ಬಾಬು ರಾಜೇಂದ್ರ ಪ್ರಸಾದ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚು →‎ಮಹಾನ್ ಸಮಾಜ ಸೇವಕ, ಸ್ವಾತಂತ್ರ್ಯ ಹೋರಾಟಗಾರ: clean up, replaced: ಬೊಂಬಾಯಿ → ಮುಂಬಯಿ using AWB
೩೯ ನೇ ಸಾಲು:
೧೯೩೪ರ ಜನವರಿ ೧೫ರಂದು ಸಂಭವಿಸಿದ ಭಯಂಕರ ಭೂಕಂಪ ಹಾಗೂ ಪ್ರವಾಹಗಳಿಂದ ಇಡೀ ಬಿಹಾರವೇ ತತ್ತರಿಸಿತ್ತು. ಅದರ ಮರುದಿನವೇ ಸೆರೆಮನೆಯಿಂದ ಬಿಡುಗಡೆ ಹೊಂದಿದ ಪ್ರಸಾದರು, ತಮ್ಮ ತೀವ್ರ ಅನಾರೋಗ್ಯವನ್ನೂ ಲೆಕ್ಕಿಸದೆ ಬಹುದೊಡ್ಡ ಪ್ರಮಾಣದಲ್ಲಿ ಸಂತ್ರಸ್ತರಿಗೆ ನೆರವು ನೀಡುವ ಕಾರ್ಯವನ್ನು ಸಂಘಟಿಸಿದರು. ಮರುವರ್ಷವೇ ಕ್ವೆಟ್ಟಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಂತ್ರಸ್ತರಾದವರಿಗೂ ನೆರವು ಕಳಿಸಲು ಶ್ರಮಿಸಿದರು. ಸರ್ಕಾರದ ಕಾರ್ಯಕ್ರಮಕ್ಕಿಂತ ಯಶಸ್ವಿಯಾದ ಅವರ ಕಾರ್ಯಕ್ರಮ ಅವರ ಸಂಘಟನಾ ಚಾತುರ್ಯಕ್ಕೆ ಹಾಗೂ ಕ್ರಿಯಾಶಕ್ತಿಗೆ ಸಾಕ್ಷಿಯಾಗಿದ್ದವು. ಅವರ ಈ ಎಲ್ಲ ಜನಹಿತ ಕಾರ್ಯಗಳಿಂದಾಗಿ ರಾಜೇಂದ್ರ ಪ್ರಸಾದರು ಜನರ ಪ್ರೀತಿಯ “ರಾಜೆನ್ ಬಾಬು” ಆದರು.
 
೧೯೩೪ರಲ್ಲಿ ಬೊಂಬಾಯಿಮುಂಬಯಿ (ಈಗಿನ ಮುಂಬಯಿ) ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ; ೧೯೨೯ ಹಾಗೂ ೧೯೩೬ರಲ್ಲಿ ಬಿಹಾರದ ಪ್ರಾಂತೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷತೆ, ಅಖಿಲ ಭಾರತ ಕಾಂಗ್ರೆಸ್‌ನ ಅಧ್ಯಕ್ಷ ಪದವಿ – ಇವು ಅವರು ಅಲಂಕರಿಸಿದ ಕೆಲವು ಪ್ರಮುಖ ಹುದ್ದೆಗಳು.
 
೧೯೩೫ರ ಭಾರತ ಸರ್ಕಾರ ಕಾಯಿದೆ ಪ್ರಕಾರ ೧೯೩೭ರಲ್ಲಿ ಚುನಾವಣೆ ನಡೆದು, ಮಂತ್ರಿ ಮಂಡಲಗಳು ರಚನೆಯಾಗುವ ಕಾಲಕ್ಕೆ ಸಕ್ರಿಯ ಪಾತ್ರ ವಹಿಸಿದ ಕಾಂಗ್ರೆಸ್ ಸಂಸದೀಯ ಸಮಿತಿಯ ಒಬ್ಬ ಪ್ರಮುಖ ಸದಸ್ಯರು ರಾಜೆನ್ ಬಾಬು. 1946ರಲ್ಲಿ ಭಾರತದ ತಾತ್ಕಾಲಿಕ ಸರ್ಕಾರದಲ್ಲಿ ಆಹಾರ ಮತ್ತು ಕೃಷಿ ಖಾತೆಗಳ ಮಂತ್ರಿಯಾಗಿ ಗಣನೀಯ ಸಾಧನೆ ಮಾಡಿದರು. ಅದೇ ವರ್ಷ ಭಾರತದ ಸಂವಿಧಾನವನ್ನು ರೂಪಿಸಲು ಹಾಗೂ ತಾತ್ಕಾಲಿಕ ಸಂಸತ್ತಾಗಿ ಕಾರ್ಯ ನಿರ್ವಹಿಸಲು ರಚಿತವಾದ ಸಂವಿಧಾನ ಸಭೆಯ ಅಧ್ಯಕ್ಷರಾಗಿ ಆಯ್ಕೆಯಾದರು. ಭಾರತೀಯ ಸಂವಿಧಾನ ನಿರ್ಮಾಣದಲ್ಲಿ ರಾಜೀನ್‌ಬಾಬು ಅವರ ಕಾಣಿಕೆಯು ಅಮೂಲ್ಯವಾದುದು.