ಗಾಯತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦ ನೇ ಸಾಲು:
 
==ಗಾಯತ್ರೀ ಮಂತ್ರ==
*ಗಾಯತ್ರೀ ಮಂತ್ರ (ಸಾವಿತ್ರ ಮಂತ್ರ ಎಂದೂ ಕರೆಯುವುದುಂಟು) ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದು. ಈ ಮಂತ್ರದಲ್ಲಿ ಸವಿತೃ ದೇವನನ್ನು ಆವಾಹನೆ ಮಾಡಿರುವ ಕಾರಣದಿಂದ, ಈ ಮಂತ್ರವನ್ನು ಸಾವಿತ್ರ ಮಂತ್ರ ಎಂದು ಕೂಡ ಕರೆಯುತ್ತಾರೆ. ಗಾಯತ್ರೀ ಮಂತ್ರ ಬ್ರಹ್ಮರ್ಷಿ ವಿಶ್ವಾಮಿತ್ರನಿಂದ ದರ್ಶಿಸಲ್ಪಟ್ಟಿದೆ ಎಂದು ಕೆಲವರು ನಂಬುತ್ತಾರೆ. ಆದರೆ ಗಾಯತ್ರೀ ಮಂತ್ರ ಇರುವ [[ಋಗ್ವೇದ|ಋಗ್ವೇದವೂ]] ಸೇರಿದಂತೆ, ವೇದಗಳೆಲ್ಲ ಬ್ರಹ್ಮನ ಮುಖಾಂತರ ಹೊಮ್ಮಿದವು ಎಂಬುದು ಪ್ರಚಲಿತದಲ್ಲಿರುವ ಪುರಾಣ ಕಥೆ.
*ಉಪನಯನ ಸಂಸ್ಕಾರದಲ್ಲಿ ಉಪನೀತನಿಗೆ ಈ ಮಂತ್ರವನ್ನು ಉಪದೇಶಿಸುತ್ತಾರೆ. ಬ್ರಹ್ಮೋಪದೇಶ ರೂಪವಾದ ಈ ಮಂತ್ರದಿಂದ ಉಪನೀತ ವಿಪ್ರನಾಗುತ್ತಾನೆ. ಮನುಸ್ಮೃತಿಯಲ್ಲಿ ತಿಳಿಸಿರುವಂತೆ ಗಾಯತ್ರಿ ಸಕಲ ವೇದಗಳ ಸಾರವಾದುದು, ಪರಬ್ರಹ್ಮ ಸ್ವರೂಪವುಳ್ಳದ್ದು. ಓಂಕಾರಪುರ್ವಕ ಸಂಧ್ಯಾಕಾಲಗಳಲ್ಲಿ ವೇದಮಾತೃವಾದ ಈ ಮಂತ್ರವನ್ನು ಜಪಿಸುವುದರಿಂದ ವೇದಪಠನ ಪುಣ್ಯ ಲಭಿಸುತ್ತದೆ, ಮಹಾಪಾತಕಗಳು ನಶಿಸುತ್ತವೆ.
*ವೈದಿಕ ಕಾಲದಿಂದಲೂ ಗಾಯತ್ರಿ ಮಂತ್ರ ಯಾವುದೆ ವರ್ಗ, ಜಾತಿ ಅಥವಾ ಲಿಂಗಕ್ಕೆ ಸೀಮಿತಪಟ್ಟಿಲ್ಲ ಯಾರು ಬೇಕಾದರು ಇದನ್ನು ಉಚ್ಚರಿಸಬಹುದು ಎಂಬುವುದು ಅನೇಕ ಧರ್ಮಶಾಸ್ತ್ರಜ್ಞರ ಅಭಿಪ್ರಾಯ. [[ಋಗ್ವೇದ|ಋಗ್ವೇದದದ]] ೩.೬೨.೧೦ನೆ (೩ನೆ ಮಂಡಲ, ೬೨ನೆ ಸೂಕ್ತ, ೧೦ನೆ ರಿಚ) ಮಂತ್ರವಾಗಿರುವ ಇದು, "ಓಂ ಭೂರ್ಭುವಃ ಸ್ವಃ" ಎಂಬ ಪೀಠಿಕೆ ([[ಯಜುರ್ವೇದ|ಯಜುರ್ವೇದದ]] ಸೂತ್ರದಂತೆ) ಸೇರಿ ಹೀಗೆ ಬಳಕೆಯಲ್ಲಿದೆ.
 
"https://kn.wikipedia.org/wiki/ಗಾಯತ್ರಿ" ಇಂದ ಪಡೆಯಲ್ಪಟ್ಟಿದೆ