ಮಹಿಳೆ ಮತ್ತು ಭಾರತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೬ ನೇ ಸಾಲು:
|-
|}
==ಕರ್ನಾಟಕದಲ್ಲಿ ಬಾಲ್ಯ ವಿವಾಹ==
*1 Dec, 2016;ಸುಭಾಸ ಎಸ್.ಮಂಗಳೂರ
* ಜಿಲ್ಲೆಯಾದ್ಯಂತ ಎಲ್ಲೇ ಬಾಲ್ಯ ವಿವಾಹ ನಡೆಯುತ್ತಿದ್ದರೂ ಮಾಹಿತಿ ಕಲೆ ಹಾಕುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ, ಡಾನ್ ಬಾಸ್ಕೊ ಹಾಗೂ ಚೈಲ್ಡ್ ಲೈನ್ ಸಂಸ್ಥೆಗಳ ಪದಾಧಿಕಾರಿಗಳು ದಾಳಿ ಮಾಡಿ ಬಾಲ್ಯ ವಿವಾಹಗಳನ್ನು ತಡೆಗಟ್ಟುತ್ತಾರೆ. ಇಷ್ಟೇ ಅಲ್ಲ ಪೋಷಕರಿಂದ ಬಾಲ್ಯ ವಿವಾಹ ಮಾಡುವುದಿಲ್ಲ ಎಂದು ಮುಚ್ಚಳಿಕೆ ಪತ್ರ ಬರೆಸಿಕೊಳ್ಳುತ್ತಾರೆ. ಆದರೆ ಇಂಥ ಪ್ರಕರಣಗಳಲ್ಲಿ ಪೋಷಕರು ಸ್ವಲ್ಪ ದಿನಗಳ ನಂತರ ಗುಟ್ಟಾಗಿ ಮದುವೆ ಮಾಡುತ್ತಿದ್ದಾರೆ.
 
* ತಂಡ ರಚನೆ: ಈ ವಿಷಯವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾರ್ಗದರ್ಶನದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೂ ಆದ ಬಾಲ್ಯ ವಿವಾಹ ನಿಷೇಧ ಅಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ತಾಲ್ಲೂಕು ಆರೋಗ್ಯ ಅಧಿಕಾರಿ, ಪೊಲೀಸ್ ಸಬ್ ಇನ್‌ಸ್ಪೆಕ್ಟರ್, ಇಬ್ಬರು ಪುರುಷ ಕಾನ್‌ಸ್ಟೆಬಲ್, ಇಬ್ಬರು ಮಹಿಳಾ ಕಾನ್‌ಸ್ಟೆಬಲ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಒಬ್ಬರು ಸದಸ್ಯರು, ಚೈಲ್ಡ್ ಲೈನ್‌ನ ಇಬ್ಬರು ಸದಸ್ಯರನ್ನು ಒಳಗೊಂಡ ಎಂಟು ಪ್ರತ್ಯೇಕ ತಂಡಗಳನ್ನು ರಚಿಸಿದ್ದಾರೆ.
 
* ಈ ತಂಡವು ಸಾಕಷ್ಟು ಅಧ್ಯಯನ ಮಾಡಿ, ಮಂಗಳವಾರ ದಿಢೀರ್‌ ಭೇಟಿ ನೀಡಿ 37 ಪ್ರಕರಣಗಳನ್ನು ಮರು ವಿಚಾರಣೆಗೆ ಒಳಪಡಿಸಿದೆ. ಈ ಪೈಕಿ ಎರಡು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಿದೆ.
 
* ‘2015ರಿಂದ ಇಲ್ಲಿಯವರೆಗೆ ಜಿಲ್ಲೆಯಾದ್ಯಂತ ಒಟ್ಟು 83 ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಗಟ್ಟಲಾಗಿದೆ. ಈ ಪೈಕಿ 37 ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಲಕಿ, ಆಕೆಯ ಪೋಷಕರನ್ನು ಕರೆ ತಂದು ಮರು ವಿಚಾರಣೆಗೆ ಒಳಪಡಿಸಲಾಗಿದೆ. 28 ಪ್ರಕರಣಗಳಲ್ಲಿ ಬಾಲಕಿ ಮತ್ತು ಪೋಷಕರಿಗೆ ತಿಳಿವಳಿಕೆ ನೀಡಿ, ಕೌನ್ಸೆಲಿಂಗ್ ಮಾಡಿ ವಾಪಸು ಕಳುಹಿಸಲಾಗಿದೆ.
==ತಪ್ಪದ ‘ಗುಜ್ಜರ್ ಕಿ’ ಶಾದಿ==
*ಕಲಬುರ್ಗಿ ತಾಲ್ಲೂಕು ಅಂಕಲಗಾದಲ್ಲಿ ಒಂದೂವರೆ ವರ್ಷದ ಹಿಂದೆ ನಡೆಯುತ್ತಿದ್ದ ‘ಗುಜ್ಜರ್ ಕಿ ಶಾದಿ’ಯನ್ನು ಅಧಿಕಾರಿಗಳ ತಂಡ ತಡೆಗಟ್ಟಿತ್ತು. ಮುಚ್ಚಳಿಕೆ ಪತ್ರ ಬರೆದುಕೊಟ್ಟ ಪೋಷಕರು ಬಾಲಕಿಯನ್ನು ಮನೆಗೆ ಕರೆದೊಯ್ದಿದ್ದರು. ಈಗ ಬೆಳಕಿಗೆ ಬಂದಿರುವ ಸಂಗತಿ ಎಂದರೆ ಆ ಬಾಲಕಿಗೆ ಗುಜ್ಜರ್ ಜತೆಯೇ ಮದುವೆ ಮಾಡಲಾಗಿದ್ದು, ಆಕೆ ಈಗ ಮುಂಬೈನಲ್ಲಿ ನೆಲೆಸಿದ್ದಾಳೆ. ಇಷ್ಟೇ ಅಲ್ಲದೆ ಆಕೆಗೆ ಹೆರಿಗೆಯೂ ಆಗಿದ್ದು, ತಾಯಿ ಬಾಣಂತನಕ್ಕೆ ತೆರಳಿದ್ದಾರೆ. ವಿಷಯ ಅರಿತ ಅಧಿಕಾರಿಗಳು ಸದ್ಯ ಬಾಲಕಿಯ ತಂದೆಯನ್ನು ವಶಕ್ಕೆ ಪಡೆದಿದ್ದಾರೆ.<ref>[http://www.prajavani.net/news/article/2016/12/01/455798.html ಮುಚ್ಚಳಿಕೆ ಬರೆದುಕೊಟ್ಟರೂ ಮದುವೆ!]</ref>
 
==ಮಹಿಳೆಯರು ಮತ್ತು ರಾಜಕೀಯ==
"https://kn.wikipedia.org/wiki/ಮಹಿಳೆ_ಮತ್ತು_ಭಾರತ" ಇಂದ ಪಡೆಯಲ್ಪಟ್ಟಿದೆ