ಗ್ರಹಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ವಿಸ್ತರಣೆ
೧೧ ನೇ ಸಾಲು:
ಕ್ರಾಂತಿವೃತ್ತತಲದ ಮೇಲೆಯೇ ಚಂದ್ರಕಕ್ಷೆಯೂ ಇದ್ದಿದ್ದರೆ ಪ್ರತಿ ಅಮಾವಾಸ್ಯೆಯಂದು ಸೂರ್ಯಗ್ರಹಣವೂ ಪ್ರತಿ ಹುಣ್ಣಿಮೆಯಂದು ಚಂದ್ರಗ್ರಹಣವೂ ಆಗುತ್ತಿದ್ದುವು. ಹೀಗಾಗದಿರುವುದಕ್ಕೆ ಮುಖ್ಯಕಾರಣಗಳು ಎರಡು : ಒಂದು, ಚಂದ್ರಕಕ್ಷಾತಲ ಕ್ರಾಂತಿವೃತ್ತತಲಕ್ಕೆ ಬಾಗಿಕೊಂಡಿರುವುದು ; ಎರಡು, ಪಾತಬಿಂದುಗಳ ಹಿನ್ನಡೆ (ರಿಟ್ರೊಗ್ರೇಡ್ ಮೋಷನ್). ಇವು ವಾರ್ಷಿಕವಾಗಿ 20 ಡಿಗ್ರಿಗಳಷ್ಟು ಪ್ರದಕ್ಷಿಣ ದಿಶೆಯಲ್ಲಿ ಸಂಚರಿಸುತ್ತ ಸುಮಾರು 18 ವರ್ಷಗಳಿಗೊಮ್ಮೆ ಮೊದಲಿನ ಸ್ಥಾನಗಳನ್ನು ಐದುತ್ತವೆ. ಈ ಕಾರಣಗಳಿಂದಲೆ ಪ್ರತಿ ಅಮಾವಾಸ್ಯೆ (ಚಂದ್ರ ಮತ್ತು ಸೂರ್ಯರ ರೇಖಾಂಶ ವ್ಯತ್ಯಾಸ ಶೂನ್ಯವಾಗುವ ಘಟನೆ) ಮತ್ತು ಹುಣ್ಣಿಮೆಗಳಂದು (ರೇಖಾಂಶ ವ್ಯತ್ಯಾಸ 180 ಡಿಗ್ರಿ ಆಗುವ ಘಟನೆ) ಚಂದ್ರನ ನೆರಳು ಭೂಮಿಯ ಮೇಲೆ ಬೀಳುವುದಿಲ್ಲ ಅಥವಾ ಭೂಮಿಯ ನೆರಳು ಚಂದ್ರನ ಮೇಲೆ ಬೀಳುವುದಿಲ್ಲ ಮತ್ತು ಗ್ರಹಣಗಳು ಸಂಭವಿಸುವುದಿಲ್ಲ. ಇದರ ಪರಿಣಾಮವೆಂದರೆ ಯಾವುದಾದರೂ ಒಂದು ವರ್ಷದಲ್ಲಿ ಆಗಬಹುದಾದ ಗ್ರಹಣಗಳ ಒಟ್ಟು ಸಂಖ್ಯೆ ಏಳಕ್ಕಿಂತ ಹೆಚ್ಚಾಗಿರುವುದಿಲ್ಲ ಮತ್ತು ಎರಡೇ ಎರಡರಷ್ಟು ಕಡಿಮೆಯಾಗಿರಬಹುದು. ಗರಿಷ್ಠ ಸಂಖ್ಯೆಯಾದ ಏಳರಲ್ಲಿ ಐದು ಸೂರ್ಯ ಗ್ರಹಣಗಳು ಮತ್ತು ಎರಡು ಚಂದ್ರಗ್ರಹಣಗಳು ; ಇಲ್ಲವೇ ನಾಲ್ಕು ಸೂರ್ಯಗ್ರಹಣಗಳು ಮತ್ತು ಮೂರು ಚಂದ್ರಗ್ರಹಣಗಳು ಇವೆ. ಕನಿಷ್ಠ ಸಂಖ್ಯೆಯಾದ ಎರಡರಲ್ಲಿ ಎರಡೂ ಸೂರ್ಯಗ್ರಹಣಗಳೇ. ಅಂದಮಾತ್ರಕ್ಕೆ ಯಾವುದೇ ಒಂದು ಸ್ಥಳದಲ್ಲಿರುವ ವೀಕ್ಷಕನಿಗೆ ಇವೆಲ್ಲವೂ ಕಾಣಲೇಬೇಕೆಂದೇನೂ ಇಲ್ಲ. ಭೂಮಿಯ ಮೇಲಿನ ಒಂದು ಸ್ಥಳದಿಂದ ಕಾಣಬಹುದಾದ ಗ್ರಹಣ ಮತ್ತು ಅದರ ವಿನ್ಯಾಸ (ಆಂಶಿಕವೋ ಪೂರ್ಣವೋ ಎಂಬ ಅಂಶ) ಗ್ರಹಣ ಸಂಭವಿಸುವಾಗ ಆ ಸ್ಥಳದ ಸ್ಥಾನವನ್ನು (ಅಂದರೆ ಅಕ್ಷಾಂಶ ರೇಖಾಂಶಗಳನ್ನು) ಅವಲಂಬಿಸಿ ಇವೆ.
