ದಶಾವತಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
೪ ನೇ ಸಾಲು:
ಅವತಾರ ಎಂದರೆ ಇಳಿದುಬರುವುದು ಎಂದರ್ಥ. ಇದು ಭಗವಂತ ಜೀವಕೋಟಿಯ ಉದ್ಧಾರಕ್ಕೆ ಕೈಕೊಳ್ಳುವ ಒಂದು ಕ್ರಿಯೆ. ಲೋಕದಲ್ಲಿ ಅಧರ್ಮ ಹೆಚ್ಚಿದಾಗ [[ಧರ್ಮ]]ವನ್ನು ಪುನಃಸ್ಥಾಪಿಸಲು, ಹಾಗು ಅರ್ಹರನ್ನು ಅಥವಾ ಭಕ್ತರನ್ನು ಹುಟ್ಟು ಮತ್ತು ಸಾವುಗಳ ಚಕ್ರದಿಂದ ಮುಕ್ತಗೊಳಿಸಲು ಸುಜನರನ್ನು ಎತ್ತಿಹಿಡಿದು ದುರ್ಜನರನ್ನು ದಮನಗೊಳಿಸುವುದರ ಮೂಲಕ ಧರ್ಮಸಂಸ್ಥಾಪನೆಗೆ ಪರಮಾತ್ಮ ಕಾಲಕಾಲಕ್ಕೆ ಯಾವುದೋ ಒಂದು ರೂಪದಲ್ಲಿ ಭೂಮಿಗೆ ಇಳಿದುಬರುತ್ತೇನೆ ಎಂದು ಶ್ರೀ[[ಕೃಷ್ಣ]] [[ಭಗವದ್ಗೀತೆ]]ಯಲ್ಲಿ ಹೇಳಿರುವ ಮಾತು ಅವತಾರ ಎನ್ನುವುದರ ಉದ್ದೇಶವನ್ನು ಸೂಚಿಸುತ್ತದೆ.
 
ಈ ಅವತಾರಗಳ ಸಂಖ್ಯೆಯ ವಿಚಾರದಲ್ಲಿ ಒಮ್ಮತವಿಲ್ಲ. ಅಲ್ಲದೆ ಅವತಾರಗಳು [[ವಿಷ್ಣು]]ವಿಗೇ ಮೀಸಲಾದವಲ್ಲ. [[ಶಿವ]]ನೂ ಅವತಾರ ಮಾಡಿದ್ದಾನೆ ಎಂಬುದನ್ನೂ ಮರೆಯುವಂತಿಲ್ಲ. ಮಹೇಶ್ವರ ಇಪ್ಪತ್ತೆಂಟು ಅವತಾರಗಳನ್ನು ಎತ್ತಿದ್ದಾನೆ ಎಂದು [[ವಾಯುಪುರಾಣವಾಯು ಪುರಾಣ]] ಹೇಳುತ್ತದೆ.
ಹಿಂದೂ ಸಂಪ್ರದಾಯ ವಿಷ್ಣುವಿನ ಅವತಾರಗಳ ಸಂಖ್ಯೆ ಹತ್ತು ಎಂದು ನಂಬಿದೆ. ಹಿಂದೆ ಸಹಸ್ರಾರು ಆಗಿದ್ದವೆಂದೂ ಭವಿಷ್ಯದಲ್ಲಿ ಅನೇಕ ಸಹಸ್ರ ಅವತಾರಗಳು ಆಗುತ್ತವೆ ಎಂದೂ [[ಹರಿವಂಶ]]ದಲ್ಲಿ ಹೇಳಿದೆ. ಪೂರ್ವಮೀಮಾಂಸಾಚಾರ್ಯರಾದ [[ಕುಮಾರಿಲ ಭಟ್ಟ]]ರು ದಶಾವತಾರಗಳಲ್ಲೊಂದಾದ ಬುದ್ಧಾವತಾರವನ್ನು ವಿಷ್ಣುವಿನದೆಂಬುದನ್ನು ಒಪ್ಪುವುದಿಲ್ಲ.
"https://kn.wikipedia.org/wiki/ದಶಾವತಾರ" ಇಂದ ಪಡೆಯಲ್ಪಟ್ಟಿದೆ