at the [[Victoria and Albert Museum]].]]
[[File:Ravivarmapress Rama family.jpg|upright|thumb|200px|Rama with Sita on the throne, their children Lava and Kusha on their laps. Behind the throne, Lakshamana, Bharata and Shatrughna stand. Hanuman bows to Rama before the throne. Valmiki to the left]]
[[File:Rameshvaram lingam.jpg|thumb|left|200px|Rama and [[Sita]] worship the [[Shiva|Shiva Lingam]] at [[Rameswaram]], as his companions [[Vibhishana]] (right) looks on with [[Lakshman|Lakshamana]], [[Tumburu]] and [[Narada]] along with the Vanar Sena.]]
[[File:Ramanathar-temple.jpg|thumbnail|200px|[[Ramanathaswamy Temple]], [[Rameswaram]] ]]
 
==ಬಾಹ್ಯ ಸಂಪರ್ಕಗಳು==
"https://kn.wikipedia.org/wiki/ರಾಮ" ಇಂದ ಪಡೆಯಲ್ಪಟ್ಟಿದೆ