ಪೆರಿಯಾರ್ ರಾಮಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೫೫ ನೇ ಸಾಲು:
 
==ದ್ರಾವಿಡನಾಡು ಸಮ್ಮೇಳನ ಸಂಘಟಕರಾಗಿ==
* 1939ರಲ್ಲಿ ದ್ರಾವಿಡನಾಡು ಸಮ್ಮೇಳನ ಸಂಘಟಿಸಿದ ಪೆರಿಯಾರ್<ref>http://www.manavabandhutva.in/article.aspx?id=1</ref>, ತಮಿಳು, ತೆಲುಗು, ಕನ್ನಡ, ಮಲಯಾಳಿ ಭಾಷೆಗಳನ್ನಾಡುವ ಜನರನ್ನು ಸೇರಿಸಿ ದ್ರಾವಿಡ ರಾಜ್ಯ ನಿರ್ಮಾಣ ಮಾಡಬೇಕೆನ್ನುವ ಆಶಯ ಹೊಂದಿದ್ದರು. ಭಾರತ ಸ್ವಾತಂತ್ರ್ಯ ಪಡೆಯುವ ಸಂದರ್ಭದಲ್ಲಿ ಪಾಕಿಸ್ತಾನದ ರೀತಿಯಲ್ಲಿ, ಪ್ರತ್ಯೇಕ ದ್ರಾವಿಡನಾಡು ಅಸ್ತಿತ್ವಕ್ಕೆ ಬರಬೇಕೆಂದು ಪೆರಿಯಾರ್ ಒತ್ತಾಯಿಸಿದ್ದರು.
* 1916ರಲ್ಲಿ ಸ್ಥಾಪನೆಯಾಗಿದ್ದ ಸೌತ್ ಇಂಡಿಯನ್ ಲಿಬರೇಷನ್ ಪಕ್ಷ, ಜಸ್ಟಿಸ್ ಪಾರ್ಟಿ ಎಂದು ಹೆಸರಾಗಿತ್ತು. 1938ರಿಂದ 1944ರ ವರೆಗೆ ಪೆರಿಯಾರ್, ಜಸ್ಟಿಸ್ ಪಾರ್ಟಿ ಮುನ್ನಡೆಸಿದರು. ಇದೇ ಜಸ್ಟಿಸ್ ಪಾರ್ಟಿ, 1944ರಲ್ಲಿ ದ್ರಾವಿಡ ಕಳಗಂ ಎಂದು ಬದಲಾಯಿತು. ನಗರವಾಸಿಗಳು, ಹಳ್ಳಿಗರು ಮತ್ತು ವಿದ್ಯಾರ್ಥಿಗಳು ದ್ರಾವಿಡ ಕಳಗಂ ಪಕ್ಷದ ತತ್ವಗಳಿಂದ ಆಕರ್ಷಿತರಾದರು. ದ್ರಾವಿಡ ಕಳಗಂ ಪಕ್ಷ, ಸಾಮಾಜಿಕ ಸುಧಾರಣೆಯನ್ನು ತೀವ್ರಗೊಳಿಸಿತು.
* ಅಸ್ಪೃಶ್ಯತೆ ನಿವಾರಣೆಗೆ ತೀವ್ರ ತರವಾದ ಹೋರಾಟ ಆರಂಭವಾಯಿತು. 9ನೇ ಜುಲೈ 1948ರಲ್ಲಿ ಪೆರಿಯಾರ್ ಅವರು ಮಣಿಯಮ್ಮಾಯಿಯವರನ್ನು ಎರಡನೇ ಪತ್ನಿಯಾಗಿ ಸ್ವೀಕರಿಸಿದರು. ತಮಗಿಂತ 42 ವರ್ಷ ಚಿಕ್ಕ ವಯಸ್ಸಿನ ಹೆಣ್ಣುಮಗಳನ್ನು ವಿವಾಹವಾಗಿ, ಪೆರಿಯಾರ್ ತಪ್ಪು ಉದಾಹರಣೆ ಸೃಷ್ಟಿಸುತ್ತಿದ್ದಾರೆ, ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ಕೆಲವರು ಆರೋಪಿಸಿದರು.
೬೧ ನೇ ಸಾಲು:
 
==ವೈಚಾರಿಕ ಮನೋಭಾವ==
* ಹಿಂದೂ ಧರ್ಮದಲ್ಲಿನ ಜಾತಿ ಪದ್ಧತಿಯನ್ನು ಆಧಾರ ಸಹಿತ ವಿರೋಧಿಸಿದ ಅವರು ‘‘ಜಾತಿಯಿಂದ ಮನುಷ್ಯ ಅವಮಾನಿತನಾಗುತ್ತಾನೆ ಹಾಗೂ ಧರ್ಮದಿಂದ ಜಾತಿ ಅವಮಾನಿತವಾಗುತ್ತದೆ. ನಾವು ಒಂದನ್ನು ಜೀವಂತ ಉಳಿಸಿಕೊಂಡು ಮತ್ತೊಂದನ್ನು ನಾಶಪಡಿಸುವುದಾದರೂ ಹೇಗೆ’’ ಎಂದು ಪ್ರಶ್ನಿಸಿದ್ದಾರೆ.
