ಜೆ. ಜಯಲಲಿತಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೩ ನೇ ಸಾಲು:
 
==ವೈಯುಕ್ತಿಕ ಜೀವನ==
*ಜೆ.ಜಯಲಲಿತಾ 1948ರ ಫೆಬ್ರುವರಿ 24 ರಂದು ಮೇಲುಕೋಟೆಯ ಮಧ್ಯಮ ವರ್ಗದ ಅಯ್ಯಂಗಾರ್ ಮನೆತನದ ಜಯರಾಮ್‌, ಸಂಧ್ಯಾ ದಂಪತಿಗೆ ಜನಿಸಿದರು. ಹುಟ್ಟು ಹೆಸರು ‘ಕೋಮಲವಲ್ಲಿ.’ ತಾತ (ತಂದೆಯ ತಂದೆ) ಮೈಸೂರು ಒಡೆಯರ್‌ ಬಳಿ ಕೆಲಸ ಮಾಡುತ್ತಿದ್ದರಿಂದ ಜಯಲಲಿತಾ ಎಂದು ಮರುನಾಮಕರಣ ಮಾಡಿದರು.
*ಜಯಾ ಎರಡು ವರ್ಷದ ಹಸುಳೆಯಾಗಿದ್ದಾಗ ತಂದೆಯ ಹಠಾತ್‌ ಮರಣಹೊಂದಿದರು. ತಾಯಿ ಸಂಧ್ಯಾ ತಮ್ಮ ತವರು ಬೆಂಗಳೂರಿಗೆ ಮರಳಿದರು. ಅಜ್ಜ, ಅಜ್ಜಿ ಕಣ್ಣಳತೆಯಲ್ಲಿ ಬಿಷಪ್‌ ಕಾಟನ್‌ ಗರ್ಲ್‌್ಸ ಸ್ಕೂಲ್‌ನಲ್ಲಿ ಜಯಾ ಪ್ರಾಥಮಿಕ ಶಿಕ್ಷಣ ಪಡೆದರು. ಎಲ್ಲ ಅಯ್ಯಂಗಾರ್ ಹೆಣ್ಣು ಮಕ್ಕಳಂತೆ ಸಂಗೀತ, ಭರತನಾಟ್ಯದಲ್ಲಿ ಪಳಗಿದರು.
==ನಟನಾವೃತ್ತಿ ಅರಸಿ ಮದ್ರಾಸಿಗೆ ಪಯಣ==
*ತಾಯಿ ಸಂಧ್ಯಾ ಸಹ ಆ ಕಾಲದ ಪ್ರಖ್ಯಾತ ಭರತನಾಟ್ಯ ಕಲಾವಿದೆ. ಬಣ್ಣದ ಬದುಕು ಅರಸಿ ಸಂಧ್ಯಾ ಮದ್ರಾಸ್‌ಗೆ ಹೋದರು. ತಮಿಳು ಸಿನಿಮಾಗಳಲ್ಲಿ ಮಿಂಚತೊಡಗಿದರು.ಸೆಕ್ರೇಡ್‌ ಹಾರ್ಟ್‌ ಹೈಸ್ಕೂಲ್‌ನಲ್ಲಿ ಓದುತ್ತಿದ್ದ ಜಯಾ ಆಗಷ್ಟೇ ಅರಳುತ್ತಿದ್ದರು. ತಾಯಿ ಸಂಧ್ಯಾಗೆ ಮಗಳ ಉಜ್ವಲ ಭವಿಷ್ಯ ಕಣ್ಣಿಗೆ ಕಟ್ಟತೊಡಗಿತು. ಬೇಸಿಗೆ ರಜೆಯಲ್ಲಿ ಚಿತ್ರರಂಗಕ್ಕೆ ಪರಿಚಯಿಸೇಬಿಟ್ಟರು.