===ಚಂದ್ರಗ್ರಹಣ===
[[File:Umbra01.svg|thumb|upright=1.3|Umbra, penumbra and antumbra cast by an opaque object occulting a larger light source]]
ಭೂಮಿಯ ಸೂರ್ಯವಿಮುಖ ಪಾಶ್ರ್ವದಲ್ಲಿ ಶಂಕ್ವಾಕಾರದ ನೆರಳು ಉಂಟಾಗಿರುತ್ತದೆ. ಇದಕ್ಕೆ ಭೂಮಿಯ ನೆರಳಿನ ಶಂಕು ಅಥವಾ ದಟ್ಟ ನೆರಳಿನ ಶಂಕು (ಅಂಬ್ರ) ಎಂದು ಹೆಸರು. ಏಅಉ ಮತ್ತು ಐಆಉ ವಲಯದಲ್ಲಿ ಭಾಗಶಃ ನೆರಳಿರುತ್ತದೆ. ಇದಕ್ಕೆ ಅರೆನೆರಳಿನ ಶಂಕು (ಪಿನಂಬ್ರ) ಎಂದು ಹೆಸರು. ಈ ವಲಯದಿಂದ ನೋಡುವಾತನಿಗೆ ಸೂರ್ಯನ ಕೆಲವು ಭಾಗ ಮಾತ್ರ ಕಾಣುವುದಷ್ಟೆ. ಉಳಿದ ಭಾಗವನ್ನು ಭೂಮಿ ಮರೆ ಮಾಡಿರುತ್ತದೆ. ವೃತ್ತ ಭೂಮಿಯ ಸುತ್ತು ಇರುವ ಚಂದ್ರನ ಕಕ್ಷೆಯನ್ನು ಸೂಚಿಸುವುದು.
 
Line ೧೬ ⟶ ೧೭:
 
ಚಂದ್ರ ತನ್ನ ಕಕ್ಷೆಯಲ್ಲಿ ಭೂಮಿಯ ಸುತ್ತ ಸಂಚರಿಸುವಾಗ ಭೂಮಿಯ ನೆರಳಿನೊಳಕ್ಕೆ ಬಂದರೆ ಆಗ ಚಂದ್ರಗ್ರಹಣವಾಗುತ್ತದೆ. ಈ ಗ್ರಹಣವಾಗಬೇಕಾದರೆ ಸೂರ್ಯ ಭೂಮಿ ಮತ್ತು ಚಂದ್ರ ಇವು ಮೂರೂ ಸುಮಾರಾಗಿ ಒಂದೇ ಸರಳ ರೇಖೆಯಲ್ಲಿರಬೇಕು. ಚಂದ್ರ ತನ್ನ ಪಥದ ಒಂದು ಪಾತಬಿಂದುವಿನಲ್ಲೋ (ರಾಹು ಇಲ್ಲವೆ ಕೇತು) ಇಲ್ಲವೇ ಅದರ ಹತ್ತಿರವೋ ಇದ್ದು ಸೂರ್ಯನೊಂದಿಗೆ ವಿಯುತಿಯಲ್ಲಿದ್ದರೆ (ಅಪೊಸಿಷನ್) ಅಂದರೆ ಹುಣ್ಣಿಮೆಯಾಗಿದ್ದರೆ ಆಗ ಚಂದ್ರ ಗ್ರಹಣವಾಗುತ್ತದೆ. ಚಂದ್ರಪಥ ನೇರವಾಗಿ ದಟ್ಟ ನೆರಳಿನ ಮಧ್ಯೆ ಹಾದು ಹೋಗಬಹುದು ಇಲ್ಲವೇ ಸ್ವಲ್ಪ ಮೇಲೆ ಅಥವಾ ಕೆಳಗೆ ಹೋಗಬಹುದು. ಇವು ಪಾತರೇಖೆಯ ವಿನ್ಯಾಸವನ್ನು ಅವಲಂಬಿಸಿರುತ್ತವೆ. ಅರೆನೆರಳಿನ ಮೂಲಕ ಚಂದ್ರ ಹಾದು ಹೋಗುವಾಗ ಚಂದ್ರ ಬಿಂಬಿಸುವ ಬೆಳಕು ಸ್ವಲ್ಪ ಮಂಕಾಗಬಹುದು. ದಟ್ಟ ನೆರಳಿನ ಹತ್ತಿರ ಹೋದ ಹಾಗೆಲ್ಲ ಈ ಬೆಳಕು ಕಡಿಮೆಯಾಗುತ್ತ ಹೋಗಿ ಆ ಭಾಗವನ್ನು