* ‘‘ಆಧ್ಯಾತ್ಮ ಮತ್ತು ಭಾವನಾತ್ಮಕತೆಗಳ ಮೂಲಕ ಮುಕ್ತಿ ಪ್ರಾಪ್ತಿಗಾಗಿ ದೇವರನ್ನು ಸಾಕ್ಷಾತ್ಕರಿಸಿಕೊಳ್ಳಲು ಮಾಡಿದ ವಿಫಲ ಪ್ರಯತ್ನಗಳನ್ನು ಪಕ್ಕಕ್ಕಿಟ್ಟು; ಇತಿಹಾಸದ ಉದ್ದಕ್ಕೂ ಮಾನವ ತನ್ನ ವಿಮರ್ಶಾತ್ಮಕ ಬುದ್ದಿಯನ್ನು ಪರಿಣಾಮಕಾರಿಯಾಗಿ ಉಪಯೋಗಿಸಿಕೊಂಡಿದ್ದರೆ, ಮಾನವ ಸಮಾಜದ ಪ್ರಗತಿ ಅನೇಕಪಟ್ಟು ಹೆಚ್ಚಾಗಿ, ವೇಗವಾಗಿ ಮತ್ತು ಉನ್ನತ ಮಟ್ಟದ್ದಾಗಿ ಇರುತ್ತಿತ್ತು’’ ಎಂದು ಅಭಿಪ್ರಾಯಪಡುತ್ತಾರೆ. ಪೆರಿಯಾರರ ನಾಸ್ತಿಕವಾದ ಮೇಲ್ಮಟ್ಟದ ಬೌದ್ದಿಕ ಹಂತದಲ್ಲಿ ದೇವರ ಅಸ್ತಿತ್ವವನ್ನು ತಿರಸ್ಕರಿಸುವುದೇ ಆಗಿದೆ.
* 1949ರಲ್ಲಿ ಪೆರಿಯಾರರ ಮೆಚ್ಚಿನ ಶಿಷ್ಯ ಸಿ.ಎನ್.ಅಣ್ಣಾದುರೈ ಅವರು ಡಿಎಂಕೆ ಅಥವಾ ದ್ರಾವಿಡ ಮುನ್ನೇತ್ರ ಕಳಗಂ ಹೆಸರಿನಲ್ಲಿ ಪ್ರತ್ಯೇಕ ಪಕ್ಷ ಸ್ಥಾಪಿಸಿದರು. ಕೆಲವರ್ಷಗಳ ನಂತರ ಅಣ್ಣಾದುರೈ ತಮಿಳುನಾಡಿನ ಮುಖ್ಯಮಂತ್ರಿಯಾದರು. ತಮಿಳುನಾಡಿನ ಮಾಜಿ ಸಿಎಂಗಳಾದ ಕರುಣಾನಿಧಿ ಮತ್ತು ಎಂ.ಜಿ.ರಾಮಚಂದ್ರನ್ ಅಣ್ಣಾ ಶಿಷ್ಯರೇ. ತಮ್ಮಿಂದ ಯಾರೇ ದೂರವಾದರೂ ಧೃತಿಗೆಡದ ಪೆರಿಯಾರ್‌, ತಮ್ಮ ಹೋರಾಟ ಮುಂದುವರಿಸಿದರು.
* 1956ರಲ್ಲಿ ಅಂದಿನ ಮದ್ರಾಸಿನ ಮರಿನಾ ಬೀಚ್‌ನಲ್ಲಿ ಶ್ರೀರಾಮನ ಚಿತ್ರಗಳನ್ನು ಸುಟ್ಟರು, ಆ ವೇಳೆ ಪೆರಿಯಾರ್‌ರನ್ನು ಬಂಧಿಸಿ ಜೈಲಿನಲ್ಲಿ ಇರಿಸಲಾಗಿತ್ತು. ಮನುಷ್ಯರೆಲ್ಲರೂ ಸಮಾನರೇ, ಮುಗ್ಧ ಜನರನ್ನು ಶೋಷಣೆ ಮಾಡುವ ಸಲುವಾಗಿಯಷ್ಟೇ ಜಾತಿ ಮತ್ತು ವರ್ಗಗಳನ್ನು ಸೃಷ್ಟಿಸಲಾಗಿದೆ ಎಂದು ಪೆರಿಯಾರ್ ಸಾರುತ್ತಿದ್ದರು.