==ಸಿನೇಮಾ ರಂಗಕ್ಕೆ ಪ್ರವೇಶ==
*1961 ರಲ್ಲಿ ಬಿಡುಗಡೆಯಾದ ‘ಎಪಿಸ್ಟಲ್‌’ ಎಂಬ ಇಂಗ್ಲಿಷ್‌ ಚಿತ್ರದಲ್ಲಿ ಜಯಾ ಮೊದಲ ಬಾರಿ ಕ್ಯಾಮೆರಾ ಎದುರಿಸಿದ್ದರು. 1964 ರಲ್ಲಿ 15 ವರ್ಷದವರಿದ್ದಾಗ ಬಿಡುಗಡೆಯಾದ ‘ಚಿನ್ನದ ಗೊಂಬೆ’ ಕನ್ನಡ ಚಿತ್ರ ಅವರು ನಾಯಕಿಯಾಗಿ ಅಭಿನಯಿಸಿದ್ದ ಮೊದಲ ಚಿತ್ರ. ದಿ. ಕಲ್ಯಾಣ್‌ ಕುಮಾರ್‌ ಚಿತ್ರ ನಾಯಕ.
 
*ತಮಿಳು ಚಿತ್ರರಂಗದಲ್ಲಿ ಮೊತ್ತಮೊದಲ ಬಾರಿ ಸ್ಕರ್ಟ್‌ ಧರಿಸಿದ್ದ ಗ್ಲಾಮರಸ್‌ ನಾಯಕಿ ಜಯಾ ಆಗಿನ ಸೂಪರ್‌ ಸ್ಟಾರ್‌ [[ಎಂ.ಜಿ. ರಾಮಚಂದ್ರನ್‌]] ಕಣ್ಣಿಗೆ ಬಿದ್ದರು. ಅಲ್ಲಿಂದ ಮುಂದೆ ಅವರ ಚಿತ್ರ ಬದುಕು, ಖಾಸಗಿ ಬದುಕು ಎಲ್ಲವೂ ಬದಲಾಯಿತು. 1964 ರಿಂದ 1971ರ ಅವಧಿಯಲ್ಲಿ ಈ ಜೋಡಿ 20ಕ್ಕೂ ಹೆಚ್ಚು ಸಿನಿಮಾ ಗಳಲ್ಲಿ ಅಭಿನಯಿಸಿತು. ಅವರು ನಂತರ ನಟಿಸಿದ ಎಲ್ಲಾ ಸಿನೇಮಾ ಗಳ ಸಂಖ್ಯೆ 140ಕ್ಕೂ ಹೆಚ್ಚು.
==ರಾಜಕೀಯ ಪ್ರವೇಶ==
*1972 ರಲ್ಲಿ ಕರುಣಾನಿಧಿ ಜತೆ ಜಗಳವಾಡಿಕೊಂಡು ಎಂಜಿಆರ್‌ (ಎಂ.ಜಿ. ರಾಮಚಂದ್ರನ್‌) ಅಣ್ಣಾ ಡಿಎಂಕೆ ಸ್ಥಾಪಿಸಿದಾಗಲೇ ಜಯಲಲಿತಾ ರಾಜಕೀಯದ ಮೊದಲ ಪಾಠ ಕಲಿತರು. ಜಯಾರನ್ನು ಆಗಲೇ ಪಕ್ಷದಲ್ಲಿ ಬೆಳೆಸುವ ಎಂಜಿಆರ್‌ ಆಸೆಗೆ ಹಿರಿಯ ನಾಯಕರು ಒಪ್ಪಿಗೆ ಇರಲಿಲ್ಲ. 70ರ ದಶಕದ ಉತ್ತರಾರ್ಧದಲ್ಲಿ ಜಯಾ ತೆಲುಗು ನಟರೊಬ್ಬರಿಗೆ ಆಪ್ತರಾಗಿದ್ದರು ಎಂಬ ಸುದ್ದಿ ಇತ್ತು.ಆದರೆ, ಈ ಸಂಬಂಧ ಹೆಚ್ಚು ದಿನ ಬಾಳಲಿಲ್ಲ.
 
*1977ರ ಚುನಾಣೆಯಲ್ಲಿ ಜಯಗಳಿಸಿ ಮಖ್ಯಮಂತ್ರಿಯಾದ ಎಂಜಿಆರ್‌ 1980ರಲ್ಲಿ ಜಯಲಲಿತಾರನ್ನು ಪಕ್ಷದ ಪ್ರಚಾರ ಕಾರ್ಯದರ್ಶಿಯಾಗಿ ನೇಮಿಸಿದರು. 1984 ರಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಜಯಾ, ಸಂಸತ್‌ನಲ್ಲಿ ಮಾಡಿದ ನಿರರ್ಗಳ ಭಾಷಣಕ್ಕೆ ಅಂದಿನ ಪ್ರಧಾನಿ ಇಂದಿರಾ ತಲೆದೂಗಿದ್ದರು. ಇಂಗ್ಲಿಷ್‌ ಬರುತ್ತದೆ ಎನ್ನುವ ಕಾರಣಕ್ಕೆ ಜಯಾ ಅವರನ್ನು ರಾಜ್ಯಸಭೆ ಅಭ್ಯರ್ಥಿಯಾಗಿ ಹೆಸರಿಸಲಾಗಿತ್ತು. ರಾಜ್ಯಸಭೆಯಲ್ಲಿ ಜಯಾ ಅಣ್ಣಾದೊರೈ ಕುಳಿತಿದ್ದ ಜಾಗದಲ್ಲಿ ಕೂರುತ್ತಿದ್ದರಂತೆ.
 
*ಎಂಜಿಆರ್‌ ಆಪ್ತಸಖಿ ಜಯಾ ರಾಜಕೀಯವಾಗಿ ಬೆಳೆಯತೊಡಗಿದಾಗ ಪಕ್ಷದೊಳಗೆ ಅಸಮಾಧಾನ ಹೊಗೆಯಾಡ ತೊಡಗಿತು. 1984 ರಲ್ಲಿ ಎಂಜಿಆರ್‌ ಅವರಿಗೆ ಆದ ಹೃದಯಾಘಾತ, ಮೂತ್ರಪಿಂಡ ವೈಫಲ್ಯದ ನಂತರ ಅವರ ಆರೋಗ್ಯ ಕುಸಿಯತೊಡಗಿತ್ತು. ಅವರ ಆಪ್ತರು ಆಗ ಜಯಾರನ್ನು ದೂರ ಇಟ್ಟರು.
==ಎಂಜಿಆರ್ ಸಾವು ಮತ್ತು ಜಯಾ ಸಂಕಷ್ಟ==
*1987ರ ಡಿಸೆಂಬರ್‌ 24ರ ನಸುಕಿನಲ್ಲಿ ಎಂಜಿಆರ್‌ ಕೊನೆಯುಸಿರೆಳೆದಿದ್ದರು. ಅಂದು ನಡೆದಿದ್ದು ತಮಿಳುನಾಡು ಎಂದೂ ಮರೆಯಲಾರದ ಅಸಹ್ಯ ಪ್ರಹಸನ. ಸಾವಿನ ಸುದ್ದಿ ತಿಳಿದು ಜಯಾ ಎಂಜಿಆರ್‌ ನಿವಾಸಕ್ಕೆ ಧಾವಿಸಿ ಬಂದಾಗ ಮೃತದೇಹ ಇರಿಸಿದ್ದ ಕೋಣೆಯ ಬಾಗಿಲುಗಳನ್ನು ಮುಚ್ಚಲಾಯಿತು. ಅಲ್ಲಿಂದ ಜಯಾರನ್ನು ಅಕ್ಷರಶಃ ಹೊರಹಾಕಲಾಯಿತು.
 
*ಎಂಜಿಆರ್‌ ಕಳೇಬರವನ್ನು ರಾಜಾಜಿ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಇಡಲಾಯಿತು. ಅಲ್ಲಿ ನುಸುಳಿ ಬಂದ ಜಯಲಲಿತಾ ಅಖಂಡ 30 ಗಂಟೆಗಳ ಕಾಲ ಎಂಜಿಆರ್‌ ತಲೆಯ ಬಳಿ ದುಃಖಿಸುತ್ತ ಕುಳಿತರು. ಎದೆಯ ಮೇಲೆ ಬಿದ್ದು ರೋದಿಸಿದರು. ಭಾವಾನಾತ್ಮಕ ತಮಿಳರ ಹೃದಯ ಕದಿಯಲು ಇಷ್ಟು ಸಾಕಾಯಿತು. ಎಂಜಿಆರ್‌ ಧರ್ಮಪತ್ನಿ ಜಾನಕಿಗೆ ಪಾರ್ಥಿವ ಶರೀರದ ಕೈಹಿಡಿದು ನಮಸ್ಕರಿಸಲು ಮಾತ್ರ ಸಾಧ್ಯವಾಯಿತು.
