ಗ್ರಹಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೬ ನೇ ಸಾಲು:
ಒಂದು ಆಕಾಶಕಾಯ ಇನ್ನೊಂದು ಆಕಾಶ ಕಾಯದ ನೆರಳಿನಿಂದ ಆಂಶಿಕವಾಗಿ ಇಲ್ಲವೇ ಪೂರ್ಣವಾಗಿ ಅಸ್ಫುಟವಾಗುವಿಕೆ (ಎಕ್ಲಿಪ್ಸ್, ಸೆಲೆಸ್ಟಿಯಲ್). ಗ್ರಹಣಕ್ಕೆ ಒಳಗಾಗುವ ಕಾಯ ಸ್ವಯಂಪ್ರಭಾಯುತವಾಗಿದ್ದು ಅಪಾರ ಕಾಯವೊಂದರ ನೆರಳಿನಿಂದ ಅಸ್ಫುಟವಾಗುವುದು ಒಂದು ಬಗೆಯ ಗ್ರಹಣ; ಬದಲು ಅದು ಪ್ರತಿಫಲಿತ ಬೆಳಕಿನಿಂದ ಹೊಳೆಯುವುದಾಗಿದ್ದು ಅಪಾರ ಕಾಯವೊಂದು ಇದಕ್ಕೂ ಇದರ ಬೆಳಕಿನ ಆಕರಕ್ಕೂ ನಡುವೆ ಸರಿಯುವಾಗ ಅಸ್ಫುಟವಾಗುವುದು ಇನ್ನೊಂದು ಬಗೆಯ ಗ್ರಹಣ. ಮೊದಲನೆಯ ಪ್ರರೂಪದ ಗ್ರಹಣಕ್ಕೆ ಆಚ್ಛಾದನೆ (ಅಕ್ಕಲ್ಟೇಷನ್) ಎಂದು ಹೆಸರು. ಇದಕ್ಕೆ [[ಸೂರ್ಯಗ್ರಹಣ]] ಮತ್ತು [[ನಕ್ಷತ್ರಗ್ರಹಣ]] ನಿದರ್ಶನಗಳು. ಸೂರ್ಯಗ್ರಹಣದಲ್ಲಿ ವೀಕ್ಷಕನಿಗೂ [[ಸೂರ್ಯ]]ನಿಗೂ ನಡುವೆ [[ಚಂದ್ರ]] ಸರಿಯುತ್ತದೆ. ನಕ್ಷತ್ರಗ್ರಹಣದಲ್ಲಾದರೋ ವೀಕ್ಷಕನಿಗೂ ನಕ್ಷತ್ರಕ್ಕೂ ನಡುವೆ ಚಂದ್ರ ಇಲ್ಲವೇ ಒಂದು ಗ್ರಹ ಸರಿಯುತ್ತದೆ. ಗ್ರಹಣಕಾರಕ [[ಯಮಳ ನಕ್ಷತ್ರ]]ಗಳು (ಎಕ್ಲಿಪ್ಸಿಂಗ್ ಬೈನರಿ ಸ್ಟಾರ್ಸ್) ಕೂಡ ಈ ಬಗೆಯ ಗ್ರಹಣಕ್ಕೆ ನಿದರ್ಶನಗಳು. ಎರಡನೆಯ ಪ್ರರೂಪದ ಗ್ರಹಣಕ್ಕೆ ಚಂದ್ರ ಗ್ರಹಣ ಅದರಂತೆಯೇ ಗ್ರಹಗಳ ಉಪಗ್ರಹಗಳ ಗ್ರಹಣಗಳು ಕೂಡ ಉದಾಹರಣೆಗಳು. ರೂಢಿಯಲ್ಲಿ ಗ್ರಹಣ ಎನ್ನುವ ಪದದ ಬಳಕೆ ಭೂಮಿಯಿಂದ ಕಾಣುವಂತೆ ಸೂರ್ಯ ಮತ್ತು ಚಂದ್ರಗ್ರಹಣಗಳನ್ನು ಕುರಿತ ಉಂಟು. ಪ್ರಸಕ್ತ ಲೇಖನದಲ್ಲಿ ಇವೆರಡು ಗ್ರಹಣಗಳ ಸವಿವರ ನಿರೂಪಣೆ ಇದೆ. ಗ್ರಹಣಕಾರಕ ಯಮಳ ನಕ್ಷತ್ರಗಳನ್ನು ಕುರಿತ ವಿವರಣೆಗೆ (ನೋಡಿ- ಗ್ರಹಣಕಾರಕ-ಯಮಳ-ನಕ್ಷತ್ರಗಳು). ಇದಲ್ಲದೆ [[ಶುಕ್ರ]] ಮತ್ತು [[ಬುಧ]], ಸೂರ್ಯನ ಮುಂದೆ ಹಾದುಹೋಗುವ ಅಪೂರ್ವ ಘಟನೆಗಳನ್ನು ಸಂಕ್ರಮ ಎಂದು ಕರೆಯಲಾಗಿದೆ.