ಪ್ರವೇಶಿಸುತ್ತಿರುವಾಗ ಚಂದ್ರನ ಸ್ವಲ್ಪ ಭಾಗಕ್ಕೆ ಬೆಳಕು ಕಡಿದುಹೋದ ಹಾಗಾಗುತ್ತದೆ. ಇದಕ್ಕೆ ಚಂದ್ರನ ಪಾಶ್ರ್ವಗ್ರಹಣ ಎಂದು ಹೆಸರು. ದಟ್ಟ ನೆರಳಿನ ಭಾಗದಲ್ಲಿ ಪೂರ್ತ ಮುಳುಗಿದರೆ ಚಂದ್ರನ ಪೂರ್ಣಗ್ರಹಣವಾಗುತ್ತದೆ. ಚಂದ್ರ್ರ ತನ್ನ ಪಥದಲ್ಲಿ ಮುಂದುವರಿದಂತೆ ಪೂರ್ಣ ಗ್ರಹಣವು ಪಾಶ್ರ್ವಗ್ರಹಣವಾಗಿ ಮೋಕ್ಷಗೊಂಡು ಅರೆನೆರಳಿನ ಭಾಗದಲ್ಲಿ ಮುಳುಗಿ ಹೊರಬರುತ್ತದೆ. ಪೂರ್ಣಗ್ರಹಣವಾಗುವುದಕ್ಕೆ ಮುಂಚೆ ಮತ್ತು ಆದ ಮೇಲೆ ಪಾಶ್ರ್ವಗ್ರಹಣವಾಗುತ್ತದೆ ಎಂಬುದನ್ನು ಗಮನಿಸಬೇಕು. ಭೂಮಿಯ ದಟ್ಟ ನೆರಳಿನ ಭಾಗವನ್ನು ಚಂದ್ರ ಸ್ಪರ್ಶಿಸಿ ಮುಂದಕ್ಕೆ ಸರಿದಾಗ ಮಾತ್ರ ಚಂದ್ರಗ್ರಹಣವಾಗಿದೆ ಎನ್ನುತ್ತಾರೆ. ಅರೆ ನೆರಳಿನ ಭಾಗದಲ್ಲಿದ್ದಾಗ ಆಗುವ ಗ್ರಹಣಕ್ಕೆ ಜನರು ಅಷ್ಟೇನೂ ಪ್ರಾಮುಖ್ಯ ನೀಡುವುದಿಲ್ಲ. ಅದನ್ನು ಆಸಕ್ತಿಯಿಂದ ವೀಕ್ಷಿಸುವುದೂ ಇಲ್ಲ. ಭೂಮಿಯನ್ನು ಚಂದ್ರ ಪಶ್ಚಿಮದಿಂದ ಪೂರ್ವಕ್ಕೆ ಸುತ್ತುತ್ತಿರುವುದರಿಂದ ಗ್ರಹಣವಾಗುವಾಗ ಚಂದ್ರನ ಪೂರ್ವಭಾಗದಲ್ಲಿ ಸ್ಪರ್ಶವೂ ಪಶ್ಚಿಮ ಭಾಗದಲ್ಲಿ ಮೋಕ್ಷವೂ ಆಗುತ್ತವೆ. ಭೂಮಿಯಿಂದಾದ ನೆರಳಿನ ಸೀಳ್ನೋಟವನ್ನು ಮತ್ತು ಗ್ರಹಣವಾಗುವಾಗ ಚಂದ್ರ ವಿವಿಧ ಭಾಗಗಳಲ್ಲಿರುವುದನ್ನು ಚಿತ್ರ(5)ರಲ್ಲಿ ತೋರಿಸಿದೆ. ಚಂದ್ರ ಕ್ಷಿತಿಜಕ್ಕಿಂತ ಮೇಲಿದ್ದಾಗ ಗ್ರಹಣವಾದರೆ ಅದನ್ನು ನೋಡಲು ಸಾಧ್ಯವಾಗುವ ಭೂಮಿಯ ಮೇಲಿನ ಭಾಗ ಹೆಚ್ಚು. ಇದು ಭೂಮಿಯ ಮೇಲ್ಮೈಯ ಸುಮಾರು ಅರ್ಧಕ್ಕಿಂತ ಹೆಚ್ಚು ಭಾಗಗಳಿಂದ ಕಾಣಿಸುತ್ತದೆ. ಅದೂ ಅಲ್ಲದೆ ಎಲ್ಲ ಕಡೆಗಳಿಂದಲೂ ಒಂದೇ ತರಹ ಗ್ರಹಣ ಕಾಣಿಸುತ್ತದೆ.
 
==ಗ್ರಹಣಗಳ ವಿಧ==
ಪಾತರೇಖೆಯ ವಿನ್ಯಾಸವನ್ನು ಅನುಸರಿಸಿ ಗ್ರಹಣವನ್ನು ವಿಭಾಗಿಸಬಹುದು.
"https://kn.wikipedia.org/wiki/ಗ್ರಹಣ" ಇಂದ ಪಡೆಯಲ್ಪಟ್ಟಿದೆ