==ಜಾನಕಿ ರಾಮಚಂದ್ರನ್‌ ಮುಖ್ಯಮಂತ್ರಿ==
*ಎಂಜಿಆರ್‌ ಅಂತ್ಯ ಸಂಸ್ಕಾರಕ್ಕೆ ತೆರೆದ ಮಿಲಿಟರಿ ಟ್ರಕ್‌ನಲ್ಲಿ ಕಳೇಬರ ಒಯ್ಯುತ್ತಿದ್ದಾಗ ಟ್ರಕ್‌ ಏರಲು ಯತ್ನಿಸಿದ ಜಯಲಲಿತಾರನ್ನು ಜಾನಕಿ ಸಂಬಂಧಿಗಳು ಬೆಂಬಲಿಗರು ಎಳೆದುಹಾಕಿದರು. ಆಗ ನಡೆದ ಗಲಾ ಟೆಯಲ್ಲಿ ಜಾನಕಿ ಸಹ ಕೆಳಗಿಳಿಯ ಬೇಕಾಯಿತು. ತಮಿಳುನಾಡು ಕಂಡ ಮಹಾನ್‌ ನಟ, ಪ್ರಭಾವಿ ರಾಜಕಾರಣಿಯ ಅಂತ್ಯಸಂಸ್ಕಾರ ಪತ್ನಿ, ಆಪ್ತಸಖಿಯ ಗೈರುಹಾಜರಿಯಲ್ಲಿ ನಡೆಯಿತು.
 
*ಎಂಜಿಆರ್‌ ಉತ್ತರಾಧಿಕಾರಿಯೆಂದು ಘೊಷಿಸಿಕೊಂಡ ಜಾನಕಿ ರಾಮಚಂದ್ರನ್‌ ಮುಖ್ಯಮಂತ್ರಿಯಾದರು. ಪಕ್ಷ ಎರಡು ಹೋಳಾಯಿತು. ರಾಜೀವ್‌ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರ ಜಯಾರನ್ನು ಬೆಂಬಲಿಸಿತು. ಸಂವಿಧಾನದ 356ನೇ ವಿಧಿಯಡಿ ಜಾನಕಿ ರಾಮಚಂದ್ರನ್‌ ಸರ್ಕಾರವನ್ನು 21 ದಿನಗಳಲ್ಲಿ ವಜಾ ಮಾಡಿತು. ಕೆಲ ತಿಂಗಳಲ್ಲೇ ಜಾನಕಿ ತೆರೆಮರೆಗೆ ಸರಿದರು. 1988 ರಲ್ಲಿ ಹೋಳಾಗಿದ್ದ ಪಕ್ಷ ಜಯಾ ನೇತೃತ್ವದಲ್ಲಿ ಮತ್ತೆ ಒಂದಾಯಿತು.
==ವಿರೋಧ ಪಕ್ಷದ ನಾಯಕಿ==
*ವಿಧಾನಸಭೆ ವಿಸರ್ಜನೆ ನಂತರ ನಡೆದ ಚುನಾವಣೆಯಲ್ಲಿ ಡಿಎಂಕೆ ಅಧಿಕಾರ ಹಿಡಿಯಿತು. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕಿಯಾಗಿದ್ದ ಜಯಾ ಸೀರೆಯನ್ನು ಡಿಎಂಕೆ ಶಾಸಕರು ಸೆಳೆದ ದುಶ್ಶಾಸನ ಪ್ರಸಂಗವೂ ನಡೆಯಿತು. ಅಂದಿನಿಂದ ಜಯಾ ಸೀರೆ ಮೇಲೆ ಮೇಲಂಗಿ ಧರಿಸತೊಡಗಿದರು. ಈ ಅವಮಾನಕ್ಕೆ ಸೇಡು ತೀರಿಸಿಕೊಳ್ಳುವುದಾಗಿ ಶಪಥ ತೊಟ್ಟರು.
==1991–1996ರ ಅವಧಿಗೆ ಮುಖ್ಯಮಂತ್ರಿ==
*ಎಂಜಿಆರ್‌ ಯುಗ ಮರಳಿ ತರುತ್ತೇನೆ ಅನ್ನುತ್ತಲೇ ಕಣಕ್ಕಿಳಿದಿದ್ದ ಜಯಾಗೆ 1991ರ ಚುನಾವಣೆಯಲ್ಲಿ ತಮಿಳು ಮತದಾರರು ಕೈಬಿಚ್ಚಿ ಮತ ನೀಡಿದ್ದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ 1991–1996ರ ಅವಧಿಯಲ್ಲೇ ಜಯಾ ರಾಜಕೀಯವಾಗಿ, ವ್ಯಕ್ತಿಯಾಗಿ ಎದುರಿಲ್ಲದ ತ್ರಿವಿಕ್ರಮನಂತೆ ಬೆಳೆದರು.