 
==ಸೂರ್ಯ ಮತ್ತು ಚಂದ್ರಗ್ರಹಣಗಳುಗ್ರಹಣಗಳು==
[[File:Solar eclipse types.svg|right|thumb|upright=0.9|Sun-moon configurations that produce a total (A), annular (B), and partial (C) solar eclipse]]
ಭೂಮಿ ಸ್ವಂತಾಕ್ಷದ ಸುತ್ತ ಆವರ್ತಿಸುತ್ತ ಮತ್ತು ಸೂರ್ಯನ ಸುತ್ತ ಪರಿಭ್ರಮಿಸುತ್ತ ಇರುವ ಒಂದು ಅಪಾರ ಕಾಯ ; ಚಂದ್ರ ಸ್ವಂತಾಕ್ಷದ ಸುತ್ತ ಆವರ್ತಿಸುತ್ತ ಮತ್ತು ಭೂಮಿಯ ಸುತ್ತ ಪರಿಭ್ರಮಿಸುತ್ತ ಇರುವ ಇನ್ನೊಂದು ಅಪಾರ ಕಾಯ. ಭೂಮಿ ಸಾಗುವ ಕಕ್ಷಾತಲ [[ಖಗೋಳ]]ವನ್ನು ಛೇದಿಸುವ ಮಹಾವೃತ್ತಕ್ಕೆ [[ಕ್ರಾಂತಿವೃತ್ತ]] ಎಂದು ಹೆಸರು. ಈ ಮಹಾವೃತ್ತದ ಮೇಲೆ ಭೂಮಿಯ ಸುತ್ತ ಸೂರ್ಯ ಪರಿಭ್ರಮಿಸುತ್ತಿರುವಂತೆ ಭೂಮಿಯ ಮೇಲಿನ ವೀಕ್ಷಕನಿಗೆ ಭಾಸವಾಗುವುದು. ಚಂದ್ರನ ಕಕ್ಷಾತಲ ಖಗೋಳವನ್ನು ಇನ್ನೊಂದು ಮಹಾವೃತ್ತದಲ್ಲಿ ಛೇದಿಸುತ್ತದೆ. ಈ ಮಹಾವೃತ್ತದ ಮೇಲೆ ಭೂಮಿಯ ಸುತ್ತ ಚಂದ್ರ ಪರಿಭ್ರಮಿಸುತ್ತಿರುವಂತೆ ಭೂಮಿಯ ಮೇಲಿನ ವೀಕ್ಷಕನಿಗೆ ಭಾಸವಾಗುವುದು. ಕ್ರಾಂತಿವೃತ್ತತಲವೂ ಚಂದ್ರಕಕ್ಷಾವೃತ್ತತಲವೂ ಎರಡು ಬಿಂದುಗಳಲ್ಲಿ (ಓ, ಓ) ಪರಸ್ಪರ ಸಂಧಿಸುತ್ತವೆ ; ಇವೆರಡು ತಲಗಳೂ ಪರಸ್ಪರ 50 8 ಗಳಷ್ಟು ಬಾಗಿಕೊಂಡಿವೆ. ಓ ಮತ್ತು ಓ ಬಿಂದುಗಳಿಗೆ ಪಾತ ಬಿಂದುಗಳು ಅಥವಾ ಸರಳವಾಗಿ ಪಾತಗಳು (ನೋಡ್ಸ್) ಎಂದು ಹೆಸರು. ಚಂದ್ರ ಮತ್ತು ಸೂರ್ಯರು ಆಯಾ ಕಕ್ಷೆಯ ಮೇಲೆ ಅನುರೂಪ ಕಕ್ಷಾವೇಗಗಳಿಂದ ಸಂಚರಿಸುತ್ತಿರುವಾಗ ಭೂಮಿಯ ಮತ್ತು ಚಂದ್ರನ ನೆರಳುಗಳು ನಿರಂತರ ಚಲನೆಯಲ್ಲಿರುತ್ತವೆ. ಮಾತ್ರವಲ್ಲ ವಾಸ್ತವಿಕವಾಗಿ ಈ ಮೂರು ಕಾಯಗಳ ವಿನ್ಯಾಸಗಳೂ ನಡುವಿನ ಅಂತರಗಳೂ ಬದಲಾಗುತ್ತಲೇ ಇರುವುದರಿಂದ ನೆರಳುಗಳ ಗಾತ್ರಗಳು ಕೂಡ ಬದಲಾಗುತ್ತಲೇ ಇರುತ್ತವೆ. ನಿರಂತರವಾಗಿ ನಡೆಯುತ್ತಿರುವ ಈ ವಿದ್ಯಮಾನದಲ್ಲಿ ಚಂದ್ರನ ನೆರಳು ಭೂಮಿಯ ಮೇಲೆ ಪತನವಾದಾಗ ಸೂರ್ಯಗ್ರಹಣ ಸಂಭವಿಸುವುದು ; ಹಾಗೆಯೇ ಭೂಮಿಯ ನೆರಳು ಚಂದ್ರನ ಮೇಲೆ ಪತನವಾದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಚಂದ್ರಕಕ್ಷೆ ಕ್ರಾಂತಿವೃತ್ತಕ್ಕಿಂತ ಭಿನ್ನವಾಗಿರುವುದರಿಂದ ಹಾಗೂ ಚಂದ್ರ ಮತ್ತು ಸೂರ್ಯರ ಕಕ್ಷಾವೇಗಗಳು ಭಿನ್ನವಾಗಿರುವುದರಿಂದ ಗ್ರಹಣಗಳು ಪದೇ ಪದೇ ಸಂಭವಿಸುವ ಘಟನೆಗಳಲ್ಲ, ವಿರಳಘಟನೆಗಳು. ಸೂರ್ಯ ಮತ್ತು ಚಂದ್ರ ಎರಡೂ ಪಾತಬಿಂದುಗಳ ಸನಿಹದಲ್ಲಿರುವಾಗ ಮಾತ್ರ ಗ್ರಹಣ ಸಂಭಾವ್ಯ. ಸೂರ್ಯ ಗ್ರಹಣವಾದರೆ ಚಂದ್ರ ಮತ್ತು ಸೂರ್ಯ ಭೂಮಿಯಿಂದ ಒಂದೇ ದಿಶೆಯಲ್ಲಿ ಇರುವುದರಿಂದ ಅವುಗಳ [[ರೇಖಾಂಶ]]ಗಳು ಸಮ. ಆದ್ದರಿಂದ ಅಂದು [[ಅಮಾವಾಸ್ಯೆ]]ಯೂ ಹೌದು. ಚಂದ್ರಗ್ರಹಣವಾದರೆ ಚಂದ್ರ ಮತ್ತು ಸೂರ್ಯ ಭೂಮಿಯಿಂದ ವಿರುದ್ಧ ದಿಶೆಗಳಲ್ಲಿ ಇರುವುದರಿಂದ ಅವುಗಳ ರೇಖಾಂಶ ವ್ಯತ್ಯಾಸ 180 ಡಿಗ್ರಿ ಆದ್ದರಿಂದ ಅಂದು ಹುಣ್ಣಿಮೆಯೂ ಹೌದು. ಹೀಗೆ ಗ್ರಹಣಗಳು ಚಂದ್ರ ಮತ್ತು ಸೂರ್ಯರು ಪಾತ ಬಿಂದುಗಳ ಸಮೀಪವಿರುವ ಅಮಾವಾಸ್ಯೆ ಇಲ್ಲವೇ ಹುಣ್ಣಿಮೆ ದಿವಸಗಳಂದು ಮಾತ್ರ ಸಂಭವಿಸುತ್ತವೆ. ಈ ಷರತ್ತುಗಳ ಪೈಕಿ ಯಾವುದೇ ಒಂದು ಪೂರೈಕೆ ಆಗದಿದ್ದರೆ ಗ್ರಹಣ ಸಂಭವಿಸುವುದಿಲ್ಲ.
 
"https://kn.wikipedia.org/wiki/ಗ್ರಹಣ" ಇಂದ ಪಡೆಯಲ್ಪಟ್ಟಿದೆ