 
*ಎಐಎಡಿಎಂಕೆ ನಾಯಕರು, ಜಯಾ ಸಂಪುಟದ ಸಚಿವರು, ಸಾರ್ವಜನಿಕ ವೇದಿಕೆಗಳಲ್ಲಿ, ಪಕ್ಷದ ಸಭೆಯಲ್ಲಿ ಯಾವುದೇ ಮುಜುಗರವಿಲ್ಲದೇ ಆಕೆಯ ಕಾಲಿಗೆ ಬೀಳತೊಡಗಿದರು. ಮದ್ರಾಸ್‌ನಲ್ಲಿ 50, 60 ಅಡಿಯ ಜಯಾ ಕಟೌಟ್‌ಗಳು ರಾಜಾಜಿಸ ತೊಡಗಿದವು. ಜಯಾರನ್ನು ಅದಿಪರಾಶಕ್ತಿಯ ಅವತಾರ, ಮದರ್‌ ಮೇರಿ ಪ್ರತಿರೂಪ ಎಂದೆಲ್ಲ ಬಿಂಬಿಸತೊಡಗಿದರು. ಎಂಜಿಆರ್‌ ನೆರಳಾಗಿ ರಾಜಕೀಯ ಪ್ರವೇಶಿಸಿದ್ದ ಈ ಕೆನೆಬಣ್ಣದ ಅಯ್ಯಂಗಾರ್ ಮನೆತನದ ಹೆಣ್ಣುಮಗಳು ದ್ರಾವಿಡ ಪ್ರಜ್ಞೆಯ ತಮಿಳು ಜನಮಾನಸದಲ್ಲಿ ಅಮ್ಮನಾಗಿ ಬೆಳೆಯತೊಡಗಿದಳು.
==ದತ್ತು ಮಗನ ವೈಭವದ ಮದುವೆ==
*ಇದೇ ಸಮಯದಲ್ಲೇ ಜಯಾ ದತ್ತುಪುತ್ರನ ಮದುವೆಯಾ ಯಿತು. ಆ ಕಾಲದ ಅತಿ ಆಡಂಬರದ ಮದುವೆ ಎಂಬ ಕುಖ್ಯಾ ತಿಯೂ ಅಂಟಿತು. ಜಯಾ, ಗೆಳತಿ ಶಶಿಕಲಾ ಜತೆ ಸೇರಿ ಖರೀದಿಸಿದ್ದ ಕೇಜಿಗಟ್ಟಲೇ ಆಭರಣ, ಲೆಕ್ಕವಿಲ್ಲದಷ್ಟು ಸೀರೆ, ಚಪ್ಪಲಿ ಅವರ ಮತ್ತೊಂದು ಮುಖ ಪರಿಚಯಿಸಿತು. ಬಡವರ ದನಿಯಾಗುವುದಾಗಿ ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದಿದ್ದ ಜಯಾ, ಅಳತೆ ಮೀರಿ ಚರಾಸ್ತಿ. ಸ್ಥಿರಾಸ್ತಿ ಖರೀದಿಸಿದ್ದರು.ಇದರಿಂದ ಭ್ರಷ್ಟಾಚಾರದ ಕೆಟ್ಟ ಹೆಸರು ಸುತ್ತಿಕೊಂಡಿದ್ದು ಕೊನೆಯವರೆಗೂ ಅದರಿಂದ ಬಿಡಿಸಿಕೊಳ್ಳಲು ನ್ಯಾಯಾಲಯದಲ್ಲಿ ಹೋರಾಡಬೇಕಾಯಿತು.
==1996ರ ಚುನಾವಣೆ ಕೇಮದ್ರದಲ್ಲಿ ಪ್ರಭಾವ==
*1996ರ ಚುನಾವಣೆಯಲ್ಲಿ ಡಿಎಂಕೆ ಅಧಿಕಾರಕ್ಕೆ ಬಂತು. ಆದರೆ, 1998ರ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದ ಜಯಾ ಕಿಂಗ್‌ ಮೇಕರ್‌ ಆದರು. ವಾಜಪೇಯಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು 13 ತಿಂಗಳಲ್ಲಿ ಹಠಾತ್‌ ಹಿಂತೆಗೆದುಕೊಂಡು ಸರ್ಕಾರ ಬೀಳಿಸಿದರು.
==ಪುನಃ ಮುಖ್ಯಮಂತ್ರಿ ಪದವಿ: ಏಳು-ಬೀಳು ==
*2001ರಲ್ಲಿ ಚುನಾವಣೆಯಾಗಿ ಬಹುಮತ ಪಡೆದು ಮತ್ತೆ ತಮಿಳುನಾಡಿನಲ್ಲಿ ಅಧಿಕಾರ ಹಿಡಿದರು. 2006ರ ಚುನಾವಣೆಯಲ್ಲಿ ಕರುಣಾನಿಧಿಗೆ ಮೇಲುಗೈ. ಕಾಂಗ್ರೆಸ್‌ ಸಾಮೀಪ್ಯದಿಂದ ಡಿಎಂಕೆ ಮೆರೆಯುತ್ತಿದೆ ಎಂದುಕೊಳ್ಳುವಾಗಲೇ 2011ರ ಚುನಾವಣೆಯಲ್ಲಿ ಅಮ್ಮಾಗೆ ಗೆಲವು. ಈ ಚುನಾವಣೆಯ ನಂತರ ಜಯಾ ನಡವಳಿಕೆಯಲ್ಲಿ ಬದಲಾವಣೆ ಕಂಡುಬಂತು. ವಯಸ್ಸಿನ ಪರಿಣಾಮವೋ ಏನೋ ಅವರ ಮಾತು, ಕೃತಿಗಳಲ್ಲಿ ಪಕ್ವತೆ, ಪ್ರಬುದ್ಧತೆ ಕಾಣಿಸಿಕೊಂಡಿತು.
==ಜೈಲುವಾಸ==
*ಅಕ್ರಮ ಆಸ್ತಿ ಪ್ರಕರಣದಲ್ಲಿ 2014ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದಾಗ ಒಂದು ತಿಂಗಳು ಜೈಲುವಾಸವನ್ನೂ ಅನುಭವಿಸಿದರು. ಅವರ ಶಾಸಕ ಸ್ಥಾನಕ್ಕೂ ಕುತ್ತುಬಂತು. ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದ ನಂತರ 2015ರ ಮೇ ತಿಂಗಳಲ್ಲಿ ಮತ್ತೆ ಮುಖ್ಯಮಂತ್ರಿ ಖುರ್ಚಿಯಲ್ಲಿ ಕುಳಿತರು.
==ನಾಲ್ಕನೇ ಬಅರಿ ಮುಖ್ಯಮಂತ್ರಿ==
*2016ರ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿದ ಜಯ ಅವರಿಗೆ ಒಲಿಯಿತು. ಆದರೆ, ಮುಖ್ಯಮಂತ್ರಿಯಾಗಿ ನಾಲ್ಕು ತಿಂಗಳ ಒಳಗಾಗಿ ಅವರ ಆರೋಗ್ಯ ಕ್ಷೀಣಿಸುತ್ತ ಬಂತು.ಬಹಿರಂಗ ಸಭೆಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆಯಾಗುತ್ತ ಬಂತು. ಹಸುಳೆಯಾಗಿದ್ದಾಗ ಮೈಸೂರಿನ ಲಕ್ಷ್ಮಿಪುರದ ಮನೆಯಲ್ಲಿ ಆಟವಾಡಿಕೊಂಡಿದ್ದ ಜಯಾರನ್ನು ನೋಡಿದ್ದ ಹಿರಿಯರು ಅವರನ್ನು ‘ಅತಿ ಮುದ್ದಾಗಿದ್ದ ಮಗು’ ಎಂದೇ ನೆನಪಿಸಿಕೊಳ್ಳುತ್ತಿದ್ದರು.<ref>[http://www.prajavani.net/news/article/2016/12/06/457039.html ವರ್ಣರಂಜಿತ ಬದುಕು ಮುಗಿಸಿದ ‘ಅಮ್ಮ’;6 Dec, 2016]</ref>
==ಅನಾರೋಗ್ಯ==
 
== ಅಕ್ರಮ ಆಸ್ತಿ ಪ್ರಕರಣ ==
"https://kn.wikipedia.org/wiki/ಜೆ._ಜಯಲಲಿತಾ" ಇಂದ ಪಡೆಯಲ್ಪಟ್ಟಿದೆ